Blog

  • ತೂಬಗೆರೆಯಲ್ಲಿ ಐತಿಹಾಸಿಕ ಮೆರವಣಿಗೆ ಅಂಬಾರಿಯಲ್ಲಿ ಚಾವಡಿ ಗಣಪತಿ : ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

    ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .

     

    ಕೇವಲ ಹೋಬಳಿ ಅಷ್ಟೇ ಅಲ್ಲದೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ವಿಜೃಂಭಣೆಯಿಂದ ನೆಡೆದ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.

    ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿ ದೇವನಹಳ್ಳಿ ವ್ಯಾಪ್ತಿಯಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮ ಯಾವುದೇ ಪಕ್ಷ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಪರಸ್ಪರ ಒಗ್ಗೂಡಿ ಇಂತಹ ಕಾರ್ಯಕ್ರಮ ಮಾಡುತ್ತಿರುವುದು ಸಂತಸ ತಂದಿದೆ. ರಾಜ್ಯದಲ್ಲಿ ದಸರಾ ಉತ್ಸವದಲ್ಲಿ ಮೆರವಣಿಗೆ ನಡೆಯುವಂತೆ ತೂಬಗೆರೆ ಗ್ರಾಮದಲ್ಲಿ ಗಣಪತಿಯನ್ನು ಆನೆಯ ಮೇಲೆ ಅಂಬಾರಿ ಕೂರಿಸಿ ಮೆರವಣಿಗೆ ಮಾಡಲಾಗುತ್ತಿದೆ .

     

    ದಸರಾ ಮೆರವಣಿಗೆ ನೋಡಲು ಸಾಧ್ಯವಾಗದ ಎಷ್ಟೋ ಕುಟುಂಬಗಳಿಗೆ ಆನೆ ಮೆರವಣಿಗೆ ನೋಡುವ ಭಾಗ್ಯ ಈ ಕಾರ್ಯಕ್ರಮದಿಂದ ದೊರೆಯಲಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಗಿ ಆಯೋಜನೆ ಮಾಡಿರುವ ಚಾವಡಿ ಗಣೇಶೋತ್ಸವ ಸಮಿತಿಯವರಿಗೆ ಶುಭಾವಾಗಲಿ ಎಂದರು.

    ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್ ಮುನಿಯಪ್ಪ ನವರು ಪುಷ್ಪಾರ್ಚನೆ ಮಾಡುವುದರ ಮೂಲಕ ಅಂಬಾರಿ ಮೆರವಣಿಗೆ ಚಾಲನೆ ನೀಡಿದರು

    ಸಮಾಜ ಸೇವಕರು ಬಿಜೆಪಿ ಪಕ್ಷದ ಪ್ರಮುಖರಾದ ಅಂಬರೀಶ್ ಗೌಡ ಮಾತನಾಡಿ ಇಂದು ತೂಬಗೆರೆಯಲ್ಲಿ ವಿಜಯೋತ್ಸವ ನಡೆಯುತ್ತಿದೆಯೆಂದರೆ ತಪ್ಪಾಗಲಾರದು . ಹಲವಾರು ವರ್ಷಗಳಿಂದ ಮೈಸೂರಿನ ದಸರಾ ಸಂದರ್ಭದಲ್ಲಿ ಜಂಬೂಸವಾರಿ ವಿಶೇಷತೆ ಪಡೆದಿದ್ದು, ಅಂತೆಯೇ ಇದೇ ಮೊದಲ ಬಾರಿಗೆ ತೂಬಗೆರೆಯ ಚಾವಡಿ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಗಂಗಾ ಮಠದ ಆನೆ (ಲಕ್ಷ್ಮಿ) ಕರೆತಂದು ಶ್ರೀ ವಿದ್ಯಾ ಗಣಪತಿಯನ್ನು ಆನೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುತ್ತಿದೆ . ಈ ವಿಶೇಷ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

     

     

    ತೂಬಗೆರೆ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಇದೊಂದು ಸ್ಮರಣೀಯ ಕಾರ್ಯಕ್ರಮವಾಗಿದೆ.

     

    ಮುಂದಿನ ದಿನಗಳಲ್ಲಿ ಗ್ರಾಮದ ಬೀದಿಬೀದಿಗಳಲ್ಲಿ ಒಂದೊಂದು ಗಣಪತಿ ಕುರಿಸುವ ಬದಲು ಗ್ರಾಮಕ್ಕೆಲ್ಲ ಒಂದೇ ಗಣಪತಿ ಕೂರಿಸಿದರೆ ಉತ್ತಮ. ಮನೆ ಮಟ್ಟಕ್ಕೆ ಚಿಕ್ಕ ಗಣಪತಿ ಇರಲಿ ಆದರೆ ಗ್ರಾಮಕ್ಕೆ ಒಂದೇ ಗಣಪತಿ ಇರಲಿ ಹಲವಾರು ತಿಂಗಳುಗಳಿಂದ ಕಾರ್ಯಕ್ರಮವನ್ನು ವಿಶೇಷವಾಗಿ ರೂಪಿಸಿರುವ ಮಧು ಮತ್ತು ತಂಡದವರಿಗೆ ಶುಭವಾಗಲಿ ಎಂದು ಹಾರೈಸಿದರು.

     

    ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ನೆರೆದಿದ್ದ ಭಕ್ತರ ಗಮನ ಸೆಳೆದವು.

    ಈ ಕುರಿತು  ವಕೀಲರು, ಜಿಲ್ಲಾ ಬಿಜೆಪಿ ಪ್ರಮುಖರಾದ ಆರ್ ಪ್ರತಾಪ್ ಮಾತನಾಡಿ  ಮೆರವಣಿಗೆಯ ಹಾಗೂ ವಿಸರ್ಜನೆಗಾಗಿ ಅಗತ್ಯವಾದ ಸರ್ಕಾರದ ಎಲ್ಲಾ ಅನುಮತಿಗಳನ್ನು ಪಡೆದುಕೊಳ್ಳಲು ಹರಸಾಹಸ ಪಟ್ಟಿದ್ದೇವೆ ಕಾರ್ಯಕ್ರಮ ಯಶಸ್ವಿಯಾಗಲು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು, ದೇವನಹಳ್ಳಿ ಶಾಸಕರಾದ ಕೆಎಚ್ ಮುನಿಯಪ್ಪ ರವರು ಹಾಗೂ ಸಮಾಜಸೇವಕರು ಬಿಜೆಪಿ ಪಕ್ಷದ ಪ್ರಮುಖರಾದ ಅಮರೇಶ್ ಗೌಡರವರು ಸಹಕಾರ ನೀಡಿದ್ದು . ಕಾರ್ಯಕ್ರಮದ ಸಂಪೂರ್ಣ ಯಶಸ್ಸಿನ ಫಲ ಮಧು ಮತ್ತು ಸಂಗಡಿಗರಿಗೆ ಸಲ್ಲಬೇಕಾಗುತ್ತದೆ ಕಾರಣ ಅಚ್ಚುಕಟ್ಟಾದ ಯೋಜನೆ ರೂಪಿಸಿ ಅದನ್ನು ಕಾರ್ಯರೂಪಕ್ಕೆ ತಂದಿರುವುದು ನಮ್ಮ ತೂಬಗೆರೆಯ ಯುವಕರ ತಂಡ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

     

     

  • ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

    ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಗಲಿದೆ ಎಂದು ಸಮಿತಿಯ ಅಧ್ಯಕ್ಷ ಮಧು ತಿಳಿಸಿದ್ದಾರೆ.

     

    ಅಂತಿಮ ದಿನವಾದ ಸೆಪ್ಟೆಂಬರ್ 1, ಸೋಮವಾರ 2025ರಂದು ಮಧ್ಯಾಹ್ನದಿಂದ ಸಂಜೆವರೆಗೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ಭಕ್ತರ ಮನರಂಜನೆಗೆ ಸಿದ್ಧವಾಗಿವೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಮಾತನಾಡಿ,ಮೆರವಣಿಗೆಯ ಹಾಗೂ ವಿಸರ್ಜನೆಗಾಗಿ ಅಗತ್ಯವಾದ ಸರ್ಕಾರದ ಎಲ್ಲಾ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ ಹಾದಿಯಾಗಿ ಎಲ್ಲಾ ಮುಖಂಡರು ಆಗಮಿಸಲಿದ್ದಾರೆ.ಸಾರ್ವಜನಿಕರು ಶಿಸ್ತಿನಿಂದ ಹಾಗೂ ಭಕ್ತಿಭಾವದಿಂದ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ. ವಿಶೇಷವಾಗಿ ಯುವಕರಿಂದ ಹೆಚ್ಚಿನ ಸಹಕಾರ ನಿರೀಕ್ಷಿಸಲಾಗಿದೆ ಎಂದರು.

     

    ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ ಮಾತಾನಾಡಿ, ಚಾವಡಿ ಗಣೇಶೋತ್ಸವ ಸಮಿತಿಯ ಎಲ್ಲಾ ದಾನಿಗಳು ಹಾಗೂ ಊರಿನ ಗ್ರಾಮಸ್ಥರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ಸಹಕಾರ, ಧನಸಹಾಯ ಹಾಗೂ ಸೇವಾಭಾವನೆಯಿಂದಲೇ ಈ ಮಹತ್ವದ ಉತ್ಸವ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

    ಈ ಐತಿಹಾಸಿಕ ಸಂದರ್ಭವನ್ನು ಎಲ್ಲರೂ ಬಂದು ಸಾಕ್ಷಿಯಾಗಬೇಕು. ಮಾಧ್ಯಮ ಸ್ನೇಹಿತರೂ ಜನಸಾಮಾನ್ಯರಿಗೆ ಈ ಸುದ್ದಿ ತಲುಪಿಸುವಲ್ಲಿ ಸಹಕರಿಸಬೇಕು ಎಂದು ಚಾವಡಿ ಗಣೇಶೋತ್ಸವ ಸಮಿತಿಯ ಸಂಚಾಲಕ ಉದಯ ಆರಾಧ್ಯ ಮನವಿ ಸಲ್ಲಿಸಿದರು.

     

    ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಲಗುಮಯ್ಯ,ಯುವ ಮುಖಂಡ ಉದಯ ಆರಾಧ್ಯ, ಕೃಷ್ಣಪ್ಪ. ಚಾವಡಿ ಗಣೇಶ ಸಮಿತಿ ಸದಸ್ಯರು ಭಾಗವಹಿಸಿದ್ದರು.

  • ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

    “2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

     

    ಅರ್ಹ ಫಲಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ನೇರವಾಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನಾಂಕವಾಗಿರುತ್ತದೆ.

     

    *ಪ.ಪಂಗಡ ಅಲೆಮಾರಿ ಫಲಫೇಕ್ಷಿಗಳ ಯೋಜನೆಗಳ ವಿವರ*

    1. ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ (ಘಟಕ ವೆಚ್ಚ ರೂ.1.00 ಲಕ್ಷ)

    2. ಉಧ್ಯಮ ಶೀಲತಾ ಯೋಜನೆ (ಘಟಕ ವೆಚ್ಚ ರೂ.2.00 ಲಕ್ಷ)

    3. ಉಧ್ಯಮ ಶೀಲತಾ ಯೋಜನೆ (ಸರಕು ಸಾಗಾಣಿಕೆ/ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ) (ಘಟಕ ವೆಚ್ಚ ರೂ.4.00 ಲಕ್ಷ)

    4. ಭೂ ಒಡೆತನ ಯೋಜನೆ

    5. ಮೈಕ್ರೋ ಕ್ರೆಡಿಟ್ ಯೋಜನೆ

    6. ಗಂಗಾ ಕಲ್ಯಾಣ ಯೋಜನೆ

     

    2023-24 ಮತ್ತು 2024-25ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ.

     

    ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂ.ಗ್ರಾ.ಜಿಲ್ಲೆ ದೂ.ಸಂ- 080-29787448. ಸಹಾಯಕ ನಿರ್ದೇಶಕರ ಕಚೇರಿ,ದೇವನಹಳ್ಳಿ ದೂ.ಸಂ- 080-27681784. ದೊಡ್ಡಬಳ್ಳಾಪುರ ದೂ.ಸಂ- 080-27623681. ಹೊಸಕೋಟೆ ದೂ.ಸಂ- 080-27931528. ನೆಲಮಂಗಲ ದೂ.ಸಂ- 080- 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪಿ.ಸಿ.ಎಂ.ಬಿ ಕೋರ್ಸ್ ದಾಖಲಾತಿಗೆ ಅರ್ಜಿ ಅಹ್ವಾನ

    ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2025-26 ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿ ಅಗ್ವಾನಿಸಲಾಗಿದೆ.

     

    ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ. ಉಚಿತ ಶಿಕ್ಷಣ. ಊಟ ಮತ್ತು ವಸತಿ, ಲೇಖನ ಸಾಮಾಗ್ರಿ, ಪಠ್ಯ ಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿಇಟಿ ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ತರಬೇತಿ ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.

     

    ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ & ಪದವಿ ಪೂರ್ವ ಕಾಲೇಜು(ಪ.ಜಾತಿ-711) ದೊಡ್ಡರಿ(ಸೋಂಪುರ), ನೆಲಮಂಗಲ ತಾಲ್ಲೂಕು ಇಲ್ಲಿಅರ್ಜಿಯನ್ನು ವಿತರಿಸಲಾಗುವುದು.

    ಹೆಚ್ಚಿನ ವಿವರಗಳಿಗಾಗಿ ಶ್ರೀಮತಿ eveera. ಪ್ರಾಂಶುಪಾಲರು-8495812105. ಶ್ರೀಮತಿ ಮಮತ.ಪಿ. ನಿಲಯಪಾಲಕರು-7760005440. ಮತ್ತು ಸುಜಾತ, ಪ್ರ.ದ.ಸ-6363837162 ಹಾಗೂ . ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಜಿಲ್ಲೆಯಾದ್ಯಂತ ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

    ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ.

     

    ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಾಗಲೀ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

  • ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಪೋಟ ಅವಘಡ : ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

    ದೊಡ್ಡಬಳ್ಳಾಪುರ ಟೌನ್ ನ ಮುತ್ತೂರು ವಾರ್ಡ್ ಬಳಿ ಶುಕ್ರವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಗಾಯಗೊಂಡು ದೊಡ್ಡಬಳ್ಳಾಪುರದ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು ಬಳಿಕ ವೈದ್ಯರೊಂದಿಗೆ ಚರ್ಚಿಸಿ ಗಾಯಾಳುಗಳ ಆರೋಗ್ಯಕ್ಕೆ ಸಂಬಂಧಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು.

     

    ನಂತರ ಟೌನ್ ನ ಮುತ್ತೂರು ವಾರ್ಡ್ ನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅವಘಡ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ನಂತರ ಮಾತನಾಡಿ ಈ ರೀತಿಯ ಘಟನೆಗಳು ಮುಂದೆ ಆಗಬಾರದು. ಜಿಲ್ಲೆಯಾದ್ಯಂತ ಗಣೇಶ ಕೂರಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆಯೋಜಕರಿಗೆ ಪಟಾಕಿ ಸಿಡಿಸದಂತೆ ಸೂಚನೆ ನೀಡಿ ಜೊತೆಗೆ ಗಣೇಶ ವಿಸರ್ಜನೆ, ಮೆರವಣಿಗೆ, ಸಂಭ್ರಮ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಹಾಗೇ ಜಿಲ್ಲೆಯಲ್ಲಿ ಇನ್ನೂ ಮುಂದೆ ಇನ್ನಿತರೇ ಯಾವುದೇ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

     

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಎಸಿ ದುರ್ಗಶ್ರೀ, ಡಿವೈಎಸ್ಪಿ ರವಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಸ್ಥಳೀಯ ಜನಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.

  • ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪ್ರದಾನ

    ಬೆಂಗಳೂರು ಜಿಲ್ಲೆ: ದೊಡ್ಡಬಳ್ಳಾಪುರ ಉಪ-ವಿಭಾಗ, ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರ ಪೊಲೀಸ್ ವೃತ್ತಿಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರದಾನ ಮಾಡಿ ಗೌರವಿಸಿದ್ದಾರೆ.

     

    ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಪದಕವನ್ನು ವಿತರಣೆ ಮಾಡಿದರು.

     

    ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ಪಡೆದ ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರ್ಗ ಅಭಿನಂದಿಸಿದೆ.

     

     

  • ಕಾರು, ಲಗೇಜ್ ಆಟೋ ನಡುವೆ ಭೀಕರ ಅಪಘಾತ, ಮೂವರು ಗಂಭೀರ ಗಾಯ – ನಿಮಾನ್ಸ್ ಆಸ್ಪತ್ರೆಗೆ ರವಾನೆ

    ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ, ರಸ್ತೆಯಲ್ಲಿ ಬಿದ್ದಿರುವ ಆಳವಾದ ಹಳ್ಳ ಹಾಗೂ ಕೆರೆಯ ಕಟ್ಟೆಯ ಬಳಿ ಉಂಟಾದ ಅಸಮರ್ಪಕ ರಸ್ತೆ ಪರಿಸ್ಥಿತಿ ಭೀಕರ ಅಪಘಾತಕ್ಕೆ ಕಾರಣವಾಗಿದೆ.

     

    ಶನಿವಾರ ಮಧ್ಯಾಹ್ನ ಕಾರು ಮತ್ತು ಲಗೇಜ್ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಳನೀರು ತರಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

     

    ಗಾಯಾಳುಗಳು ತೂಬಗೆರೆ ನಿವಾಸಿಗಳಾದ ಮಧು (20), ಅರ್ಜುನ್ (13) ಹಾಗೂ ಯಶವಂತ್ (13) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಕಾರಿನಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

     

    ಸ್ಥಳೀಯರು ಹಲವು ತಿಂಗಳಿನಿಂದ ಈ ರಸ್ತೆಯ ಹಾಳಾದ ಸ್ಥಿತಿಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದರಿಂದ ಅಪಘಾತಗಳು ನಿರಂತರವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹಳ್ಳಗಳು ಕಾಣಿಸದಂತಾಗುತ್ತಿದ್ದು, ಇದು ಸಾರ್ವಜನಿಕರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ.

     

    ಗ್ರಾಮಸ್ಥರು ಸಾರ್ವಜನಿಕ ಕಾಮಗಾರಿ ಇಲಾಖೆಗೆ ತುರ್ತುವಾಗಿ ರಸ್ತೆ ದುರಸ್ತಿ ಮಾಡಿ ಜನರ ಸುರಕ್ಷತೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.

     

    ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

  • ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ

    ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಹೇಳಿದರು.

     

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು ಜಿಲ್ಲೆಯಲ್ಲಿ ಮಕ್ಕಳಿಗೆ ಸರ್ಕಾರದಿಂದ ಸಿಗುವಂತಹ ಆಹಾರ,ವಸತಿ, ವಿದ್ಯಾಬ್ಯಾಸ ಇನ್ನಿತರ ಸರ್ಕಾರಿ ಸೌಲಭ್ಯಗಳು ಉತ್ತಮ ರೀತಿಯಲ್ಲಿ ದೊರೆಯುವಂತೆ ಮಾಡಬೇಕು. ಶಾಲೆ,ವಸತಿ ನಿಲಯಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ, ವಿದ್ಯಾಬ್ಯಾಸ, ಆರೋಗ್ಯ, ಒಳ್ಳೆಯ ವಾತಾವರಣ ಕಲ್ಪಿಸಿ ಎಂದರು.

     

    ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಇಲಾಖೆಗಳ ಸಂಪರ್ಕ ಹಾಗೂ ಸಮನ್ವಯತೆ ಮುಖ್ಯ. ಎಲ್ಲಾ ಅಧಿಕಾರಿಗಳು ಮಕ್ಕಳ ರಕ್ಷಣೆ ಪೋಷಣೆಗೆ ಸದಾ ಜಾಗೃತರಾಗಿರಿ ಎಂದರು.

     

    ಆಯೋಗದ ಸದಸ್ಯರುಗಳು ಮಾತನಾಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ಘಟಕಗಳಲ್ಲಿ ಸೂಕ್ತ ಸೌಲಭ್ಯ ಕಲ್ಪಿಸಿ, ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು ಜೊತೆಗೆ ಆಸ್ಪತ್ರೆಗಳಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸಲು ಸೂಚಿಸಿದರು. ಹದಿಹರೆಯದ ಹೆಣ್ಣುಮಕ್ಕಳ ಗರ್ಭಧಾರಣೆಯನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಿ. ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯುವಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

     

    ಪ್ರತಿ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನಾಮಫಲಕ ಕಾಡ್ಡಾಯವಾಗಿ ಪ್ರದರ್ಶಿಸಬೇಕು, ಜೊತೆಗೆ ದೂರು ಪೆಟ್ಟಿಗೆಯನ್ನು ಇರಿಸಬೇಕು ಹಾಗೂ ಮಕ್ಕಳ ರಕ್ಷಣಾ ಸಮಿತಿಯನ್ನು ಕಡ್ದಾಯವಾಗಿ ರಚಿಸಲು ತಿಳಿಸಿದರು. ಶಾಲೆಗೆ ಹಾಜರಾಗುತ್ತಿರುವ ಮಕ್ಕಳು ಮತ್ತು ಶಾಲೆಗೆ ಬರದೇ ಇರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಶಾಲೆಗೆ ಬರದೇ ಇರುವ ಮಕ್ಕಳು ಕಂಡು ಬಂದಾಗ ಆ ಮಗುವು ಶಾಲೆಗೆ ಬರದೇ ಇರಲು ಕಾರಣ ತಿಳಿದು ಅದನ್ನು ಪರಿಹರಿಸಬೇಕು ಎಂದರು

     

    ಬಾಲ್ಯ ವಿವಾಹ, ಭಿಕ್ಷಾಟನೆ, ಮಕ್ಕಳ ಮಾರಾಟ, ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಉಚಿತ ಕರೆ ಮಾಡಿ ದೂರು ನೀಡಬಹುದು. ಕಾಣೆಯಾದ ಅಥವಾ ಬಾಲಕಾರ್ಮಿಕ ಅಡಿಯಲ್ಲಿ ಪತ್ತೆಯಾದ ಮಕ್ಕಳನ್ನು ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

     

    ಮಕ್ಕಳ ಕಾಣೆಯಾದ ಬಗ್ಗೆ ದೂರು ಬಂದಲ್ಲಿ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಮಕ್ಕಳನ್ನು ಪತ್ತೆ ಮಾಡುವುದರ ಮೂಲಕ ಪೋಷಕರಿಗೆ ಒಪ್ಪಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

     

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶ್ರೀ ಶೈಲ್ ಬಾಗಾಡಿ ಅವರು ಮಾತನಾಡಿ ಮಕ್ಕಳ ಹಿತ ರಕ್ಷಣೆ ಕಾಪಾಡುವುದು ನಮ್ಮ ಜವಾಬ್ದಾರಿ. ವಲಸೆ ಕಾರ್ಮಿಕರ ಮಕ್ಕಳು, ನಿರ್ಗತಿಕ ಮಕ್ಕಳನ್ನು ಮೊದಲು ಗುರುತಿಸಿ ಅವರಿಗೆ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಸಿ ಸರ್ಕಾರ ಸೌಲಭ್ಯ ಕಲ್ಪಿಸಬೇಕು. ಕೈಗಾರಿಕಾ, ಕಾರ್ಖಾನೆಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ದೌರ್ಜನ್ಯಕ್ಕೊಳಗಾದ ಮಕ್ಕಳ ಆಂತರಿಕ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸುವುದು ನಮ್ಮ ಜವಾಬ್ದಾರಿ ಎಂದರು.

     

    ಸಭೆಯಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ ಗೌಡ, ಶಶಿಧರ್ ಕೋಸಂಬೆ, ಡಾ.ತಿಪ್ಪೇಸ್ವಾಮಿ, ಮಂಜುಳ, ವೆಂಕಟೇಶ್,ಅಪರ್ಣ, ಎಎಸ್ಪಿ ನಾಗರಾಜ್ ಸೇರಿದಂತೆ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಮೈಸೂರಿನಲ್ಲಿ ಪೆದ್ದಿ ಶೂಟಿಂಗ್..1000 ಡ್ಯಾನ್ಸರ್ಸ್ ಜೊತೆ ರಾಮ್ ಚರಣ್ ಸ್ಟೆಪ್ಸ್

    ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ ಹಬ್ಬದ ನಡುವೆಯೇ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ.

     

    ಮೈಸೂರಿನಲ್ಲಿ ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ. 1000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್ ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗುತ್ತಿದೆ.

     

    ಉಪ್ಪೇನ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

     

    ಈ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನೀಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ನಡಿ ವೆಂಕಟ ಸತೀಶ್ ಕಿಲಾರು ಹಣ ಹಾಕುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಚಿತ್ರ ಪ್ರೆಸೆಂಟ್ ಮಾಡುತ್ತಿದ್ದಾದೆ. ಆರ್. ರತ್ನವೇಲು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ನವೀನ್ ನೂಲಿ ಸಂಕಲನ‌ ಚಿತ್ರಕ್ಕಿದೆ. 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆ ಆಗಲಿದೆ.

    Ad

    Ad

    Ad

    Ad

    Ad