Blog

  • ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

    ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು.

     

    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಕೋದಂಡರಾಮ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು. ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ದೆಹಲಿ, ಮೈಸೂರು ಮುಂತಾದ ಕಡೆಯಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.

    ಯುವ ಸಂಸತ್, ರಸಪ್ರಶ್ನೆ, ರಾಷ್ಟೀಯ ಮತದಾರ ದಿನಾಚರಣೆ ಮುಂತಾದ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ವಿವೇಕರತ್ನ ಮುಂತಾದ ಪ್ರಶಸ್ತಿಗಳನ್ನು ನೀಡಿ ಅಭಿನಂದಿವೆ. ಇವರ ಸೇವೆ ಮತ್ತು ಸಾಧನೆ ಹೀಗೆ ಮುಂದುವರಿಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶಿಸುತ್ತದೆ ಎಂದರು.

     

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

  • ದೇವಾಂಗ ಮಂಡಳಿಯ 2025-28 ನೇ ಸಾಲಿನ ಚುನಾವಣೆ ಫಲಿತಾಂಶ ಪ್ರಕಟ : ಮಂಡಳಿ ಅಧ್ಯಕ್ಷರಾಗಿ ಎಂ. ಜಿ. ಶ್ರೀನಿವಾಸ್ ಆಯ್ಕೆ

    ದೊಡ್ಡಬಳ್ಳಾಪುರ : ತೀವ್ರ ಕುತೂಹಲ ಕೆರಳಿಸಿದ್ದ ದೇವಾಂಗ ಸಮುದಾಯದ ಶಕ್ತಿ ಕೇಂದ್ರ ದೇವಾಂಗ ಮಂಡಳಿಯ 2025-28ರ ಸಾಲಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ನಗರಸಭಾ ಸದಸ್ಯ ಎಂ. ಜಿ. ಶ್ರೀನಿವಾಸ್ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದೆ ಅವರ ಬೆಂಬಲಿತ ತಂಡ 16ಸ್ಥಾನ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದು. ಪ್ರತಿಸ್ಪರ್ಧಿ ಕೆ. ಜಿ. ದಿನೇಶ್ ತಂಡದ ನಾಲ್ವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

     

    ಗೆಲುವು ಸಾದಿಸಿದ ಅಭ್ಯರ್ಥಿಗಳ ವಿವರ 

    ಅಧ್ಯಕ್ಷ ಎಂ ಜಿ ಶ್ರೀನಿವಾಸ್ ಉಪಾಧ್ಯಕ್ಷ ಬಿ ಜಿ ಅಮರಾನಾಥ್,ಚಿಕ್ಕಣ್ಣ ಎನ್. ಎಸ್,ಗೌರವ ಕಾರ್ಯದರ್ಶಿ ಅಮರ್ ನಾಥ್ ಎಂ. ಜಿ,ಸಹ ಕಾರ್ಯದರ್ಶಿನಟರಾಜ್ ಎ.ಯೋಗ ,ಖಜಾಂಚಿ ಅಖಿಲೇಶ್ ಹೆಚ್. ವಿ, ನಿರ್ದೇಶಕರಾಗಿಮಂಜುನಾಥ್ ಕೆ. ಎಸ್,ಮಹೇಶ್ ಎಲ್,ವತ್ಸಲಾ ಎಸ್,ಕುಮಾರ್ ಎನ್. ಜಿ,ಜನಾರ್ದನ್ ಕೆ. ಎನ್,ರಾಘವೇಂದ್ರ ವಿ. ಎಸ್,ಪ್ರಭಾಕರ್ ಗೆದರೆ,ನರೇಂದ್ರ ಕೆ. ಎಸ್,ನಟರಾಜ್ ಎನ್. ಎಸ್,ಲಕ್ಷ್ಮಿಕಾಂತ್ ಡಿ. ಎ,ನಿರ್ಮಲ ವಿ,ಪ್ರಿಯಾಂಕಾ ಬಿ. ಪಿ,ಗೋಪಾಲ ಕೃಷ್ಣ ಪಿ. ಹೆಚ್,ಶಿವಕುಮಾರ್ ಜಿ. ಸಿ. ಜಯಗಳಿಸಿದ್ದಾರೆ.

    ದೇವಾಂಗ ಮಂಡಳಿ ಚುನಾವಣೆಯಲ್ಲಿ ನನ್ನನ್ನು ಪುನರಾಯ್ಕೆ ಮಾಡಿ ನಮ್ಮ ತಂಡವನ್ನು ಆಯ್ಕೆ ಮಾಡುವ ಮೂಲಕ ದೇವಾಂಗ ಸಮುದಾಯ ನಮಗೆ ಹೆಚ್ಚಿನ ಬೆಂಬಲ ನೀಡಿದೆ. ಸಮುದಾಯ ನೀಡಿದ ಸಹಕಾರಕ್ಕೆ ನಾವುಗಳೆಲ್ಲರೂ ಅಭಾರಿಗಳಾಗಿದ್ದೇವೆ. ಮುಂಬರುವ ದಿನಗಳಲ್ಲಿ ಧಾರ್ಮಿಕ, ಸಾಮಾಜಿಕ ಸೇರಿದಂತೆ ರಚನಾತ್ಮಕ ಕಾರ್ಯಗಳ ಮೂಲಕ ಸಮುದಾಯದ ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇವಾಂಗ ಸಮುದಾಯದ ಪ್ರಗತಿಗೆ ದುಡಿಯುವ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸುತ್ತೇನೆ. ಮತ್ತೊಮ್ಮೆ ನಮ್ಮ ಬೆಂಬಲಕ್ಕೆ ಸಹಕರಿಸಿದ ದೇವಾಂಗ ಸಮಾಜದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ದೇವಾಂಗ ಮಂಡಲಿ ಅಧ್ಯಕ್ಷ ಶ್ರೀನಿವಾಸ್ ಎಂ. ಜಿ. ತಿಳಿಸಿದ್ದಾರೆ.

     

  • ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕು – ಶಾಸಕ ಧೀರಜ್ ಮುನಿರಾಜು

    ದೇಶ ಪ್ರಗತಿಯಾಗಬೇಕಾದರೆ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು ಇಂತಹ ಶೀಕ್ಷಣವನ್ನು ನೀಡುವ ಶಿಕ್ಷಕರು ದೇಶದ ಅಭಿವೃದ್ದಿಯ ಚಿಂತನೆ ಹೊಂದುವುದರೊ0ದಿಗೆ ಮಕ್ಕಳನ್ನು ಸಂಸ್ಕಾರವoತರನ್ನಾಗಿ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

    ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಅಮೇರಿಕಾದಂತಹ ದೇಶಗಳು ಮುಂದುವರೆದಿವೆ ಎಂದರೆ ಅಲ್ಲಿನ ಶಿಕ್ಷಣ ಬಹು ಮುಖ್ಯ ಪಾತ್ರ ವಹಿಸುತ್ತದೆ. ನಮ್ಮ ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಹತ್ತನೇ ಒಂದು ಭಾಗ ಮೀಸಲಿಡಲಾಗುತ್ತಿದ್ದು, ಶಿಕ್ಷಣಕ್ಕೆ ಇನ್ನು ಹೆಚ್ಚಿನ ಅನುದಾನ ನೀಡಬೇಕಿದೆ ಎಂದರು.

     

    ಅಮೇರಿಕಾ ಜನಸಂಖ್ಯೆಯ ಒಂದೂವರೆ ಪಟ್ಟು ನಮ್ಮ ದೇಶದಲ್ಲಿ ಮೊಬೈಲ್ ಹಾಗೂ ಇಂಟರ್‌ನೆಟ್ ಬಳಸುತ್ತಿದ್ದಾರೆ. ದೇಶಕ್ಕೆ ಸೈನಿಕರು ಬೇಕು ಆದರೆ ಕುಟುಂಬದಲ್ಲಿ ಒಬ್ಬ ಸೈನಿಕರನ್ನು ಕಳಿಸಲು ಬಹಳಷ್ಟು ಜನ ಮುಂದೆ ಬರುವುದಿಲ್ಲ. ಇಂದು ಸಮಾಜದಲ್ಲಿ ಸ್ವಾರ್ಥಕ್ಕಾಗಿ ದುಡಿಯುವ ಸಂಖ್ಯೆ ಹೆಚ್ಚಾಗಿದೆ. ಭ್ರಷ್ಟಾಚಾರ ಸಮಾಜದ ಕೆಡಕುಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಕಾನೂನಿನ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕಿದೆ. ಸಮಾಜಮುಖಿ ಚಿಂತನೆ ದೇಶಪ್ರೇಮಕ್ಕೆ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಾದರಿಯಾಗಿದ್ದು ಅವರ ಆದರ್ಶಗಳು ಪ್ರೇರಣೆಯಾಗಬೇಕು. ಮಕ್ಕಳನ್ನು ಪ್ರಜ್ಞಾವಂತರನ್ನಾಗಿಸುವಲ್ಲಿ ಶಿಕ್ಷಕರ ಮಾತ್ರ ಮಹತ್ವದ್ದಾಗಿದೆ ಎಂದರು.

     

    ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ಆ್ಯಪ್ ಸಿದ್ದ 

    ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲಾಗುವುದು. ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ಆ್ಯಪ್ ತಯಾರು ಮಾಡಲಾಗಿದ್ದು, ಇದರ ಸದುಪಯೋಗ ಪಡೆಯಬೇಕಿದೆ. ಮುಂದೆ ನವೆಂಬರ್ ೧೪ರಂದು ಮಕ್ಕಳ ದಿನಾಚರಣೆಯನ್ನು ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಮಾಡಲು ಚಿಂತನೆ ನಡೆಸಿದ್ದು, ಶಿಕ್ಷಕರು ಈ ಕಾರ್ಯಕ್ರಮದ ನೇತೃತ್ವ ವಹಿಸಬೇಕು ಎಂದರು.

    ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಟ್ಟಡ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳಿದ್ದರೂ ಶಿಕ್ಷಕರು ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿರುವ ಮಕ್ಕಳು ಮುಂದೆ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಅಕಾರಿಗಳಾಗಿ ರೂಪುಗೊಂಡಿದ್ದಾರೆ. ಶಿಕ್ಷಕರ ವೃತ್ತಿ ಸಮಾಜದಲ್ಲಿ ಶ್ರೇಷ್ಟ ವೃತ್ತಿಯಾಗಿದ್ದು, ಇದರ ಘನತೆಯನ್ನು ಶಿಕ್ಷಕರು ಎತ್ತಿ ಹಿಡಿಯಬೇಕಿದೆ ಎಂದರು.

     

    ಸಮಾರಂಭದಲ್ಲಿ ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಭಾರತ ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ ,ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ. ಎಂ.ಹನುಮಂತರಾಯಪ್ಪ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ (ಆಡಳಿತ) ಪಿ.ಬೈಲಾಂಜಿನಪ್ಪ, ಕ್ಷೇತ್ರ ಶಿಕ್ಷಣಾಕಾರಿ ಶಂಕರಯ್ಯ, ಟಿ.ಎಸ್, ಸಮನ್ವಯಾಕಾರಿ ಜಿ.ಆರ್.ಹನುಮಂತರಾಯಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ದನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಾಸದೇವಮೂರ್ತಿ, ತಾಲೂಕು ಅಧ್ಯಕ್ಷ ಬಸವಲಿಂಗಯ್ಯ, ಕರ‍್ಯದರ್ಶಿ ಎ.ವಿ.ಚಂದ್ರಪ್ಪ, ಪ್ರಾಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಕುಮಾರ್.ಆರ್, ಕರ‍್ಯದರ್ಶಿ ಸಿದ್ದಲಿಂಗಸ್ವಾಮಿ, ನಿವೃತ್ತ ಅಧಿಕಾರಿ ಪದ್ಮರಾಜ್ ಸೇರಿದಂತೆ ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು, ತಾಲೂಕಿನ ಶಿಕ್ಷಕರು ಭಾಗವಹಿಸಿದ್ದರು.

  • ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

    ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು

     

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಕ್ರೀಡಾ ಯೋಜನೆಗಳನ್ನು ರೂಪಿಸಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಏನದೇ ಆಸಕ್ತಿ ಯಿಂದ ಭಾಗವಹಿಸುವುದು ಮುಖ್ಯ ಹಾಗಾಗಿ ಕ್ರೀಡಾ ಮನೋಭಾವನೆಯಿಂದ ಆಟವಾಡಿ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ನಡೆಯುವ ದಸರಾ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆ ಹಾಗೂ ತಾಲ್ಲೂಕಿಗೆ ಉತ್ತಮ ಹೆಸರು ತರಬೇಕು ಎಂದರು.

     

    ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ಮಾತಾನಾಡಿ ಮಕ್ಕಳ ಪ್ರತಿಭೆ ಗುರುತಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿಜೇತರಾದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

    ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣವನ್ನು ಅಭಿವೃದ್ಢಿ ಕುರಿತು ಸಚಿವರಲ್ಲಿ ಮನವಿ 

    ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಹಣ ಬಿಡುಗಡೆಯಾಗಿದ್ದು ಕೂಡಲೇ ಕ್ರೀಡಾಂಗಣದ ಗುದ್ದಲಿ ಪೂಜೆ ನೆರವೇರಲಿದೆ ಎಂದರು. ಮತ್ತು ತಾಲ್ಲೂಕಿನ ಹೃದಯ ಭಾಗದಲ್ಲಿರು ಭಗತ್ ಸಿಂಗ್ ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಢಿ ಪಡಿಸುವಂತೆ ಸಚಿವರಿಗೆ ತಿಳಿಸಿದರು.

    ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರು ಸುಮಿತ್ರ ಆನಂದ್, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ, ಹಾಗೂ ಸದಸ್ಯರುಗಳು, ತಿರ್ಪುಗಾರರು, ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.

  • ಸೆ.8 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

    ವಿಜಯಮಿತ್ರ ಸುದ್ದಿ (ಸೆ. 05) : 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ 08 ರಂದು ಬೆಳಿಗ್ಗೆ 10:30ಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

     

    ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ವಹಿಸಿಕೊಳ್ಳಲಿದ್ದಾರೆ.

     

    5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜ್, ರಾಮೋಜಿಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿಶ್ವನಾಥರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರು ಸುಮಿತ್ರ ಆನಂದ್, ಉಪಾಧ್ಯಕ್ಷರು ಮಲ್ಲೇಶ್ ಬಾಬು, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ ಜಾಫರ್ ಸೇರಿದಂತೆ ಹಲವು ಗಣ್ಯರು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

     

    ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ, ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲೆಯ ನಗರಸಭೆ ಮತ್ತು ಪುರಸಭೆಯ ಸದಸ್ಯರು, ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲ ನಾಮ ನಿರ್ದೇಶಿತ ಸದಸ್ಯರು, ಜಿಲ್ಲೆಯ ಮುಖಂಡರುಗಳು, ಹಿರಿಯ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟ ಶಾಸಕ ಧೀರಜ್ ಮುನಿರಾಜು

    ದೊಡ್ಡಬಳ್ಳಾಪುರ :ನಗರದ ತೇರಿನ ಬೀದಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಭವ್ಯವಾದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಪೂರ್ಣವಾಗದೆ ಅರ್ಧಕ್ಕೆ ನಿಂತಿದ್ದು. ತಾಲ್ಲೂಕಿನ ನಾಯಕ ಸಮುದಾಯ ಸೇರಿದಂತೆ ಬಡ ಜನರಿಗೆ ಯಾವುದೇ ಶುಭ ಸಮಾರಂಭಗಳನ್ನು ನಡೆಸಲು ಜಾಗದ ಕೊರತೆ ಉಂಟಾಗಿದೆ.

     

    ಹೌದು ನಾಯಕ ಸಮಾಜದ ಆಶಯದಂತೆ ಭವನ ನಿರ್ಮಾಣಕ್ಕೆ ಒಂದು ಎಕರೆ ಜಮೀನು ಮತ್ತು ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಯಾಗಿ ಕಟ್ಟಡಕ್ಕೆ ಮೂರು ವರ್ಷಗಳ ಹಿಂದೆ ಶಂಕುಸ್ಥಾಪನೆ ಮಾಡಲಾಗಿತ್ತು. ಇದೀಗ ಕಟ್ಟಡದ ಅಂತ್ಯದಲ್ಲಿ ಪ್ಲಾಸ್ಟಿಂಗ್, ಸುಣ್ಣಬಣ್ಣ, ಟೈಲ್ಸ್ ಕೆಲಸ ಮಾಡಲು ಹಣವಿಲ್ಲದೆ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ

    ಒಂದು ಎಕರೆ ಜಮೀನು, ಒಂದೂವರೆ ಕೋಟಿ ಅನುದಾನ:

    ನಾಯಕ ಸಮಾಜದ ಆರಾಧ್ಯ ಗುರು ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಿಸಬೇಕೆಂಬುದು ಸಮಾಜದ ಬೇಡಿಕೆಯಾಗಿತ್ತು. ಮಾಜಿ ಶಾಸಕರ ಅವಧಿಯಲ್ಲಿ ನಗರದ ತೇರಿನ ಬೀದಿ ವೃತ್ತದ ಬಳಿ ತಾಲ್ಲೂಕು ಆಡಳಿತದಿಂದ ಒಂದು ಎಕರೆ ಜಮೀನು ಗುರುತಿಸಿ, ಕಟ್ಟಡ ನಿರ್ಮಾಣಕ್ಕೆ ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಯಾಗಿ ಗುದ್ದಲಿಪೂಜೆ ನೆರೆವೇರಿಸಿ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಆರಂಭದಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಸಮುದಾಯ ಭವನ ಆದಷ್ಟು ಬೇಗನೆ ಪೂರ್ಣಗೊಂಡು ಲೋಕಾರ್ಪಣೆ ಯಾಗುತ್ತದೆ ಎನ್ನುವ ನಿರೀಕ್ಷೆಯನ್ನು ಜನರು ಹೊಂದಿದ್ದರು. ಆದರೆ ಕಾಮಗಾರಿ ಮಾತ್ರ ಅರ್ಧಕ್ಕೆ ನಿಂತು ಕಳೆದ ಮೂರು ವರ್ಷದಿಂದ ಕಾಮಗಾರಿ ಸ್ಥಗಿತವಾಗಿದೆ.

     

     

    ಈಗ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೇ ಇರುವ ಪರಿಣಾಮವಾಗಿ ಕಟ್ಟಡ ತನ್ನ ಅಸ್ತಿತ್ವ ಕಳೆದುಕೊಳ್ಳುವತ್ತ ಸಾಗಿದೆ. ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಭವನದ ಸುತ್ತಲೂ ನಾನಾ ಗಿಡಗಂಟಿಗಳು ಬೆಳೆದು ನಿಂತು ಹಾವು ಚೇಳುಗಳ ಆವಾಸಸ್ಥಾನವಾಗಿದೆ. ಅಲ್ಲದೆ ಪುಂಡ ಪೋಕರಿಗಳಿಗೆ, ಮದ್ಯಪಾನ ಮಾಡಲು ಅಕ್ರಮ ಚಟುವಟಿಕೆ, ಮಲ ಮೂತ್ರ ವಿಸರ್ಜನೆ ಮಾಡುವ ಅಡ್ಡೆಯಾಗಿ ಪರಿವರ್ತನೆಯಾಗಿದೆ. ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಮಗಾರಿ ಆರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

     

    ಕಾಮಗಾರಿ ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು – ಶಾಸಕ ಧೀರಜ್ ಮುನಿರಾಜು

    ಶಾಸಕ ಧೀರಜ್ ಮುನಿರಾಜು ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಾಲ್ಮೀಕ ಭವನ ವೀಕ್ಷಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಚಾಟಿ ಬೀಸಿದ್ದಾರೆ. ಭವನಕ್ಕೆ ಸುರಕ್ಷತೆ ಇಲ್ಲದೆ ಪುಂಡಪೋಕರಿಗಳ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿರುವುದನ್ನ ಕಂಡು ಗುತ್ತಿಗೆದಾರ ನಿರ್ಮಿತಿ ಕೇಂದ್ರದವರಿಗೆ ಕ್ಲಾಸ್ ತೆಗೆದುಕೊಂಡು, ಗಿಡಗಂಟಿ ತೆರವು, ಕಟ್ಟಡ ಸಂಪೂರ್ಣ ಸ್ವಚ್ಚಗೊಳಿಸಿ ರಸ್ತೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. 

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಪರಿಶಿಷ್ಟ ವರ್ಗದವರಿಗೆ ಸಿಗುವ ರೂ. 24 ಲಕ್ಷವನ್ನು ವಾಲ್ಮೀಕಿ ಭವನಕ್ಕೆ ನೀಡಲಾಗುವುದು. ನಗರಸಭೆಯಿಂದಲೂ ಅನುದಾನ ಒದಗಿಸಲು ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರಿಗೆ ತಿಳಿಸಿದ್ದೇನೆ. ಕಟ್ಟಡದ ಸುರಕ್ಷತೆ, ಸ್ವಚ್ಚತೆಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಮತ್ತೊಮ್ಮೆ ಪೂಜೆ ಮಾಡಿ ಕಾಮಗಾರಿ ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.

     

     

    ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಉಮಾಪತಿ ಮಾತನಾಡಿ ಈ ಬಗ್ಗೆ ಗಮನಕ್ಕೆ ಬಂದಿದೆ. ಸರ್ಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅದಷ್ಟು ಶೀಘ್ರವಾಗಿ ಕಟ್ಟಡ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು.

     

    ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್,ಶಿವು, ಪೌರಾಯುಕ್ತ ಕಾರ್ತಿಕೇಶ್ವರ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಉಮಾಪತಿ ಇದ್ದರು.

  • ಪತ್ರಿಕಾ ವಿತರಕರ ದಿನಾಚರಣೆ : ಪತ್ರಿಕಾ ವಿತರಕರಿಗೆ ಯಾವುದೇ ಸರ್ಕಾರಿ ಸವಲತ್ತುಗಳು ದೊರೆತ್ತಿಲ್ಲ – ಪ್ರೊ. ಕೆ ಆರ್ ರವಿಕಿರಣ್

    ದೊಡ್ಡಬಳ್ಳಾಪುರ (ಸೆ. 04) : ಈ ಹಿಂದೆ ಪತ್ರಿಕೆಗಳಿಗೆ ದೊಡ್ಡ ಬೇಡಿಕೆಯಿತ್ತು. ಆದರೆ ಈಗ ಬೇಡಿಕೆ ಕುಸಿತವಾಗಿದೆ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗಿದ್ದರೂ ಕೂಡ ಓದುಗರ ಸಂಖ್ಯೆ ಹೆಚ್ಚಳವಾಗಿಲ್ಲ. ಕಾಲ ಬದಲಾದಂತೆ ಪತ್ರಿಕಾ ವಿತರಣೆಗೂ ದೊಡ್ಡ ಹೊಡೆತ ಬಿದ್ದಿದೆ ಎಂದು ಆರ್‌.ಎಲ್ ಜಾಲಪ್ಪ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಪ್ರೊ.ಕೆ ಆರ್ ರವಿಕಿರಣ್ ತಿಳಿಸಿದರು.

    ನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ತಾಲೂಕು ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ದಿ ಸಂಘ ಇವರ ಆಶ್ರಯದಲ್ಲಿ ನಡೆದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಅನೇಕ ಸವಾಲುಗಳನ್ನು ಎದುರಿಸಿ ಪತ್ರಿಕೆಗಳ ವಿತರಣೆ ಮಾಡುವ ಕಾರ್ಯದಲ್ಲಿ ನಿರತರಾಗಿರುವ ಪತ್ರಿಕಾ ವಿತರಕರಿಗೆ ಸರ್ಕಾರಿ ಸೌಲಭ್ಯ ಸಿಗುವಂತಗಬೇಕು.ಕಾಲಕ್ರಮೇಣ ಸುದ್ದಿ ಪತ್ರಿಕೆಗಳ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಇದರ ಪರಿಣಾಮ ನೇರವಾಗಿ ಪತ್ರಿಕಾ ವಿತರಕರ ಮೇಲೆ ಬೀಳಲಿದೆ. ಪತ್ರಿಕಾ ವಿತರಕರು ಯಾವುದೇ ರಜೆಯಿಲ್ಲದೆ, ಸೌಲಭ್ಯಗಳಿಲ್ಲದೇ, ಪ್ರತಿನಿತ್ಯ ಪತ್ರಿಕೆಗಳನ್ನು ಓದುಗರಿಗೆ ತಲುಪಿಸುವ ಕೆಲಸ ಮಾಡುತ್ತಾರೆ. ಇವರಿಗೆ ರಜೆಯೇ ಇಲ್ಲ. ಜೀವನದ ಭದ್ರತೆ ವಿಚಾರದಲ್ಲಿ ಏನು ಇಲ್ಲ. ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಯಾವುದೇ ಸವಲತ್ತುಗಳು ದೊರೆತ್ತಿಲ್ಲ. ಪತ್ರಿಕಾ ವಿತರಕರಿಗೆ ನಿವೃತ್ತಿ ನಂತರ ಪಿಂಚಣಿ ವ್ಯವಸ್ಥೆ ಜಾರಿ ತರಲು ಮನವಿ ಸಲ್ಲಿಸಲಾಗಿದೆ. ಅದರ ಬಗ್ಗೆ ಈಗಾಗಲೇ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎಂದರು.

     

     

    ತಾಲೂಕು ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ರವೀಂದ್ರ ಮಾತನಾಡಿ, ೨೦೦೬-೭ರಲ್ಲಿ ವಿತರಕರ ಸಂಘ ಸ್ಥಾಪನೆ ಮಾಡಲಾಯಿತು. ರಾಜ್ಯ ಒಕ್ಕೂಟದಿಂದ ೫ ನೇ ಸಮ್ಮೇಳನ ಮಾಡುವ ಮೂಲಕ ಸರಕಾರವನ್ನು ಮುಟ್ಟುವ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರದಿಂದ ಪತ್ರಿಕಾ ವಿತರಕರಿಗೆ ಇ ಶ್ರಮ್ ಕಾರ್ಡ್ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಕಾರ್ಡ್ಗಳನ್ನು ಪಡೆಯುವ ಮೂಲಕ ಸರ್ಕಾರಿ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು . ವಿತರಕರ ಸೌಲಭ್ಯಗಳನ್ನು ಪಡೆಯುವ ಕುರಿತು ರಾಜ್ಯ ಮಟ್ಟದಲ್ಲಿ ನಡೆಯುವ ಹೋರಾಟದಲ್ಲಿ ಕೈಜೋಡಿಸಿ ಕೆಲಸ ಮಾಡಬೇಕು ಎಂದರು.

    ಈ ವೇಳೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್ ಡಿ ಉಪ್ಪಾರ, ವಿತರಕರಾದ ರಾಘವೇಂದ್ರ, ದೇವಿನಾಥ್ ಹೆಚ್.ಎ, ಮೂರ್ತಿ ಆರ್, ರಮೇಶ್ ಆರ್, ಗಂಗರಾಜು, ಶಿವರಾಜು, ಚೇತನ್, ನವೀನ್ ಸೇರಿದಂತೆ ಅನೇಕರು ಹಾಜರಿದ್ದರು.

     

     

  • ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವಂತಿಲ್ಲ – ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ

    ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಸಾಧಿಕ್ ಪಾಷಾ ತಿಳಿಸಿದ್ದಾರೆ.

     

    ಈ ಕುರಿತು ಮಾಹಿತಿ ನೀಡಿರುವ ಅವರು ಈ ಹಿಂದೆ ಗೌರಿ ಗಣೇಶ ಹಬ್ಬದಲ್ಲಿ ರಾಜ್ಯ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಾಲೂಕಿನಾದ್ಯಂತ ಡಿಜೆ ನಿಷೇಧಿಸಿ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು ಅಂತೆಯೇ ನಾಳೆ ಸೆಪ್ಟೆಂಬರ್ 5ರಂದು ನಡೆಯಲಿರುವ ಈದ್ ಮಿಲಾದ್ ಹಬ್ಬದಲ್ಲಿಯೂ ಡಿ ಜೆ ನಿಷೇಧ ಮಾಡಲಾಗಿದೆ. ಮುಸ್ಲಿಂ ಬಾಂಧವರು ಕಾನೂನು ಉಲ್ಲಂಘನೆ ಮಾಡದೆ ,ಡಿಜೆ ಬಳಸದೆ ಶಾಂತ ರೀತಿಯಲ್ಲಿ ಹಬ್ಬ ಆಚರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ

  • ರೋಜಿಪುರದ ಅಂಗನವಾಡಿಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ನೆಡೆಯಲಿರುವ ಅಭಿಯಾನ

    ದೊಡ್ಡಬಳ್ಳಾಪುರ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರ ಭಾಗವಾಗಿ ರೋಜಿಪುರದ ಅಂಗನವಾಡಿಯಲ್ಲಿ ಪ್ರಾಸ್ತಾವಿಕವಾಗಿ ಚಾಲನೆ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿನೋದ ರಾಜು ತಿಳಿಸಿದರು

     

    ನಗರದ ರೋಜಿಪುರ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಸಬಾ ಹೋಬಳಿ ಒಂದನೇ ವೃತ್ತದ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಂತರ ಮಾತನಾಡಿದ ಅವರು ಹದಿಹರೆಯದ ಹುಡುಗಿಯರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು 2018ರ ಮಾರ್ಚ್ 8ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ಮಗು ಕೂಡ ಅಪೌಷ್ಟಿಕತೆಯಿಂದ ಬಳಲಬಾರದು ಎಂಬುವ ಮುಖ್ಯ ಉದ್ದೇಶವಾಗಿದೆ ಎಂದರು.

    ಸಹಾಯಕ ಶಿಶು ಯೋಜನಾಧಿಕಾರಿ ಅರುಣ್ ಕುಮಾರ್ ಮಾತನಾಡಿ ಮಕ್ಕಳು ಮತ್ತು ಮಹಿಳೆಯರ ಪೌಷ್ಟಿಕಾಂಶದ ಮಟ್ಟವನ್ನು ಸುಧಾರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ದೀರ್ಘಕಾಲದ ಆರೋಗ್ಯ ಮತ್ತು ಅಭಿವೃದ್ಧಿಗೆ ಉತ್ತಮ ಅಡಿಪಾಯವನ್ನು ನಿರ್ಮಿಸುವಲ್ಲಿ ಈ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ .ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಪೌಷ್ಟಿಕ ಪುನರ್ವಸತಿ ಕೇಂದ್ರದಲ್ಲಿ ದಾಖಲಾದರೆ ತಾಯಿಗೆ ನರೇಗಾ ಯೋಜನೆಯಲ್ಲಿ ದಿನಗೂಲಿ ನೀಡಲಾಗುತ್ತದೆ ಆದ್ದರಿಂದ ಅಪೌಷ್ಟಿಕತೆಯ ಮಕ್ಕಳು ‌ಕಂಡು ಬಂದರೆ ಕೂಡಲೆ ನೋಂದಾಯಿಸಬೇಕು ಎಂದರು.

     

    ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಭಾಗವಹಿಸಿದ್ದ ಕೆ ಏನ್ ಶಶಿಕುಮಾರ್ ಮಾತನಾಡಿ ನಮ್ಮಲ್ಲಿನ ಹಿರಿಯರು ತಯಾರು ಮಾಡುತ್ತಿದ್ದ ಸಾವಯವ ಆಹಾರ ಪದ್ದತಿಗಳು ಇಂದು ನಾವೆಲ್ಲ ಅಳವಡಿಸಿಕೊಳ್ಳಬೇಕಾಗಿದೆ ನಮ್ಮ ಹಿರಿಯರು ಯಾವುದೇ ರಾಸಾಯನಿಕ ಬಳಸದೆ ಕೇವಲ ಕೊಟ್ಟಿಗೆ ಗೊಬ್ಬರವನ್ನ ಹಾಕಿ ಆಹಾರ ಪದಾರ್ಥಗಳನ್ನು ಬೆಳೆಯುತ್ತಿದ್ದರು ಆದರೆ ಇಂದು ರಾಸಾಯನಿಕ ಗೊಬ್ಬರಗಳ ಬಳಕೆ‌ ಹೆಚ್ಚಾಗಿದೆ ಎಂದರು

    ಕಸಬಾ ವೃತ್ತದ ಹಿರಿಯ ಮೇಲ್ವಿಚಾರಕಿ ನಿರ್ಮಲ ಮಾತನಾಡಿ ಮಹಿಳೆಯರು ಆಧುನಿಕತೆ ಹೊಂದಿಕೊಂಡು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಆಹಾರ ಪದಾರ್ಥಗಳ ಚಟಗಳಿಗೆ ದಾಸರಾಗುತ್ತಿದ್ದಾರೆ ಸಾಂಪ್ರಾದಯಿಕ ಆಹಾರ ಪದ್ಧತಿಯನ್ನು ಮನೆಗಳಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಲಭ್ಯವಾಗುತ್ತದೆ ಎಂದರು.

     

    ಕಾರ್ಯಕ್ರಮದಲ್ಲಿ ಎಸಿಡಿಪಿಓ ರೂಪಾಶ್ರೀ ಹಿರಿಯ ಮೇಲ್ವಿಚಾರಕಿ ನಿರ್ಮಲ ಮೇಲ್ವಿಚಾರಕಿ ಮಾಲ ಪೋಷಣ್ ಸಂಯೋಜಕರಾದ ನಿವೇದಿತಾ ಅಂಗನವಾಡಿ ಕಾರ್ಯಕರ್ತೆಯರಾದ ಶೈಲಜಾ ಗೌಡ, ‌ನಿರ್ಮಲ, ಸೇರಿದಂತೆ ಕಸಬಾ ಒಂದನೇ ವೃತ್ತದ ಕಾರ್ಯಕರ್ತೆಯರು ಸಹಾಯಕಿಯರು ಭಾಗವಹಿಸಿದ್ದರು.

  • ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲು

    ಮಹಿಳೆಯೊಬ್ಬರ ಮೇಲೆ ಹಲ್ಲೆನಡೆಸಿ ಅವಾಚ್ಯಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದೆ.

     

    ರಾಜ್ಯಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ. ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್‌ಇ ಠಾಣೆಯಲ್ಲಿಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

    ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಶಶಿಕಲಾ ಹಾಗೂ ಕೋದಂಡಚಾರಿ ಎಂಬುವವರು ನರ್ಸರಿ ನಡೆಸುತ್ತಿದ್ದು ‘‘ಕೆಲದಿನಗಳ ಹಿಂದೆ ಜಮೀನಿನ ಬಳಿ ಕಾರಿನಲ್ಲಿಆಗಮಿಸಿದ್ದ ಕೃಷ್ಣಚೈತನ್ಯ,ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಅವಾಚ್ಯಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ.ಜತೆಗೆ,ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆನಡೆಸಿದ್ದಾರೆ.ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ’’ ಎಂದು ಶಶಿಕಲಾ ದೂರಿನಲ್ಲಿಆರೋಪಿಸಿದ್ದಾರೆ.

     

     

     

    ಸಂತ್ರಸ್ತೆ ಶಶಿಕಲಾ ಅವರು ಮೊದಲು ಬೆಳ್ಳಂದೂರು ಠಾಣೆಯಲ್ಲಿದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ.ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ.ಈ ನಿಟ್ಟಿನಲ್ಲಿಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿಆರೋಪಿಗಳು ಕೃತ್ಯ ಎಸಗಿರುವುದು ಕಂಡು ಬಂದಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

     

    ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗುವುದು ಎಂದು ಡಿಸಿಆರ್‌ಇ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.