ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ : ಸಿಎಂ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

 

ಮೃತ ಪೆನ್ನ ಓಬಳಯ್ಯ ಅವರನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.

 

ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದರು.

 

ಹಿರಿಯ ಜೀವ ಓಬಳಯ್ಯನವರ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *