Blog

  • ದೊಡ್ಡಬಳ್ಳಾಪುರl ಅಂಗನವಾಡಿಯಲ್ಲಿ ಸೀಮಂತ ಕಾರ್ಯಕ್ರಮ : ಶುಭ ಹಾರೈಸಿದ ಸಿಬ್ಬಂದಿ ವರ್ಗ

    ದೊಡ್ಡಬಳ್ಳಾಪುರ : ದರ್ಗಾಜೋಗಹಳ್ಳಿಯ ಅಂಗನವಾಡಿಯಲ್ಲಿ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಶಿಕ್ಷಕಿ ಹೇಮಾ ಅವರಿಗೆ ಶುಭ ಹಾರೈಸಲಾಯಿತು.

     

    ಸ್ಥಳೀಯ ವೈದ್ಯಕೀಯ ಸಿಬ್ಬಂದಿ,ಆಶಾ ಕಾರ್ಯಕರ್ತೆಯರ ಸಹಯೋಗದೊಂದಿಗೆ ಪಂಚಾಯಿತಿ ವತಿಯಿಂದ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಿ ಅಂಗನವಾಡಿಯ ಶಿಕ್ಷಕಿ ಹೇಮಾ ರವರಿಗೆ ಶುಭ ಹಾರೈಸಲಾಯಿತು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿಕಲ ನಾಗರಾಜು ಮಾತನಾಡಿ ಪ್ರತಿನಿತ್ಯ ನೂರಾರು ಮಕ್ಕಳಿಗೆ ಪಾಠ ಹೇಳಿಕೊಡುವ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿ ಎಂದೇ ಗುರುತಿಸಿಕೊಂಡಿರುವ ಹೇಮಾ ರವರಿಗೆ ಶುಭ ಹಾರೈಸುವ ಸಲುವಾಗಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದನ್ನು ಸಂತಸದ ಸಮಯವಾಗಿದ್ದು ಹೇಮಾ ರವರಿಗೆ ಶುಭವಾಗಲಿ ಎಂದು ಹಾರೈಸಿದರು.

     

    ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ, ಕೂಸಿನ ಮನೆ ಸಿಬ್ಬಂದಿ ವರ್ಗ, ಶಾಲೆಯ ಅಡುಗೆ ಸಿಬ್ಬಂದಿ ಹಾಜರಿದ್ದರು.

  • *ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪ.ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 24, 2024(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

     

    ಹೊಲಿಗೆ ತರಬೇತಿ ಶಿಬಿರಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ (ಪಾಸ್/ಫೇಲ್) ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಪಡೆದು 18 ರಿಂದ 40 ವರ್ಷ ವಯಸ್ಸಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

     

    ಆಸಕ್ತ ಯುವಕ/ಯುವತಿಯರು ನವ್ಹೆಂಬರ್ 04 ರ ಒಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 9632778567 & 080-29787443 ಗೆ ಸಂಪರ್ಕಿಸಬಹುದಾಗಿದೆ ಎಂದು ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು‌ :ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ

    ಬೆಂಗಳೂರು:ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಗೆ ಕಾನೂನಿನ ಅರಿವು ಅಗತ್ಯ ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಭಿಪ್ರಾಯ ಪಟ್ಟರು.

    ಅವರು ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ “ಮಾಹಿತಿ ಹಕ್ಕು ದಿನಾಚರಣೆ” ಹಾಗೂ ಸಂಘಟನೆಯ “5 ನೇ ವಾರ್ಷಿಕೋತ್ಸವ”ದ ಅಂಗವಾಗಿ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು ಸಮಾಜದಲ್ಲಿ ನಡೆಯುತ್ತಿರುವ ಲಂಚ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆ ಯಲ್ಲಿ ಕಾನೂನಿನ ಅರಿವು ಇರಬೇಕು ಹಾಗೂ ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು‌ ಎಂದರು.

     

    ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಬೆಟ್ಟಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ, ಸಮಾಜದಲ್ಲಿನ ಭ್ರಷ್ಟಚಾರ ತಡೆಗಟ್ಟಲು ಗ್ರಾಮ ಪಂಚಾಯತಿ ಯಿಂದ ಪ್ರಾರಂಭವಾಗಿ ಪಾರ್ಲಿಮೆಂಟ್ ವರೆಗೆ ಭ್ರಷ್ಟಚಾರ ನಿರ್ಮೂಲನೆ ಅಭಿಯಾನ ಪ್ರಾರಂಭವಾಗಬೇಕು.ಹಾಗೂ ಸಾಮಾಜಿಕ ಹೋರಾಟಗಾರರು,ಮಾಹಿತಿ ಹಕ್ಕು ಕಾರ್ಯಕರ್ತರು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುವುದರ ಮುಖಾಂತರ ಭ್ರಷ್ಟಚಾರದ ವಿರುದ್ದ ದ್ವನಿ ಯಾಗಬೇಕು ಎಂದು ಕರೆ ಕೊಟ್ಟರು.

    ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲದಂತಾಗಿದೆ ಕಾರಣ ಇತಿಹಾಸದಲ್ಲಿ ನಾವು,ನೀವು ಓದಿದದಂತೆ ರಾಜನ ಮಗ ರಾಜನೇ ಆಗುತಿದ್ದರಲ್ಲಾ ಅದೇ ರೀತಿ ಈಗ ರಾಜಕಾರಣಿಗಳ ಮಕ್ಕಳು ರಾಜಕಾರಣಿ ಗಳೇ ಆಗುತ್ತಿದ್ದಾರೆ. ಅದು ನಿಲ್ಲಬೇಕು.ಸಮಾಜದ ಬಗ್ಗೆ ಕಾಳಜಿ ಇರುವ ವ್ಯಕ್ತಿಗಳುಮಾತ್ರವೇ ರಾಜಕಾರಣದಲ್ಲಿ ಉಳಿಯಬೇಕು ಎಂದರು.

     

    ಶಿಕ್ಷಣದ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ಯುವಕರು ಮುಂದಾಗಬೇಕು ಅಲ್ಲದೇ ಮನೆಗೊಬ್ಬ ಮಾಹಿತಿ ಕಾರ್ಯಕರ್ತರ ಉದ್ಭವಿಸಿದಾಗ ಮಾತ್ರವೇ ಭ್ರಷ್ಟಾಚಾರವನ್ನು ತಡೆಗಟ್ಟಬಹುದಾಗಿದೆ ಎಂದರು. ಆದರೆ ಪ್ರಶ್ನೆಮಾಡುವ ಮಾಹಿತಿ ಕಾರ್ಯಕರ್ತರು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿದ್ದಾಗ ಮಾತ್ರವೇ ಭ್ರಷ್ಟರನ್ನು ಪ್ರಶ್ನಿಸಬಹುದು ಭ್ರಷ್ಟಾಚಾರವನ್ನೂಮಟ್ಟಹಾಕಲುಬಹುದು ಎಂದು ಸಲಹೆ ನೀಡಿದರು.

     

    ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ವತಿಯಿಂದ ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರ್,ಸಂಸ್ಥಾಪಕ ಹೆಚ್.ಜಿ. ರಮೇಶ್ ಕುಣಿಗಲ್, ರಾಜ್ಯಾಧ್ಯಕ್ಷರ ಚೆನ್ನಯ್ಯ ಎಂ.ವಸ್ತ್ರದ್,ಕಾರ್ಯಾಧ್ಯಕ್ಷ ಎಂ.ಓಂಕಾರಪ್ಪ, ರಾಜ್ಯ ಉಪಾಧ್ಯಕ್ಷ ನರಸಿಂಹ‌ಗೌಡ,ಪ್ರಾಧಾನ ಕಾರ್ಯದರ್ಶಿ ಹೆಚ್.ಡಿ.ರುದ್ರೇಶ್,ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್.ಡಿ. ಉಪ್ಪಾರ್ ಸಂಘಟನೆಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಟಿ. ಮೋಹನ್, ಶಂಕರ್ ಬೆನ್ನೂರು, ಶಿವಲಿಂಗಯ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರು/ಕಾರ್ಯದರ್ಶಿ ಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

  • ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆಯಿಂದ ಕಂದಾಯ ಇಲಾಖೆಗೆ ತಾಂತ್ರಿಕ ಪರಿಕರಗಳ ಕೊಡುಗೆ

    ದೊಡ್ಡಬಳ್ಳಾಪುರ : ಸುಮಾರು ₹4.5 ಲಕ್ಷ ವೆಚ್ಚದ ಕಂಪ್ಯೂಟರ್‌ಗಳು ಹಾಗೂ ಪ್ರಿಂಟರ್‌ಗಳನ್ನು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಅವರು ತಹಶೀಲ್ದಾರ್‌ ವಿಭಾವಿದ್ಯಾ ರಾಥೋಡ್‌ ಅವರಿಗೆ ಹಸ್ತಾಂತರಿಸಿದರು.

     

     

    ತಾಲ್ಲೂಕಿನ ಶ್ರೀ ದೇವರಾಜ ಅರಸ್‌ ಎಜುಕೇಶನಲ್‌ ಟ್ರಸ್ಟ್‌ನ ವತಿಯಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಮುತ್ಸದ್ದಿ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ 99ನೇ ಜನ್ಮದಿನಾಚರಣೆ ಅಂಗವಾಗಿ ಸೇವಾ ಕಾರ್ಯದ ಭಾಗವಾಗಿ ತಾಲೂಕಿನ ಕಂದಾಯ ಇಲಾಖೆಗೆ ತಾಂತ್ರಿಕ ಪರಿಕರಗಳ ವಿತರಣೆ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು.

     

     

    ಈ ವೇಳೆ ಮಾತನಾಡಿದ ಅವರು, ಜಾಲಪ್ಪ ಅವರ ಸಾಮಾಜಿಕ ಕಾಳಜಿ ಮತ್ತು ದೂರದೃಷ್ಟಿಯ ಆಲೋಚನೆಗಳಿಗೆ ಪೂರಕವಾಗಿ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಶೈಕ್ಷಣಿಕವಾಗಿ ಮಾತ್ರವಲ್ಲದೆ, ಜನಪರ ಆಲೋಚನೆಯನ್ನೂ ಅನುಷ್ಠಾನದ ಭಾಗವಾಗಿಸಿಕೊಂಡಿದೆ. ಅಧಿಕಾರಿಗಳ ಬೇಡಿಕೆಗೆ ಅನುಗುಣವಾಗಿ ಸಂಸ್ಥೆಯಿಂದ ಅಗತ್ಯ ನೆರವನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಕಚೇರಿ ಪಾಳ್ಯಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಶೌಚಾಲಯವನ್ನು ಪುನಶ್ಚೇತನಗೊಳಿಸಿ ಹೈಟೆಕ್‌ ಶೌಚಾಲಯವಾಗಿ ಅಭಿವೃದ್ದಿ ಪಡಿಸಲು ನಮ್ಮ ಶಿಕ್ಷಣ ಸಂಸ್ಥೆಯಿಂದ ತೀರ್ಮಾನಿಸಲಾಗಿದ್ದು, ಶೀಘ್ರ ಕೆಲಸ ಆರಂಭಿಸಲಾಗುವುದು ಎಂದು ತಿಳಿಸಿದರು.

     

    ತಹಶೀಲ್ದಾರ್‌ ವಿಭಾ ವಿದ್ಯಾರಾಥೋಡ್ ಮಾತನಾಡಿ, ತಾಂತ್ರಿಕ ಪರಿಕಗಳನ್ನು ಒದಗಿಸಿಕೊಡುವ ಮೂಲಕ ನೆರವು ಒದಗಿಸಿರುವುದು ಅಭಿನಂದನೀಯ. ಶೌಚಾಲಯ ಪುನರ್‌ನಿರ್ಮಾಣಕ್ಕೆ ಸಹಕಾರಿಸುವುದಾಗಿ ಭರವಸೆ ನೀಡಿರುವ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

     

    ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಕಾರ್ಯದರ್ಶಿ ಕೆ.ಸಿ.ನಾಗರಾಜ್, ಕಂದಾಯ ಅಧಿಕಾರಿ ನರಸಿಂಹಯ್ಯ, ಸಿಬ್ಬಂದಿ ನರಸಿಂಹಮೂರ್ತಿ, ಕಾಲೇಜಿನ ತಾಂತ್ರಿಕ ವಿಭಾಗದ ಮಂಜುಳಾ, ಗಿರಿಭೂಷಣ್, ಮುಖೇಶ್, ರಮೇಶ್, ಮುಖಂಡ ಮುತ್ತಣ್ಣ ಮತ್ತಿತರರು ಉಪಸ್ಥಿತರಿದ್ದರು.

  • ಕಿತ್ತೂರು ರಾಣಿ ಚೆನ್ನಮ್ಮ  ತಮ್ಮ‌  ವ್ಯಕ್ತಿತ್ವದಿಂದಲೇ  ಎಲ್ಲರಿಗೂ ಪ್ರೇರಣೆಯಾಗಿದ್ದಾರೆ – ಪ್ರೊ.ಕೆ.ಆರ್.ರವಿಕಿರಣ್

    ದೊಡ್ಡಬಳ್ಳಾಪುರ : ಭಾರತೀಯ ಮಹಿಳೆಯರು  ಹಿಂದಿನಿಂದಲೂ   ಸಾಧಕರ ಸಾಲಿನಲ್ಲಿ  ತಮ್ಮದೇ  ಹೆಜ್ಜೆ ಗುರುತು ಉಳಿಸಿದ್ದಾರೆ.  ಇಂದಿಗೂ ಸಹ  ಬಾಹ್ಯಾಕಾಶಯಾನದಲ್ಲಿ  ಸಾಧನೆ ಮಾಡಿರುವ  ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ   ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ.  ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.

     

    ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ  ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ  ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ. ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ ಎಂದರು.

     

    ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರ ವಿರುದ್ದ   ನಡೆಸಿದ ಹೋರಾಟದಲ್ಲಿ  ವಿಜಯಗಳಿಸಿ 200  ವರ್ಷ  ಪೂರೈಸಿದೆ. ಬ್ರಿಟಿಷರ ವಿರುದ್ದ  ಮೊದಲ ಮಹಿಳಾ  ಹೋರಾಟಗಾರ್ತಿಗೆ  1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್. ಸರಸ್ವತಿ ತಿಳಿಸಿದರು.

     

     

    1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824 ರಲ್ಲಿ  ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ,  ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

     

    ಕಿತ್ತೂರು ಸಂಸ್ಥಾನದ  ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದ   ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು  ‌ಸಂಸ್ಥಾನದ  ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ  ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

     

    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಹೆಣ್ಣಿನ ಧೈರ್ಯ, ಸಾಹಸ,  ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು   ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ  ಕಿತ್ತೂರು ರಾಣಿ ಚೆನ್ನಮ್ಮ ಅವರ   ನೆನಪು  ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದ  ವಿರುದ್ದ  ರಾಣಿ ಚೆನ್ನಮ್ಮ  ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

    ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ,  ಶಿಕ್ಷಣ ಇಲಾಖೆ ‌ಕ್ಷೇತ್ರ  ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್,ದೊಡ್ಡಬಳ್ಳಾಪುರ ತಾಲ್ಲೂಕು   ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ  ವೆಂಕಟರಾಜು,  ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

  • ಅ. 24 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ : ನ.2 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಹಾಸನ : ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 24 ರಂದು ತೆರೆದು ನ.3 ರಂದು ಮುಚ್ಚಲಾಗುವುದು. ಅ.25ರಿಂದ ನ.2 ರವರೆಗೆ ಮಾತ್ರ ಸಾರ್ವಜನಿಕರಿಗೆ ದರ್ಶನದ ಅವಕಾಶ ಕಲ್ಪಿಸಿದ್ದು, ಬಾಗಿಲು ತೆರೆಯುವ ಮತ್ತು ಮುಚ್ಚುವ ದಿನ ದೇವಿಯ ದರ್ಶನ ಅವಕಾಶವಿರುವುದಿಲ್ಲ ಎಂದು ದೇವಾಲಯದ ಮೂಲಗಳು ತಿಳಿಸಿವೆ.

     

    ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ನಾಳೆ(ಅ 24)ಯಿಂದ ತೆರೆಯುವ ಮೂಲಕ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ . ಹಾಸನಾಂಬ ದೇವಾಲಯಕ್ಕೆ ವರ್ಷದಿಂದ ವರ್ಷಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಪ್ರತಿ ವರ್ಷ 9-12 ದಿನ ಮಾತ್ರ ದರ್ಶನ ನೀಡುವ ಪ್ರತೀತಿ ಹೊಂದಿರುವ ಹಾಸನಾಂಬ ದೇವಾಲಯದ ಆಚರಣೆ ವಿಶೇಷ ಎನ್ನಬಹುದು.

    ಈ ದೇವಾಲಯವು ನಂಬಿಕೆ, ಭಕ್ತಿ, ಮಹಿಮೆಗಳಿಗೆ ಹೆಚ್ಚಿನ ವೈಶಿಷ್ಟ್ಯ ಹೊಂದಿದೆ . ದೇವಾಲಯದ ಬಾಗಿಲು ಮುಚ್ಚುವ ಸಮಯದಲ್ಲಿ ದೇವಿಯ ಎದುರು ಇಡಲಾಗುವ ನೈವೇದ್ಯವು ಮತ್ತೇ ಮುಂದಿನ ವರ್ಷ ಇದೇ ಸಮಯದಲ್ಲಿ ಬಾಗಿಲು ತೆರೆದಾಗ ತಾಜಾ ಆಗಿ ಹಾಗೂ ದೇವರ ಎದುರಿನಲ್ಲಿರುವ ದೀಪವು ವರ್ಷವೀಡಿ ಉರಿಯುತ್ತಲೇ ಇರುತ್ತದೆ ಎಂಬ ಪ್ರತೀತಿ ಇದೆ.

    ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪ್ರತಿನಿತ್ಯ ದೇವಿಯ ದರ್ಶನ ಪಡೆಯುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಭಕ್ತದಿಗಳು ಈ ಸಮಯದಲ್ಲಿ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ನಾಳೆ(ಅ. 24)ಮಧ್ಯಾಹ್ಯ 12 ಗಂಟೆಗೆ ಶಾಸ್ತ್ರೋಕ್ತವಾಗಿ ವಿಧಿ ವಿಧಾನಪೊರ್ವಕ ಮಂಗಳವಾಧ್ಯಗಳ ಉದ್ಘೋಷದೊಂದಿಗೆ ಹಾಸನಾಂಬೆಯ ದೇಗುಲದ ದ್ವಾರವನ್ನು ನಗರದ ಪ್ರಮುಖರ ಉಪಸ್ಥಿತಿಯಲ್ಲಿ ತೆರೆಯಲಾಗುವುದು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

  • ಜಿಲ್ಲಾಡಳಿತ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ‌ ಆಚರಣೆ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ,‌ ಅಕ್ಟೋಬರ್ 23,:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕಿತ್ತೂರು ರಾಣಿ ಚೆನ್ನಮ್ಮ’ನವರ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

    ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾವಿಭಾ ರಾಥೋಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಟಿ.ಎನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

  • ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್

    ಕನ್ನಡದ ಹೆಸರಾಂತ ನಟ ಸುದೀಪ್ ಅವರ ತಾಯಿ ನಿಧನರಾದ ಹಿನ್ನಲೆ ಕೋಟ್ಯಾಂತರ ಅಭಿಮಾನಿಗಳು ಹೊಂದಿರುವ ನಟ ಸುದೀಪ್ ರವರಿಗೆ ದೇಶ ವಿದೇಶಗಳಿಂದ ಹಲವು ಗಣ್ಯರು ಸಂತಾಪ ಸೂಚಿಸುವ ಮೂಲಕ ತಮ್ಮ ಭಾವನೆ ವ್ಯಕ್ತಪಡಿಸಿದ್ದರು.

     

    ಈಗ ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ರವರು ಪತ್ರ ಬರೆಯುವ ಮೂಲಕ ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

     

    ಪಾತ್ರದಲ್ಲಿ ಏನಿದೆ…???

     

    ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ಪತ್ರ ರವಾನೆ ಮಾಡಿದ್ದಾರೆ.

     

     

     

  • ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಶಾಲೆಗಳಿಗೆ ರಜೆ : ರಜೆ ಘೋಷಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

    ಬೆಂಗಳೂರು ನಗರ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಮಕ್ಕಳು ಪರದಾಡುವಂತಾಗಿದೆ ಇದನ್ನು ಮನಗಂಡ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿ.ಸಿ. ಜಗದೀಶ್ ನಾಳೆ (23-10-2024) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

    ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮಾಡಲಾಗಿದೆ.

     

     

    ಆದೇಶದ ಅನ್ವಯ ಬೆಂಗಳೂರು ನಗರ ಜಿಲ್ಲೆಯ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜುಗಳಿಗೆ ರಜೆ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

     

  • *ಕಾಲುಬಾಯಿ ರೋಗ ತಡೆಯಲು 6ನೇ ಸುತ್ತಿನ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ.*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 22(ವಿಜಯಮಿತ್ರ): ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಾನುವಾರಗಳ ಕಾಲು ಬಾಯಿ ರೋಗ ತಡೆಯಲು 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ದೇವನಹಳ್ಳಿ ಪಶು ಆಸ್ಪತ್ರೆ ಬಳಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಚಾಲನೆ ನೀಡಿದರು.

    ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 21 ರವರೆಗೆ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು ಜಾನುವಾರುಗಳಿಗೆ (ದನ ಮತ್ತು ಎಮ್ಮೆ) ಲಸಿಕೆ ಹಾಕಲಾಗುವುದು.ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶು ಆಸ್ಪತ್ರೆ ದೇವನಹಳ್ಳಿ ವತಿಯಿಂದ 50% ಸಹಾಯಧನದೊಂದಿಗೆ (ರೂ.16700/-) ಒಟ್ಟು 20 ಫಲಾನುಭವಿಗಳಿಗೆ 02 ಹೆಚ್.ಪಿ ಮೇವು ಕಟಾವು ಯಂತ್ರಗಳನ್ನು ವಿತರಿಸಲಾಗಿದೆ. ಕುರಿ/ಮೇಕೆ ಆಕಸ್ಮಿಕ ಮರಣದ ಅನುಗ್ರಹ ಯೋಜನೆಯಡಿ ದೇವನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು 65 ಫಲಾನುಭವಿಗಳಿಗೆ ತಲಾ 5000 ರೂಪಾಯಿಗಳಂತೆ ವಿತರಿಸಲಾಯಿತು.

     

    ಜಾನುವಾರು ಆಕಸ್ಮಿಕ ಮರಣದ ಅನುಗ್ರಹ ಯೋಜನೆ ಯೋಜನೆಯಡಿ ದೇವನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು 58 ಫಲಾನುಭವಿಗಳಿಗೆ ತಲಾ 10,000 ರೂಪಾಯಿಗಳಂತೆ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ. ಜಗದೀಶ್, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ, ಅನಿಲ್ ಕುಮಾರ್, ತಹಶಿಲ್ದಾರ್ ಬಾಲಕೃಷ್ಣ, ಬಯ್ಯಪ್ಪಾ ಸದಸ್ಯರಾದ ಮಂಜುನಾಥ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.