ಹೊಳೆ ಮುತ್ತುರಾಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ 50 ಸಾವಿರ ಮೊತ್ತದ ಡಿಡಿ ವಿತರಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹಾಲಪ್ಪನಹಳ್ಳಿ ಗ್ರಾಮದ ಹೊಳೆ ಮುತ್ತುರಾಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ 50 ಸಾವಿರ ಮೊತ್ತದ ಡಿಡಿ ವಿತರಣೆ ಮಾಡಲಾಯಿತು.

 

ತಾಲೂಕಿನ ಆರೂಢಿ ವಲಯದ ಕಾಡತಿಪ್ಪುರು ಕಾರ್ಯಕ್ಷೇತ್ರದ ಹಾಲಪ್ಪನಹಳ್ಳಿ ಗ್ರಾಮದ ಹೊಳೆ ಮುತ್ತುರಾಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದ ಐವತ್ತು ಸಾವಿರ ರೂಪಾಯಿಗಳ ಡಿಡಿ ಯನ್ನು ಕ್ಷೇತ್ರದ ಪರವಾಗಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್ ದೇವಸ್ಥಾನ ಸಮಿತಿಗೆ ಹಸ್ತಾಂತರ ಮಾಡಿದರು.

 

ಈ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿ ಸದಸ್ಯರು,ವಲಯದ ಮೇಲ್ವಿಚಾರಕರಾದ ಸುಪ್ರೀತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್ ಹಾಗೂ ಸೇವಾ ಪ್ರತಿನಿಧಿ ರಾಧಮ್ಮ, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *