Blog

  • *ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*

    ದೊಡ್ಡಬಳ್ಳಾಪುರ : ಜೂನ್ 13 ರಂದು ಬೆಳಗ್ಗೆ ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಗಂಡಸು ಸುಮಾರು 75 ರಿಂದ 80 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

    ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 110/2024 ಕಲಂ 174 Cr.P.C ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

    *ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಬಿಳಿ ಕೂದಲು,ದುಂಡು ಮುಖ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.ಬಿಳಿ ಮೀಸೆ ಹೊಂದಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

    *ಬಟ್ಟೆಗಳು* – ಬಿಳಿ ಬಣ್ಣದ ಶರ್ಟ್ , ನೀಲಿ ಬಾರ್ಡರ್ ಬಿಳಿ ಬಣ್ಣದ ಪಂಚೆ , ಬಿಳಿಯ ಬಣ್ಣದ ಒಳ ಬನಿಯನ್ ಮತ್ತು T ಆಕಾರದ ಮರದ ಊರುಗೋಲು ಕಡ್ಡಿ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9480802143, ಸಂಪರ್ಕಿಸಲು ಕೋರಿದೆ.

  • *ಉತ್ತಮ ಪ್ರಜೆಯಾಗಿ ದೇಶಸೇವೆ ಸಲ್ಲಿಸಲು ಎನ್ಎಸ್ಎಸ್ ಸಹಕಾರಿ – ಶಾಸಕ ಧೀರಜ್ ಮುನಿರಾಜು*

    ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ ಇವರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ ಆಯೋಜನೆ ಮಾಡಲಾಗಿತ್ತು.

    ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

     

    ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ದಿಸೆಯಲ್ಲಿಯೇ ನಮ್ಮಲ್ಲಿ ರಾಷ್ಟ್ರಸೇವೆಯ ಮನೋಭಾವನೆಯನ್ನು ಬೆಳೆಸುತ್ತದೆ. ಮುಂದೆ ಉತ್ತಮ ಪ್ರಜೆಯಾಗಿ ದೇಶಸೇವೆಗೆ ಮುಂದಾಗಲು ಎನ್ಎಸ್ಎಸ್ ಸ್ಫೂರ್ತಿದಾಯಕವಾದ ಕಾರಣ ಎಲ್ಲರೂ ಸಕ್ರಿಯರಾಗಿ ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು, ಮುಖಂಡರು, ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

  • *ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

     

    ಅರ್ಹ ಅಭ್ಯರ್ಥಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.twd.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ 18 ರಿಂದ ಪ್ರಾರಂಭವಾಗಿ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

     

    *ಷರತ್ತುಗಳು*

     

    1. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು.

    2. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    3. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.

    4. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು.

    5. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು,ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.

    6. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ತರಬೇತಿ ನಿಯೋಜಿಸಲಾಗುವುದು.

    7. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ.

    8. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

    9. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    10. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನ ವಾಗಿರುತ್ತದೆ.

     

    ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ನಂ-205 ಎರಡನೇ ಮಹಡಿ,ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 080-29787448 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಎಸ್.ಎಸ್.ಎಲ್.ಸಿ ಪರೀಕ್ಷೆ-2: ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 (ವಿಜಯಮಿತ್ರ ): 2024 ರ ಎಸ್.ಎಸ್. ಎಲ್.ಸಿ ಪರೀಕ್ಷೆ-2 ಜೂನ್ 14 ರಿಂದ ಜೂನ್ 22 ರವರೆಗೆ ನಡೆಯಲಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಒಟ್ಟು 11 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ.

     

    ದೇವನಹಳ್ಳಿ ತಾಲೂಕು 02, ದೊಡ್ಡಬಳ್ಳಾಪುರ ತಾಲೂಕು 03, ಹೊಸಕೋಟೆ ತಾಲೂಕು 03 ಹಾಗೂ ನೆಲಮಂಗಲ ತಾಲೂಕು 03 ಕೇಂದ್ರಗಳನ್ನು ಒಳಗೊಂಡಿರುತ್ತದೆ.

     

     

    ಜಿಲ್ಲೆಯಲ್ಲಿ ಒಟ್ಟು 2348 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಆಗಿರುತ್ತಾರೆ. ಈ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಒಂದರ ಅನುತ್ತೀರ್ಣ ವಿದ್ಯಾರ್ಥಿಗಳು 2082, ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸಿರುವ ವಿದ್ಯಾರ್ಥಿಗಳು 190 ಹಾಗೂ 76 ಖಾಸಗಿ ವಿದ್ಯಾರ್ಥಿಗಳು ನೋಂದಣಿ ಆಗಿರುತ್ತಾರೆ.

     

    ಪರೀಕ್ಷಾ ಕಾರ್ಯಕ್ರಮವನ್ನು ಸುಗಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಸಿಬ್ಬಂದಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಅನ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಭಂಧಿಸಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿ ಹಾಗು ಸೈಬರ್ ಸೆಂಟರ್ ಗಳನ್ನು ಮುಚ್ಚಲು ಸೂಚಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ಗಳನ್ನು ನಿಯಮಬಾಹಿರವಾಗಿ ಹಾಳು ಮಾಡುವ ವ್ಯಕ್ತಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಮುಂಗಾರು 2024:ಬೆಳೆ ವಿಮೆಗೆ ನೋಂದಾಯಿಸಿ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 : 2024ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.

     

    ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.

     

    ಆಯಾ ತಾಲ್ಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.

     

    ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಮತ್ತು ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.

     

    ಅಂತಿಮ ದಿನದವರೆಗೆ ಕಾಯದೆ ರೈತರು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸುವುದು.

     

    ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಿ, ಕೊನೆಯ ದಿನಾಂಕದವರೆಗೆ ವಿಳಂಬಿಸದೆ ವಿಮೆಗೆ ನೋಂದಾಯಿಸಿಕೊಳ್ಳಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 : ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಪ್ರಸ್ತುತ ಜನವರಿ 01 ರಿಂದ 09 ರ ವರೆಗೆ 173 ಮಿ.ಮೀ ವಾಡಿಕೆ ಮಳೆಗೆ 236 ಮಿ.ಮೀ ಮಳೆಯಾಗಿದೆ. ಜೂನ್ ಮಾಹೆಯಲ್ಲಿ 31 ಮಿ.ಮೀ ಮಳೆಗೆ 85 ಮಿ.ಮೀ ರಷ್ಟು ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಒಟ್ಟು 2179 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸುವ ಗುರಿ ಹೊಂದಲಾಗಿದ್ದು. ಈ ವರೆಗೆ 222.23 ಕ್ವಿಂಟಾಲ್ ರಾಗಿ, 2.35 ಕ್ವಿಂಟಾಲ್ ತೊಗರಿ, 2.15 ಕ್ವಿಂಟಾಲ್ ಅಲಸಂದೆ, 11.02 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜ ರೈತರಿಗೆ ವಿತರಿಸಲಾಗಿದೆ ಎಂದು ಕೃಷಿ ಆಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ರೈತರು ಈಗಾಗಲೇ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ದಾಸ್ತಾನು ಶೇಖರಿಸಲು ಸೂಚಿಸಿದರು .

     

    ಅನ್ನ ಭಾಗ್ಯ ಯೋಜನೆ ಅಡಿ ಜಿಲ್ಲೆಯಲ್ಲಿ 2,29,390 ಫಲಾನುಭವಿಗಳಿದ್ದು ಅದರಲ್ಲಿ 2,09,389 ಫಲಾನುಭವಿಗಳಿಗೆ 12,19,37,430 ರೂ.ಗಳು ಏಪ್ರಿಲ್ ಮಾಹೆಯಲ್ಲಿ ಜಮೆಯಾಗಿದೆ. ಆಧಾರ್ ಕಾರ್ಡ್ ಇ- ಕೆವೈಸಿ ಸಮಸ್ಯೆ ಹಾಗೂ ಇನ್ನಿತರ ಕಾರಣಗಳಿಂದ ಇತರೆ ಅರ್ಹ ಫಲಾನುಭವಿಗಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಅಂತಹ ಫಲಾನುಭವಿಗಳನ್ನು ಗುರ್ತಿಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಿ ಎಂದರು.

     

    ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 3,57,122 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,16,054 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ.

    *344 ಕೋಟಿ ಗೃಹಲಕ್ಷ್ಮಿ ಹಣ ಜಮೆ:* ಗೃಹ ಲಕ್ಷ್ಮಿ ಯೋಜನೆ ಆರಂಭವಾದ ದಿನದಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ 17,39,675 ಫಲಾನುಭವಿಗಳಿಗೆ 3,44,10,60,000 ರೂಗಳು ಹಣ ವರ್ಗಾಯಿಸಲಾಗಿದೆ. ಮೇ ಮಾಹೆಯವರೆಗೆ 2,03,184 ಫಲಾನುಭವಿಗಳು ನೋಂದಣಿ ಆಗಿದ್ದು ಮೇ ಮಾಹೆಯಲ್ಲಿ 40,63,68,000 ರೂ.ಗಳು ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

    ಯುವ ನಿಧಿ ಯೋಜನೆಯಡಿ 2094 ಅರ್ಜಿಗಳು ಸ್ವೀಕೃತ ವಾಗಿದ್ದು ಮೇ ಅಂತ್ಯಕ್ಕೆ 912 ಅರ್ಹ ನಿರುದ್ಯೋಗ ಪದವೀಧರಿಗೆ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ.

    ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ವಸತಿ ರಹಿತ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ವರದಿ ನೀಡಿ, ಈಗಾಗಲೇ ವಿವಿಧ ವಸತಿ ಯೋಜನೆಗಳಡಿ ಕಾರ್ಯಾರಂಭಗೊಂಡಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

     

    ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ತ್ವರಿತವಾಗಿ ಶಾಸಕರಿಂದ ಆಯ್ಕೆ ಪಟ್ಟಿ ಪಡೆದು ನಿರ್ದಿಷ್ಟ ಗುರಿ ತಲುಪಲು ಕ್ರಮ ವಹಿಸಿ ಎಂದು ಹೇಳಿದರು.

     

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • *ದೇವನಹಳ್ಳಿ : ಸರ್. ಎಂ. ವಿಶ್ವೇಶ್ವರಯ್ಯ ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಕುರಿತು ವಿಶೇಷ ಅಭಿಯಾನ*

    ದೇವನಹಳ್ಳಿ, ಯಲಿಯೂರು : ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಅತ್ಯವತ್ಯವಾಗಿದ್ದು. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಕಾಯಕ ನಮ್ಮಿಂದ ಆಗಬೇಕಿದೆ ಎಂದು ಸರ್ ಎಂ ವಿಶ್ವೇಶ್ವರಯ್ಯ ಆಂಗ್ಲ ಪ್ರೌಢಶಾಲೆ ಸಂಸ್ಥಾಪಕ ತ್ಯಾಗರಾಜು ಅಭಿಪ್ರಾಯಪಟ್ಟರು.

    ದೇವನಹಳ್ಳಿ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಮತ್ತು ವಿದ್ಯಾರ್ಥಿಳಿಂದ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಅಭಿಯಾನ ಆಯೋಜನೆ ಮಾಡಲಾಗಿತ್ತು.ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಪರಿಸರ ನಮ್ಮನ್ನು ರಕ್ಷಿಸುವುದಕ್ಕಿಂತ ನಾವು ಪರಿಸರವನ್ನು ರಕ್ಷಿಸುವ ಪರಿಸ್ಥಿತಿ ಎದುರಾಗಿದೆ. ಮನುಷ್ಯ ಅತಿ ಆಸೆಯಿಂದ ನಿಯಂತ್ರಣ ಇಲ್ಲದೆ ಮರ ಕಡಿದು ಅರಣ್ಯಗಳನ್ನು ನಾಶ ಮಾಡಿದ್ದಾನೆ. ಈ ಕಾರಣದಿಂದಾಗಿ ತಾಪಮಾನ ಹೆಚ್ಚಾಗಿ ಹವಾಮಾನದಲ್ಲಿ ವ್ಯತ್ಯಾಸಉಂಟಾಗುತ್ತಿದೆ. ಸಮಾಜದ ಪ್ರಜೆಗಳಾಗಿ ನಮ್ಮ ಸುತ್ತಮುತ್ತಲಿನ ಪರಿಸರಕ್ಕೆ ನಮ್ಮ ಕೊಡುಗೆಯ ಅವಶ್ಯಕತೆ ಇದೆ. ಪ್ರತಿ ಪ್ರಜೆಯೂ ಒಂದೊಂದು ಸಸಿ ನೆಡುವ ಮೂಲಕ ವಾತಾವರಣದ ಸಮತೋಲನಕ್ಕೆ ಸಹಕರಿಸಬೇಕಿದೆ ಎಂದರು.

    Ad

    ಶಾಲೆಯ ಮುಖ್ಯ ಶಿಕ್ಷಕ ಕೆ ಹೆಚ್ ವೆಂಕಟೇಶ್ ಮಾತನಾಡಿ ನಾವು ಪರಿಸರಕ್ಕೆ ನೀಡಿದ್ದಕ್ಕಿಂತ ಅದರಿಂದ ನಾವು ಪಡೆದಿದ್ದೆ ಹೆಚ್ಚು. ಈಗಿನ ಪ್ರಸ್ತುತ ಪೀಳಿಗೆ ಸಸಿ ನೆಟ್ಟು ಪಾಲನೆ ಮಾಡುವ ಮೂಲಕ ಮಾಲಿನ್ಯ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ. ಕೇವಲ ಸಸಿ ನೆಟ್ಟರೆ ಸಾಲದು ಅದರ ಪಾಲನೆಯು ಬಹುಮುಖ್ಯ ಎಂಬುದನ್ನು ಎಲ್ಲರೂ ಅರಿಯಬೇಕಿದೆ ಎಂದರು.

    Ad

    ಕಾರ್ಯಕ್ರಮದಲ್ಲಿ ಮಕ್ಕಳು ವಿಶೇಷವೇಶಭೂಷಣ ಧರಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಸ್ಥಳೀಯ ಕೆನರಾ ಬ್ಯಾಂಕ್ ವ್ಯವಸ್ಥಾಪಕರು, ಬ್ಯಾಂಕ್ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

  • *ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಆಸಕ್ತರು ಸೇವಾಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12(ವಿಜಯಮಿತ್ರ): 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

     

    Ad

    ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

     

     

    ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

    Ad

    ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

     

    ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

    Ad

    ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ 18 ರಿಂದ ಪ್ರಾರಂಭವಾಗಿ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

     

    *ಷರತ್ತುಗಳು*

     

    1. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು.

    2. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    3. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.

    4. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು.

    5. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು,ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.

    6. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು.

    7. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ.

    8. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

    9. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    10. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನ ವಾಗಿರುತ್ತದೆ.

    Ad

    ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ;080 29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ): ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ. ಎನ್ ಅವರು ಹೇಳಿದರು.

     

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಇಲಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಇಂದು ನಡೆದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2024” ರ ಪ್ರಯುಕ್ತ ‘ಕಾನೂನು ಅರಿವು ನೆರವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    Ad

    ಸಂವಿಧಾನದಲ್ಲಿ ಮಕ್ಕಳಿಗಾಗಿ ಇರುವ ಕಾಯ್ದೆಗಳು, ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಮಕ್ಕಳು ಶಿಕ್ಷಣ ಪಡೆಯುವಾಗ ಅಲಕ್ಷ್ಯ ಮಾಡದೇ, ಶ್ರದ್ಧೆಯಿಂದ ಕಲಿತರೇ ಮಾತ್ರವೇ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ ಎಂದರು. ಇದಲ್ಲದೆ ಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ, ಇತರೆ ಚಟುವಟಿಕೆಗಳಿಗೆ ಹಾಗೂ ಅಂಗಡಿಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದರೆ ಇಂತಹ ಘಟನೆಗಳನ್ನು ಸಾರ್ವಜನಿಕರು ಗಮನಿಸಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಿ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು.

     

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮು ಮಲ್ಲಯ್ಯ ಅವರು ಮಾತನಾಡಿ, ಮಕ್ಕಳನ್ನು ಚಿಕ್ಕವಯಸ್ಸಿಗೆ ಕೆಲಸಕ್ಕೆ ಹಾಕಿದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆ ಕುಂಠಿತವಾಗುತ್ತದೆ. ಪೋಷಕರು ಮಕ್ಕಳನ್ನು ವಯೋಸಹಜವಾಗಿ ಆಟವಾಡಲು ಶಿಕ್ಷಣ ಪಡೆಯಲು ಸಹಕರಿಸಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಬಾಲಕಾರ್ಮಿಕ ಇಲಾಖೆಯೂ ಅನೇಕ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಈ ಇಲಾಖೆ ಜತೆಗೆ ಎಲ್ಲ ಇಲಾಖೆಗಳು ಬಾಲ ಕಾರ್ಮಿಕ ಪದ್ಧತಿ ತಡೆಯಲು ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.

    Ad

    ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ವಾಹನಕ್ಕೆ ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ.ಎನ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

     

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲಿ ಕೆಲಸಕ್ಕೆ ಕಳುಹಿಸದೇ, ಶಿಕ್ಷಣವನ್ನು ಕೊಡಿಸಲು ಶಾಲೆಗಳಿಗೆ ಕಳುಹಿಸುವ ಮೂಲಕ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಹಕರಿಸಬೇಕು. ಮಕ್ಕಳು ಸಹ ಶಾಲೆ ಬಿಟ್ಟು, ದುಡಿಮೆಗೆ ಹೋಗಬಾರದು. ಒಳ್ಳೆಯ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವ ಮೂಲಕ ಉನ್ನತ ಮಟ್ಟದ ಸಾಧಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

     

    ಕಾರ್ಯಕ್ರಮದ ವೇದಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

    ಈ ವೇಳೆ ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರತಾಪ್ ಕುಮಾರ ಜಿ ಅವರು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

     

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬರಾವ್.ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನೀತಾ ಲಕ್ಷ್ಮೀ, ಶಾಲೆಯ ಪ್ರಾಂಶುಪಾಲರಾದ ರೇಖಾ, ಜಿಲ್ಲೆಯ ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.