Blog

  • ಯಶ್ 19 ಸಿನಿಮಾ ಟಾಕ್ಸಿಕ್ (TOXIC) : ಅಧಿಕೃತವಾಗಿ ಸಿನಿಮಾ ಟೈಟಲ್ ಘೋಷಣೆ ಮಾಡಿದ ಯಶ್

    ಕಳೆದ 1ವರ್ಷ 8 ತಿಂಗಳಿಂದ ಯಾವುದೇ ಸಿನಿಮಾದ ಅಪ್ಡೇಟ್ ನೀಡದ ಯಶ್ ಟೀಮ್ ಇಂದು ಸೀಕ್ರೇಟ್ ಅನ್ನು ರಿವಿಲ್ ಮಾಡಿದೆ ಯಶ್ ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ ತಮ್ಮ 19 ನೇ ಸಿನಿಮಾ ಟಾಕ್ಸಿಕ್ ಎಂದು ಅಧಿಕೃತ ಘೋಷಣೆ ಮಾಡಿದ ಯಶ್

     

    ಯಶ್ ರವರ 19 ನೇ ಸಿನಿಮಾ ಟಾಕ್ಸಿಕ್ ಗೆ ಫಿದಾ ಆದ ಅಭಿಮಾನಿ ಬಳಗ ವಿಶೇಷ ಲುಕ್ ನಲ್ಲಿ ಕಾಣಿಸಿಕೊಂಡಿರುವ ಯಶ್ ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚು ಮಾಡಿದ್ದಾರೆ

     

    ರಾಜ್ಯಾದ್ಯಂತ ಯಶ್ ಅಭಿಮಾನಿಗಳಲ್ಲಿ ಸಂತಸಮನೆ ಮಾಡಿದ್ದು ಯಶ್ 19 ಟೈಟಲ್ ಲಾಂಚ್ kvn ಪ್ರೊಡಕ್ಷನ್ ಬ್ಯಾನರ್ ನಡಿಯಲ್ಲಿ ಮಾನ್ಸ್ಟರ್ ಮೈಂಡ್  ಕ್ರಿಯೇಷನ್ ನಲ್ಲಿ  ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರಲಿದೆ ಟಾಕ್ಸಿಕ್ ( TOXIC) ನಿರ್ಮಾಣವಾಗುತ್ತಿದ್ದು ಏಪ್ರಿಲ್ 10 2025 ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರ ತಂಡ ಘೋಷಣೆ ಮಾಡಿದೆ

  • ಬೀಳುವ ಅತಂತ್ರ ಸ್ಥಿತಿಯಲ್ಲಿ ಜಾಹಿರಾತು ಸೂಚನಾ ಫಲಕ : ಗಮನಹರಿಸದ ತೂಬಗೆರೆ ಪಂಚಾಯಿತಿ ಅಧಿಕಾರಿಗಳು

    ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಹಲವು ದಿನಗಳಿಂದ ಬೀಳುವ ಸ್ಥಿತಿಯಲ್ಲಿ ಜಾಹೀರಾತು ಸೂಚನಾ ಫಲಕವಿದ್ದು ತೆರವುಗೊಳಿಸುವಲ್ಲಿ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಸೋತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

    ತೂಬಗೆರೆ ಪಂಚಾಯಿತಿ ಕಾರ್ಯಾಲಯಕ್ಕೆ ಕೇವಲ 100 ಮೀಟರ್ ಕೂಗಳತೆ ದೂರದಲ್ಲಿ ಇರುವ ಜಾಹೀರಾತು ಸೂಚನಾ ಫಲಕ ಇಂದೋ ನಾಳೆಯೋ ಬಿದ್ದು ಹೋಗುವ ಸ್ಥಿತಿಯಲ್ಲಿದ್ದು ಭಯದ ವಾತಾವರಣದಲ್ಲಿ ಪಾದಚಾರಿಗಳು ಹೊಡಾಡುವ ಪರಿಸ್ಥಿತಿ ಎದುರಾಗಿದೆ ಇನ್ನಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆದ್ದು ಸದರಿ ಜಾಹೀರಾತು ಸೂಚನಾ ಫಲಕವನ್ನು ಸರಿಪಡಿಸಿಬೇಕಾಗಿ ಅಥವಾ ತೆರವುಗೊಳಿಸಬೇಕಾಗಿ ಸ್ಥಳಿಯರು ಮನವಿ ಮಾಡಿದ್ದಾರೆ

    ಕಳೆದ ಒಂದೂವರೆ ತಿಂಗಳಿನಿಂದ ಜಾಹೀರಾತು ಸೂಚನಾ ಫಲಕ ಇದೇ ( ಬೀಳುವ) ಸ್ಥಿತಿಯಲ್ಲಿ ಇದ್ದು ಪಂಚಾಯಿತಿ ಅಧಿಕಾರಿಗಳು ಗಮನಿಸದೆ ಇರುವುದು ವಿಪರ್ಯಾಸವೇ ಸರಿ ಈ ಕುರಿತು ಗಮನ ಹರಿಸಿ ಕೂಡಲೇ ಜಾಹೀರಾತು ಸೂಚನಾ ಫಲಕವನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ಸರಿಪಡಿಸಿ ಭದ್ರ ಪಡಿಸಲು ಸ್ಥಳೀಯ ಗ್ರಾಮಸ್ಥರು ಪಂಚಾಯಿತಿ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ

     

    ವರದಿ

    ಶಿವಕುಮಾರ್ ಸ್ವಾಮಿ ತೂಬಗೆರೆ

  • ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೂತನ ಸಾರಥಿಯಾಗಿ ಎ ನಾರಾಯಣಸ್ವಾಮಿ ಆಯ್ಕೆ : ನೂತನ ಅಧ್ಯಕ್ಷರಿಗೆ ಪ್ರಚಾರ ಸಮಿತಿ ವತಿಯಿಂದ ಅಭಿನಂದನೆ

    ಬೆಂಗಳೂರು: ಕನಾ೯ಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕನಾ೯ಟಕ ಸಕಾ೯ರ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಸನ್ಮಾನ್ಯ ಶ್ರೀ ಎ.ನಾರಾಯಣಸ್ವಾಮಿರವರಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆ ಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು

     

    ಪ್ರಚಾರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ರಾಜ್ಯಾಧ್ಯಕ್ಷರಾದ ಮುನಿಕೃಷ್ಣಪ್ಪ ( ಪಾಲ್) ರವರು ನೂತನ ಅಧ್ಯಕ್ಷರನ್ನು ಭೇಟಿಮಾಡಿ ಹಲವು ವಿಷಯಗಳನ್ನು ಕುರಿತು ಸಂವಾದ ನಡೆಸಿದರು .ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ವತಿಯಿಂದ ನೂತನ ಅಧ್ಯಕ್ಷರನ್ನು ಸನ್ಮಾನಿಸಲಾಯಿತು

     

    ಈ ಕುರಿತು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮುನಿಕೃಷ್ಣಪ್ಪ ಪಾಲ್ ಮಾತನಾಡಿ ಉತ್ತಮ ನಿಷ್ಠಾವಂತರಾದ ಎ.ನಾರಾಯಣಸ್ವಾಮಿ ರವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷದ ವಿಷಯ ಅವರ ಪ್ರಾಮಾಣಿಕ ಸೇವೆ ಸದಾ ಸಮಾಜಕ್ಕೆ ಮಾದರಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪ್ರಚಾರ ಸಂಸ್ಥೆಯು ಸಾಗುವುದು ಎಂದು ತಿಳಿಸಿದರು

     

    ಈ ಸಂದರ್ಭದಲ್ಲಿ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಾಧ್ಯಕ್ಷರು ,ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ.ನರಸಿಂಹಮೂತಿ೯ . ರಾಜ್ಯ ಘಟಕದ ಮಹಿಳಾ ಅಧ್ಯಕ್ಷೆ.ಎಂ.ರತ್ನ ಕೆ.ಬೈಲರಾಜು ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಶ್ರೀನಿವಾಸ್ ..ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ//. ರಾಜಗೋಪಾಲ್.ಹೆಚ್.ಯುವ ಸಮಿತಿ ಸದಸ್ಯರು ರುದ್ರೇಶ್ ಉಪಸ್ಥಿತರಿದ್ದರು

  • ಬಿಗ್ ಬಾಸ್ ಸ್ಪರ್ಧಿ ಪ್ರತಾಪ್ ವಿರುದ್ಧ ಕೇಸ್ ದಾಖಲಿಸಲು ಮುಂದಾದ ನೋಡಲ್ ಅಧಿಕಾರಿ ಡಾ. ಪ್ರಯಾಗ್

    ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಮನೆಯಲ್ಲಿ ನಡೆದ ಟಾಸ್ಕ್ ಒಂದರಲ್ಲಿ ತಾವು ಕೋರೋನ ಕ್ವಾರಂಟೈನ್ ಅನುಭವ ತಿಳಿಸುವ ಸಂದರ್ಭದಲ್ಲಿ ಕೆಲವು ಪ್ರಮುಖ ಅಂಶಗಳನ್ನು ತನ್ನ ಸಹ ಸ್ಪರ್ಧಿಗಳ ಮುಂದೆ ಮಾತನಾಡುತ್ತಾ ತನ್ನನ್ನು ಬುದ್ಧಿಮಾಂದ್ಯ ಎಂದು ಒಪ್ಪಿಕೊಳ್ಳುವಂತೆ ಸಹಿ ಹಾಕಲು ಹಾಗೂ ತಪ್ಪುಗಳನ್ನು ಒಪ್ಪಿಕೊಳ್ಳುವಂತೆ ಬಲವಂತವಾಗಿ ಓಡೆಯಲಾಗಿತ್ತು ಹಾಗೂ ಹಿಂಸಿಸಲಾಗಿತು ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದರು

    ಈ ಕುರಿತಂತೆ ಈಗ ಪೊಲೀಸ್ ಸ್ಟೇಷನ್ ಮೆಟ್ಟಿಲನ್ನು ಏರುವ ಪರಿಸ್ಥಿತಿ ಎದುರಾಗಿದೆ

     

    ಹೌದು ಡ್ರೋನ್ ಪ್ರತಾಪ್ ರವರು ಕ್ವಾರಂಟೈನ್ ಆಗಿದ್ದ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿದ್ದ ಡಾಕ್ಟರ್ ಪ್ರಯಾಗ್ ಈಗ ಬಿಗ್ ಬಾಸ್ ಸ್ಪರ್ಧಿ ಪ್ರತಾಪ್ ವಿರುದ್ಧ ಕೇಸು ದಾಖಲಿಸಲು ಮುಂದಾಗಿದ್ದಾರೆ

     

    ಡ್ರೋನ್ ಪ್ರತಾಪ್ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿರುವ ಡಾಕ್ಟರ್ ಪ್ರಯಾಗ್ ನಮ್ಮ ಸಿಬ್ಬಂದಿ ಯಾವುದೇ ರೀತಿಯ ಹಿಂಸೆ ನೀಡಿಲ್ಲ ಡ್ರೋನ್ ಪ್ರತಾಪ್ ಕ್ವಾರಂಟೈನ್ ನಿಯಮವನ್ನು ಉಲ್ಲಂಘನೆ ಮಾಡಿರುತ್ತಾರೆ ಈ ಕುರಿತು ಕೇಸ್ ಕೂಡ ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ನೀಡಿರುವ ಹೇಳಿಕೆ ಸುಳ್ಳಾಗಿದ್ದು ಈ ಕುರಿತು ಕರ್ನಾಟಕದ ಜನತೆ ಎದುರು ಕ್ಷಮೆಯಾಚಿಸಬೇಕಿದೆ ಇಲ್ಲವಾದಲ್ಲಿ ಕಾನೂನು ರೀತಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ

  • ವಿಷ ಆಹಾರ ಸೇವಿಸಿ ದನ ಕರು ಸಾವು : ಮುಗಿಲು ಮುಟ್ಟಿದ ರೈತನ ಆಕ್ರಂದನ

    ದೊಡ್ಡಬಳ್ಳಾಪುರ : ವಿಷಪೂರಿತ ಆಹಾರ ಸೇವಿಸಿ 3 ದನಗಳು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪುರು ಗ್ರಾಮದಲ್ಲಿ ನಡೆದಿದೆ

     

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದ ಬಡರೈತ ರಂಗಪ್ಪ 6 ದನಗಳನ್ನು ಸಾಕಿದ್ದು ಇಂದು ಮುಂಜಾನೆ ಪ್ರತಿದಿನದಂತೆ ಈ ದಿನವೂ ಆಹಾರ ನೀಡಿದ್ದು ಇದಕ್ಕಿದ್ದಂತೆ ಸ್ವಾಧೀನ ಕಳೆದುಕೊಂಡು ಮೂರು ಹಸುಗಳು ಕುಸಿದು ಬಿದ್ದಿದೆ. ಗಾಬರಿಗೊಂಡ ರೈತ ವೈದ್ಯಕೀಯ ಸಹಾಯಕ್ಕೆ ಮುಂದಾಗಿದ್ದು ವೈದ್ಯರು ಬರುವ ಸಮಯಕ್ಕೆ ಒಂದು ದನ ಮರಣ ಹೊಂದಿದ್ದು ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಉಳಿದ ಇನ್ನೆರಡು ದನಗಳು ಜೀವ ಚಲ್ಲಿವೆ. ಕುಟುಂಬಕ್ಕೆ ಆಧಾರವಾಗಿದ್ದ ಪ್ರಾಣಿಗಳನ್ನು ಕಳೆದುಕೊಂಡ ರೈತ ಕುಟುಂಬ ಮೌನಕ್ಕೆ ಶರಣಾಗಿದ್ದು ರೈತನ ಆಕ್ರಂದನ ಮುಗಿಲು ಮುಟ್ಟಿದೆ

    ಈ ಸಂದರ್ಭದಲ್ಲಿ ರೈತ ರಂಗಪ್ಪ ಮಾತನಾಡಿ ಎಂದಿನಂತೆ ಇಂದು ಕೂಡ ಸಾಧಾರಣ ಆಹಾರವನ್ನೇ ನೀಡಿದ್ದೆವು ಆದರೆ ಇದಕ್ಕಿದ್ದಂತೆ ದನಗಳು ನಡುಗಲು ಪ್ರಾರಂಭಿಸಿ ಸ್ವಾಧೀನ ಕಳೆದುಕೊಂಡು ನೆಲಕ್ಕೆ ಕುಸಿದಿವೆ ನಮ್ಮ ಕುಟುಂಬಕ್ಕೆ ಇದು ತುಂಬಲಾರದ ನಷ್ಟ ಜೀವನ ಸಾಗಿಸಲು ಆಧಾರವಾಗಿದ್ದ ದನಗಳನ್ನು ಕಳೆದು ಕೊಂಡಿದ್ದೇವೆ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದರು

     

    ವೈದ್ಯರಾದ ಸತ್ಯನಾರಾಯಣ್ ಮಾತನಾಡಿ ದನಗಳನ್ನು ಪರೀಕ್ಷಿಸಿದಾಗ ಮೇಲ್ನೋಟಕ್ಕೆ ವಿಷಪೂರಿತ ಆಹಾರ ಸೇವಿಸಿ ದನಗಳು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ ಮರಣೋತ್ತರ ಪರೀಕ್ಷೆಗೆ ದನಗಳನ್ನು ರಾವನಿಸುತ್ತಿದ್ದು ಈ ವಿಚಾರವಾಗಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ರೈತ ಕುಟುಂಬಕ್ಕೆ ಸೇರಬೇಕಾದ ಮೃತ ದನಗಳ ಪರಿಹಾರ ನೀಡಲು ವೈದ್ಯಕೀಯ ಇಲಾಖೆ ವತಿಯಿಂದ ಸಹಕರಿಸಲಾಗುವುದು ಎಂದು ತಿಳಿಸಿದರು

    ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಪಂಚಾಯಿತಿ ಸದಸ್ಯರಾದ ಕೃಷ್ಣಮೂರ್ತಿ , ಹನುಮನರಸಯ್ಯ, ಗ್ರಾಮಸ್ಥರು ಇದ್ದರು

  • ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 67ನೇ ಪರಿ ನಿಬ್ಬಾಣ ದಿನ: ಮೌಡ್ಯ ವಿರೋಧಿ ದಿನವಾಗಿ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆಯಿಂದ ಆಚರಣೆ

    ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ರೋಜಿಪುರದ ಸ್ಮಶಾನದಲ್ಲಿ ಬಾಡೂಟ ಸವಿಯಲಾಯಿತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿ ನಿಬ್ಬಾಣ ದಿನವನ್ನು ಮೌಡ್ಯ ವಿರೋಧಿ ದಿನವನ್ನಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ವತಿಯಿಂದ ಆಚರಿಸಲಾಯಿತು

     

    ಈ ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರು, ಸಾಹಿತಿಗಳು, ದಲಿತ ಮುಖಂಡರು,ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

    ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಗುಳ್ಯ ಹನುಮಣ್ಣ ಮಾತನಾಡಿ ನಿರೀಕ್ಷೆಗೂ ಮೀರಿದ ಜನ ಸ್ಪಂದನೆ ದೊರೆತ್ತಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ ಸಮಾಜದಲ್ಲಿ ಮೌಡ್ಯ ಹೋಗುವವರೆಗೂ ಸಮಾನತೆಯ ಮಹತ್ವ ಅರಿವಾಗುವುದಿಲ್ಲ .ಸಮಾಜದ ಮೌಡ್ಯ ಆಚರಣೆ ಬದಲಾಗಬೇಕು ಎಂಬುದೇ ನಮ್ಮ ಉದ್ದೇಶ ಮುಖ್ಯವಾಗಿ ವಿದ್ಯಾವಂತರು ಬದಲಾಗಬೇಕು ಸಂವಿಧಾನದ ಮಹತ್ವ ಬಾಬಾಸಾಹೇಬರ ಆಶಯ ಎಲ್ಲರಿಗೂ ಮನವರಿಕೆಯಾಗಬೇಕು ಎಂದು ತಿಳಿಸಿದರು

     

    ಬಿ ಎಸ್ಸಿ ವಿಧ್ಯಾರ್ಥಿ ಹೇಮಂತ್ ಮಾತನಾಡಿ ಸ್ಮಶಾನದಲ್ಲಿ ಆಯೋಜಿಸಿರುವ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ ವಿದ್ಯಾವಂತರಾದ ನಾವು ಸಮಾಜದ ಜನಸಾಮಾನ್ಯರಲ್ಲಿ ಮೂಡನಂಬಿಕೆ ದೂರಮಾಡಬೇಕಿದೆ ಆದರೆ ವಿದ್ಯಾವಂತರೇ ಮೂಢನಂಬಿಕೆಗಳಿಗೆ ಮೌಢ್ಯತೆಯ ದಾಸರಾಗಿರುವುದು ವಿಷಾದನೀಯ ಸಂಗತಿ ಅದರಲ್ಲೂ ವಿಜ್ಞಾನ ಅರಿತು ಅಭ್ಯಾಸ ಮಾಡಿರುವ ವಿದ್ಯಾವಂತರೇ ಮೌಢ್ಯತೆಯ ಮರೆಹೋಗುತ್ತಿರುವುದು ಸರಿಯಲ್ಲ .ಸಾಮನ್ಯವಾಗಿ ಸ್ಮಶಾನಕ್ಕೆ ಬರಲು ಹೆದರುವ ಜನರ ನಡುವೆ ಇಂದು ಸ್ಮಶಾನದಲ್ಲಿ ಊಟ ಸವಿದಿದ್ದೇವೆ ಮೌಡ್ಯ ವಿರೋಧಿ ದಿನವನ್ನು ಆಚರಿಸಿದ್ದೇವೆ ಸಮಾಜದಲ್ಲಿ ಬದಲಾವಣೆ ನಮ್ಮ ಆಶಯ ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮ್ಮ ಆದರ್ಶ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

    ಈ ಸಂದರ್ಭದಲ್ಲಿ ತಾಲ್ಲೂಕಿನ ಮುಖಂಡರಾದ ಚಂದ್ರ ತೇಜಸ್ವಿ , ಪ್ರಕಾಶ್ ಮಂಟೆಲ , ಪತ್ರಕರ್ತರಾದ ವೆಂಕಟೇಶ್ , ರಾಜು ಸಣ್ಣಕ್ಕಿ , ಗುರು , ದಲಿತ ಮುಖಂಡ ಹನುಮಯ್ಯ , ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು , ತಾಲ್ಲೂಕಿನ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು

  • ತಾಲ್ಲೂಕಿನ ವಕೀಲರ ಸಂಘದ ನೂತನ ನಿರ್ದೇಶಕರಿಗೆ ಛಲವಾದಿ ಮಹಾಸಭಾ ವತಿಯಿಂದ ಅಭಿನಂದನೆ : ಸಮುದಾಯದ ಏಳಿಗೆಗೆ ಶ್ರಮಿಸಲು ಮನವಿ

    ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದಲ್ಲಿ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಛಲವಾದಿ ಸಮುದಾಯದ ಶ್ರೀಮತಿ ಎನ್, ಲೀಲಾವತಿ ಮತ್ತು ಶ್ರೀ ಟಿ, ಜೆ, ಶಿವಕುಮಾರ್ ರವರುಗಳಿಗೆ ಛಲವಾದಿ ಮಹಾಸಭಾ ದ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಲಾಯಿತು

     

    ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷರಾದ ಸಿ ಗುರುರಾಜಪ್ಪ ಮಾತನಾಡಿ ನಮ್ಮ ಸಮುದಾಯದ ಏನ್.ಲೀಲಾವತಿ ಹಾಗೂ ಟಿ . ಜೆ.ಶಿವಕುಮಾರ್ ರವರು ದೊಡ್ಡಬಳ್ಳಾಪುರ ತಾಲ್ಲೂಕಿನ ವಕೀಲರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವುದು ನಮ್ಮ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಸಮುದಾಯದ ಹಿತಾಸಕ್ತಿಗೆ ಶ್ರಮಿಸಲು ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

     

    ಈ ಸಂದರ್ಭದಲ್ಲಿತಾಲ್ಲೂಕು ಅಧ್ಯಕ್ಷರಾದ ಸಿ, ಗುರುರಾಜಪ್ಪರವರು, ಪ್ರಧಾನ ಕಾರ್ಯದರ್ಶಿ ಡಿ, ಎನ್, ಎಲ್, ಎನ್, ಮೂರ್ತಿ, ದೊಡ್ಡಬೆಳವಂಗಲ ಹೋಬಳಿ ಘಟಕದ ಅಧ್ಯಕ್ಷರಾದ ಎನ್, ಉದಯ ಶಂಕರ್, ಇಂಜಿನಿಯರ್ ಕುಮಾರಸ್ವಾಮಿ, ಅಂಜಿನಮೂರ್ತಿ (ಶಿಕ್ಷಕರು ),ಮುನಿಯಪ್ಪ, ಮುನಿಕೃಷ್ಣ, ಸುರೇಶ್, ಹನುಮಂತರಾಜು, ಕಮಲಮ್ಮ, ಆನಂದ್, ನವೀನ್, ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

  • ಸಂವಿಧಾನದ ಉಳಿವಿಗಾಗಿ ಹೋರಾಟ ಮಾಡುವುದು ಅತ್ಯಂತ ಅಗತ್ಯವಾಗಿದೆ – ಸಿ ಗುರುರಾಜಪ್ಪ

    ದೊಡ್ಡಬಳ್ಳಾಪುರ : ಮಹಾಮಾನವತಾವಾದಿ, ವಿಶ್ವಾಜ್ಞಾನಿ, ಡಾ :ಬಾಬಾ ಸಾಹೇಬರ 67ನೇ ಪರಿನಿರ್ವಾಣದ ಅಂಗವಾಗಿ ತಾಲ್ಲೂಕಿನ ನಗರ ಭಾಗದ ಹಳೇ ಬಸ್ ನಿಲ್ದಾಣದಲ್ಲಿರುವ ಬಾಬಾ ಸಾಹೇಬರ ಪುತ್ತಿಳಿಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.

     

    ನಂತರ, ಸಂವಿಧಾನ ಪೀಠಿಕೆಯನ್ನು ಭೋದಿಸಿ, ಸಂವಿಧಾನದ ಉಳಿವಿಗಾಗಿ ಹೋರಾಟ ಮಾಡುವುದು ಅತ್ಯಂತ ಅಗತ್ಯವಾಗಿದೆ ಜಾತಿ -ಜಾತಿಗಳ ನಡುವೆ ಸಂಘರ್ಷಗಳು ಹೆಚ್ಚಾಗಿರುವ ಸಂಧಿಗ್ದ ಪರಿಸ್ಥಿತಿಯಲ್ಲಿ ಜಾತಿಗಳ ಉಳಿಯುವಿಕೆಯು ಅತ್ಯಂತ ಜರೂರಾಗಿದೆ ಎಂದು ಛಲವಾದಿ ಮಹಾಸಭಾದ ಅಧ್ಯಕ್ಷರಾದ ಸಿ, ಗುರುರಾಜಪ್ಪ ಅವರು ಪ್ರತಿಪಾದಿಸಿದರು.

     

    ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಡಿ, ಎನ್, ಎಲ್, ಎನ್, ಮೂರ್ತಿಯವರು ಮಾತನಾಡಿದರು. ದೊಡ್ಡಬೆಳವಂಗಲ ಹೋಬಳಿಯ ಅಧ್ಯಕ್ಷರಾದ ಎನ್, ಉದಯಶಂಕರ್, ಇಂಜಿನಿಯರ್ ಕುಮಾರ್ ಸ್ವಾಮಿ, ಮುನಿಯಪ್ಪ, ಹನುಮಂತರಾಜು, ಅಂಜಿನಮೂರ್ತಿ (ಶಿಕ್ಷಕರು ), ಮುನಿಕೃಷ್ಣ , ಸುರೇಶ, ರಮೇಶ್, ಆನಂದ್, ನವೀನ್, ಶಿವಕುಮಾರ್,ಕಮಲಮ್ಮ ಇತರರು ಭಾಗವಹಿಸಿದ್ದರು.

  • ಬಾಬಾಸಾಹೇಬರ ಸಂಧ್ಯಾರಾಗ; ಕೊನೆಯ ರಾತ್ರಿಯ ಕಾಯಕ

    1956 ರ ಒಂದು ಸಂಜೆ ಬಾಬಾಸಾಹೇಬರ ದುಗುಡ ತುಂಬಿದ ಮಾತುಗಳನ್ನು ಕೇಳುತ್ತಿದ್ದ ನಾನಕ್ ಚಂದ್ ರತ್ತುವಿಗೆ ಅವರ ಕೊನೆಯ ದಿನಗಳು ಹತ್ತಿರವಿದ್ದಂತೆ ಕಂಡಿತು. ಈಚೆಗೆ ಅಂಬೇಡ್ಕರ್ ಸದಾ ದುಃಖದಲ್ಲಿ ಮುಳುಗಿರುತ್ತಿದ್ದನ್ನು ಕಂಡಿದ್ದ ರತ್ತು ಜುಲೈ ೩೧ರ ಸಂಜೆ ಕೇಳಿಯೇಬಿಟ್ಟರು: ‘ಸರ್, ಈಚೆಗೆ ತಾವು ಯಾಕೆ ಇಷ್ಟೊಂದು ದುಃಖಿಯಾಗಿರುತ್ತೀರಿ? ಆಗಾಗ ಅಳುತ್ತಿರುತ್ತೀರಿ. ದಯವಿಟ್ಟು ನಿಮ್ಮ ದುಃಖಕ್ಕೆ ಕಾರಣವೇನು, ಹೇಳಿ.’

     

    ಚಣ ಸುಮ್ಮನಾದ ಬಾಬಾಸಾಹೇಬರ ಗದ್ಗದ ಕಂಠದಿಂದ ಹೊರಬಿದ್ದ ಮಾತುಗಳಿವು: ‘ನಾನು ಯಾಕಿಷ್ಟು ದುಃಖಿಯಾಗಿದ್ದೇನೆ, ನನ್ನನ್ನು ಯಾವ ಚಿಂತೆ ಮುತ್ತಿದೆ ಎಂಬುದು ನಿನಗೆ ಅರ್ಥವಾಗಲಾರದು. ನನ್ನ ಬದುಕಿನ ಉದ್ದೇಶ ಇನ್ನೂ ಈಡೇರಿಲ್ಲ; ಇದು ನನ್ನ ಮೊದಲ ಚಿಂತೆ; ನನ್ನ ಜನ ಇತರ ಸಮುದಾಯಗಳೊಡನೆ ಸಮಾನವಾಗಿ ರಾಜಕೀಯ ಅಧಿಕಾರ ಹಂಚಿಕೊಂಡು ಆಳುವ ವರ್ಗವಾಗುವುದನ್ನು ಕಾಣಬೇಕೆಂದುಕೊಂಡಿದ್ದೆ. ಅನಾರೋಗ್ಯ ನನ್ನೆಲ್ಲ ಚಟುವಟಿಕೆಗಳನ್ನು ಕುಂಠಿತಗೊಳಿಸಿದೆ. ಈವರೆಗೆ ನಾನು ಸಾಧಿಸಿದ ಅಷ್ಟಿಷ್ಟು ಗುರಿಗಳಿಂದಾಗಿ ಅನುಕೂಲ ಪಡೆದಿರುವ ವಿದ್ಯಾವಂತರು ದಮನಕ್ಕೊಳಗಾದ ತಮ್ಮ ಅಣ್ಣತಮ್ಮಂದಿರ ಬಗ್ಗೆ ಅನುಕಂಪ ತೋರಿಸುತ್ತಿಲ್ಲ. ಇವತ್ತಿಗೂ ಹಳ್ಳಿಗಳಲ್ಲಿ ಯಾತನೆ ಪಡುತ್ತಾ, ಆರ್ಥಿಕವಾಗಿ ಒಂದಿಷ್ಟೂ ಬದಲಾಗದ ಆ ಬೃಹತ್ ಅನಕ್ಷರಸ್ಥ ಸಮುದಾಯಕ್ಕಾಗಿ ನಾನು ಕೆಲಸ ಮಾಡಬೇಕೆಂದುಕೊಂಡಿದ್ದೆ. ಆದರೆ ನನ್ನ ಬದುಕು ಮುಗಿಯತೊಡಗಿದೆ…

     

    ‘ನನ್ನ ಮಹತ್ವದ ಪುಸ್ತಕಗಳಾದ ‘ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್’, ‘ಪ್ರಾಚೀನ ಇಂಡಿಯಾದಲ್ಲಿ ಕ್ರಾಂತಿ-ಪ್ರತಿಕ್ರಾಂತಿ’, ‘ಹಿಂದೂ ಧರ್ಮದ ಒಗಟುಗಳು’ ಇವನ್ನು ಬರೆದು ಮುಗಿಸಲು ಆಗುತ್ತಿಲ್ಲ. ನಾನು ತೀರಿಕೊಂಡ ಮೇಲೆ ಇವನ್ನು ಯಾರೂ ಪ್ರಕಟಿಸಲಾರರು… ನಾನು ಬದುಕಿರುವಾಗಲೂ, ಮುಂದೆಯೂ ದಲಿತ ವರ್ಗಗಳ ಚಳುವಳಿಯನ್ನು ಮುನ್ನಡೆಸಬಲ್ಲವರನ್ನು ಹುಡುಕುತ್ತಿದ್ದೇನೆ. ಒಬ್ಬರೂ ಕಾಣುತ್ತಿಲ್ಲ. ದೇಶದ ವಿದ್ಯಮಾನಗಳಲ್ಲಿ ಆಸಕ್ತಿ ಇರಿಸಿಕೊಳ್ಳುವುದು ಕೂಡ ನನಗೀಗ ಕಷ್ಟವಾಗಿದೆ. ಯಾಕೆಂದರೆ, ಈ ದೇಶದ ಜನ ಪ್ರಧಾನಮಂತ್ರಿಯ ವಲಯದ ಮಾತುಗಳನ್ನು ಬಿಟ್ಟರೆ ಇನ್ನಾರ ಮಾತುಗಳನ್ನೂ ಕೇಳಲು ಸಿದ್ಧರಿಲ್ಲ. ಈ ದೇಶದ, ಈ ಜನರ ಸೇವೆ ಮಾಡಬೇಕೆಂದು ನಾನು ಹೊರಟಿದ್ದೆ. ಆದರೆ ಇಷ್ಟೊಂದು ಜಾತಿಪೀಡಿತವಾದ, ಪೂರ್ವಗ್ರಹಗಳಿರುವ ದೇಶದಲ್ಲಿ ಹುಟ್ಟುವುದೇ ಪಾಪ… ಈ ದೇಶ ಎಂಥ ಪ್ರಪಾತಕ್ಕೆ ಬೀಳತೊಡಗಿದೆ…’

     

    ತಮ್ಮ ಮಾತು ಕೇಳಿ ಕಣ್ಣೀರಿಟ್ಟ ರತ್ತುವಿಗೆ ಅಂಬೇಡ್ಕರ್ ಹೇಳಿದರು: ‘ಧೈರ್ಯ ತಂದುಕೋ. ಬದುಕು ಒಂದಲ್ಲ ಒಂದು ದಿನ ಮುಗಿಯಲೇಬೇಕು.’ ಚಣ ಸುಮ್ಮನಾದ ಅಂಬೇಡ್ಕರ್ ಕಣ್ಣೀರೊರೆಸಿಕೊಳ್ಳುತ್ತಾ, ಕೊಂಚ ಕೈ ಮೇಲೆತ್ತಿ ಮಾತಾಡತೊಡಗಿದರು. ಕಣ್ಣು ಮಿನುಗುತ್ತಿದ್ದವು:

     

    ‘ನಾನಕ್ ಚಂದ್, ನನ್ನ ಜನರಿಗೆ ಹೇಳು. ನಾನು ಏನೆಲ್ಲ ಸಾಧಿಸಿದ್ದೇನೋ ಅದನ್ನೆಲ್ಲ ಅಸಂಖ್ಯಾತ ಕಷ್ಟಕೋಟಲೆಗಳನ್ನು ಎದುರಿಸುತ್ತಾ, ಈ ನನ್ನ ಏಕಾಂಗಿ ಕೈಗಳಿಂದ ನಾನೊಬ್ಬನೇ ಸಾಧಿಸಿದ್ದೇನೆ. ಎಲ್ಲ ಕಡೆಯಿಂದ ಎರಗಿದ ನಿಂದನೆಗಳನ್ನು, ಅದರಲ್ಲೂ ಹಿಂದೂಗಳ ಪತ್ರಿಕೋದ್ಯಮ ನನ್ನ ಮೇಲೆ ಸುರಿದ ಬೈಗುಳಗಳನ್ನು ಎದುರಿಸುತ್ತಾ, ನನ್ನ ಎದುರಾಳಿಗಳ ಜೊತೆ ಹೋರಾಡುತ್ತಾ, ತಮ್ಮ ಸ್ವಾರ್ಥಕ್ಕಾಗಿ ನನಗೆ ಮೋಸ ಮಾಡಿದ ನನ್ನ ಜನರ ಜೊತೆಗೂ ಹೋರಾಡುತ್ತಾ, ಇಷ್ಟನ್ನು ಮಾಡಿದ್ದೇನೆ. ನನ್ನ ಕೊನೆಯ ಉಸಿರಿನವರೆಗೂ ಈ ದೇಶಕ್ಕಾಗಿ, ಇಲ್ಲಿನ ದಮನಿತರಿಗಾಗಿ ಕೆಲಸ ಮಾಡುತ್ತಲೇ ಇರುತ್ತೇನೆ. ತುಂಬ ಕಷ್ಟಪಟ್ಟು ಈ ಬಂಡಿಯನ್ನು ಇಲ್ಲಿಯವರೆಗೂ ಎಳೆದು ತಂದಿದ್ದೇನೆ. ಈ ಬಂಡಿ ಎಲ್ಲ ಅಡೆತಡೆಗಳನ್ನು ದಾಟಿ ಮುಂದುವರಿಯಲಿ. ನನ್ನ ಜನ ಹಾಗೂ ನನ್ನ ಜೊತೆಯವರು ಈ ಬಂಡಿಯನ್ನು ಮುಂದೊಯ್ಯಲು ಆಗದಿದ್ದರೆ, ಕೊನೆಯ ಪಕ್ಷ ಅದು ಈಗ ಎಲ್ಲಿದೆಯೋ ಅಲ್ಲೇ ಇರಲಾದರೂ ಬಿಡಲಿ. ಆದರೆ ಯಾವ ಕಾರಣಕ್ಕೂ ಅವರು ಈ ಬಂಡಿ ಹಿಂದೆ ಹೋಗಲು ಬಿಡದಿರಲಿ. ಇದು ನನ್ನ ಸಂದೇಶ. ಪ್ರಾಯಶಃ ನನ್ನ ಅತ್ಯಂತ ಗಂಭೀರವಾದ ಕೊನೆಯ ಸಂದೇಶ. ಇದನ್ನು ನನ್ನ ಜನ ಕೇಳಿಸಿಕೊಳ್ಳುತ್ತಾರೆ ಎಂದು ನಂಬಿದ್ದೇನೆ. ಹೋಗು, ಅವರಿಗೆ ಈ ಮಾತನ್ನು ಹೇಳು. ಹೋಗು, ಅವರಿಗೆ ಈ ಮಾತನ್ನು ಹೇಳು. ಹೋಗು, ಅವರಿಗೆ ಈ ಮಾತನ್ನು ಹೇಳು.’

     

    ಕೊನೆಯ ಮಾತನ್ನು ಮೂರು ಸಲ ಹೇಳಿದ ಬಾಬಾಸಾಹೇಬ್ ಬಿಕ್ಕಿ ಬಿಕ್ಕಿ ಅತ್ತರು. ಕಣ್ಣೀರು ಹರಿಯುತ್ತಿತ್ತು. ಅದು ನಿಜಕ್ಕೂ ಬಾಬಾಸಾಹೇಬರ ಕೊನೆಯ ಸಂದೇಶವಾಗುವುದೆಂದು ರತ್ತು ಊಹಿಸಿರಲಿಲ್ಲ. ಅವರ ಮುಖದಲ್ಲಿ ಕವಿದಿದ್ದ ನಿರಾಶೆ ರತ್ತುವನ್ನು ಕಂಗೆಡಿಸಿತ್ತು.

     

    ಇದಾದ ನಾಲ್ಕು ತಿಂಗಳ ನಂತರ, ಡಿಸೆಂಬರ್ 3 ರಂದು, ಕಾಯಿಲೆಯಾಗಿ ಮಲಗಿದ್ದ ತಮ್ಮ ಕೈತೋಟದ ಮಾಲಿಯ ಆರೋಗ್ಯ ವಿಚಾರಿಸಲು ಅಂಬೇಡ್ಕರ್ ಮಾಲಿಯ ಮನೆಗೆ ಹೋಗಿದ್ದರು. ಮಾಲಿಯ ಕಣ್ಣೀರು ಕಂಡ ಅಂಬೇಡ್ಕರ್ ರತ್ತುವಿಗೆ ಹೇಳಿದರು: `ನೋಡು, ಈ ಮನುಷ್ಯ ಸಾವಿನ ಕಲ್ಪನೆಯಿಂದ ಅಂಜಿಕೊಂಡಿದ್ದಾನೆ. ನನಗೆ ಸಾವಿನ ಭಯವೆಂಬುದಿಲ್ಲ. ಮರಣ ಯಾವಾಗಲಾದರೂ ಬರಲಿ, ನಾನು ಅದನ್ನು ಬರಮಾಡಿಕೊಳ್ಳಲು ಸಿದ್ಧನಿದ್ದೇನೆ.’

     

    ಡಿಸೆಂಬರ್ 5 ರ ಸಂಜೆ ಅಂಬೇಡ್ಕರ್ ಉದ್ವಿಗ್ನರಾಗಿದ್ದಂತೆ ರತ್ತುವಿಗೆ ಕಂಡಿತು. ರಾತ್ರಿ ಎಂಟು ಗಂಟೆಯ ಹೊತ್ತಿಗೆ ಜೈನ ಸಮಾಜದ ನಾಯಕರು ಬಂದು ‘ಜೈನ್ ಔರ್ ಬುದ್ಧ’ ಪುಸ್ತಕವನ್ನು ಅಂಬೇಡ್ಕರ್‌ಗೆ ಕೊಟ್ಟು, ಜೈನಸಭೆಯೊಂದಕ್ಕೆ ಆಹ್ವಾನಿಸಿ ಹೋದರು. ನಂತರ ರತ್ತು ಬಾಬಾಸಾಹೇಬರ ದಣಿದ ಕಾಲುಗಳನ್ನು ಒತ್ತಿ, ಅವರ ತಲೆಗೆ ಎಣ್ಣೆ ಹಚ್ಚಿದರು. ಹಾಯೆನ್ನಿಸಿದಂತಾಗಿ, ಅಂಬೇಡ್ಕರ್ ಕಂಠದಿಂದ ಮೆಲುವಾಗಿ ಹೊರಟ ‘ಬುದ್ಧಂ ಶರಣಂ ಗಚ್ಛಾಮಿ’ ಪ್ರಾರ್ಥನೆ ಬರಬರುತ್ತಾ ಗಟ್ಟಿಯಾಗಿ ಕೇಳತೊಡಗಿತು. ಅವರ ಬಲಗೈ ಬೆರಳುಗಳು ಸೋಫಾದ ಮೇಲೆ ತಾಳ ಹಾಕುತ್ತಿದ್ದವು. ತಮ್ಮ ಇಚ್ಛೆಯಂತೆ ರತ್ತು ರೇಡಿಯೋಗ್ರಾಂನಲ್ಲಿ ಹಾಕಿದ ‘ಬುದ್ಧಂ ಶರಣಂ ಗಚ್ಛಾಮಿ’ ಪ್ರಾರ್ಥನೆಗೆ ಅಂಬೇಡ್ಕರ್ ದನಿಗೂಡಿಸಿದರು. ಮೇಲೆದ್ದು ಕಪಾಟುಗಳಿಂದ ಹಲವು ಪುಸ್ತಕಗಳನ್ನು ತೆಗೆದುಕೊಂಡು, ಅವನ್ನು ಹಾಸಿಗೆಯ ಪಕ್ಕದ ಮೇಜಿನ ಮೇಲಿಡಲು ರತ್ತುವಿಗೆ ಹೇಳಿದರು.

     

    ಒಂಚೂರು ಊಟ ಮಾಡಿ, ಕೋಲೂರಿಕೊಂಡು ಮೇಲೆದ್ದ ಅಂಬೇಡ್ಕರ್ ಬಾಯಿಂದ ಕಬೀರರ ‘ಚಲ್ ಕಬೀರ್ ತೇರ ಭವಸಾಗರ್ ಡೇರಾ’ ಸಾಲು ತೇಲಿ ಬರುತ್ತಿತ್ತು. ಜೀವನಪಯಣದ ತಾತ್ಕಾಲಿಕತೆಯನ್ನು ಹೇಳುವ ‘ನಡೆ ಕಬೀರಾ ನಿನ್ನ ಭವಸಾಗರವು ಡೇರೆಯಂತೆ…’ಎಂಬ ಹಾಡು ಗುಣುಗುಣಿಸುತ್ತಿರುವಾಗಲೇ ಅವರ ಕಣ್ಣ ರೆಪ್ಪೆಗಳು ದಣಿವಿನಿಂದ ಮುಚ್ಚಿಕೊಳ್ಳತೊಡಗಿದ್ದವು. ಮನೆಗೆ ಹೊರಡುವ ಮುನ್ನ ರತ್ತು ಟೇಬಲ್ ಮೇಲಿದ್ದ ಪುಸ್ತಕಗಳನ್ನು ಸರಿಸಿದ; ಅಂಬೇಡ್ಕರ್ ಕಣ್ತೆರೆದರು. ರಾತ್ರಿ 12 ಗಂಟೆಗೆ ರತ್ತು ಸೈಕಲ್ಲೇರಿ ಬಾಬಾಸಾಹೇಬರ ಮನೆ ‘ರಾಜಗೃಹ’ದ ಗೇಟು ದಾಟುತ್ತಿದ್ದಂತೆ, ಅಡಿಗೆಯ ಸುದಾಮ ರತ್ತುವನ್ನು ಕರೆಯಲು ಓಡೋಡಿ ಬಂದ.

     

    ಮತ್ತೆ ಬಂದ ರತ್ತುವಿಗೆ ಅಂಬೇಡ್ಕರ್ ತಾವು ಬರೆದಿಟ್ಟಿದ್ದ ‘ಬುದ್ಧ ಅಂಡ್ ಹಿಸ್ ಧಮ್ಮ’ ಪುಸ್ತಕದ ಮುನ್ನುಡಿ ಹಾಗೂ ಪ್ರಸ್ತಾವನೆಗಳ ಟೈಪಾದ ಹಾಳೆಗಳನ್ನು, ಪತ್ರಗಳನ್ನು ತರಲು ಹೇಳಿದರು. ಸುದಾಮ ಎಂದಿನಂತೆ ಕಾಫಿ ಫ್ಲಾಸ್ಕ್ ಹಾಗೂ ಸಿಹಿತಿಂಡಿಗಳನ್ನು ತಂದು ಹಾಸಿಗೆಯ ಬದಿಯಲ್ಲಿಟ್ಟ. ರತ್ತು ತಂದ ಹಾಳೆಗಳು, ಪತ್ರಗಳನ್ನು ನೋಡುತ್ತಾ ಅಂಬೇಡ್ಕರ್, ‘ಹೊರಡು. ಬೆಳಗ್ಗೆ ಬಂದು ಇವನ್ನೆಲ್ಲ ತಪ್ಪದೆ ಕಳಿಸಬೇಕು. ಇವನ್ನೆಲ್ಲ ರಾತ್ರಿಯೇ ಓದಿ ಮುಗಿಸುತ್ತೇನೆ’ ಎಂದರು. ಇದು ರತ್ತು ಕೇಳಿಸಿಕೊಂಡ ಅಂಬೇಡ್ಕರ್ ಅವರ ಕೊನೆಯ ಮಾತು. ಆ ರಾತ್ರಿ ಅಲ್ಲಿಂದ ಹೊರಟ ರತ್ತುವಿಗೆ ಬಾಬಾಸಾಹೇಬರ ಸಾವಿನ ಸೂಚನೆ ಕಂಡಿರಲಿಲ್ಲ.

     

    ಈ ವಿವರಗಳೆಲ್ಲ ಬಾಬಾಸಾಹೇಬರ ಪ್ರಿಯ ಶಿಷ್ಯ ನಾನಕ್ ಚಂದ್ ರತ್ತು ಬರೆದ ‘ಲಾಸ್ಟ್ ಫ್ಯೂ ಯಿಯರ್ಸ್ ಆಫ್ ಅಂಬೇಡ್ಕರ್’ ಪುಸ್ತಕದಲ್ಲಿವೆ. ಆ ಕೊನೆಯ ರಾತ್ರಿ-ಬೆಳಗಿನ ನಡುವೆ ಅಂಬೇಡ್ಕರ್ ತಮ್ಮ ಕೊನೆಯ ಕರ್ತವ್ಯವನ್ನು ಮುಗಿಸುವಂತೆ ‘ಬುದ್ಧ ಅಂಡ್ ಹಿಸ್ ಧಮ್ಮ’ ಪುಸ್ತಕಕ್ಕೆ ತಾವು ಬರೆದ ಮುನ್ನುಡಿ, ಪ್ರಸ್ತಾವನೆಗಳ ಮೇಲೂ ಕಣ್ಣಾಡಿಸಿ, ತಿದ್ದಿರಬಹುದು ಎಂದು ಊಹಿಸಬಹುದು. ಪ್ರಸ್ತಾವನೆ ಮುಗಿದಂತಿದೆ. ಅವರ ಅಪೂರ್ಣ ಮುನ್ನುಡಿಯ ಕೆಲವು ಮಾತುಗಳು:

     

    ‘ನೀವು ಯಾಕೆ ಬೌದ್ಧಧರ್ಮದತ್ತ ವಾಲಿದ್ದೀರಿ?’ ಎಂದು ಜನ ಆಗಾಗ್ಗೆ ನನ್ನನ್ನು ಕೇಳುತ್ತಾರೆ. ಇದಕ್ಕೆ ನನ್ನ ಉತ್ತರ: ‘ನನ್ನ ಪ್ರಕಾರ ಬುದ್ಧನ ಧಮ್ಮ ಶ್ರೇಷ್ಠ ಧರ್ಮ. ಬೇರಾವ ಧರ್ಮವನ್ನೂ ಈ ಧಮ್ಮಕ್ಕೆ ಹೋಲಿಸಲಾಗದು. ವಿಜ್ಞಾನ ಗೊತ್ತಿರುವ ಯಾವುದೇ ಮನುಷ್ಯನಿಗೆ ಧರ್ಮ ಬೇಕೆನ್ನಿಸಿದರೆ, ಅವನು ಆರಿಸಿಕೊಳ್ಳುವುದು ಬೌದ್ಧ ಧರ್ಮವನ್ನು ಮಾತ್ರ. ಕಳೆದ ೩೫ ವರ್ಷಗಳಲ್ಲಿ ಎಲ್ಲ ಧರ್ಮಗಳನ್ನೂ ಅಧ್ಯಯನ ಮಾಡಿದ ಮೇಲೆ, ಈ ನಂಬಿಕೆ ಇನ್ನಷ್ಟು ಗಟ್ಟಿಯಾಗಿದೆ.

     

    ‘ನನಗೆ ಬುದ್ಧಿಸಮ್ ಕುರಿತ ಪ್ರೇರಣೆ ಎಲ್ಲಿಂದ ಬಂತು ಎನ್ನುವುದನ್ನು ಹೇಳಹೊರಟರೆ ಅದೇ ಒಂದು ಕತೆಯಾಗುತ್ತದೆ: ನಾನು ಇಂಗ್ಲಿಷ್ ನಾಲ್ಕನೇ ತರಗತಿ ಪಾಸಾದಾಗ ನಮ್ಮ ಸಮುದಾಯದವರು ನನ್ನನ್ನು ಅಭಿನಂದಿಸಲು ಮುಂದಾದರು. ನಮ್ಮ ಸಮುದಾಯದಲ್ಲಿ ಈ ಹಂತಕ್ಕೇರಿದ ಮೊದಲ ಹುಡುಗ ನಾನೆಂದು ಅವರಿಗೆ ಹೆಮ್ಮೆ. ಅಪ್ಪ ಅದೆಲ್ಲ ಬೇಡವೆಂದರು. ಆಗ ನಮ್ಮ ಜನ ಆ ಕಾಲದ ದೊಡ್ಡ ಲೇಖಕರಾದ ಕೇಳುಸ್ಕರ್ ಅವರಿಂದ ಅಪ್ಪನಿಗೆ ಹೇಳಿಸಿದರು. ಆ ಸಭೆಗೆ ಬಂದ ಕೇಳುಸ್ಕರ್ ತಾವು ಬರೆದ ‘ಲೈಫ್ ಆಫ್ ಗೌತಮ ಬುದ್ಧ’ ಪುಸ್ತಕವನ್ನು ನನಗೆ ಕೊಟ್ಟರು. ಆ ಪುಸ್ತಕವನ್ನು ಅಪಾರ ಆಸಕ್ತಿಯಿಂದ ಓದಿದೆ; ಭಾವುಕನಾದೆ, ಪ್ರಭಾವಿತನಾದೆ…

     

    ‘…ನಮ್ಮಪ್ಪ ಯಾಕೆ ನಮಗೆ ಬೌದ್ಧ ಸಾಹಿತ್ಯದ ಪರಿಚಯ ಮಾಡಿಕೊಡಲಿಲ್ಲ ಎಂಬ ಪ್ರಶ್ನೆ ಆಗ ನನ್ನಲ್ಲಿ ಹುಟ್ಟಿತು. ಅಪ್ಪನಿಗೆ ಹೇಳಿದೆ: ‘ಯಾಕೆ ಮಹಾಭಾರತ, ರಾಮಾಯಣಗಳನ್ನೇ ಓದಲು ನಮ್ಮನ್ನು ಒತ್ತಾಯ ಮಾಡುತ್ತಿದ್ದಿರಿ? ಅವು ಬ್ರಾಹ್ಮಣರ, ಕ್ಷತ್ರಿಯರ ಹಿರಿಮೆಯನ್ನು ಒತ್ತಿ ಹೇಳುತ್ತವೆ; ಶೂದ್ರರ, ಅಸ್ಪೃಶ್ಯರ ಹೀನಸ್ಥಾನವನ್ನು ಪ್ರತಿಪಾದಿಸುತ್ತವೆ.’ ಅಪ್ಪನಿಗೆ ನನ್ನ ಮಾತಿನ ಧಾಟಿ ಇಷ್ಟವಾಗಲಿಲ್ಲ; ಆದರೂ ಹೇಳಿದೆ: ‘ಭೀಷ್ಮ, ದ್ರೋಣ, ಕೃಷ್ಣರನ್ನು ನಾನು ಇಷ್ಟಪಡುವುದಿಲ್ಲ. ಭೀಷ್ಮ ಮತ್ತು ದ್ರೋಣರು ಬೂಟಾಟಿಕೆಯ ವ್ಯಕ್ತಿಗಳು. ತಾವು ಹೇಳಿದ್ದಕ್ಕೆ ತದ್ವಿರುದ್ಧವಾದುದನ್ನು ಮಾಡುತ್ತಿದ್ದರು. ಕೃಷ್ಣ ಕಪಟದಲ್ಲಿ ನಂಬಿಕೆ ಇಟ್ಟಿದ್ದ; ರಾಮನು ಶೂರ್ಪನಖಿ ಹಾಗೂ ವಾಲಿ-ಸುಗ್ರೀವ ಪ್ರಕರಣಗಳಲ್ಲಿ ನಡೆದುಕೊಂಡ ರೀತಿ, ಸೀತೆಯನ್ನು ಕುರಿತ ಅವನ ಕ್ರೂರ ವರ್ತನೆ ನನಗೆ ಇಷ್ಟವಾಗುವುದಿಲ್ಲ.’

    ಅಪ್ಪ ಮಾತಾಡಲಿಲ್ಲ. ಸುಮ್ಮನಿದ್ದರು. ಮನೆಯಲ್ಲಿ ಒಂದು ದಂಗೆಯೆದ್ದಿದೆ ಎಂಬುದು ಅವರ ಅರಿವಿಗೆ ಬರತೊಡಗಿತ್ತು…

     

    ‘ನಾನು ಬುದ್ಧನೆಡೆಗೆ ತಿರುಗಿದ್ದು ಹೀಗೆ. ನಾನು ಖಾಲಿ ತಲೆಯಲ್ಲಿ ಬುದ್ಧನೆಡೆಗೆ ತಿರುಗಲಿಲ್ಲ. ಬುದ್ಧನ ಸಾಹಿತ್ಯ ಓದುತ್ತಾ, ಇತರ ಧರ್ಮಗಳಿಗೂ ಬೌದ್ಧ ಧರ್ಮಕ್ಕೂ ಇರುವ ಹೋಲಿಕೆ, ವ್ಯತ್ಯಾಸಗಳನ್ನು ಗಮನಿಸಿದೆ. ಇದು ಬುದ್ಧ ಮತ್ತು ಅವನ ಧಮ್ಮದ ಬಗೆಗಿನ ನನ್ನ ಆಸಕ್ತಿಯ ಮೂಲ. ‘ಬುದ್ಧ ಅಂಡ್ ಹಿಸ್ ಧಮ್ಮ’ ಪುಸ್ತಕ ಬರೆಯಲು ಶುರು ಮಾಡಿದ ಕಾಲಕ್ಕೆ ನನ್ನ ಆರೋಗ್ಯ ಕೆಡತೊಡಗಿತ್ತು; ಈಗಲೂ ಸುಧಾರಿಸಿಲ್ಲ. ಕಳೆದ ಐದು ವರ್ಷಗಳಲ್ಲಿ ನನ್ನ ಆರೋಗ್ಯ ಹಲವು ಏರಿಳಿತಗಳನ್ನು ಕಂಡಿದೆ. ಎಷ್ಟೋ ಸಲ ನನ್ನ ಆರೋಗ್ಯ ಎಷ್ಟು ಹದಗೆಟ್ಟಿತೆಂದರೆ, ಡಾಕ್ಟರು ನನ್ನನ್ನು ‘ನಂದಿಹೋಗುತ್ತಿರುವ ಜ್ವಾಲೆ’ ಎಂದಿದ್ದರು. ಆದರೆ ನಂದಿಹೋಗುತ್ತಿರುವ ಜ್ವಾಲೆಗೆ ಮತ್ತೆ ಜೀವ ತುಂಬಿದ್ದು ನನ್ನ ಪತ್ನಿ ಶಾರದಾ ಮತ್ತು ಡಾ. ಮಲ್ವಂಕರ್ ಅವರ ವೈದ್ಯಕೀಯ. ಈ ಪುಸ್ತಕವನ್ನು ಮುಗಿಸಲು ನೆರವಾದವರು ಅವರಿಬ್ಬರೇ.’

     

    ಅಂಬೇಡ್ಕರ್ ತಮ್ಮ ಕೊನೆಯ ರಾತ್ರಿ ತಿದ್ದಿರಬಹುದಾದ ಈ ಮುನ್ನುಡಿಯ ಜೊತೆಗೇ ಪುಸ್ತಕದ ಪ್ರಸ್ತಾವನೆಯೂ ಇತ್ತು. ಈ ಪ್ರಸ್ತಾವನೆಯಲ್ಲಿ ಬೌದ್ಧ ಧರ್ಮವನ್ನು ಆರ್ಯರ ಸುಳ್ಳುಗಳಿಂದ ಬಿಡಿಸುವ ತಮ್ಮ ಬೌದ್ಧಿಕ ಪ್ರಯತ್ನ ಕುರಿತು ಹೇಳುತ್ತಾ, ಕೊನೆಗೆ ಬರೆಯುತ್ತಾರೆ: ‘ನಾನು ಈ ಪುಸ್ತಕದಲ್ಲಿ ಎತ್ತಿರುವ ಪ್ರಶ್ನೆಗಳು ಓದುಗರನ್ನು ಆ ಪ್ರಶ್ನೆಗಳಿಗೆ ಉತ್ತರ ಹುಡುಕುವಂತೆ ಪ್ರೇರೇಪಿಸುತ್ತವೆಂದು ನಿರೀಕ್ಷಿಸುವೆ.’

     

    ಬಾಬಾಸಾಹೇಬರ ನಿರೀಕ್ಷೆ ಒಂದರ್ಥದಲ್ಲಿ ಸಫಲವಾಗಿದೆ. ‘ಬುದ್ಧ ಅಂಡ್ ಹಿಸ್ ಧಮ್ಮ’ ಪುಸ್ತಕ ಇಂಡಿಯಾದಲ್ಲಷ್ಟೇ ಅಲ್ಲದೆ, ಜಗತ್ತಿನಾದ್ಯಂತ ಲಕ್ಷಾಂತರ ಓದುಗರು ಈ ಪ್ರಶ್ನೆಗಳಿಗೆ ಉತ್ತರ ಹುಡುಕುವಂತೆ ಪ್ರೇರೇಪಿಸಿದೆ. ಬಾಬಾಸಾಹೇಬರ ಹದಿಹರೆಯದ ಬೌದ್ಧ ಧರ್ಮದ ಹುಡುಕಾಟ ಹಾಗೂ ಬೌದ್ಧ ಪಯಣ 1956ರ ಡಿಸೆಂಬರ್ 6ರ ರಾತ್ರಿ ಅವರು ಕೊನೆಯ ಉಸಿರೆಳೆಯುವವರೆಗೂ ಮುಂದುವರಿದೇ ಇತ್ತು. ಬದುಕಿನಲ್ಲಿ ಕೈಗೆತ್ತಿಕೊಂಡ ಮಹತ್ವದ ಕೆಲಸವೊಂದನ್ನು ಮುಗಿಸುವ ಸಂಕಲ್ಪ ಅವರ ಕೊನೆಯ ಗಳಿಗೆಯವರೆಗೂ ಜೀವಂತವಾಗಿತ್ತು. ಬಾಬಾಸಾಹೇಬರ ಈ ಅನನ್ಯ ಬೌದ್ಧಿಕ ಹೊಣೆ ಹಾಗೂ ಬದ್ಧತೆ ನಮ್ಮ ಅನುದಿನದ ಸ್ಫೂರ್ತಿಯಾಗಿರಲಿ. ಬಾಬಾಸಾಹೇಬರ ಕೊನೆಯ ಸಂದೇಶ ನಮ್ಮ ಕರ್ತವ್ಯಗಳ ದಿಕ್ಕನ್ನು ರೂಪಿಸಬೇಕಿದೆ

     

    ಸಂಗ್ರಹ ; ಕೃಪೆ – ನಟರಾಜ್ ಸಾಮಾಜಿಕ ಜಾಲತಾಣ

  • ಮೌಢ್ಯ ವಿರೋಧಿ ದಿನದ ಕಾರ್ಯಕ್ರಮ : ಅಂಬೇಡ್ಕರ್ ರವರ 67ನೇ ಪರಿನಿಬ್ಬಾಣ ದಿನದ ವಿಶೇಷ ಆಚರಣೆ

    ದೊಡ್ಡಬಳ್ಳಾಪುರ :ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ 67 ನೇ ಪರಿನಿಬ್ಬಾಣ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ವತಿಯಿಂದ ಡಿಸೆಂಬರ್ 6ರಂದು ಮೌಢ್ಯ ವಿರೋಧಿ ದಿನದ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ರೋಜಿಪುರ ಸ್ಮಶಾನದಲ್ಲಿ ಬೆಳ್ಳಿಗೆ 11: 00 ಗಂಟೆಗೆ ಹಮ್ಮಿಕೊಳ್ಳಲಾಗಿದೆ

     

    ಈ ಕುರಿತು ಕಾರ್ಯಕ್ರಮದ ಆಯೋಜಕರಾದ ರಾಜು ಸಣ್ಣಕ್ಕಿ ಮಾತನಾಡಿ ಮೌಢ್ಯಗಳ ವಿರುದ್ಧ ಸಮರ ಸಾರಿದ್ದ ಡಾ ಅಂಬೇಡ್ಕರ್ ರವರ ಮಹಾ ಪರಿನಿಬ್ಬಾಣ ದಿನದಂದು ಸಮಾಜದ ಬದಲಾವಣೆಗಾಗಿ ಪ್ರಗತಿಪರ ಚಿಂತಕರು ಸಾಮಾಜಿಕ ಕಾರ್ಯಕರ್ತರು ದಲಿತ ಮುಖಂಡರು ಸೇರಿ ಆಚರಿಸುವ ಕಾರ್ಯಕ್ರಮ ಇದಾಗಿದ್ದು ಸಮಾಜದಲ್ಲಿ ಇಂದಿಗೂ ಆಚರಣೆಯಲ್ಲಿ ಇರುವ ಮೌಢ್ಯಗಳು ತೋಲಗಲಿ ಎಂಬುದೇ ಮುಖ್ಯ ಉದ್ದೇಶವಾಗಿದೆ ವಿದ್ಯಾವಂತ ಮೌಢ್ಯರಹಿತ ಸಮಾಜದ ನಿರ್ಮಾಣ ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು