Blog

  • *ಡಿಪ್ಲೋಮೊ ಕೋರ್ಸ್ ಗಳ ತರಬೇತಿಗೆ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ18 ( ವಿಜಯಮಿತ್ರ ): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು(ಜಿ.ಟಿ.ಟಿ.ಸಿ) ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ದಾಖಲಾತಿ ಪ್ರಾರಂಭವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.

     

    *ಕೋರ್ಸ್‌ಗಳ ವಿವರ*

    1) ಡಿಪ್ಲೋಮೊ ಇನ್ ಟೂಲ್ & ಡೈ ಮೇಕಿಂಗ್(ಡಿ.ಟಿ.ಡಿ.ಎಮ್) 2) ಡಿಪ್ಲೋಮ ಇನ್ ಮೆಕಾಟ್ರಾನಿಕ್ಸ್, (ಡಿ.ಎಮ್.ಸಿ.ಹೆಚ್)

    3) ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ (ಡಿ.ಇ.ಇ.ಇ)

    4) ಡಿಪ್ಲೋಮೊ ಆಫ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ & ಮಿಷಿನ್ ಲರ್ನಿಂಗ್.(ಡಿ.ಎ.ಐ&ಎಮ್.ಎಲ್).

    ಮೇಲಿನ 04 ಕೋರ್ಸ್ ಗಳಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀಣ೯ರಾದವರು ಅರ್ಹರಾಗಿರುತ್ತಾರೆ. ಈ ಡಿಪ್ಲೋಮೋ ಕೋರ್ಸ್ ಗಳ ಅವಧಿ 3+1(ಕಡ್ಡಾಯ ಒಂದು ವರ್ಷದ ಸ್ಟೈಫಂಡ್ ಸಹಿತ ಇಂಟರ್ನ್ಶಿಪ್ ತರಬೇತಿ) ವರ್ಷ. ಈ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮೋ ತರಗತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ 080-266 07666, 9036144417, 9242952017, 9980956422 ಅಥವಾ ಜಿ.ಟಿ.ಟಿ.ಸಿ ದೇವನಹಳ್ಳಿ ತರಬೇತಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ದೇವನಹಳ್ಳಿ ಜಿ.ಟಿ.ಟಿ.ಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಡಿಪ್ಲೋಮೊ ಕೋರ್ಸ್ ಗಳ ತರಬೇತಿಗೆ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ18 ( ವಿಜಯಮಿತ್ರ ): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು(ಜಿ.ಟಿ.ಟಿ.ಸಿ) ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ದಾಖಲಾತಿ ಪ್ರಾರಂಭವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.

     

    *ಕೋರ್ಸ್‌ಗಳ ವಿವರ*

    1) ಡಿಪ್ಲೋಮೊ ಇನ್ ಟೂಲ್ & ಡೈ ಮೇಕಿಂಗ್(ಡಿ.ಟಿ.ಡಿ.ಎಮ್) 2) ಡಿಪ್ಲೋಮ ಇನ್ ಮೆಕಾಟ್ರಾನಿಕ್ಸ್, (ಡಿ.ಎಮ್.ಸಿ.ಹೆಚ್)

    3) ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ (ಡಿ.ಇ.ಇ.ಇ)

    4) ಡಿಪ್ಲೋಮೊ ಆಫ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ & ಮಿಷಿನ್ ಲರ್ನಿಂಗ್.(ಡಿ.ಎ.ಐ&ಎಮ್.ಎಲ್).

    ಮೇಲಿನ 04 ಕೋರ್ಸ್ ಗಳಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀಣ೯ರಾದವರು ಅರ್ಹರಾಗಿರುತ್ತಾರೆ. ಈ ಡಿಪ್ಲೋಮೋ ಕೋರ್ಸ್ ಗಳ ಅವಧಿ 3+1(ಕಡ್ಡಾಯ ಒಂದು ವರ್ಷದ ಸ್ಟೈಫಂಡ್ ಸಹಿತ ಇಂಟರ್ನ್ಶಿಪ್ ತರಬೇತಿ) ವರ್ಷ. ಈ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮೋ ತರಗತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ 080-266 07666, 9036144417, 9242952017, 9980956422 ಅಥವಾ ಜಿ.ಟಿ.ಟಿ.ಸಿ ದೇವನಹಳ್ಳಿ ತರಬೇತಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ದೇವನಹಳ್ಳಿ ಜಿ.ಟಿ.ಟಿ.ಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಮಾಧ್ಯಮಗಳು ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು ಮಾಡಬೇಕು – ಶ್ರೀಧರ್*

    ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಗಳ ಅಗತ್ಯವಿದೆ  ಎಂದು ಬೆಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

    ಅವರು ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ  ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ  ಸಮಾಜವನ್ನು ನಿರ್ಮಾಣ ಮಾಡಬೇಕು.  ವಾಸ್ತವ ಸ್ಥಿತಿಯನ್ನು  ಅರಿತು ಸುದ್ದಿಗಳನ್ನು  ಮಾಡಬೇಕು.  ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ .  ಮಾಧ್ಯಮಗಳು  ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು  ನಾಶ ಮಾಡುತ್ತವೆ ಎಂದರು.

    ಮನೋವಿಜ್ಞಾನಿ ಶ್ರೀಧರ್ ಮಾತನಾಡಿ,  ಪತ್ರಕರ್ತರು ಆದೇಶಕ್ಕೆ ಒಳಗಾಗಬಾರದು, ಬಾವುಕತೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ  ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ  ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧವಿಶ್ವಾಸ ಮತ್ತು ಬಾವುಕತೆ ಇರುವುದಿಲ್ಲ.  ವೈಜ್ಞಾನಿಕ ಶಿಕ್ಷಣದೊಂದಿಗೆ  ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

    ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ  ಮಾತನಾಡಿ,  ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕಾರಣ ಮತ್ತು ಪರಿಹಾರಗಳ ಬಗ್ಗೆ ಬೆಳಕುಚೆಲ್ಲಬೇಕಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

  • *ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿ*

    ದೊಡ್ಡಬಳ್ಳಾಪುರ ಮೇ 18 ( ವಿಜಯಮಿತ್ರ ) : ಬೆಂಕಿ ತಗುಲಿದ ಪರಿಣಾಮ ಒಂದು ಲಕ್ಷಕ್ಕಿಂತಲೂ ಅಧಿಕ ಮೌಲ್ಯದ ರಾಗಿ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪುರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವೆಂಕಟಪ್ಪ ಎಂಬುವರ ರಾಗಿ ಹುಲ್ಲಿನ ಬಣವೆಗೆ ಶನಿವಾರ ಬೆಳಿಗ್ಗೆ ಬೆಂಕಿ ತಗುಲಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು.

    ಬೆಂಕಿ ನಂದಿಸುವಷ್ಟರಲ್ಲಿ ರಾಗಿ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು.ಇದರಿಂದ ಸುಮಾರು 1 ಲಕ್ಷ ಮೌಲ್ಯಕ್ಕಿಂತಲೂ ಅಧಿಕ ರಾಗಿ ಹುಲ್ಲು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ.

    ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • *ರೈಲಿಗೆ ಸಿಲುಕಿ 30 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಸಾವು*

    ದೊಡ್ಡಬಳಾಪುರ ಮೇ 15 ( ವಿಜಯ ಮಿತ್ರ ) : ತಾಲ್ಲೂಕಿನ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30 ವರ್ಷ) ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.

     

    ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 91/2024 ಕಲಂ 174 Cr.P.C ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

     

     

    *ಚಹರೆ* – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು,ದುಂಡು ಮುಖ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ ಕಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ.

     

     

    *ಬಟ್ಟೆಗಳು* – ಬಿಳಿ ಬಣ್ಣದ ಹೂ ಡಿಸೈನ್ ಶರ್ಟ್ , ಬೂದು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಸಿಮೆಂಟ್ ಕಲರ್ ಅಂಡರ್ವೆರ್ ,ಗಿಳಿ ಹಸಿರು ಬಣ್ಣದ ಒಳ ಟೀ ಶರ್ಟ,ಕೆಂಪುಪಟ್ಟಿಯ ಬಿಳಿ ಬಣ್ಣದ ಚಪ್ಪಲಿಗಳು ಇದ್ದು ತಲೆ ಕೂದಲು ಮತ್ತು ಬಟ್ಟೆಯ ಮೇಲೆ ಪೈಂಟ್ ಕಲೆ ಇರುತ್ತದೆ.ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9480802143, ಸಂಪರ್ಕಿಸಲು ಕೋರಿದೆ.

  • *ಜೂನ್. 21 ರಂದು ಸರ್ಕಾರಿ ನೌಕರರ ಕ್ರೀಡಾಕೂಟ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಸೂಚನೆ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 16 (ವಿಜಯಮಿತ್ರ ): 2023-24 ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂನ್. 21 ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ನಡೆದ 2023-24ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜೂನ್. 21 ರಂದು ಹೊಸಕೋಟೆ ಟೌನ್ ನಲ್ಲಿರುವ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ, ಕ್ರೀಡಾಕೂಟದಲ್ಲಿ ಕ್ರೀಡಾ ಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮವಹಿಸಿ ಎಂದರು.

    ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಸೇವೆ, ಕ್ರೀಡಾಪಟುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ತಾಲ್ಲೂಕು ಮಟ್ಟದಲ್ಲಿ ಎಸಿ, ತಹಶೀಲ್ದಾರ್, ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಶಿಷ್ಟಾಚಾರದಂತೆ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಸಿ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಹೊಸಕೋಟೆ ತಹಶೀಲ್ದಾರ್ ವಿಜಯ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಟಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು, ದೈಹಿಕ ಶಿಕ್ಷಣ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

  • *ವಿಶೇಷ ಡಿ.ಇಡಿ(D.ED) ತರಬೇತಿ ಕಾರ್ಯಕ್ರಮಕ್ಕೆ ಅರ್ಹ ವಿಶೇಷಚೇತನರಿಂದ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ,ಮೇ16 (ವಿಜಯಮಿತ್ರ ): ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್ ನಗರ ಮೈಸೂರು ಇಲ್ಲಿ 02 ವರ್ಷಗಳ ವಿಶೇಷ ಡಿ.ಇಡಿ(D.ED) ತರಬೇತಿ ಕಾರ್ಯಕ್ರಮಕ್ಕೆ
    ಅರ್ಹ ವಿಶೇಷಚೇತನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿಶೇಷ ಡಿ.ಇಡಿ(D.ED) ಕಾರ್ಯಕ್ರಮಗಳು ಸಾಮಾನ್ಯ ಡಿ.ಇಡಿ(D.ED)ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 50% (ಎಸ್.ಸಿ ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇಕಡಾ 45%) ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಜೂನ್10ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್ಸೈಟ್ https://mysore.nic.in/en/ ನಲ್ಲಿ ಲಭ್ಯವಿರುತ್ತದೆ.
    ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
    *ಶುಲ್ಕ ವಿವರ*
    ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸುವ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಂಧ ಮಕ್ಕಳ ಭೋಧಕರ ತರಬೇತಿ ಕಾರ್ಯಕ್ರಮದಲ್ಲಿ SC,ST ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
    *ಉದ್ಯೋಗ ಅವಕಾಶಗಳು*
    *ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗ ಅವಕಾಶಗಳಿರುತ್ತವೆ*
    1.ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು.
    2.ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಬಹುದು.
    3.CBSC ಶಾಲೆಗಳಲ್ಲಿ ಶಿಕ್ಷಕರಾಗಬಹುದು.
    4.ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು.
    5.ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು.
    6.ರಾಷ್ಟ್ರೀಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು.
    *ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು*
    SSLC, 2nd PUC ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವಿಕಲಚೇತನ ವ್ಯಕ್ತಿಯಾಗಿದ್ದಲ್ಲಿ UDID ಗುರುತಿನ ಪತ್ರ.
    ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ- 080-29787441 ಗೆ ಸಂಪರ್ಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿರುದ್ಧದ ಆಕ್ಷೇಪಣೆ ನಿರಾಕರಿಸಿದ ಸುಪ್ರೀಂ ಕೋರ್ಟ್*

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಚಾರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯದ ಆಕ್ಷೇಪಣೆಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

     

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಚಾರದ ವೇಳೆಯಲ್ಲಿ ಮಾತನಾಡಿ ಜನರು ಎಎಪಿಗೆ ಮತ ಹಾಕಿದರೆ ಜೂನ್ 2 ರಂದು ಅವರು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ಹೇಳಿದ್ದಾರೆ.

     

    ಈ ಕುರಿತು ನ್ಯಾಯ ಪೀಠವು ಯಾರಿಗೂ ಯಾವುದೇ ವಿನಾಯಿತಿ ನೀಡಿಲ್ಲ ಮತ್ತು ಸಿಎಂ ಶರಣಾಗಬೇಕಾದ ದಿನಾಂಕದ ಬಗ್ಗೆ ತನ್ನ ತೀರ್ಪಿನ ಸ್ಪಷ್ಟತೆಯನ್ನು ಪುನರುಚ್ಚರಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

     

    “ತೀರ್ಪಿನ ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಅದರೊಳಗೆ ಹೋಗುವುದಿಲ್ಲ. ಅವರು ಯಾವಾಗ ಶರಣಾಗಬೇಕು ಎಂಬುದು ನಮ್ಮ ಆದೇಶದಲ್ಲಿ ಸ್ಪಷ್ಟವಾಗಿದೆ. ಇದು ಸುಪ್ರೀಂ ಕೋರ್ಟ್‌ನ ಆದೇಶ ಮತ್ತು ಕಾನೂನು ನಿಯಮವು ಇದರ ಮೂಲಕ ಆಡಳಿತ ನಡೆಸುತ್ತದೆ. ನಾವು ಯಾರಿಗೂ ವಿನಾಯಿತಿ ನೀಡಿಲ್ಲ. .ನಮ್ಮ ಆದೇಶದಲ್ಲಿ ನಾವು ಸಮರ್ಥನೆಯನ್ನು ಹೊಂದಿದ್ದೇವೆ ಎಂದು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.

     

    ಕಳೆದ ವಾರ, ಉತ್ತಮ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಜನರು ತಮಗೆ ಮತ ಹಾಕಿದರೆ ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ಹೇಳಿದ್ದರು.

     

    20 ದಿನಗಳ ನಂತರ ನಾನು ಮತ್ತೆ ಜೈಲಿಗೆ ಹೋಗಬೇಕು ಎಂದು ಈ ಜನರು (ಬಿಜೆಪಿ) ಹೇಳುತ್ತಿದ್ದಾರೆ, ನೀವು ಪೊರಕೆ (ಎಎಪಿ ಚುನಾವಣಾ ಚಿಹ್ನೆ) ಮೇಲಿನ ಬಟನ್ ಒತ್ತಿದರೆ ನಾನು ಮತ್ತೆ ಜೈಲಿಗೆ ಹೋಗುವ ಅಗತ್ಯವಿಲ್ಲ. ನಿಮ್ಮ ಕೈಯಲ್ಲಿ ಶಕ್ತಿ ಇದೆ ಎಂದಿದ್ದಾರೆ.

  • *ನಮ್ಮಲ್ಲಿ ಒಳ ಜಗಳವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ*

    ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ರಾಜ್ಯ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು.
    ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು.ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ತಿಳಿಸಿದ್ದಾರೆ.

  • *ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 15 (ವಿಜಯಮಿತ್ರ ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

    ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.