“ಭಾರತದ ರತ್ನ “ಪ್ರಶಸ್ತಿಗೆ ಭಾಜನರಾದ ಲಾಲ್ ಕೃಷ್ಣ ಅಡ್ವಾಣಿ : ಗಣ್ಯರಿಂದ ಶುಭ ಹಾರೈಕೆ

ಭಾರತದ ಮುತ್ಸದ್ಧಿ ರಾಜಕಾರಣಿ, ಹಿರಿಯರಾದ ಶ್ರೀಯುತ ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತದ ಪರಮೋಚ್ಚ ನಾಗರೀಕ ಪುರಸ್ಕಾರವಾದ “ಭಾರತರತ್ನ”ಕ್ಕೆ ಭಾಜನರಾಗಿದ್ದಾರೆ.

 

ಭಾರತೀಯ ಜನತಾ ಪಕ್ಷದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಾಯಕ ಆರಂಭಿಸಿದ ಅವರು ದೇಶದ ಉಪಪ್ರಧಾನಿ ಹುದ್ದೆ ಅಲಂಕರಿಸಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.

 

ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು.

ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಎಕ್ಸ್ ಖಾತೆಯ ಮೂಲಕ ತಮ್ಮ ನೆಚ್ಚಿನ ನಾಯಕರಿಗೆ ಶುಭ ಹಾರೈಸಿದ್ದಾರೆ.

Comments

Leave a Reply

Your email address will not be published. Required fields are marked *