ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಂಸದ ಡಾ. ಕೆ.ಸುಧಾಕರ್

ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡರಾದ ಶ್ರೀ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಇಂದು ಸಂಸದ ಸುಧಾಕರ್ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು

 

ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು.

 

ಅವರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

Comments

Leave a Reply

Your email address will not be published. Required fields are marked *