Blog

  • ಜಿಲ್ಲಾಡಳಿತ ಭವನ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ

    ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ‌, ಪುಷ್ಪಾರ್ಚನೆ ನೆರವೇರಿಸಿದರು.

    *“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ*

     

    *ಕನ್ನಡದ ಮೊದಲ ಶಿಲಾ ಶಾಸನ*

     

    ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇರಿಸಲಾಗಿದೆ.

    Ad

    *ಹಲ್ಮಿಡಿ ಶಾಸನದ ಪ್ರತಿಕೃತಿ ಕುರಿತು ಒಂದಿಷ್ಟು ಮಾಹಿತಿ :

    -ಎತ್ತರ: ನಾಲ್ಕೂವರೆ ಅಡಿ

    -ಅಗಲ: 2 ಅಡಿ

    -ದಪ್ಪ: 6 ಇಂಚು

    -ತೂಕ: 450 ರಿಂದ 500 ಕಿಲೋ

  • ಕನ್ನಡ ರಾಜ್ಯೋತ್ಸವ ದಿನದಂದು ರಜೆ ನೀಡದ ಕಾರ್ಖಾನೆ : ಪ್ರತಿಭಟನೆಗೆ ಮುಂದಾದ ಚಿರಋಣಿ ಕನ್ನಡಾಂಬೆ ಹೊರಟ ಸಮಿತಿ

    ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರವೇ ರಜೆ ಘೋಷಿಸಿದರು, ರಾಜ್ಯ ಸರ್ಕಾರದ ಆದೇಶ ಅವರು ಧಿಕ್ಕರಿಸಿ, ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಚಿರಋಣಿ ಕನ್ನಡಾಂಬೆ ಹೊರಟ ಸಮಿತಿ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು.

     

    ಖ್ಯಾತ ವಕೀಲರು ಹಾಗೂ ಕನ್ನಡ ಪರ ಹೋರಾಟಗಾರಾದ ರವಿ ಮಾವಿನಕುಂಟೆ ಮಾತನಾಡಿ ಕರ್ನಾಟಕದ ನೆಲ ಜಲ ಸಂಪನ್ಮೂಲ ಬಳಸಿ ಹಣ ಗಳಿಸುವ ಕಾರ್ಖಾನೆಗಳಿಗೆ , ಕನ್ನಡ ಭಾಷೆ, ಕನ್ನಡಿಗರ ಸ್ವಾಭಿಮಾನಕ್ಕೆ ಗೌರವ ಸಲಿಸಬೇಕೆಂಬುದು ಅರಿವಿಲ್ಲದಂತಿದೆ ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಇಂದು ಕರ್ತವ್ಯ ನಡೆಸಲು ಮುಂದಾಗಿರುವ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಿದೆ ಎಂದರು

    ಕನ್ನಡ ರಾಜ್ಯೋತ್ಸವ ರಾಜ್ಯದ ಪ್ರತಿ ಕನ್ನಡಿಗರಿಗೂ ದೊಡ್ಡ ಹಬ್ಬ ಇಂತಹ ದಿನದಂದು ಸರ್ಕಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ರಜೆ ಘೋಷಿಸಿದ್ದು ಸರ್ಕಾರಿ ಆದೇಶವನ್ನು ಉಲ್ಲಂಘನೆ ಮಾಡಿ ತಾಲೂಕಿನ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕಾರ್ಮಿಕರಿಗೆ ರಜೆ ಘೋಷಿಸದೆ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಹಿನ್ನಲೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯು ಕಾರ್ಖಾನೆ ಬಳಿ ಪ್ರತಿಭಟನೆಗೆ ಮುಂದಾಗಿದ್ದೆವೆ ಇದು ಕನ್ನಡಿಗರ ಸ್ವಾಭಿಮಾನಕ್ಕೆ ಅದಕ್ಕೆ ಉಂಟು ಮಾಡುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಸುಬ್ರಮಣಿ ತಿಳಿಸಿದರು.

     

    ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಆನಂದ ಮಾತನಾಡಿ ಕಾರ್ಖಾನೆ ಬಳಿ ಬಂದು ವಿಚಾರಿಸಿದಾಗ ಕೇವಲ ನಾಲ್ಕು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳುವ ಕಾರ್ಖಾನೆ ಸಿಬ್ಬಂದಿ ತದನಂತರ ಕಾರ್ಖಾನೆಯಿಂದ ಸುಮಾರು 350ಕ್ಕೂ ಅಧಿಕ ಕಾರ್ಮಿಕರು ಹೊರ ಬರುತ್ತಿದ್ದಾರೆ, ಕಾರ್ಖಾನೆ ವಿರುದ್ಧ ಸೂಕ್ತ ತನಿಖೆ ಕೈಗೊಂಡು ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

    Ad

    ತಾಲೂಕು ಘಟಕದ ಅಧ್ಯಕ್ಷ ಶ್ರೀರಾಮ್ ಮಾತನಾಡಿ ಖಚಿತ ಮಾಹಿತಿ ಹಿನ್ನೆಲೆ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಭೇಟಿ ಕೊಟ್ಟಿದ್ದು , ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಪ್ರಶ್ನೆ ಮಾಡಿದರೆ ಇಲ್ಲ ನಮ್ಮಲ್ಲಿ ಕರ್ತವ್ಯ ನಡೆಸುತ್ತಿಲ್ಲ ಎಂದು ಸಿಬ್ಬಂದಿ ಸುಳ್ಳು ಹೇಳುತ್ತಿದ್ದಾರೆ, ಪೊಲೀಸ್ ಬಂದ ನಂತರ ಸುಮಾರು 350ಕ್ಕೂ ಅಧಿಕ ಕಾರ್ಮಿಕರು ಕಾರ್ಖಾನೆಯಿಂದ ಹೊರ ಬಂದಿದ್ದು , ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವದಕ್ಕೆ ನಿದರ್ಶನವಾಗಿದೆ, ಇಂತಹ ಕಂಪನಿ ವಿರುದ್ಧ ಸ್ಥಳೀಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅರಿವು ಮೂಡಿಸುವ ಕಾರ್ಯಕ್ಕೆ ಬಂದಾಗ ಬೇಕಿದೆ , ಕನ್ನಡ ಭಾಷೆ ನೆಲ ಜಲದ ವಿಚಾರದಲ್ಲಿ ನಮ್ಮ ಸಂಘಟನೆ ಎಂದಿಗೂ ಹಿಂಜರಿಯುವುದಿಲ್ಲ ಎಂದರು.

    ಕನ್ನಡಪರ ಹೋರಾಟಗಾರ ಮಲ್ಲೇಶ್ ಮಾತನಾಡಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಕಾರ್ಯಗಳನ್ನು ಮಾಡುತ್ತಾ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಹಣ ಆಸ್ತಿ ಮಡುವ ಕಾರ್ಖಾನೆಗಳು ಸಾಕಷ್ಟು ಆಗಿವೆ. ಇದಕ್ಕೆ ಪೂರಕವೆಂಬಂತೆ ಇಂದು ತಾಲೂಕಿನ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಕನ್ನಡ ರಾಜ್ಯೋತ್ಸವಕ್ಕೆ ರಜೆ ಘೋಷಿಸದೆ. ಕಾರ್ಮಿಕರಿಂದ ಕೆಲಸ ಮಾಡಿಸುತ್ತಿದೆ. ಇಂತಹ ಕಾರ್ಖಾನೆಗಳಿಗೆ ಕಾನೂನು ಚಾಟಿ ಬೀಸುವ ಮೂಲಕ ತಕ್ಕ ಪಾಠಕಲಿಸಬೇಕಿದೆ.ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಬಾವುಟವನ್ನು ಹರಿಸಬೇಕೆಂಬ ಕನಿಷ್ಠ ಜ್ಞಾನವಿಲ್ಲದ ಸಂಸ್ಥೆ ವಿರುದ್ಧ ಕ್ರಮ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಅಗ್ರಹಿಸಿದರು.

     

    ಈ ಸಂದರ್ಭದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

     

     

  • ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಂದಿ ಬೆಟ್ಟದಲ್ಲಿ ಗಾಂಧಿ ಹೆಜ್ಜೆಗುರುತುಗಳು ಪ್ರಬಂಧ ಸ್ಪರ್ಧೆ: ಬಹುಮಾನ ವಿತರಣೆ

    ತೂಬಗೆರೆ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ತೂಬಗೆರೆ ಸರ್ಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ನಂದಿಬೆಟ್ಟದಲ್ಲಿ ಗಾಂಧಿ ಹೆಜ್ಜೆಗುರುತುಗಳು ಎಂಬ ವಿಷಯದ ಮೇಲೆ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

     

    ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವೇದಿಕೆಯ ಕಾರ್ಯದರ್ಶಿ ಉದಯ್ ಆರಾಧ್ಯ ಬಹುಮಾನ ವಿತರಿಸಿ ಮಾತನಾಡಿ, ಶಾಲೆಗಳಲ್ಲಿ ರಾಜ್ಯ-ರಾಷ್ಟ್ರೀಯ ಹಬ್ಬಗಳು ಕೇವಲ ಮನರಂಜನೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವ ಅವಕಾಶಗಳಾಗಬೇಕು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಕ್ಕಳಿಗೆ ಸಾಮಾನ್ಯ ಜ್ಞಾನ ಅತ್ಯಾವಶ್ಯಕ. ಆಶುಭಾಷಣ, ರಸಪ್ರಶ್ನೆಇತ್ಯಾದಿ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಸಾಮಾನ್ಯ ಜ್ಞಾನ ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟರು.

    Ad

    ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಗೀರೀಶ್ ಮಾತನಾಡಿ, ಕನ್ನಡದ ಕುಲಪುರೋಹಿತ ಎಂದು ಕರೆಸಿಕೊಳ್ಳುವ ಆಲೂರು ವೆಂಕಟರಾವ್‌ ಅವರು 1905ರಲ್ಲಿಯೇ ಕರ್ನಾಟಕ ಏಕೀಕರಣ ಚಳುವಳಿಗೆ ಮುನ್ನುಡಿ ಬರೆದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ ಭಾರತದ ವಿವಿಧ ಪ್ರಾಂತ್ಯಗಳು ರಾಜ್ಯಗಳಾಗಿ ರೂಪುಗೊಂಡವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ ಮೈಸೂರು ರಾಜ್ಯವು ಉದಯವಾಯಿತು. ಕರ್ನಾಟಕ ರಾಜ್ಯದ ಮೊದಲ ಹೆಸರು ಮೈಸೂರು ಎಂದಾಗಿತ್ತು. 1973ರ ನವೆಂಬರ್‌ 1ರಂದು ಮೈಸೂರು ರಾಜ್ಯವು ಕರ್ನಾಟಕ ಎಂಬ ಹೆಸರು ಪಡೆಯಿತು. ಕರ್ನಾಟಕ ಏಕೀಕರಣದ ಮನ್ನಣೆ ಹಲವರಿಗೆ ಸಲ್ಲುತ್ತದೆ. ದೇವರಾಜ ಅರಸ್‌, ಅನಕೃ, ಕೆ ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌, ಎಎನ್‌ ಕೃಷ್ಣರಾವ್‌ ಮತ್ತು ಬಿಎಂ ಶ್ರೀಕಂಠಯ್ಯ ಕನ್ನಡ ನಾಡಿಗಾಗಿ ಶ್ರಮಿಸಿದ್ದಾರೆ ಎಂದರು.

     

    ಸಹಶಿಕ್ಷಕ ಮುನಿರಾಜು ಮಾತಾನಾಡಿದ ಇಂದಿನ ರಾಜ್ಯೋತ್ಸವ ಕಾರ್ಯಕ್ರಮ ಕೇವಲ ಅತಿಥಿಗಳ ಭಾಷಣ ಹಾಗೂ ಮನರಂಜನೆಗೆ ಸೀಮಿತವಾಗದೆ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳ ಒಳಗೊಳ್ಳುವಿಕೆಯಿಂದ ಅತ್ಯಂತ ಯಶಸ್ವಿಯಾಗಿದೆ. ನವಕರ್ನಾಟಕ ಯುವಶಕ್ತಿ ವೇದಿಕೆಯ ಸಾಮಾಜಿಕ ಕಾರ್ಯಗಳು ಹೀಗೆ ಮುಂದುವರೆಯಲಿ ಎಂದು ಆಶಿಸಿದರು.

     

    ಶಾಲಾ ಮಕ್ಕಳು ನಡೆಸಿಕೊಟ್ಟ ನಾಟಕ ಮತ್ತು ನೃತ್ಯ ಪ್ರದರ್ಶನ ಆಕರ್ಷಣೀಯವಾಗಿತ್ತು.

     

    ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ನೂರ್ ಜಾನ್, ಸದಸ್ಯರಾದ ದೇವರಾಜ್, ಮುಖ್ಯೋಪಾಧ್ಯಾಯರಾದ ಗಿರೀಶ್, ಶಿಕ್ಷಕರಾದ ನಾರಾಯಣಪ್ಪ, ನವಕರ್ನಾಟಕ ಯುವಶಕ್ತಿ ವೇದಿಕೆ ಪದಾಧಿಕಾರಿಗಳು, ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ವೃಂದ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

  • ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ-ನಂ.ಮಹಾದೇವ್

    ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯದಲ್ಲಿ ಕನ್ನಡ ಚುನಾವಣೆಯ ವಿಷಯ ಆಗಬೇಕಾಗಿದೆ.  ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ  ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು   ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ  ನಂ.ಮಹಾದೇವ್ ತಿಳಿಸಿದರು.

     

    ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು. ಒಕ್ಕೂಟ ವ್ಯವಸ್ಥೆಯ ಸರ್ಕಾರದಲ್ಲಿ ಹಿಂದಿ ಭಾಷೆಯ ರಾಜ್ಯಗಳಿಗೆ ಸಿಗುತ್ತಿರುವ ಮನ್ನಣೆ  ದಕ್ಷಿಣ ಭಾರತದ ರಾಜ್ಯಗಳಿಗೆ ಸಿಗುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ.  ನಮ್ಮ ರಾಜ್ಯದಲ್ಲಿರುವ ಬ್ಯಾಂಕ್, ಅಂಚೆ, ರೈಲ್ವೆ ಮುಂತಾದ ಕಡೆಗಳಲ್ಲಿ ಕನ್ನಡ ಭಾಷೆಗೆ ಸೂಕ್ತ ಮನ್ನಣೆ ಇಲ್ಲದಾಗಿದೆ.  ಒಕ್ಕೂಟ ವ್ಯವಸ್ಥೆ ಸರ್ಕಾರದಲ್ಲಿ  ಕರ್ನಾಟಕದ ಜನಪ್ರತಿನಿಧಿಗಳು ಕನ್ನಡದ ಹಿತವನ್ನು ಕಾಪಾಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ ಎಂದರು.

    ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ,  ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ  ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ  ಅಗ್ರ ಸ್ಥಾನ ಇರಲೇಬೇಕು.  ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ  ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ  ಕನ್ನಡದ ಕೆಲಸ ಮಾಡಬೇಕಾಗಿದೆ.  ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು  ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ.  ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ,  ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.

     

     

    ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್,  ಭಾರತ್ ಸ್ಕೌಟ್ಸ್ ಮತ್ತು ಗೈಡ್ ಆಯುಕ್ತ ವೆಂಕಟರಾಜು, ಭಾರತ ಸೇವಾದಳ‌ ಕಾರ್ಯದರ್ಶಿ ಜ್ಯೋತಿಕುಮಾರ್,   ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜುಶಿರವಾರ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ  ಪ್ರಮೀಳಾಮಹಾದೇವ್,  ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ‌ಸಾ.ಲ.ಕಮಲನಾಥ್,  ಕಸಾಪ ಪದಾಧಿಕಾರಿಗಳಾದ ಆರ್.ಗೋವಿಂದರಾಜು,  ಜಿ.ಎಂ.ನಾಗರಾಜ್, ಜಿ.ಸುರೇಶ್, ಮುನಿರಾಜು, ಸಫೀರ್,  ನಾಗರತ್ನಮ್ಮ,  ಚಿದಾನಂದ್, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ  ನಾಗರಾಜು, ಅಗ್ನಿವೆಂಕಟೇಶ್, ಕಾರ್ಮಿಕ ಮುಖಂಡ ಪಿ.ಎ.ವೆಂಕಟೇಶ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ತೀರ್ಥಲಿಂಗಪ್ಪ, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

     

     

    ಸನ್ಮಾನ :-  ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಶ್ರೀಕಾಂತ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರರಾದ ನಂ.ಮಹಾದೇವ ಮತ್ತು ಜಿ.ಸುರೇಶ್  ಅವರುಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನ ನಡೆಯಿತು.

     

  • ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ :18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30, 2024. – ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಅವರು ತಿಳಿಸಿದರು.

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ವೇಳಾಪಟ್ಟಿ ಯನ್ನು ಪ್ರಕಟಿಸಲಾಗಿದ್ದು,ಮತದಾರರ ಪಟ್ಟಿಗಳ ಕರಡು ಪ್ರಕಟಣೆಯನ್ನು ಅಕ್ಟೋಬರ್ 29 (ಮಂಗಳವಾರ) ಕ್ಕೆ ನಿಗದಿಪಡಿಸಲಾಗಿದೆ‌. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ ಅಕ್ಟೋಬರ್ 29 ರಂದು (ಮಂಗಳವಾರ) ದಿಂದ ನವೆಂಬರ್ 28 ರ (ಗುರವಾರ) ವರೆಗೆ ಅವಕಾಶವಿರುತ್ತದೆ. ವಿಶೇಷ ಅಭಿಯಾನದ ದಿನಾಂಕಗಳು ಸಿಇಒ ಗಳ ಸೂಚನೆಯಂತೆ ನಿಗಧಿಪಡಿಸಲಾಗುತ್ತದೆ. ಹಕ್ಕುಗಳ ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿಸೆಂಬರ್ 24 (ಮಂಗಳವಾರ) ನಿಗದಿಪಡಿಸಲಾಗಿದೆ.

     

    ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಜನವರಿ 06 2025 (ಸೋಮವಾರ)‌ ನಿಗಧಿಪಡಿಸಲಾಗಿದೆ‌. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ವಿಶೇಷ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಭಾರತದ ಚುನಾವಣಾ ಅಯೋಗದ ಇತ್ತೀಚಿನ ತಿದ್ದುಪಡಿ ನಿಯಮಗಳಂತೆ ಪ್ರಸ್ತುತ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು 04 ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ಜನವರಿ 01, ಏಪ್ರಿಲ್ 01, ಜುಲೈ 01 ಮತ್ತು ಅಕ್ಟೋಬರ್ 01 ಕ್ಕೆ 18 ವರ್ಷ ತುಂಬುವ ಯುವ ಮತದಾರರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ‌ ಎಂದು ಹೇಳಿದರು.

    ಮನೆ ಮನೆ ಸಮೀಕ್ಷೆ ವೇಳೆ ಬೂತ್‌ ಮಟ್ಟದಲ್ಲಿ ಹೊಸ ಮನೆಗಳು ನಿರ್ಮಾಣಗೊಂಡು ಅಲ್ಲಿ ಜನ ವಾಸವಿದ್ದರೆ ಅಥವಾ ಅಲ್ಲಿಂದ ಬೇರೆಡೆ ಸ್ಥಳಾಂತರಗೊಂಡವರ ಮಾಹಿತಿ ಸಂಗ್ರಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಮನೆ ಮನೆ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಾರ್ವಜನಿಕರು ಸಹಕರಿಸಬೇಕುಎಂದು ತಿಳಿಸಿದರು.

    ಮತದಾರರ ಗುರುತಿನ ಚೀಟಿಯಲ್ಲಿ (Voter ID)ಅಕ್ಷರ ದೋಷ ಕಂಡುಬರುತ್ತಿದ್ದು, ಇದನ್ನು ಸರಿಪಡಿಸ ಬೇಕೆಂದು ರಾಜಕೀಯ ಮುಖಂಡರು ಪ್ರಸ್ತಾಪಿಸಿದರು. ಇದರ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯ ನಾಲ್ಕು ತಾಲ್ಲೂಕುಗಳ ವಿಧಾನ ಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಮತದಾರ 446422 ಪುರುಷ ಮತದಾರರು, 457380 ಮಹಿಳಾ ಮತದಾರರು, 143 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9,03,945 ಕರಡು ಮತದಾರರಿದ್ದಾರೆ.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದ 258 ಮತಗಟ್ಟೆಗಳು, ನಗರ ಪ್ರದೇಶದ 879 ಮತಗಟ್ಟೆಗಳು, ಪರಿಷ್ಕರಣೆ ನಂತರ ಹೊಸದಾಗಿ ಸೃಜಿಸಿರುವ ಮತಗಟ್ಟೆಗಳು 4 ಸೇರಿದಂತೆ ಒಟ್ಟು ಮತಗಟ್ಟೆಗಳು 1141 ಆಗಿರುತ್ತದೆ‌. ಕರಡು ಮತದಾರರ ಪಟ್ಟಿಯಂತೆ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರ ಪುರುಷರಿಗೆ 1025 ಮಹಿಳೆಯರಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜಕೀಯ ಮುಖಂಡರುಗಳು ಉಪಸ್ಥಿತರಿದ್ದರು.

  • ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ‌ಆವರಣದಲ್ಲಿ 4 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಉಧ್ಘಾಟನೆ

    ದೊಡ್ಡಬಳ್ಳಾಪುರ  ಅ.29:- ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

     

    ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

     

    ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

     

    ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ  ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

     

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

    ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್, ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

  • ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ :ನೂತನ ಅಧ್ಯಕ್ಷರಾಗಿ ಲೀಲಮ್ಮಪಿಳ್ಳೆಗೌಡ ಮತ್ತು ಉಪಾಧ್ಯಕ್ಷರಾಗಿ ಮಾರಪ್ಪ ಆಯ್ಕೆ

    ದೊಡ್ಡಬಳ್ಳಾಪುರ : ಗ್ರಾಮ ಮಟ್ಟದ ಪಂಚಾಯಿತಿ,ಹಾಲಿನ ಡೈರಿ, ಸಹಕಾರಿ ಸಂಘಗಳಲ್ಲಿ ರಾಜಕೀಯ ಮಾಡಬಾರದು ಎಂಬುದಕ್ಕೆ ನಮ್ಮ ಪಂಚಾಯತಿ ಉತ್ತಮ ಉದಾಹರಣೆಯಾಗಿದೆ ಎಲ್ಲಾ ಸ್ಥಳೀಯ ಮುಖಂಡರ ಶ್ರಮದ ಫಲವಾಗಿ ಇಂದು ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವೀರಾಪುರದ ಸದಸ್ಯೆ ಲೀಲಮ್ಮಪಿಳ್ಳೆಗೌಡ, ಉಪಾಧ್ಯಕ್ಷರಾಗಿ ಮಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರೆ ಪಂಚಾಯತಿಗಳಿಗೆ ನಮ್ಮ ಮಜರಾ ಹೊಸಹಳ್ಳಿ ಪಂಚಾಯತಿ ಮಾದರಿಯಾಗಿದೆ, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಪಂಚಾಯತಿ ವ್ಯಾಪ್ತಿಯ ಬಡ ವರ್ಗದ ಸಮುದಾಯಗಳಿಗೆ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲಿ, ಉತ್ತಮ ಸೇವೆ ಸಲ್ಲಿಸುವಲ್ಲಿ ಪಂಚಾಯತಿ ಸಮೃದ್ಧವಾಗಲಿ ಎಂದು ಹಿರಿಯ ಮುಖಂಡರಾದ ತಿ.ರಂಗರಾಜು ಶುಭ ಹಾರೈಸಿದರು.

    ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಬುಧವಾರ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ಸದಸ್ಯೆ ಲೀಲಮ್ಮಪಿಳ್ಳೆಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಾರಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಶಶಿಶೇಖರ್ ಘೋಷಿಸಿದರು.

     

     

    ನೂತನ ಅಧ್ಯಕ್ಷರಾದ ಲೀಲಮ್ಮ ಪಿಳ್ಳೆಗೌಡ ಮಾತನಾಡಿ ಶಾಸಕರಾದ ಧೀರಜ್ ಮುನಿರಾಜು ಹಾಗೂ ಸ್ಥಳೀಯ ಎಲ್ಲಾ ಪಕ್ಷಗಳ ಮುಖಂಡರು, ಪಂಚಾಯತಿ ಸದಸ್ಯರ ಸಹಕಾರದಿಂದ ಗ್ರಾಮಸ್ಥರಿಗೆ ಸೇವೆ ಸಲ್ಲಿಸುವ ಭಾಗ್ಯ ದೊರೆತಿದೆ. ಉತ್ತಮ ಸೇವೆ ಸಲ್ಲಿಸುವ ಮೂಲಕ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಲಾಗುವುದು, ಮುಖ್ಯವಾಗಿ ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಖಾನೆಗಳು ಹೆಚ್ಚಾಗಿದ್ದು, ಕಾರ್ಖಾನೆಗಳ ರಾಸಾಯನಿಕ ಅಂತರ್ಜಲ ಸೇರಿ ಕುಡಿಯುವ ನೀರು ಸಾಕಷ್ಟು ಹಾಳಾಗಿದೆ , ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಗ್ರಾಮಗಳಿಗೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ತಾಲ್ಲೂಕಿಗೆ ಮಾದರಿ ಪಂಚಾಯತಿಯನ್ನಾಗಿಸುವುದು ನಮ್ಮ ಆಶಯ ಎಂದರು.

    ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ ತಾಲ್ಲೂಕಿಗೆ ಮಾದರಿ ಪಂಚಾಯತಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಇಂದಿನ ಚುನಾವಣೆ ನೆಡೆದಿದೆ, ಸ್ಥಳೀಯ ಮಟ್ಟದ ಚುನಾವಣೆಗಳಲ್ಲಿ ಸೌಹಾರ್ದ ಭಾವನೆ ಮೂಡಲಿ ಎಂಬುದೇ ನಮ್ಮ ಉದ್ದೇಶ, ಚುನಾವಣೆ ಸೋಲು ಗೆಲುವು ಸಾಮಾನ್ಯ ಗ್ರಾಮಗಳಲ್ಲಿ ವೈರತ್ವದ ಭಾವನೆಯಿಂದ ಜನತೆ ಹೊರಬರಬೇಕಿದ್ದು ಅದಕ್ಕಿಂದು ಮುನ್ನುಡಿ ಬರೆದಿದ್ದೇವೆ, ಗ್ರಾಮ ಪಂಚಾಯತಿಗಳಲ್ಲಿ ಅಕ್ರಮವೆಸಗಲು ಸಾಧ್ಯವಿಲ್ಲ ಕಾನೂನು ಬಿಗಿಯಾಗಿದ್ದು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಲು ಇದೊಂದು ಮಾರ್ಗ ಅಷ್ಟೇ… ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉತ್ತಮ ಸೇವೆ ಸಲ್ಲಿಸುವ ಮೂಲಕ ಪಂಚಾಯಿತಿ ಅಭಿವೃದ್ದಿ ಮಾಡಬೇಕಿದೆ, ಈ ಚುನಾವಣೆಗೆ ಶ್ರಮಿಸಿದ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಮುಖಂಡರಿಗೆ ಅಭಿನಂದನೆ ತಿಳಿಸಿದರು.

     

    ನೂತನ ಉಪಾಧ್ಯಕ್ಷ ಮಾರಪ್ಪ ಮಾತನಾಡಿ ಸರ್ವ ಸದಸ್ಯರು ಒಮ್ಮತದಿಂದ ನಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು, ನಮ್ಮಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಲು ಪ್ರಯತ್ನಿಸುತ್ತೇವೆ, ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ನಮ್ಮ ಕಾರ್ಯ ಆರಂಭವಾಗಲಿದೆ ಎಂದರು.

     

    ಈ ಸಂದರ್ಭದಲ್ಲಿ ಮುಖಂಡರಾದ ಆದಿತ್ಯ ನಾಗೇಶ್, ಹೊಸ ಹುಡ್ಯ ಆನಂದ್,ಬಿ ಎಚ್ ಕೆಂಪಣ್ಣ, ಮಾಜಿ ಅಧ್ಯಕ್ಷರಾದ ಎಚ್.ಎ ಆನಂದ್  ಕುಮಾರ್,ಬಿ.ಟಿ.ಶ್ರೀನಿವಾಸ್ ಮೂರ್ತಿ, ಪಿಳ್ಳೇಗೌಡ, ಗಂಗರಾಜು, ಕುಮಾರ್,ಬೈರೇಗೌಡ, ವಿಜಯ್ ಕುಮಾರ್, ಪಿಳ್ಳಾ ಅಂಜನಪ್ಪ, ಶಿವಕುಮಾರ್ ಮತ್ತಿತರು ಉಪಸ್ಥಿತರಿದ್ದರು.

  • ತೂಬಗೆರೆ ಗ್ರಾಮಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧ ಆಯ್ಕೆ

    ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಪಂಚಾಯಿತಿ ಚುನಾವಣೆ ನೆಡೆದಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಿದ್ದು ನೂತನ ಅಧ್ಯಕ್ಷರಾಗಿ ತೂಬಗೆರೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ( ಅ) ಮಹಿಳೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

     

    ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸದಸ್ಯರು ಪುಷ್ಪಮಾಲೆ ನೀಡಿವ ಮೂಲಕ ಶುಭಕೋರಿದರು

     

    ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಮಾತನಾಡಿ ತೂಬಗೆರೆಯಲ್ಲಿ ನೈರ್ಮಲ್ಯ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನನ್ನ ಮುಖ್ಯ ಉದ್ದೇಶ, ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರಸ್ತೆ ಬೀದಿದೀಪ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿಂದ್ದು ಸದಸ್ಯರ ಸಹಕಾರ ಮತ್ತು ಸಲಹೆಗಳೊಂದಿಗೆ ಶೀಘ್ರಗತಿಯಲ್ಲಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದರು.

    ಸರ್ಕಾರದಿಂದ ಹೆಚ್ಚಿನ ಅನುದಾನಗಳನ್ನು ತರುವ ಮೂಲಕ ಸ್ಥಳೀಯವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.

     

    ನೂತನ ಉಪಾಧ್ಯಕ್ಷೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಇಂದಿನ ಚುನಾವಣೆಯಲ್ಲಿ ಜಯಗಳಿಸಲು ಸಾಧ್ಯವಾಗಿದೆ. ಸಹ ಸದಸ್ಯರ ಸಹಕಾರದಿಂದ ಗ್ರಾಮ ಪಂಚಾಯತಿಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಲಾಗುವುದು, ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು.

     

    ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ ) ಮಾತನಾಡಿ ಸ್ಥಳೀಯವಾಗಿ ಸಾರ್ವಜನಿಕರಿಗೆ ನಿವೇಶನ, ಇ -ಖಾತೆ, ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಸಾಕಷ್ಟು ಸಮಸ್ಯೆಗಳಿವೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೆಚ್ಚಿನ ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದಾಗಬೇಕಿದೆ.ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನ ತರುವ ಮೂಲಕ ಸ್ಥಳೀಯವಾಗಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂಥಗಲಿ ಎಂದರು.

    ಈ ಸಂದರ್ಭದಲ್ಲಿ ಮುಖಂಡರಾದ ರಾಮಕೃಷ್ಣ,ರಾಜ್ ಕುಮಾರ್, ನರಸಿಂಹನಹಳ್ಳಿ ಗಂಗರಾಜು, ಉದಯ ಆರಾಧ್ಯ, ವಾಸುದೇವ್, ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡರಾದ ಪುಟ್ಟಪ್ಪ, ಸುಬ್ರಹ್ಮಣ್ಯಪ್ಪ, ಯುವ ಮುಖಂಡ ಉದಯ ಆರಾಧ್ಯ, ಪಿಡಿಒ ವೆಂಕಟೇಶ್, ಮುನಿಕೃಷ್ಣಪ್ಪ, ನಾಗೇಶ್, ನಾಗರಾಜು, ಹರೀಶ್, ರಾಜಕುಮಾರ್, ಮಧು, ವೆಂಕಟೇಶ್, ಮುನಿರಾಜು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸುದ್ದಿಗೋಷ್ಠಿ : ರೈತರ ಪರ ನಿಲುವು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹ

    ದೊಡ್ಡಬಳ್ಳಾಪುರ ಅ 29.( ವಿಜಯಮಿತ್ರ ) : ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಗಗಳಲ್ಲಿ ಮನೆ ಗುಡಿಸಲು ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ ಮಂಜೂರಾತಿ ಆಗಲಿ ನೀಡಿರುವುದಿಲ್ಲ ಅಂತಹ ಜನರ ಬೆಂಬಲವಾಗಿ ದೊರೆಸ್ವಾಮಿ ಅವರ ಆಶಯದಂತೆ ನಿರಂತರವಾಗಿ ನಮ್ಮ ಸಮಿತಿ ಹೋರಾಟ ನೆಡೆಸುತ್ತಿದೆ ಎಂದು ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಪಾಲ್ಗೊಂಡು ಮಾತನಾಡಿದರು, ತಾಲ್ಲೂಕಿನಲ್ಲಿ ಪಾರಂಪರಿಕವಾಗಿ ಬೇಸಾಯದಲ್ಲಿ ತೊಡಗಿಕೊಂಡು ಭೂಮಿಯನ್ನು ನಂಬಿ ಸರ್ಕಾರಿ ಗೋಮಾಳ ಸೇರಿದಂತೆ ಇತರೆ ಸ್ಥಳಗಳಲ್ಲಿ ಜೀವನ ಸಾಗಿಸುತ್ತಿರುವ ಬಡರೈತರ ಭೂಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನಿನ ಹೆಸರಿನಲ್ಲಿ ಕಬಳಿಸಲು ಮುಂದಾಗಿದ್ದಾರೆ. ಈ ಕುರಿತು ನಿರಂತರವಾಗಿ ಹೋರಾಟ ನಡೆಸುತ್ತಿದ್ದರು ಯಾವುದೇ ಪ್ರಯೋಜನವಾಗಿಲ್ಲ , ಜಿಲ್ಲಾಧಿಕಾರಿಗಳು ಈ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಂಡು ರೈತರು ಉತ್ತಮ ಜೀವನ ಸಾಗಿಸಲು ಸಹಕರಿಸಬೇಕಿದೆ. ಇಲ್ಲವಾದಲ್ಲಿ ರೈತರು ರಸ್ತೆಗಳಿದ್ದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

    ಈ ಕುರಿತಂತೆ ಸ್ಥಳೀಯ ರೈತರು ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಸಮಿತಿಯ ಗಮನಕ್ಕೆ ತಂದಿದ್ದು ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಪಕ್ಷದಲ್ಲಿ ಮುಂದೆ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

     

    ರಮೇಶ್ ಸಂಕ್ರಾಂತಿ ಮಾತನಾಡಿ ನಮ್ಮ ತಾಲ್ಲೂಕಿನ ಬಡ ರೈತರ ಸಮಸ್ಯೆಗಳನ್ನು ಕುರಿತು ಸ್ಥಳೀಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಾಕಷ್ಟು ಮನವಿ ನೀಡಿದ್ದೇವೆ, ಆದರೆ ಇದುವರೆಗೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಬಡ ರೈತರ ಭೂಮಿಗಳನ್ನು ಕಾನೂನಿನ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದು ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ , ರೈತರ ಒಕ್ಕಲಿಬ್ಬಿಸಿ ಅರಣ್ಯ ಪ್ರದೇಶ ಎಂದು ಬಾವುಟ ನೆಡುತ್ತಿರುವ ಅರಣ್ಯ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶನ ನೀಡಬೇಕಿದೆ . ಇದು ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದರು.

     

    ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶ್ರೀರಂಗಚಾರ್, ಸಂತೋಷ ನಾಯಕ್, ನಾಗರಾಜ್ ನಾಯಕ್,ಹನುಮಾ ನಾಯಕ್,ಪೆರುಮಗೊಂಡನಹಳ್ಳಿ ಮುನಿರಾಜು, ಕೊಟ್ಟಿಗೆ ಮಾಚೇನ ಹಳ್ಳಿ ನಾಗರಾಜ್ ಮೌರ್ಯ ಸೇರಿದಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಅನ್ನದಾಸೋಹ ಮಾಡುವ ಮೂಲಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

    ದೊಡ್ಡಬಳ್ಳಾಪುರ : ಶ್ರೀಮತಿ ಕಾಂತಾಮಣಿ ಹರೀಶ್ ಗೌಡ ಮಹಿಳಾ ಬಳಗದ ವತಿಯಿಂದ ನಿರಂತರ ಅನ್ನದಾಸೋಹ ಸಮಿತಿಯ ಸಹಕಾರದೊಂದಿಗೆ ಚಿತ್ರ ನಟ ಡಾ. ಪುನೀತ್ ರಾಜಕುಮಾರ್ ಸ್ಮರಣಾಥವಾಗಿ ವಯೋವೃದ್ಧರಿಗೆ, ಕಡುಬಡವರಿಗೆ ಆಹಾರ ವಿತರಣೆ ಮಾಡಲಾಯಿತು.

    ಗಾಯಕಿ ಮುನಿರತ್ನ ಮಾತನಾಡಿ ಹೆಸರಂತ ಚಿತ್ರನಟ ಪುನೀತ್ ರಾಜಕುಮಾರ್ ಅವರು ನಮ್ಮೆಲ್ಲರ ಸೇವ ಮನೋಭಾವಕ್ಕೆ ಮಾದರಿಯಾಗಿದ್ದಾರೆ, ತಮ್ಮ ಸೇವೆಗಳಿಂದಲೇ ಪರಮಾತ್ಮ ಎಂದು ಕರೆಸಿಕೊಳ್ಳುವ ಮಹಾನ್ ವ್ಯಕ್ತಿಯಾಗಿದ್ದಾರೆ, ಅವರ ಪುಣ್ಯ ಸ್ಮರಣೆಯಂದು ಮಲ್ಲೇಶ್ ರವರ ಸಹಕಾರದೊಂದಿಗೆ ವೃದ್ಧರಿಗೆ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಸೇವೆಯಲ್ಲಿ ತೊಡಗಿರುವುದು ಸಂತಸ ತಂದಿದೆ ಎಂದು ತಮ್ಮ ಅಭಿಪ್ರಾಯವ್ಯಕ್ತಪಡಿಸಿದರು.

     

     

    ನಿರಂತರ ಅನ್ನದಾಸೋಹ ಸಮಿತಿಯ ಮಲ್ಲೇಶ್ ಮಾತನಾಡಿ ನಿರಂತರವಾಗಿ ವೃದ್ಧರಿಗೆ ಕಡುಬಡವರಿಗೆ ಹಸಿದವರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ನಿರಂತರ ಅನ್ನದಾಸೋಹ ನಡೆಸಲು ಪುನೀತ್ ರಾಜಕುಮಾರ್ ಅವರ ಸೇವಾಕಾರ್ಯವೇ ಸ್ಫೂರ್ತಿಎಂದರೇ ತಪ್ಪಾಗಲಾರದು. ಇಂದು ನಮ್ಮೊಂದಿಗೆ ಸೇರಿ ಹಸಿದವರಿಗೆ ಆಹಾರ ನೀಡಿರುವ ಗಾಯಕಿ ಮುನಿರತ್ನ ಮತ್ತು ತಂಡಕ್ಕೆ ಶುಭವಾಗಲಿ ಎಂದರು

    ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಗೌರಮ್ಮ,ಲಕ್ಷ್ಮಿ ರಘುನಾಥಪುರ , ಕವಿತಾ ದೊಡ್ಡಬಳ್ಳಾಪುರ, ಲಕ್ಷ್ಮಮ್ಮ ದೊಡ್ಡಬಳ್ಳಾಪುರ ಸೇರಿದಂತೆ ಶ್ರೀಮತಿ ಕಾಂತಾಮಣಿ ಹರೀಶ್ ಗೌಡ ಮಹಿಳಾ ಬಳಗದ ಸದಸ್ಯರು ಉಪಸ್ಥಿತರಿದ್ದರು.