Blog

  • ತಳಗವಾರ ಗ್ರಾಮದಲ್ಲಿ ಮುತ್ಯಾಲಮ್ಮ,ದೊಡ್ಡಮ್ಮ, ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

    ಸೋಮವಾರ ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಹಾಗೂ ಗ್ರಾಮ ದೇವತೆ ದೊಡ್ಡಮ್ಮ ಹಾಗೂ ಆಂಜನೇಯ ದೇವರಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ನಮ್ಮ ಗ್ರಾಮಕ್ಕೆ ಕರೆತರಲಾಗಿದ್ದು. ಮಂಗಳವಾರ ಗ್ರಾಮದ ಮಹಿಳೆಯರಿಂದ ದೇವರಿಗೆ ಆರತಿಗಳನ್ನು ಶ್ರದ್ದಾ ಭಕ್ತಿಯಿಂದ ಮಾಡುವ ಮೂಲಕ ಗ್ರಾಮಸ್ತರು ಸಂಭ್ರಮಿಸಿದ್ದಾರೆ ಇಂದು ದೇವರ ಉತ್ಸವ ಮೂರ್ತಿಗಳನ್ನು ಗ್ರಾಮದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ತಳಗವಾರ ಗ್ರಾಮದ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಸ್ಥಳೀಯ ಮುಖಂಡರಾದ ತಳಗವಾರ ಪ್ರದೀಪ್ ತಿಳಿಸಿದರು

     

    ದೊಡ್ಡಬಳ್ಳಾಪುರ ತಾಲ್ಲೂಕಿನ ತಳಗವಾರ ಗ್ರಾಮದಲ್ಲಿ ಮೂರು ದಿನಗಳ ಅದ್ದೂರಿ ಜಾತ್ರ ಮಹೋತ್ಸವ ನೆಡೆಯುತ್ತಿದ್ದು. ಜಾತ್ರಮಹೋತ್ಸವಕ್ಕೆ ಎಂದಿನಂತೆ ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಹಾಗೂ ಗ್ರಾಮ ದೇವತೆಗಳಾದ ದೊಡ್ಡಮ್ಮ ಮತ್ತು ಆಂಜನೇಯ ಸ್ವಾಮಿ ಉತ್ಸವ ಮೂರ್ತಿಗಳನ್ನು ಕರೆತಂದು ಪೂಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮಸ್ತರು ಅತ್ಯಂತ ಆಸಕ್ತರಾಗಿ ದೈವಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಮಸ್ತ ಗ್ರಾಮಸ್ಥರ ಸಹಯೋಗದೊಂದಿಗೆ ಈ ಜಾತ್ರ ಮಹೋತ್ಸವ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

     

     

    ಈ ಸಂದರ್ಭದಲ್ಲಿ ತಳಗವಾರ ಗ್ರಾಮದ ಮುಖಂಡರಾದ ಗಂಗಾಧರಯ್ಯ,ಮುನಿಯಪ್ಪ,ಟಿ.ಮುನಿಯಪ್ಪ, ಹನುಮಂತರಾಯಪ್ಪ ಸೇರಿದಂತೆ ಸ್ಥಳೀಯ ಯುವಕರು, ಹಾಗೂ ಗ್ರಾಮಸ್ತರು ಉಪಸ್ಥಿತರಿದ್ದರು

  • *ದ್ವಿತೀಯ ಪಿಯು ಪರೀಕ್ಷೆ ಮಾ.01 ರಿಂದ 22ರ ವರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ*

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ನಡೆಯಲಿದ್ದು. 15 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ 1973, ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಸ್ಥಳದ ಸುತ್ತಮುತ್ತಲು 200 ಮೀಟರ್ ಪ್ರದೇಶಗಳ ವ್ಯಾಪ್ತಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಆದೇಶಿಸಿದ್ದಾರೆ.

    2024ರ ಮಾರ್ಚ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಯ್ಸಳ ಪದವಿ ಪೂರ್ವ ಕಾಲೇಜು ಪರಮಣ್ಣ ಲೇಔಟ್, ಸರ್ಕಾರಿ ಪದವಿ ಪೂರ್ವ ಕಾಲೇಜು ತ್ಯಾಮಗೊಂಡ್ಲು. ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು,ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜು ಕೊಡಿಗೇನಹಳ್ಳಿ. ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ದೇವನಹಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯಪುರ, ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿಜಯಪುರ. ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು ನಂದಗುಡಿ, ಮಹದೇವ ಪದವಿ ಪೂರ್ವ ಕಾಲೇಜು ಹೊಸಕೋಟೆ. ಈ ಎಲ್ಲಾ 15 ಪರೀಕ್ಷಾ ಕೇಂದ್ರ ಸ್ಥಳಗಳ ಸುತ್ತಮುತ್ತಲು 200 ಮೀಟರ್ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆಕ್ಷನ್ 144 ಸಿ.ಆರ್.ಪಿ.ಸಿ ರೀತ್ಯಾ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.

  • *ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ*

    ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

    ಈ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

    ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ

    ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು. ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೇವನಹಳ್ಳಿ- ಮೊ. 9480461234. ಎಂ.ಎಸ್.ದೀಪಾ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೊಡ್ಡಬಳ್ಳಾಪುರ. ಮೊ. 9880210892. ರೇಖಾ ಬಿ.ಪಿ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹೊಸಕೋಟೆ- ಮೊ. 8217210320. ಹರೀಶ್. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ-ಮೊ. 9880461607 ಗೆ ಸಂಪರ್ಕಿಸಬಹುದು ಎಂದು

    ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಯುವನಿಧಿಗೆ ಸ್ವಯಂ ಘೋಷಣೆ ಕಡ್ಡಾಯ*

    ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.

    ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯ ಕೊನೆಯ ವಾರದೊಳಗಾಗಿ ತಾನು ನಿರುದ್ಯೋಗಿಯೆಂದು. ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ ದಿನಾಂಕ 29-02-2024 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಿದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ.

    ಈಗಾಗಲೇ ನೋಂದಾಯಿಸಿದ ಅಭ್ಯರ್ಥಿಗಳಿಗೆ ಜನವರಿ-2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in/ ವೆಬ್ಸೈಟ್ ಗೆ ಭೇಟಿ ನೀಡಿ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಅಭಿವೃದ್ಧಿಯಲ್ಲಿ ದೊಡ್ಡಬಳ್ಳಾಪುರ 25 ವರ್ಷಗಳಷ್ಟು ಹಿಂದಕ್ಕೆ -ಹಾಲಿ ಶಾಸಕರ ವಿರುದ್ಧ ಮಾಜಿ ಶಾಸಕರ ವಾಗ್ದಾಳಿ

    ಕಳೆದ ಹತ್ತು ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ನೂತನವಾಗಿ ಯಾವುದೇ ಶಂಕುಸ್ಥಾಪನೆಯಾಗಿಲ್ಲ. ಜನರಿಂದ ಮತ ಪಡೆದು ಸ್ಥಳೀಯ ಶಾಸಕರು ಮೋಜು ಮಸ್ತಿ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕುರಿತು ಸುಳ್ಳು ಮಾಹಿತಿಯನ್ನು ಮತದಾರರಲ್ಲಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.

     

     

    ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರ ಮಹೋತ್ಸವದ ಅಂಗವಾಗಿ ಎಂ ಎಸ್ ರಾಮಯ್ಯ ಫೌಂಡೇಶನ್ ಸಹಕಾರದೊಂದಿಗೆ ದೊಡ್ಡಬಳ್ಳಾಪುರ ಅಮೇಜಿಂಗ್ ಕಬ್ಬಡ್ಡಿ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಈ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಕಾರ್ಮಿಕರಿಗಾಗಿ ಇಎಸ್ಐ ಆಸ್ಪತ್ರೆ ಸಿದ್ಧಗೊಂಡಿದ್ದು ಇನ್ನು ಉದ್ಘಾಟನೆ ಮಾಡಿಲ್ಲವೇಕೆ ಎಂದು ಪ್ರಶ್ನೆ ಮಾಡಿದರು. ಈ ಹಿಂದೆ ತಾಲ್ಲೂಕಿನಲ್ಲಿ ಎರಡು ಬಾರಿ ಶಾಸಕರಾಗಿ ತಾವು ಆಯ್ಕೆಯಾಗಿದ್ದು ಎರಡು ಅವಧಿಯಲ್ಲಿ ತಾಲೂಕಿನಾದ್ಯಂತ ಶಾಂತಿ ಕಾಪಾಡುವಲ್ಲಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದೇವೆ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಮಾನ್ಯ ಮುಖ್ಯಮಂತ್ರಿಗಳನ್ನು ಏಳು ಬಾರಿ ಶಂಕುಸ್ಥಾಪನಾ ಕಾರ್ಯಕ್ಕೆ ಬರಮಾಡಿಕೊಂಡಿದೇವೆ.

     

    ತಾಲ್ಲೂಕಿನಲ್ಲಿ ಸರಿಸುಮಾರು ಎರಡು ಸಾವಿರ ಕೋಟಿ ಅನುದಾನಗಳ ಕಾಮಗಾರಿಗಳನ್ನು ಮಾಡಿದ್ದೇವೆ ಎಂದರು. ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಇಂದು ನಡೆದ ಗ್ರಾಮಚಲೋ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿರುವ ಗ್ಯಾರೆಂಟಿ ಯೋಜನೆಗಳನ್ನು ಕುರಿತು ಮಾತನಾಡಿದ್ದಾರೆ ರಾಜ್ಯದ ಜನತೆಗೆ ಬರಗಾಲದ ಪರಿಸ್ಥಿತಿಯಲ್ಲಿ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಇದನ್ನು ಅರಿಯದೆ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ಮತ್ತೊಮ್ಮೆ ಪಾಠ ಕಲಿಸಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

  • ಎಂಎಸ್ ರಾಮಯ್ಯ ಫೌಂಡೇಶನ್ ವತಿಯಿಂದ ಕಬ್ಬಡಿ ಪಂದ್ಯಾವಳಿ : ಸಮಾರೋಪ ಸಮಾರಂಭದಲ್ಲಿ ರಕ್ಷಾ ರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ

    ದೊಡ್ಡಬಳ್ಳಾಪುರ : ಸ್ಥಳೀಯ ಯುವಕರಲ್ಲಿ ಕ್ರೀಡಾಮನೋಭಾವ ಹೆಚ್ಚಿಸುವ ಉದ್ದೇಶದಿಂದ ಕಬ್ಬಡಿ ಕ್ರೀಡೆಯನ್ನು ಆಯೋಜನೆ ಮಾಡಲಾಗಿದೆ. ಇಂದಿನ ಪೀಳಿಗೆ ಕೇವಲ ಮೊಬೈಲ್ ಅನ್ನು ಹಿಡಿದು ವಿಡಿಯೋ ಗೇಮ್ ಆಡುವುದರಲ್ಲಿ ತಲ್ಲಿನರಾಗಿದ್ದಾರೆ ಅಂತಹ ಮಕ್ಕಳಿಗೆ ದೇಸಿ ಕ್ರೀಡೆಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿರುತ್ತದೆ ಎಂದು ದೊಡ್ಡಬಳ್ಳಾಪುರ ತಾಲೂಕಿನ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ತಿಳಿಸಿದರು

    ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಅಮೇಜಿಂಗ್ ಕಬ್ಬಡಿ ಅಸೋಸಿಯೇಷನ್ ವತಿಯಿಂದ ಕಬ್ಬಡಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕಬ್ಬಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯುವಕರಲ್ಲಿ ಕ್ರೀಡಾ ಮಾಡುವ ಹೆಚ್ಚಿಸುವ ಸಲುವಾಗಿ ಎಂಎಸ್ ರಾಮಯ್ಯ ಅವರ ಮೊಮ್ಮಗ ರಕ್ಷಾ ರಾಮಯ್ಯ ರವರು ಸ್ಥಳೀಯರ ಮನವಿಗೆ ಸ್ಪಂದಿಸಿ ಈ ಕಬ್ಬಡಿ ಪಂದ್ಯಾವಳಿಯು ಅದ್ದೂರಿಯಾಗಿ ನಡೆಯಲು ಕಾರಣಕರ್ತರಾಗಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲ ತಂಡಗಳಿಗೂ ಶುಭವಾಗಲಿ ಸ್ಪರ್ಧೆಯಲ್ಲಿ ಗೆದ್ದು ಪ್ರಥಮ ಸ್ಥಾನ ಗಳಿಸಿ ಬಹುಮಾನ ಪಡೆಯುವ ಸ್ಪರ್ಧಾರ್ಥಿಗಳು ಮುಂದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ದೊಡ್ಡಬಳ್ಳಾಪುರದ ಹೆಸರನ್ನು ಪ್ರತಿನಿಧಿಸುವಂತಾಗಲಿ ಎಂದು ಹಾರೈಸಿದರು.

     

     

    ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿ ರಕ್ಷಾ ರಾಮಯ್ಯ ಮಾತನಾಡಿ ಯುವಕರ ಆರೋಗ್ಯ ಕಾಪಾಡಲು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಕುರಿತು ಯುವಕರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆಯೋಜನೆ ಮಾಡಿದ್ದು ಮುಂದಿನ ದಿನಗಳಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಗ್ರಾಮೀಣ ಕ್ರೀಡೆಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಸಲುವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮದ ಶಕ್ತಿ ಮಾಜಿ ಶಾಸಕರಾದ ವೆಂಕಟರಮಣಯ್ಯ ಮತ್ತು ಬೆಂಬಲಿಗರು ಕಾರ್ಯಕ್ರಮ ಯಶಸ್ವಿಯಾಗಿ ಮೂಡಿ ಬಂದಿದೆ. ಎಂದು ತಿಳಿಸಿದರು

    ಕಾರ್ಯಕ್ರಮದ ಆಯೋಜಕ ಮಂಜುನಾಥ್ ಮಾತನಾಡಿ ಸ್ಪರ್ಧೆಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು ತಂಡಗಳ ಮಾಲೀಕರು ಅತ್ಯಂತ ಶ್ರಮಪಟ್ಟಿದ್ದಾರೆ. ಸ್ಪರ್ಧೆಯಲ್ಲಿ ಜಯಗಳಿಸಿದ ಮೊದಲ ತಂಡಕ್ಕೆ ಪ್ರತಿಷ್ಠಿತ ಎಂ ಎಸ್ ಆರ್ ಕಪ್ ನೊಂದಿಗೆ 55,555 ರೂಗಳ ನಗದು ಬಹುಮಾನ , ದ್ವಿತೀಯವಾಗಿ ಎಂಎಸ್ಆರ್ ಕಪ್ ಸಹಿತ 33,333 ರೂ ನಗದು ಬಹುಮಾನ, ತೃತೀಯವಾಗಿ ಎಮ್ ಎಸ್ ಆರ್ ಕಪ್ ಸಹಿತ 11,111 ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಗ್ರಾಮೀಣ ಕ್ರೀಡೆಗಳ ಉತ್ತೇಜನಕ್ಕಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಯುವಕರು ತುಂಬಾ ಉತ್ಸಾಹಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮಗೆ ಮತ್ತಷ್ಟು ಸಂತೋಷ ತಂದಿದೆ ಕಾರ್ಯಕ್ರಮದ ಆಯೋಜನೆಗೆ ಎಂ ಎಸ್ ರಾಮಯ್ಯ ಫೌಂಡೇಶನ್ ಸಹಕರಿಸಿದ್ದು ಮತ್ತಷ್ಟು ಸಂತಸ ಉಂಟುಮಾಡಿದೆ ಎಂದು ತಿಳಿಸಿದರು

     

    ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಡ್ಯಾಶಿಂಗ್ ಬುಲ್ಸ್ ತಂಡ ಪಡೆದಿದ್ದು ದ್ವಿತೀಯ ಸ್ಥಾನವನ್ನು ಸೂಪರ್ ಲಯನ್ಸ್ ತೃತೀಯ ಸ್ಥಾನವನ್ನು ಸ್ಟಾರ್ ಹಂಟರ್ಸ್ ಅಂತಯೇ ಚತುರ್ಥ ಸ್ಥಾನವನ್ನು ಗ್ರೀನ್ ಫೈಟರ್ಸ್ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

     

     

    ಕಾರ್ಯಕ್ರಮದಲ್ಲಿ ಆಯೋಜಕರಾದ ಮಂಜುನಾಥ್, ಹರೀಶ್, ಪರಮೇಶ, ಪುಟ್ಟರಾಜು, ಮನು, ಶ್ರೀ ಹರಿ, ಮುಬಾರಕ್, ಮಧುಸೂಧನ್, ಹಾಗೂ ಕಾಂಗ್ರೆಸ್ ಮುಖಂಡರಾದ ಶಿವಶಂಕರ್, ಬೈರೇಗೌಡ, ಅಂಜನಮೂರ್ತಿ, ವಿಶ್ವಾಸ್ ಗೌಡ,ಸೇರಿದಂತೆ ತಾಲೂಕಿನ ಹಲವು ಗಣ್ಯರು ಭಾಗವಹಿಸಿದ್ದರು

  • 41000 ಕೋಟಿ ವೆಚ್ಚದ ಕಾಮಗಾರಿಗಳಿಗೆ ಕೇಂದ್ರ ಅಸ್ತು : ವಿಡಿಯೋ ಮೂಲಕ ಕಾಮಗಾರಿಗಳಿಗೆ ಚಾಲನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

    ಇಂದಿನ ಭಾರತ ಸಣ್ಣ ಪುಟ್ಟ ಕನಸನ್ನು ಕಾಣುವುದು ನಿಲ್ಲಿಸಿದೆ ಅದರ ಬದಲಾಗಿ ಅಭಿವೃದ್ಧಿ ಕುರಿತು ದೊಡ್ಡ ಕನಸನ್ನು ಕಾಣಲು ಮುಂದಾಗಿದೆ ಮತ್ತು ಅದನ್ನು ಪೂರ್ಣಗೊಳಿಸಲು ಶ್ರಮಿಸಿಸುತ್ತದೆ. ಭಾರತ ಮುನ್ನಡೆಯುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಆಗಿರುವ ಬದಲಾವಣೆ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದರು ಹಾಗೂ ನವ ಭಾರತ ನಿರ್ಮಾಣಕ್ಕಾಗಿಯೇ ನಮ್ಮಮ್ಮೆಲ್ಲರ ಶ್ರಮ. ದೇಶದ ರೈಲ್ವೆ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆಯ ಕಾರ್ಯಕ್ರಮವನ್ನು ನೇರವಾಗಿ ದೇಶದ ಹಲವು ಭಾಗಗಳಿಂದ ಸರಿಸುಮಾರು 40 ಲಕ್ಷ ಜನತೆ ವೀಕ್ಷಣೆ ಮಾಡುತ್ತಿದ್ದು 2000 ಕೇಂದ್ರಗಳಿಂದ ರೈಲ್ವೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ದೇಶದ ಹನ್ನೆರಡು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದು ಎಲ್ಲರ ಸಮ್ಮುಖದಲ್ಲಿ ದೇಶದ ಅಭಿವೃದ್ಧಿಗೆ 41000 ಕೋಟಿ ಅನುದಾನದ ಕಾಮಗಾರಿಗೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದರು

    41000 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳನ್ನು ರೂಪಿಸಿರುವ ಕೇಂದ್ರ ಸರ್ಕಾರ ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಭಿವೃದ್ಧಿ ಮತ್ತು ರಸ್ತೆ ಮೇಲ್ಸೇತುವೆಗಳು ಮತ್ತು ಅಂಡರ್ ಪಾಸ್ ಗಳ ಶಂಕು ಸ್ಥಾಪನೆ, ಉದ್ಘಾಟನೆ, ಹಾಗೂ ರಾಷ್ಟ್ರಕ್ಕೆ ಸಮರ್ಪಣಾ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು ಈ ಕಾರ್ಯಕ್ರಮದ ಭಾಗವಾಗಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಸಿಬ್ಬಂದಿ ಕಾರ್ಯಕ್ರಮ ರೂಪಿಸಿ ವಿಡಿಯೋ ಮೂಲಕ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.

     

     

    ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ ಎಸ್ ರವಿಕುಮಾರ್ ಮಾತನಾಡಿ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಖಾನೆಗಳಿಗೆ ಪ್ರತಿನಿತ್ಯ ಸಾವಿರಾರು ಸಾರ್ವಜನಿಕರು ರೈಲು ಮಾರ್ಗವನ್ನು ಅವಲಂಬಿಸಿದ್ದಾರೆ.ಆದರೆ ಕೆಲ ರೈಲುಗಳು ನಮ್ಮ ತಾಲ್ಲೂಕಿನಲ್ಲಿ ನಿಲ್ಲದಿರುವುದು ವಿಪರ್ಯಾಸ ಇದರಿಂದ ಪ್ರಯಾಣಿಕರಿಗೆ ಅನಾನುಕೂಲ ಉಂಟಾಗುತ್ತಿದ್ದು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು ಈ ಕುರಿತು ಗಮನಹರಿಸಬೇಕಾಗಿ ಮನವಿ ಮಾಡಿದರು

    ನಗರ ಸಭಾ ಸದಸ್ಯರಾದ ವಾತ್ಸಲ್ಯ ಮಾತನಾಡಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಯಾಗುತ್ತಿರುವುದು ಸಂತಸ ತಂದಿದೆ. ರಾಷ್ಟ್ರದ ಬಹುಪಾಲು ಜನತೆ ರೈಲ್ವೆ ಸಾರಿಗೆ ಮಾರ್ಗವನ್ನು ಇಷ್ಟಪಡುತ್ತಾರೆ. ಇಂದು 554 ರೈಲ್ವೆ ನಿಲ್ದಾಣಗಳು ಪುನರಭಿವೃದ್ಧಿಯಾಗುತ್ತಿದ್ದು ದೇಶದ ಜನತೆಗೆ ಅನುಕೂಲವಾಗಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

     

     

    ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಧಾರಣೆ ಲಕ್ಷ್ಮಿನಾರಾಯಣ್, ಸ್ಥಳೀಯ ಮುಖಂಡರಾದ ಜಯರಾಮಯ್ಯ, ಪ್ರಿಯಾಂಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು

  • ಅಭಿನಂದನಾ ಪತ್ರದಲ್ಲಿರುವ ಸಹಿ ಶಾಸಕರದ್ದೇ….. ಅವರೇ ಖುದ್ದು ಸಹಿ ಮಾಡಿದ್ದಾರೆ – ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಕ ಗೋವಿಂದ ರಾಜು ಸ್ಪಷ್ಟನೆ

    ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದ ಹಿನ್ನಲೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿರುವ ಕುರಿತು ನಿಮ್ಮ ವಿಜಯ ಮಿತ್ರ ಸುದ್ದಿ ವರದಿ ಮಾಡಿತ್ತು.ಈ ಕುರಿತು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಕರಾದ ಗೋವಿಂದ ರಾಜು ವಿಜಯ ಮಿತ್ರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು. ಸಾಮಾಜಿಕ ಜಾಲತಾಣ ದಲ್ಲಿ ನಕಲಿ ಎಂದು ಹೇಳುತ್ತಿರುವ ಸಹಿ ಅಸಲಿಯದ್ದು ಖುದ್ದು ಶಾಸಕರೇ ಸಹಿ ಮಾಡಿರುವುದು ಎಂದು ತಿಳಿಸಿದ್ದಾರೆ..

  • 13ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಫೋರ್ಜರಿ ಮಾಡಲಾಗಿದೆಯೇ … ಶಾಸಕರ ಸಹಿ

    ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

     

    ಹೌದು ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿದ್ದು ಟೀಕೆಗೆ ಗುರಿಯಾಗಿದೆ ಈ ಕುರಿತು ಮಾನ್ಯ ಶಾಸಕರು ಗಮನಹರಿಸಬೇಕಿದ್ದು, ಸಾಹಿತ್ಯ ಸಮ್ಮೇಳನ ಆಯೋಜಕರು ಸ್ಪಷ್ಟಿಕಾರಣ ನೀಡಬೇಕಿದೆ..

  • ಗ್ರಾಮಚಲೋ ಅಭಿಯಾನದಲ್ಲಿ ವಿಜಯೇಂದ್ರ ಯಡಿಯೂರಪ್ಪ : ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಅದ್ಧುರಿ ಕಾರ್ಯಕ್ರಮ

    ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡ ಜೀ ಯವರ ಅದೇಶದಂತೆ ನಮ್ಮ ರಾಜ್ಯದ ಪ್ರತಿಯೊಂದು ಬೂತ್ ಗಳಿಗೆ ಭೇಟಿ ನೀಡುವ ಸಲುವಾಗಿ ಇದು ಮದುರೆ ಗ್ರಾಮದ ಗ್ರಾಮಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದೇವೆ.ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಕೇಂದ್ರ ಸರ್ಕಾರ ನೀಡಿರುವ ಯೋಜನೆಗಳ ಅನುಕೂಲಗಳನ್ನು ಪಡೆದುಕೊಂಡಿರುವ

    ಪಲಾನುಭವಿಗಳ ಭೇಟಿ ಮಾಡುವುದಾಗಿದೆ ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿ ಗ್ರಾಮಗಳ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮೋದಿ ಜೀ ಯವರು ನೀಡಿರುವ ಯೋಜನೆಗಳನ್ನು ಕುರಿತು ಮಾಹಿತಿ ನೀಡಲಿದ್ದೆವೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ತಿಳಿಸಿದರು.

     

    ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ ಗ್ರಾಮಚಲೋ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದೇಶದ ಮಹಿಳೆಯರ,ಯುವಕರ, ರೈತರಪರವಾಗಿ ನೀಡಿರುವ ಯೋಜನೆಗಳ ಸದ್ಭಾಳಕೆ ಮಾಡಿಕೊಂಡಿರುವ ಹಲವಾರು ಪಲಾನುಭವಿಗಳನ್ನು ಭೇಟಿ ಮಾಡುವ ಉದ್ದೇಶ ನಮ್ಮ ಈ ಗ್ರಾಮಚಲೋ ಅಭಿಯನ. ದೇಶದಲ್ಲಿ ಮುಖ್ಯವಾಗಿ

    ಬಡವರು, ರೈತರು, ಯುವಕರು, ಮಹಿಳೆಯರು ಎಂಬ ನಾಲ್ಕು ಜಾತಿಗಳಿದ್ದು ಸನ್ಮಾನ್ಯ ಮೋದಿ ಜೀ ನೀಡಿರುವ ಯೋಜನೆಗಳು ಈ ಸಮುದಾಯಗಳ ಮೇಲೆ ಕೇಂದ್ರೀಕೃತವಾಗಿದ್ದು. ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಯವರು ಸದಾ ದೇಶದ ಅಭಿವೃದ್ಧಿಯ ತಪ್ಪಾಸು ಮಾಡುತ್ತಿದ್ದಾರೆ. ಗ್ರಾಮಚಲೋ ಅಭಿಯಾನದ ಮೂಲಕ ರಾಜ್ಯದ ಎಲ್ಲಾ ಬೂತ್ ಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ನಾಯಕರಿಗೆ ವಿಶೇಷ ಟಾಸ್ಕ್ ನೀಡಲಾಗುತ್ತಿದೆ . ಪ್ರತಿ ಬೂತ್ ನಲ್ಲಿ 100ರಿಂದ 150ಕ್ಕೂ ಹೆಚ್ಚಿನ ಮತಗಳನ್ನು ನೀಡುವ ಟಾಸ್ಕ್ ನೀಡಲಾಗುತ್ತಿದ್ದು. ಲೋಕಸಭಾ ಚುನಾವಣೆಯಲ್ಲಿ

    ರಾಜ್ಯದ ಎಲ್ಲಾ ಬೂತ್ ಗಳಲ್ಲಿ ಗೆಲುವು ಸಾಧುಸುವುದೇ ನಮ್ಮ ಉದ್ದೇಶ

     

    ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನೆಡೆಸಿದ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅನುದಾನಗಳ ಹಂಚಿಕೆಯಲ್ಲಿ ಮಲತಾಯಿ ದೋರಣೆ ಮಾಡುತ್ತಿದ್ದು ಕಾಂಗ್ರೆಸ್ ನಿಂದಾಗಿ ನಮ್ಮ ಕರ್ನಾಟಕ ರಾಜ್ಯವು ಅಭಿವೃದ್ಧಿ ಶೂನ್ಯ ರಾಜ್ಯವಾಗಿದೆ,ಕಾಂಗ್ರೆಸ್ ನೀಡಿರುವ ಗ್ಯಾರೆಂಟಿಗಳು ಕೇವಲ ಘೋಷಣೆಯಾಗಿ ಉಳಿದಿದೆ ಇನ್ನೂ ರಾಜ್ಯದ ಹಲವು ಸಾರ್ವಜನಿಕರಿಗೆ ಯಾವುದೇ ಗ್ಯಾರೆಂಟಿ ಯೋಜನೆಗಳು ತಲುಪಿಲ್ಲ, ಆಶಾಕಾರ್ಯಕರ್ತೆಯರಿಗೆ ನೀಡಿದ ವೇತನ ಹೆಚ್ಚಳ ಭರವಸೆಯೂ ಇನ್ನೂ ಭಾರವಸೆಯಾಗಿಯೇ ಉಳಿದಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ನುಡಿದಂತೆ ನೆಡೆದಿದ್ದೆವೆ ಎಂದು ಹೆಮ್ಮೆಯಿಂದ ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿದ್ದಾರೆ , ಬರಗಾಲದ ಸಂದರ್ಭದಲ್ಲಿ ರೈತರಿಗೆ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ನಾಟಕೀಯವಾಗಿ ಕೇಂದ್ರ ಸರ್ಕಾರದ ವಿರುದ್ಧ ದುರುತ್ತಾ ದೆಹಲಿಯಲ್ಲಿ ಮೋದಿ ಜೀ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ರಾಜ್ಯದ ಜನತೆಗೆ ಮೋಸಮಾಡುತ್ತಿದ್ದಾರೆ ಎಂದು ಆರೋಪಿಸಿದರು

     

    ಜಿ ಎಸ್ ಟಿ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವ ಮುಖ್ಯಮಂತ್ರಿಗಳು ಒಂದು ವಿಷಯವನ್ನು ಅರಿಯ ಬೇಕಿದೆ ಅದೇನೆಂದರೆ ನರೇಂದ್ರ ಮೋದಿ ಜೀ ಯವರು ಕೇವಲ ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿಗಳಲ್ಲ ಅವರು ದೇಶದ ಎಲ್ಲಾ ರಾಜ್ಯಗಳಿಗೂ ಪ್ರಧಾನ ಮಂತ್ರಿಗಳಾಗಿದ್ದಾರೆ ಎಲ್ಲೂ ಇಲ್ಲದ ಪ್ರತಿಭಟನೆ ನಮ್ಮ ರಾಜ್ಯದಲ್ಲೇ ಏಕೆ ಎಂದು ಪ್ರಶ್ನಿಸಿದರು. ಬಿಜೆಪಿ ಪಕ್ಷದ ಮೇಲೆ ಚುನಾವಣಾ ಸಮಯದಲ್ಲಿ ಅನೇಕ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಮಾತನ್ನು ನಂಬಿ ರಾಜ್ಯದ ಜನತೆ ಮೋಸ ಹೋಗಿದ್ದಾರೆ ಆದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ವಿಶೇಷವಾಗಿದ್ದು ರಾಜ್ಯದ 28 ಕ್ಷೇತ್ರ ಗೆಲುವು ಸಾಧಿಸುವ ಭರವಸೆ ಇದೆ ಎಂದು ತಿಳಿಸಿದರು.

     

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು,ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷರಾದ ರಾಮ ಕೃಷ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ವೆಂಕಟೇಶ್ (ಬಂತಿ ), ಮುಖಂಡರಾದ ವಾಣಿ ನಂದಕುಮಾರ್, ರಂಗರಾಜು ಸೇರಿದಂತೆ ಹಲವಾರು ಉಪಸ್ಥಿತರಿದ್ದರು