2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂಗಳಿಗೆ ಸಚಿವರಿಂದ ಗುದ್ದಲಿ ಪೂಜೆ

ದೇವನಹಳ್ಳಿ : ತಾಲ್ಲೂಕಿನ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣದ ಕಾಮಗಾರಿಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಚಾಲನೆ ನೀಡಿದರು.

 

ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಾಳಿಗೆಹಳ್ಳಿ – ಅತ್ತಿಬೆಲೆ ಬಳಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು ಒಟ್ಟು 5 ಚೆಕ್ ಡ್ಯಾಂಗಳನ್ನು ಮಾಳಿಗೆಹಳ್ಳಿ, ಮಾಯಸಂದ್ರ, ವೆಂಕಟನಹಳ್ಳಿ, ಬೆಟ್ಟಕೋಟೆ, ವಿಜಯಪುರ ಗ್ರಾಮಗಳ ಬಳಿ ನಿರ್ಮಾಣ ಮಾಡಲಾಗುತ್ತಿದ್ದು, ಸುತ್ತ-ಮುತ್ತಲಿನ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

 

ರೂ. 200 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚೆಕ್ ಡ್ಯಾಂಗಳ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದರೊಂದಿಗೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

 

ಈ ಸಂದರ್ಭದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಮುನಿರಾಜು, ಆವತಿ ಗ್ರಾ.ಪಂ ಅಧ್ಯಕ್ಷೆ ಮುನಿರತ್ನಮ್ಮ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *