Blog

  • ಮಾಜಿ ಉಪಮೇಯರ್ ಹೇಮಲತಾ ರವರಿಂದ ಕ್ಯಾನ್ಸರ್ ತಪಾಸಣೆಗೆ ಚಾಲನೆ

    ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾಮಾಕ್ಷಿಪಾಳ್ಯದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಉದ್ಯಾನದಲ್ಲಿ ಮಾಜಿ ಉಪಮೇಯರ್ ಹೇಮಲತಾ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆ ಮಾಡಿರುವ ಕ್ಯಾನ್ಸರ್ ತಪಾಸಣೆಗೆ ಚಾಲನೆ ನೀಡಿದರು.

     

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ. 21ನೇ ಶತಮಾನದಲ್ಲಿ ನಾವು ಜೀವನ ಸಾಗಿಸುತ್ತಿದ್ದರು ಸಹ ಸಮಾಜದಲ್ಲಿ ಸಾಕಷ್ಟು ಜನರಿಗೆ ಕ್ಯಾನ್ಸರ್ ಕಾಯಿಲೆ ಕುರಿತು ಮಾಹಿತಿಯ ಕೊರತೆ ಇದೆ. ಸಾರ್ವಜನಿಕ ಸದುಪಯೋಗಕ್ಕಾಗಿ ಇಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು. ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಸಾಂಕೇತಿಕವಾಗಿ ಚಲನೆ ನೀಡಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸ್ಥಳೀಯರಾದ ಮುಖಂಡರಾದ ನಾಗರತ್ನ ಲೋಕೇಶ್, ಸಿದ್ದಗಂಗಮ್ಮ, ನಾಗರತ್ನ ಉಪಸ್ಥಿತರಿದ್ದರು.

  • ಈ ಹಿಂದೆ ಡಬಲ್ ಇಂಜಿನ್ ಸರ್ಕಾರ ಇದ್ದಾಗಲೂ ಕನ್ನಡಿಗರಿಗೆ ಏನು ಪ್ರಯೋಜನವಾಗಿಲ್ಲ – ಡಿಸಿಎಂ ಡಿಕೆ ಶಿವಕುಮಾರ್

    ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಇಂದು ಬೆಳಗ್ಗೆ 11ಗಂಟೆಗೆ ದೆಹಲಿ ಜಂತರ್ ಮಂತರ್ ಎದುರು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

     

    ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.

    ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟ ಇತಿಹಾಸದಲ್ಲಿ ಒಂದು ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗುತ್ತಿದೆ. ಲಕ್ಷಾಂತರ ಕನ್ನಡಿಗರು ನಮ್ಮ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಕನ್ನಡಿಗರ ಋಣ ಸೇರಿಸಲಿಕ್ಕೆ, ಬಡವರಿಗೆ ನ್ಯಾಯ ಒದಗಿಸಲಿಕ್ಕೆ, ಅವರ ಹಸಿವು ನೀಗಿಸಲು ನಡೆಯುತ್ತಿರುವ ಹೋರಾಟ ಇದು.

    ಬರದಿಂದ ತತ್ತರಿಸುವ ಕರ್ನಾಟಕಕ್ಕೆ ಪರಿಹಾರ ನೀಡುವಂತೆ ಕೇಂದ್ರದ ಮುಂದೆ ಬೇಡಿಕೆ ಇಡಲಾಗಿತ್ತು, ಆದರೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ನೀರಾವರಿ, ರೈಲ್ವೆ ಯೋಜನೆಗೂ ನ್ಯಾಯಯುತ ಅನುದಾನ ನೀಡಿಲ್ಲ. ಈ ಹಿಂದೆ ಡಬಲ್‌ ಇಂಜಿನ್‌ ಸರ್ಕಾರ ಇದ್ದಾಗಲೂ ಕನ್ನಡಿಗರಿಗೆ ಏನೂ ಪ್ರಯೋಜನವಾಗಿಲ್ಲ. ನಾವು ನಮ್ಮ ನ್ಯಾಯಯುತ ಪಾಲು ಕೇಳಲು ಬಂದಿದ್ದೇವೆ ಎಂದು ತಿಳಿಸಿದರು.

  • 5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮ : ಪ್ಯಾರಾ ಮಿಲಿಟರಿ ಮಾಜಿ ಯೋಧರ ಬೃಹತ್ ಸಮಾವೇಶ

    ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2019ನೇ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ನ ವೀರ ಯೋಧರ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಹುತಾತ್ಮ ಯೋಧರಿಗೂ 5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮವನ್ನು ಗ್ರೂಪ್ ಸೆಂಟರ್, ಸಿ ಆರ್ ಪಿ ಎಫ್ ಕ್ಯಾಂಪಸ್ ದೊಡ್ಡಬಳ್ಳಾಪುರ ರಸ್ತೆ ,ಯಲಹಂಕ ಬೆಂಗಳೂರು ಇಲ್ಲಿ ದಿನಾಂಕ 14 2 2024ರಂದು ಆಯೋಜನೆ ಮಾಡಲಾಗಿದ್ದು.

     

    ಪುಲ್ವಾಮಾ ದಾಳಿಯಲ್ಲಿ ದೇಶಕ್ಕಾಗಿ ಮಡಿದ ಯೋಧರ ಸವಿನೆನಪಿನಲ್ಲಿ ಮಾಜಿ ಅರೇಸೇನಾಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದು ಸದರಿ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ರಾಜ್ಯದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ .

    ಈ ಕುರಿತು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಂತ ರಾಜಗೋಪಾಲ ಮಾತನಾಡಿ ಮಾಜಿ ಅರೆಸೇನಾ ಯೋಧರ ಹಲವು ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಮುಂದೆ ನಿವೇದನೆ ಹೇಳಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಲಿದೆ ನಮ್ಮ ಅರೆಸೇನಾ ಪಡೆಗಳು ಹಲವು ವರ್ಷಗಳಿಂದ ಸರ್ಕಾರಿ ಸೌಲಭ್ಯಗಳಿಗೆ ಪರದಾಡುವ ಸ್ಥಿತಿಯಿದು.ನಮ್ಮ ಪ್ಯಾರಾ ಮಿಲಿಟರಿ ಪಡೆಗಳಿಗೆ ಪ್ರತ್ಯೇಕ ಬೋರ್ಡ್ ಅವಶ್ಯಕತೆ ಇದೆ. ಸರ್ಕಾರಿ ಸೌಲಭ್ಯಗಳು ನೇರವಾಗಿ ನಮ್ಮ ಸೈನಿಕರು ಹಾಗೂ ಮಾಜಿ ಸೈನಿಕರ ಕೈ ಸೇರಬೇಕಿದೆ. ಫೆಬ್ರವರಿ 14ರ ಸಮಾವೇಶ ಸಂಭ್ರಮಾಚರಣೆಯಲ್ಲ ಇದೊಂದು ಕರಾಳ ದಿನದ ಆಚರಣೆಯಾಗಿದೆ . ಈ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರಿಗೆ ಆಹ್ವಾನ ನೀಡಿದ್ದು ರಾಜ ನಾಯಕರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ .ಈ ಬೃಹತ್ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅರೆಸೇನಾ ಪಡೆಗಳ ಮಾಜಿ ಯೋಧರು ಸೇರಲಿದ್ದು . ನಮ್ಮ ಬೇಡಿಕೆ ಹಾಗೂ ಮನವಿಗಳನ್ನು ಸಮಸ್ತ ಯೋಧರನ್ನು ಪ್ರತಿನಿಧಿಸುವ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು .

     

     

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ವಹಿಸಲಿದ್ದಾರೆ. ಈ ಕಾರ್ಯಕ್ರಮವು ನಿವೃತ್ತ ಮಹಾ ನಿರೀಕ್ಷಕರು ( ಸಿ ಆರ್ ಪಿ ಎಫ್ ) ಶ್ರೀ ಕೆ .ಆರ್ಕೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ರಾಜ್ಯದ ಎಲ್ಲೆಡೆಯಿಂದ ಮಾಜಿ ಯೋಧರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು .

  • ಕರ್ನಾಟಕ ಕಾಂಗ್ರೆಸಿಗರೇ…. ಯಾತಕ್ಕಾಗಿ ದಿಲ್ಲಿ ಚಲೋ ನಾಟಕ?? – ಸಂಸದೀಯ ಸಚಿವ ಪ್ರಲ್ಹದ್ ಜೋಶಿ

    ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದೀಯ ಸಚಿವರಾದ ಪ್ರಲ್ಹದ್ ಜೋಶಿ ಆಕ್ರೋಶ ಹೊರಹಾಕಿದ್ದಾರೆ

     

    ತಮ್ಮ ಎಕ್ಸ್ ಸಂದೇಶದಲ್ಲಿ

    ಕರ್ನಾಟಕ ಕಾಂಗ್ರೆಸಿಗರೇ….. ಯಾತಕ್ಕಾಗಿ ದಿಲ್ಲಿ ಚಲೋ ನಾಟಕ?

     

    * ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

    * ರೈತರ ಮಕ್ಕಳಿಗೆ ನೀಡುತ್ತಿದ್ದ ರೈತನಿಧಿ ರದ್ದುಗೊಳಿಸಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

    * ಧರ್ಮದ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

    * ತುಷ್ಟೀಕರಣದ ರಾಜಕಾರಣ ಮಾಡಿ ರಾಜ್ಯದ ಜನರ ಶಾಂತಿ ಕದಡಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

    * ಕನ್ನಡದ ಪರ ಹೋರಾಟ ಮಾಡಿದ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿ ಕನ್ನಡವಿರೋಧಿ ಎಂಬುದನ್ನು ಸಾಬೀತು ಪಡಿಸಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

    * ರಾಷ್ಟ್ರವನ್ನು ವಿಭಜನೆ ಮಾಡುತ್ತೇವೆ ಎನ್ನುವವರಿಗೆ ನೇರವಾಗಿ ಬೆಂಬಲ ನೀಡಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

     

    ಉತ್ತರಿಸಿ ಸಿದ್ದರಾಮಯ್ಯನವರೇ??? ಎಂದು ಬರೆದು ಕೊಂಡಿದ್ದಾರೆ

  • ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿ ಎಂ.ಮೀನಾ ರವರಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.

     

    ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.

     

    ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ‌.ನಿಂಬಾಳ್ಕರ್ ಮತ್ತಿತರರು ಇದ್ದರು.

  • ಮಹಿಳೆಯ ಗರ್ಭಕೋಶದ ಸುತ್ತ 4.5 ಕೆ.ಜಿ ಗಡ್ಡೆ : ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಸರ್ಕಾರಿ ವೈದ್ಯರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸ್ಥಳೀಯ ವೈದ್ಯರ ತಂಡ ಯಶಸ್ವಿಯಾಗಿದೆ.

     

    ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು, ಖಾಸಗಿ ಆಸ್ಪತ್ರೆಗಳಿಗೆ ಸಡ್ಡು ಹೊಡಿದಿದ್ದಾರೆ.ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟಿಯಲ್ಲಿ 4 ರಿಂದ ೫ ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

    ಬಳಿಕ ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಬಹಳ ಸಣ್ಣಪುಟ್ಟದಾಗಿ ಕಂಡುಬರುತ್ತದೆ ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ ೪ ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದ ಸುತ್ತ ಬೆಳೆದಿದ್ದ ದೊಡ್ಡ ಗಾತ್ರದ ಗೆಡ್ಡೆ ಹೊರತೆಗೆಯಲಾಗಿದ್ದು, ಯಾವುದೇ ಅಪಾಯವಿಲ್ಲ ಮಹಿಳೆ ಆರೋಗ್ಯವಾಗಿದ್ದಾರೆ. ಇದೊಂದು ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆ ಎಂದು ಪರಿಗಣಿಸಲಾಗಿದ್ದು, ಮಹಿಳೆ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.

    ಶಸ್ತ್ರಚಿಕತ್ಸೆ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲದ ಪ್ರಕರಣವಾಗಿತ್ತು ಅನಸ್ತೆಷಿಯಾ ನೀಡುವ ಮುನ್ನಾ ಬಿ.ಪಿ, ಉಸಿರಾಟದ ಸಮಸ್ಯೆಗಳನ್ನು ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ ೪ ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೇವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದರು.

     

     

    ಅಪರೂಪದ ಪ್ರಕರಣದ ಶಸ್ತ್ರಚಿಕಿತ್ಸೆಯಲ್ಲಿ ಪ್ರಸೂತಿ ಸ್ತ್ರಿರೋಗ ತಜ್ಞೆ ಅರ್ಚನಾ ಕೆ.ಎಲ್ ಜೊತೆಗೆ ವೈದ್ಯರಾದ ಡಾ.ಗಿರೀಶ್, ಡಾ.ಪ್ರೇಮಲತಾ, ನರ್ಸ್ ಗಾಯತ್ರಿ, ನಂದಿನಿ, ಭವ್ಯ, ರಾಜು ತಂಡ ಕೈಜೋಡಿಸಿತ್ತು.

  • ಫೆಬ್ರವರಿ 7ರಂದು ದಿಲ್ಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ

    ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ಬೆಳಗ್ಗೆ 11ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ ಎದುರು ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

     

    ಈ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಮಾತೆತ್ತಿದರೆ ಡಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಬಿಜೆಪಿ, ಆ ಸಮಯದಲ್ಲೂ ಸರಿಯಾಗಿ ಅನುದಾನ ನೀಡಲಿಲ್ಲ, ನಮ್ಮ ಸರ್ಕಾರ ಬಂದ ಮೇಲೆ ತಾಳ್ಮೆಯಿಂದ ಕಾಯುತ್ತಿದ್ದೆವು, ಈ ಸಾರಿ ಬಜೆಟ್‌ನಲ್ಲೂ ನಮಗೆ ಅನ್ಯಾಯವಾಗಿದೆ.

     

    ದಿಲ್ಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಧ್ವನಿ ಎತ್ತುತ್ತೇವೆ. ಇಡೀ ಸರಕಾರವೇ ಪ್ರತಿಭಟನೆ ಮಾಡಲಿದ್ದು, ಪಕ್ಷ ಬೇಧ ಮರೆತು ಎಲ್ಲ ಶಾಸಕರು ಭಾಗವಹಿಸಬೇಕು. ರಾಜ್ಯದ ಹಿತಕ್ಕಾಗಿ ನಾವು ನೀವೆಲ್ಲರೂ ಒಟ್ಟಾಗಿ ಸೇರಿ ಹೋರಾಟ ಮಾಡಬೇಕಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರಕಾರಕ್ಕೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ, ಆದರೂ ಕೇಂದ್ರದಿಂದ ನಮಗೆ ಅನ್ಯಾಯ ಮುಂದುವರಿದಿದೆ.

     

    ಕೋವಿಡ್ ಸಮಯದಲ್ಲೂ ಸೂಕ್ತ ಪರಿಹಾರ ಸಿಗಲಿಲ್ಲ, ಅತಿವೃಷ್ಟಿ ವೇಳೆಯೂ ನಮಗೆ ಅನುದಾನ ಸಿಕ್ಕಿಲ್ಲ. ಭದ್ರಾಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಟ್ಟಿಲ್ಲ. ಇದು ಬಿಜೆಪಿ ವಿರುದ್ಧದ ಪ್ರತಿಭಟನೆ ಅಲ್ಲ. ಬದಲಾಗಿ ಹಣಕಾಸು‌ ಹಂಚಿಕೆ, ಬರ ಪರಿಹಾರದಲ್ಲಿ ತಾರತಮ್ಯ ಧೋರಣೆ ಬಗ್ಗೆ ಪ್ರತಿಭಟನೆ ಎಂದು ತಿಳಿಸಿದರು.

  • ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಚುನಾವಣೆಗೆ ಮುಂದಾಗಲಿದ್ದೇವೆ – ಅಲೋಕ್ ವಿಶ್ವನಾಥ್

    ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ.ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಜಯಗಳಿಸುವ ವಿಶ್ವಾಸವಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯಲಹಂಕದಲ್ಲಿ ಮಾತ್ರ ಬಿಜೆಪಿ ಜಯಗಳಿಸಿತ್ತು. ಅಂತಹ ಕಠಿಣ ಪರಿಸ್ಥಿತಿಯಲ್ಲೂ ಬಹುದೊಡ್ಡ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಪಕ್ಷಾತೀತವಾಗಿ ನಮಗೆ ಕ್ಷೇತ್ರದ ಜನತೆ ಬೆಂಬಲ ಸೂಚಿಸುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿ ಪಟ್ಟಿಯಲ್ಲಿ ಜೆಡಿಎಸ್ ಪಕ್ಷದ ನಾಯಕರು ಇದ್ದು ಯಾರಿಗೆ ಟಿಕೆಟ್ ಸಿಕ್ಕರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿಯಾಗಿದೆ. ಸ್ಥಳೀಯ ಮಟ್ಟದಲ್ಲಿಯೂ ಜೆಡಿಎಸ್ ನಾಯಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದರು.

    ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಚ್ ಹನುಮಂತರಾಯಪ್ಪ ಮಾತನಾಡಿ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಪಕ್ಷದ ಸೂಚಿಸಿದವರಿಗೆ ನಾವು ಕೆಲಸ ಮಾಡುತ್ತೇವೆ. ಅಲೋಕ್ ವಿಶ್ವನಾಥ್ ಸಜ್ಜನ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ನವರು ನಮಗೆ ಮೊದಲಿನಿಂದಲೂ ವಿರೋಧಿಗಳಲ್ಲ. ಉತ್ತಮ ಸ್ನೇಹ ಭಾಂದವ್ಯ ಹೊಂದಿದ್ದೇವೆ ಹೀಗಾಗಿ ಗೊಂದಲಗಳಿಲ್ಲದೆ ಚುನಾವಣೆ ಎದುರಿಸುತ್ತೇವೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮುಖಂಡರಾದ ದಿಬ್ಬೂರು ಜಯಣ್ಣ, ಎನ್.ಕೆ ರಮೇಶ್, ರಂಗರಾಜು, ವೆಂಕಟರಾಜು, ನವನೀತ್, ಮಧು, ಅರ್ಜುನ್ ಮತ್ತಿತ್ತರರು ಇದ್ದರು.

  • ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಯ : ಸಂಗ್ರಹವಾದ ಒಟ್ಟು ಮೊತ್ತ 55,24,663

    ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇಗುಲದಲ್ಲಿ ಸೋಮವಾರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದ್ದು ಒಟ್ಟು 55 ಲಕ್ಷ ಹಣ ಸಂಗ್ರಹವಾಗಿದೆ..

     

    ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಗಳನ್ನು ಸೋಮವಾರ ಎಣಿಕೆ ಮಾಡಲಾಯಿತು ಹುಂಡಿಯಲ್ಲಿ ಒಟ್ಟು 55 ಲಕ್ಷದ 24 ಸಾವಿರದ 663 ರೂ ಗಳ ಮೊತ್ತ ಸಂಗ್ರಹವಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

     

    6,900 ಮೌಲ್ಯದ 1 ಕೆಜಿ 390 ಗ್ರಾಂ ಬೆಳ್ಳಿ, 21,750 ರೂ ಮೌಲ್ಯದ 4ಗ್ರಾಂ 600 ಮಿಲಿ ತೂಕದ ಚಿನ್ನದ ಹರಕೆ ಹುಂಡಿಯಲ್ಲಿ ಹಾಕಲಾಗಿದೆ.

     

    ಗುಂಡಿ ಎಣಿಕೆ ಕಾರ್ಯವನ್ನು ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ನಡೆಸಲಾಯಿತು

     

    ಈ ವೇಳೆ ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಪ್ರಧಾನ ಅರ್ಚಕರಾದ ನಾಗೇಂದ್ರ ಶರ್ಮ, ಸಿಬ್ಬಂದಿ ನಂಜಪ್ಪ ಸೇರಿದಂತೆ ಇಂಡಿಯನ್ ಕೆನರಾ ಬ್ಯಾಂಕ್ ಸಿಬ್ಬಂದಿ, ಹಾಗೂ ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳು ಉಪಸ್ಥಿತರಿದ್ದರು

  • “ಭಾರತದ ರತ್ನ “ಪ್ರಶಸ್ತಿಗೆ ಭಾಜನರಾದ ಲಾಲ್ ಕೃಷ್ಣ ಅಡ್ವಾಣಿ : ಗಣ್ಯರಿಂದ ಶುಭ ಹಾರೈಕೆ

    ಭಾರತದ ಮುತ್ಸದ್ಧಿ ರಾಜಕಾರಣಿ, ಹಿರಿಯರಾದ ಶ್ರೀಯುತ ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತದ ಪರಮೋಚ್ಚ ನಾಗರೀಕ ಪುರಸ್ಕಾರವಾದ “ಭಾರತರತ್ನ”ಕ್ಕೆ ಭಾಜನರಾಗಿದ್ದಾರೆ.

     

    ಭಾರತೀಯ ಜನತಾ ಪಕ್ಷದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಾಯಕ ಆರಂಭಿಸಿದ ಅವರು ದೇಶದ ಉಪಪ್ರಧಾನಿ ಹುದ್ದೆ ಅಲಂಕರಿಸಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.

     

    ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು.

    ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಎಕ್ಸ್ ಖಾತೆಯ ಮೂಲಕ ತಮ್ಮ ನೆಚ್ಚಿನ ನಾಯಕರಿಗೆ ಶುಭ ಹಾರೈಸಿದ್ದಾರೆ.