ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಚತೆಗೆ ಆದ್ಯತೆ ನೀಡಿ – ಕರುನಾಡು ಯುವ ರಕ್ಷಣಾ ವೇದಿಕೆಯ ವತಿಯಿಂದ ದೊಡ್ಡಬಳ್ಳಾಪುರ ನಗರಸಭೆಗೆ ಮನವಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ನಗರಭಾಗದ ಕಛೇರಿ ಪಾಳ್ಯದ ನಿವಾಸಿ ಶಂಕರ್ ರವರ ಸಮಸ್ಯೆ ಕುರಿತಂತೆ ನಗರ ಸಭೆಯ ಅಧಿಕಾರಿಗಳನ್ನು ಭೇಟಿ ಮಾಡಿದ ಕರುನಾಡು ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನಗರಸಭಾ ಅಧಿಕಾರಿಗಳಿಗೆ ನಗರಭಾಗದಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಉತ್ತಮ ರೀತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡುವಂತೆ ಕೋರಿ ಮನವಿ ಸಲ್ಲಿಸಲಾಯಿತು

 

ಈ ಸಂದರ್ಭದಲ್ಲಿ ಕರುನಾಡು ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಚೇತನ್ ಮಾತನಾಡಿ ಕಛೇರಿ ಪಾಳ್ಯದ ನಿವಾಸಿ ಶಂಕರ್ ರವರು ನಮ್ಮ ಸಂಘಟನೆಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಲಾಗಿತ್ತು ಶಂಕರ್ ರವರ ಮನೆಯ ಮುಂಭಾಗ ಕೊಳಚೆ ನೀರು ತುಂಬಿದ್ದು ಸ್ವಚ್ಛತೆ ಸಂಪೂರ್ಣ ಹಾಳಾಗಿದೆ ಹಾಗೂ ನಗರ ಸಭೆ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಈ ಕುರಿತು ಸ್ಥಳೀಯವಾಗಿ ಸ್ವಚ್ಛತೆ ಕಾಪಾಡುವ ಕಾರ್ಯ ನಗರ ಸಭೆಯ ವತಿಯಿಂದ ಆಗಬೇಕಾಗಿದೆ ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆಯ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಈ ಕುರಿತು ತ್ವರಿತವಾಗಿ ಕ್ರಮಕೈಗೊಂಡು ಸಾರ್ವಜನಿಕರ ಆರೋಗ್ಯ ಕಾಪಾಡಬೇಕೆಂದು ತಿಳಿಸಿದರು

 

ಈ ಸಂದರ್ಭದಲ್ಲಿ ಕರುನಾಡು ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Comments

Leave a Reply

Your email address will not be published. Required fields are marked *