ಈ ಹಿಂದೆ ಡಬಲ್ ಇಂಜಿನ್ ಸರ್ಕಾರ ಇದ್ದಾಗಲೂ ಕನ್ನಡಿಗರಿಗೆ ಏನು ಪ್ರಯೋಜನವಾಗಿಲ್ಲ – ಡಿಸಿಎಂ ಡಿಕೆ ಶಿವಕುಮಾರ್

ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಇಂದು ಬೆಳಗ್ಗೆ 11ಗಂಟೆಗೆ ದೆಹಲಿ ಜಂತರ್ ಮಂತರ್ ಎದುರು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

 

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.

ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟ ಇತಿಹಾಸದಲ್ಲಿ ಒಂದು ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗುತ್ತಿದೆ. ಲಕ್ಷಾಂತರ ಕನ್ನಡಿಗರು ನಮ್ಮ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಕನ್ನಡಿಗರ ಋಣ ಸೇರಿಸಲಿಕ್ಕೆ, ಬಡವರಿಗೆ ನ್ಯಾಯ ಒದಗಿಸಲಿಕ್ಕೆ, ಅವರ ಹಸಿವು ನೀಗಿಸಲು ನಡೆಯುತ್ತಿರುವ ಹೋರಾಟ ಇದು.

ಬರದಿಂದ ತತ್ತರಿಸುವ ಕರ್ನಾಟಕಕ್ಕೆ ಪರಿಹಾರ ನೀಡುವಂತೆ ಕೇಂದ್ರದ ಮುಂದೆ ಬೇಡಿಕೆ ಇಡಲಾಗಿತ್ತು, ಆದರೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ನೀರಾವರಿ, ರೈಲ್ವೆ ಯೋಜನೆಗೂ ನ್ಯಾಯಯುತ ಅನುದಾನ ನೀಡಿಲ್ಲ. ಈ ಹಿಂದೆ ಡಬಲ್‌ ಇಂಜಿನ್‌ ಸರ್ಕಾರ ಇದ್ದಾಗಲೂ ಕನ್ನಡಿಗರಿಗೆ ಏನೂ ಪ್ರಯೋಜನವಾಗಿಲ್ಲ. ನಾವು ನಮ್ಮ ನ್ಯಾಯಯುತ ಪಾಲು ಕೇಳಲು ಬಂದಿದ್ದೇವೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *