ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಇಂದು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಮತ್ತು ಅಪರ ಜಿಲ್ಲಾಧಿಕಾರಿ ಅಮರೇಶ್ ರವರು ಕಾರ್ಯಕ್ರಮ ಉದ್ಘಾಟಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 30 ಸಾವಿರ ಕುಟುಂಬಗಳು ಗ್ರಾಮ ಪಂಚಾಯಿತಿಯ ಹಂತದಲ್ಲಿ ಪಿ.ಎಮ್.ವಿಶ್ವಕರ್ಮ ಯೋಜನೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಈ ಯೋಜನೆ ಸದುಪಯೋಗ ಮಾಡಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ ಎನ್ ರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ ಕೆ ರಮೇಶ್, ಸಾಕ್ರೆಟಿಸ್ ನ ಜಿಂಟಿ ನಿರ್ದೇಶಕರು, ಉಪ ನಿರ್ದೇಶಕರಾದ ಗೋಪಿನಾಥ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕುಶಲಕರ್ಮಿಗಳು ಉಪಸ್ಥಿತರಿದ್ದರು.
Leave a Reply