ಅಕ್ರಮ ಹೆಂಡ ಸಾಗಾಣಿಕೆ ಮತ್ತು ಮಾರಾಟ : ನಿಖರ ಮಾಹಿತಿ ಪಡೆದು ಆರೋಪಿಯನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

Doddaballapura : ಆಂಧ್ರ ಮೂಲದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹೆಂಡವನ್ನು ಇಂದು ಮುಂಜಾನೆ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ ) ವನ್ನು ತಂದು ಮಾರಾಟ ಮಾಡುತ್ತಿದ್ದಾಳೆ ಎಂಬ ದೂರಿನ ಹಿನ್ನಲೆ ಇಂದು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಆರೋಪಿಯನ್ನು ಸಾಕ್ಷಿ ಸಮೇತ ಪವಿತ್ರಳನ್ನು ಬಂಧಿಸಿದ್ದಾರೆ.

ಆರೋಪಿ ಪವಿತ್ರಳ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆ ಮುಂದಾಗಿದೆ ತನಿಖೆ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.

 

 

 

Comments

Leave a Reply

Your email address will not be published. Required fields are marked *