ಬಮೂಲ್ ನಿರ್ದೇಶಕರ ಸ್ಥಾನದ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ನಾಮಪತ್ರ ಸಲ್ಲಿಕೆ

ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ಶನಿವಾರ ನಾಮಪತ್ರ ಸಲ್ಲಿಸಿದರು.

 

ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಮುನೇಗೌಡ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ. ವಿಜಯಕುಮಾರ್ ಸೇರಿದಂತೆ ಹಲವು ಪ್ರಮುಖರು ಸಾಥ್ ನೀಡಿದ್ದಾರೆ,

 

ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ” ನಮ್ಮ ಜೆಡಿಎಸ್ ಪಕ್ಷದ ವರಿಷ್ಠರಾದ ಬಿ ಮುನೇಗೌಡರವರ ಆದೇಶಕ್ಕೆ ನಾನು ಕಾಯುತ್ತಿದ್ದೇನೆ, ಸ್ಥಳೀಯವಾಗಿ ಜೆಡಿಎಸ್ ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ನಾನು ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದರು , ” ಅಂತೆಯೇ ಇಂದು ಜೆಡಿಎಸ್ ವರಿಷ್ಠರ ಜೊತೆ ನಾಮಪತ್ರ ಸಲ್ಲಿಸಿರುವುದು ವಿಶೇಷ, ಸ್ಥಳೀಯವಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಒಡಕು ಮೂಡಿದಿಯಾ…??? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

 

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಟರು ಹಾಗೂ ಜೆಡಿಎಸ್ ಮುಖಂಡರು, ತಾಲೂಕಿನ ಹಾಲು ಉತ್ಪಾದಕ ಸಂಘದ ಪ್ರಮುಖರು ಹಾಜರಿದ್ದರು.

Comments

Leave a Reply

Your email address will not be published. Required fields are marked *