ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ:ಡಿ.ಸಿ

ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಇನ್ನೂ ಮುಂದೆ ಮಾಡುವಂತಿಲ್ಲ .

 

ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

 

ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

Comments

Leave a Reply

Your email address will not be published. Required fields are marked *