Blog

  • ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು – ಡಾ.ನವೀನ್ ಕುಮಾರ್

    ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅಡ್ಡಿಯಾಗುತ್ತಿರುವ ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು ಎಂದು ದೊಡ್ಡಬಳ್ಳಾಪುರ ಮಹಿಳಾ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಕರೆಕೊಟ್ಟರು.

     

    ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏರ್ಪಡಿಸಿದ್ದ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಯುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಯುವಕರ ಶಕ್ತಿಯನ್ನು ಹಾಳುಗೆಡವಲು ಮಾದಕ ವ್ಯಸನವು ಭೂತದ ತರ ಕಾಡುತಿದ್ದು ಬೀಡಿ.ಸಿಗರೇಟ್ ಮದ್ಯಪಾನ ಜೂಜಾಟದಂತ ಅನೇಕ ದುಶ್ಚಟಗಳಿಂದ ವಿದ್ಯಾರ್ಥಿಗಳು ಹಾಗು ಯುವ ಜನತೆ ಒಳಗಾಗಬಾರದು,ನಮಗಿರುವ 24ಘಂಟೆಗಳ ಸಮಯದಲ್ಲಿ ಎಂಟು ಘಂಟೆ ನಿದ್ದೆ ಮತ್ತು ಊಟ ಮತ್ತು ಸ್ವಚ್ಚತೆಗೆ ಮೀಸಲಿಟ್ಟು ದಿನದಲ್ಲಿ ಕನಿಷ್ಟ ಐದು ಘಂಟೆಗಳ ಕಾಲ ಓದಿಗೆ ಮೀಸಲಿಟ್ಟು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಿದರು.ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

    ನಂತರ ಮಾತನಾಡಿದ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷ ಸೋಷಿಯಲ್ ಮೀಡಿಯಾದಿಂದ ಆಗುವ ಸೈಬರ್ ವಂಚನೆ,ಆನ್ ಲೈನ್ ಗೇಮಿಂಗ್ ರಮ್ಮೀ ಆಪ್ ಗಳಿಂದ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಬೇಕು, ಇತ್ತೀಚೆಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಅಸ್ತ್ರ ಬಳಸಿ ಅನೇಕರಿಂದ ಹಣ ಸುಲಿಗೆ ಮಾಡುತಿದ್ದು ಇಂತಹ ಬಲೆಗಳಿಗೆ ಸಿಲುಕದವರು ಮೊಬೈಲ್ ನಲ್ಲಿ ಕರೆ ಮಾಡುವಾಗ ಬರುವ ಕಾಲರ್ ಟ್ಯೂನ್ ನಲ್ಲಿ ಬರುವ ಸಂಖ್ಯೆಗೆ ಕರೆ ಮಾಡಿ ಸೈಬರ್ ವಂಚಕರ ವಿರುದ್ದ ದೂರು ದಾಖಲು ಮಾಡಲು ತಿಳಿಸಿದರು.

    ದೊಡ್ಡಬಳ್ಳಾಪುರ ನಗರ ಠಾಣೆಯ ಇನ್ಸೆಕ್ಟರ್ ಅಮರೇಶ್ ಗೌಡ ರವರು ಮಾತನಾಡಿ ನಾವು ಮೊದಲು ಭಯ ಪಡಬೇಕಿರುವುದು ನಾವು ಮಾಡಿದ ತಪ್ಪಿಗೆ ತಪ್ಪೇ ಮಾಡಿಲ್ಲ ಎಂದಾಗ ಯಾರಿಗೂ ಶಿಕ್ಷೆಯಾಗುವುದಿಲ್ಲ, ವಿದ್ಯಾರ್ಥಿಗಳು ಹಾಗು ಯುವ ಜನತೆ ಐ.ಪಿ.ಎಲ್ ಬೆಟ್ಟಿಂಗ್ ನಂತಹ ದುಶ್ಚಟದಿಂದ ದೂರವಿರಬೇಕು ಮತ್ತು ಅಪ್ರಾಪ್ತರು ಯಾವುದೇ ಕಾರಣಕ್ಕು ವಾಹನ ಚಲಾಯಿಸ ಬಾರದು ಚಲಾಯಿಸಿದಲ್ಲಿ ವಾಹನದ ಮಾಲಿಕರಿಗೆ ದಂಡ ಹಾಗು ಒಂದು ವರ್ಷದ ಜೈಲು ಶಿಕ್ಷೆಯು ಅನುಭವಿಸ ಬೇಕಾಗಿತ್ತದೆ, ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನ ನೀಡಬೇಕು ಸಾಮಾಜಿಕ ಜಾಲತಾಣದಿಂದ ವಿದ್ಯಾರ್ಥಿಗಳು ಹಾಗು ಯುವ ಜನತೆ ಜಾಗೃತೆಯಿಂದ ಇರಬೇಕು ಎಂದರು.ಈ ಸಂದರ್ಭದಲ್ಲಿ ಪೋಕ್ಸೋ ಕಾಯಿದೆಯಿಂದ ಆಗುವ ಶಿಕ್ಷೆ ಬಗ್ಗೆ ಸಾಮಾಜಿಕ ಜಾಲತಾಣ ದಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿ ಗಳಿಗೆ ಜಾಗೃತಿಮೂಡಿಸಲಾಯಿತು.

    ಕಾರ್ಯಕ್ರಮದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರದಾನ ಕಾರ್ಯದರ್ಶಿ ರಾಘವೇಂದ್ರ,ಕಾನೂನು ಸಲಹೆಗಾರರು ವಿಜಯಕುಮಾರ್, ಯುವ ಘಟಕದ ರಾಜ್ಯಾದ್ಯಕ್ಷರಾದ ಸತೀಶ್ ಎಂ,ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಡಿ.ಉಪ್ಪಾರ್,ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ರಾಜ್ಯ ಸಂಚಾಲಕರಾದ ಕೆ.ಹೆಚ್ ವೆಂಕಟೇಶ್ ಮಹಿಳಾ ಪೋಲೀಸ್ ಠಾಣೆಯ ಇನ್ ಪೆಕ್ಟರ್ ಡಾ.ನವೀನ್ ಕುಮಾರ್, ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷ,ನಗರ ಠಾಣೆಯ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ,ಸಂಘಟನೆಯ ಉಪಾದ್ಯಕ್ಷರಾದ ಸುಮೇಶ್, ವಿನಯಗೌಡ, ಸಂಘಟನ ಕಾರ್ಯದರ್ಶಿ ಶಂಕರನಾಗ್, ಹೋಬಳಿ ಆದ್ಯಕ್ಷ ದರ್ಶನ್,ಉಪನ್ಯಾಸಕ ರಾದ ಭಾಸ್ಕರ್,ಪ್ರಭಾಕರ್,ಸತೀಶ್ ಸೇರಿ ದಂತೆ ಕಾರ್ಯಕರ್ತರು, ಸರ್ಕಾರಿ ಪದವೀ ಪೂರ್ವ ಕಾಲೇಜು,ಶ್ರೀವಾಣಿ ಪಿಯು ಕಾಲೇಜು,ಜಾಲಪ್ಪ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

  • ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ : ಸಚಿವ ಸಂತೋಷ್ ಲಾಡ್

    ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.

     

    ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ *ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ* ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

     

    ರಾಜ್ಯದಲ್ಲಿ 91 ಅಸಂಘಟಿತ ವಲಯಗಳನ್ನು ಗುರ್ತಿಸಲಾಗಿದ್ದು ಕಾರ್ಮಿಕ ಇಲಾಖೆಯ ಮಂಡಳಿಗಳ ಮೂಲಕ ಹಲವು ಸೌಲಭ್ಯ ಒದಗಿಸುತ್ತಿದ್ದೇವೆ. ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ, ಅಪಘಾತ ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ ಮುಂತಾದ ಸೌಲಭ್ಯಗಳು ನೀಡಲಾಗುತ್ತಿದೆ.

     

    ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಡಿ 23 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಅಸಂಘಟಿತ ವಲಯದ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು, ಪತ್ರಿಕಾ ವಿತರಕ ಕಾರ್ಮಿಕರು ಹಾಗೂ ಖಾಸಗಿ ವಾಣಿಜ್ಯ ಸಾರಿಗೆ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ ಎಂದರು

     

    *ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ*

     

     

    ಕರ್ನಾಟಕ ಸರ್ಕಾರವು ರಾಜ್ಯದ ಗಿಗ್ ಕಾರ್ಮಿಕರಿಗಾಗಿ (ಸ್ವತಂತ್ರ ಉದ್ಯೋಗಿ) ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಸರಕು ಸೇವೆ ಒದಗಿಸುವು ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ.

     

    ಅಪಘಾತಾದಲ್ಲಿ ಆಕಸ್ಮಿಕವಾಗಿ ಸತ್ತಿರುವವರಿಗೆ ಮೊದಲು ಅವರಿಗೆ 2ಲಕ್ಷ ನೀಡಲಾಗಿತ್ತಿತ್ತು, ಈಗ 5 ಲಕ್ಷ ಕೊಡುತ್ತಿದ್ದೇವೆ. ಇದರ ಉದ್ದೇಶ ಅವರ ಕುಟುಂಬಕ್ಕೆ ಆರ್ಥಿಕವಾಗಿ ಅವರ ಜೀವನ ನಡೆಸಲು ಆಸರೆಯಾಗಬೇಕು ಎನ್ನುವುದು ನಮ್ಮ ಆಶಯ, ಆದ್ದರಿಂದ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

     

    *ಆಶಾದೀಪ ಯೋಜನೆ*

     

    ರಾಜ್ಯ ಸರ್ಕಾರವು, ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ “ಆಶಾದೀಪ ಯೋಜನೆ ಜಾರಿಗೊಳಿಸಲಾಗಿದೆ.

     

    ಈ ಯೋಜನೆಯಡಿ ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ ಮಾಡಲಾಗುವುದು. ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ ಮಾಡಲಾಗುವುದು.

    ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಭಿಗಳಾಗಲು ಉತ್ತೇಜನ ನೀಡಲಾಗುತ್ತದೆ ಎಂದರು.

     

    ದೊಡ್ಡಬಳ್ಳಾಪುರದಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದು ಅದಕ್ಕೆ ಬೇಕಾದ ಸೌಲಭ್ಯಗಳು ಮತ್ತು ಉಪಕರಣಗಳು ಸರಬರಾಜು ಮಾಡಬೇಕಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರದ ಸಚಿವರೊಂದಿಗೆ ಇದರ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

     

    *ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ* ಅವರು ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿ ಮಾತನಾಡಿ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡುತ್ತಿದ್ದ ಕಾರ್ಮಿಕರ ಸಚಿವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಾದ್ಯಂತ ಕೈಗಾರಿಕೆಗಳು ಬೃಹದಾಕಾರವಾಗಿ ಬಳೆಯುತ್ತಿವೆ. ಹಲವಾರು ಕುಟುಂಬಗಳು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಒಂದು ತರಬೇತಿ ಕೇಂದ್ರ ಸ್ಥಾಪಿಸಿದರೆ ಉತ್ತಮ. ಇದರಿಂದ ಹಲವು ಅಭ್ಯರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯೋಗ ಪಡೆಯುವಂತಾಗುತ್ತದೆ. ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದರು.

     

    ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ದೊಡ್ಡಬಳ್ಳಾಪುರದಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, 25 ಸಾವಿರಕ್ಕೂ ಹೆಚ್ಚಿನ ಮಗ್ಗಗಳು ಇವೆ.

     

    3 ಲಕ್ಷಕ್ಕು ಅಧಿಕ ಕಾರ್ಮಿಕರು ವಲಸೆ ಬಂದು ದೊಡ್ಡಬಳ್ಳಾಪುರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಕಾರ್ಮಿಕರಿಗೆ ಭದ್ರತೆ ಸಿಗುವಂತೆ ಮಾಡಬೇಕು ಜೊತೆಗೆ ಸರ್ಕಾರ ನಿಗದಿ ಮಾಡಿರುವ ಸ್ಥಳೀಯ ಮಟ್ಟದ ಕಾರ್ಮಿಕರಿಗೆ ಉದ್ಯೋಗದಲ್ಲಿ 70% ಅವಕಾಶ ಕಲ್ಪಿಸಿರುವುದು ನಿರುದ್ಯೋಗ ನಿವಾರಣೆಗೆ ಹೆಚ್ಚು ಅನುಕೂಲವಾಗಿದೆ.

    ಅತೀ ಶೀಘ್ರವಾಗಿ ಇ.ಎಸ್.ಐ ಆಸ್ಪತ್ರೆ ಉದ್ಘಾಟನೆಯಾಗಬೇಕು ಜೊತೆಗೆ ಕಾರ್ಮಿಕ ಮಕ್ಕಳಿಗೆ ವಸತಿ ಶಾಲೆಯನ್ನು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

     

    ಕಾರ್ಯಕ್ರಮದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಭಾರತಿ, ಸದಸ್ಯರಾದ ರಮೇಶ್, ಜಾನಿ, ಬಸಪ್ಪ, ಶ್ರೀಯಾನ್ಸ್, ವಿಜಯಕುಮಾರ್, ಕಾರ್ಮಿಕರ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಾಜಿ ಶಾಸಕರಾದ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

  • ಅನ್ನಭಾಗ್ಯ ಯೋಜನೆ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಜಾಗೃತಿ ಸಭೆ

    ವಿಕಾಸ ಸೌಧದಲ್ಲಿ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಸಭೆ ನಡೆಯಿತು.

     

    ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ – 2013ರಡಿಯಲ್ಲಿ ರೂಪಿಸಿರುವ ಜಾಗೃತಿ ಸಮಿತಿಗಳ ಕುರಿತು ಈ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದವು.

     

    ಕರ್ನಾಟಕ ಸರ್ಕಾರವು ಹೊರಡಿಸಿದ ಅಧಿಸೂಚನೆಯಂತೆ “ನಿರ್ದಿಷ್ಟ ಗುರುತುಯುಳ್ಳ ಸಾರ್ವಜನಿಕ ವಿತರಣಾ ಪದ್ದತಿ ನಿಯಮ – 2016” ರಚಿಸಿ ರಾಜ್ಯದಲ್ಲಿ ನಾಲ್ಕು ಹಂತಗಳಲ್ಲಿ ಜಾಗೃತಿ ಸಮಿತಿಗಳನ್ನು ಸ್ಥಾಪಿಸಲು

    1. ರಾಜ್ಯ ಮಟ್ಟದ ಜಾಗೃತಿ ಸಮಿತಿ

    2. ಜಿಲ್ಲಾ ಮಟ್ಟದ ಜಾಗೃತಿ ಸಮಿತಿ

    3. ತಾಲೂಕು ಮಟ್ಟದ ಜಾಗೃತಿ ಸಮಿತಿ

    4. ನ್ಯಾಯಬೆಲೆ ಅಂಗಡಿ ಮಟ್ಟದ ಜಾಗೃತಿ ಸಮಿತಿ ರಚಿಸಲಾಯಿತು.

     

    ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳ ಅವಧಿ ಎರಡು ವರ್ಷಗಳಾಗಿದ್ದು, ನ್ಯಾಯಬೆಲೆ ಅಂಗಡಿ ಮಟ್ಟದ ಸಮಿತಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.

     

    ಈ ಕುರಿತು ಮಾತನಾಡಿದ ಅವರು ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಜಾಗೃತಿ ಸಭೆಯನ್ನು ನಡೆಸಲಾಗಿದೆ.ನಮ್ಮ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ, ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಪ್ರಮುಖವಾದ ಪಾತ್ರ ವಹಿಸಿದ್ದು, ಈ ಯೋಜನೆಯು ಬಡವರ ಹೊಟ್ಟೆ ತುಂಬಿಸುವ ಮಹತ್ವದ ಕಾರ್ಯ ಮಾಡುತ್ತಿದೆ ಎಂದರು.

     

    ರಾಜ್ಯ ಮಟ್ಟದ ಜಾಗೃತಿ ಸಮಿತಿಯನ್ನು ರಚಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ, ಅವುಗಳ ಅನುಷ್ಠಾನವಾಗದ ಜಿಲ್ಲೆಗಳ ಪಟ್ಟಿಯನ್ನು ನೀಡುವಂತೆ ಸೂಚನೆ ನೀಡಿದರು.

    ಈಗಾಗಲೇ ರಚನೆಯಾಗಿರುವ ತಾಲ್ಲೂಕು ಮಟ್ಟದ ಸಮಿತಿಗಳು ಹೆಚ್ಚು ಚುರುಕಾಗಿ ಕಾರ್ಯನಿರ್ವಹಿಸಬೇಕು.ತಾವು ಜಾಗೃತಿ ಸಮಿತಿಯ ಸದಸ್ಯರಾಗಿ, ಕ್ಷೇತ್ರದ ಮಟ್ಟದಲ್ಲಿ ಹೆಚ್ಚಿನ ಕೆಲಸ ಮಾಡಿ ಇಲಾಖೆಯ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

     

    ಸರ್ಕಾರ ಬಡವರ ಹೊಟ್ಟೆ ತುಂಬಿಸುವ ಕಾರ್ಯವನ್ನು ಮಾಡುತ್ತಿದ್ದು, ಯೋಜನೆಯ ಅನುಷ್ಠಾನದಲ್ಲಿ ಜಾಗೃತಿ ಸಮಿತಿಯ ಸದಸ್ಯರು ತಾವು ವಹಿಸಿಕೊಂಡಿರುವ ಜವಾಬ್ದಾರಿಯನ್ನು ಗಮನದಲ್ಲಿಟ್ಟು, ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

     

     

    ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ತುಕಾರಾಂ, ವಿಧಾನಸಭಾ ಸದಸ್ಯರಾದ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ತಿನ ಸದಸ್ಯರಾದ ಬಸವನಗೌಡ ಬಾದರ್ಲಿ, ಹಾಗೂ ಸದಸ್ಯರು ಮತ್ತು ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತರಾದ ವಾಸಿರೆಡ್ಡಿ ವಿಜಯಜೋತ್ನಾ, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಸರ್ಕಾರ ನೀಡುತ್ತಿರುವ ಎಲ್ಲಾ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು – ಸಚಿವ ಕೆ.ಎಚ್. ಮುನಿಯಪ್ಪ

    ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ತಿಳಿಸಿದರು.

    ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಜಿಲ್ಲೆಯ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ, ಬ್ರಿಗೇಡ್ ಫೌಂಡೇಷನ್‌ನಿಂದ ಸಿ.ಎಸ್.ಆರ್. ಅನುದಾನದಡಿ ನಿರ್ಮಿಸಲಾದ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು 2023 ಅಕ್ಟೋಬರ್ 02ರ ಗಾಂಧಿ ಜಯಂತಿ ದಿನದಂದು ಶಾಲೆಗಳ ನವೀಕರಣ, ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಒತ್ತು ನೀಡಲು ನಮ್ಮ ಸರ್ಕಾರವು ಎಲ್ಲಾ ಖಾಸಗಿ ಸಂಸ್ಥೆಗಳೊಂದಿಗೆ ಒಡಗೂಡಿ ಸಿ.ಎಸ್.ಆರ್. ಅನುದಾನದಡಿ ಶಾಲೆಗಳ ಅಭಿವೃದ್ಧಿಗೆ ತೀರ್ಮಾನ ಕೈಗೊಂಡಿತು. ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯವಾಗಿದೆ ಎಂದರು.

     

    ಎಲ್.ಕೆ.ಜಿ ಯಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಬಡವರು, ರೈತರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ನೀಡಬೇಕು ಎಂಬುದು ನಮ್ಮ ತೀರ್ಮಾನ. ಬಹುತೇಕ ಕಂಪನಿಗಳು ಸಿ.ಎಸ್.ಆರ್. ಅನುದಾನದಡಿ ಕಾನ್ವೆಂಟ್ ಮಾದರಿ ಶಾಲೆ ಅಭಿವೃದ್ಧಿಪಡಿಸಲು ಪಣ ತೊಡಲಾಗಿದೆ ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಿ ದೇಶ ಸೇವೆಯ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನತೆ ಸಿಗಬೇಕು. ಜಗತ್ತಿನ ಬಲಿಷ್ಠ ರಾಷ್ಟ್ರಗಳ ಜೊತೆ ಭಾರತವನ್ನು ಕೊಂಡೊಯ್ಯಲು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂಬುದು ನಮ್ಮ ಆಶಯ ಎಂದರು.

     

    ನಮ್ಮ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದವರು ಸರ್ಕಾರಿ ಶಾಲೆಗಳ ಸುಧಾರಣೆಗೆ ಸಹಕಾರವನ್ನು ನೀಡುತ್ತಿರುವುದು ಶ್ಲಾಘನೀಯ ಭಾರತ ರತ್ನ ಪಡೆದಿರುವ ನಮ್ಮ ಸರ್. ಎಂ. ವಿಶ್ವೇಶ್ವರಯ್ಯ ಅವರು ಯಾವ ರೀತಿ ಹಂತ ಹಂತವಾಗಿ ಬೆಳೆದು ಇಡೀ ಜಗತ್ತಿಗೆ ಮಾದರಿಯಾದವರು,ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಹಾಗಾಗಿ ಇವರ ಆದರ್ಶಗಳು ಮತ್ತು ನಡೆದ ಹಾದಿಯನ್ನು ಅರಿತು ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕು. “ಇಂದಿನ ಮಕ್ಕಳೇ ನಾಳಿನ ಪ್ರಜೆಗಳು” ಎಂದು ಗಾಂಧಿಯವರು ಹೇಳಿರುವ ಮಾತನ್ನು ವಿದ್ಯಾರ್ಥಿಗಳು ಮನಸ್ಸಿನಲ್ಲಿ ನಾಟಿಕೊಳ್ಳಬೇಕು. ಮಕ್ಕಳಿಗೆ ಮೊದಲ ಗುರು ತಂದೆತಾಯಿ, ನಂತರ ಶಿಕ್ಷಕರು; ಆದ್ದರಿಂದ ಶಿಕ್ಷಕರು ನೀಡುವ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

    ಇನ್ಫೋಸಿಸ್ ಸಂಸ್ಥೆಯವರು ₹150 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳ ನವೀಕರಣ ಕಾರ್ಯವನ್ನು ಕೈಗೊಂಡಿದ್ದಾರೆ. ಹಾಗಾಗಿ ಸರ್ಕಾರ ನೀಡುತ್ತಿರುವ ಎಲ್ಲಾ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ಖಾಸಗಿ ಶಾಲೆಯ ಮಕ್ಕಳಿಗಿಂತ ಕಡಿಮೆ ಅಲ್ಲ ಎಂಬ ರೀತಿಯಲ್ಲಿ ಮುನ್ನುಗ್ಗಬೇಕು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಜಿ.ಪಂ ಸಿಇಒ ಡಾ. ಕೆ.ಎನ್. ಅನುರಾಧ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ. ಪಿ, ಬ್ರಿಗೇಡ್ ಫೌಂಡೇಷನ್ ಸಿಇಒ ಶಿವಯೋಗಿ ಸಿ. ಕಳಸದ, ಬ್ರಿಗೇಡ್ ನಾರ್ತ್ ಪ್ರಾಜೆಕ್ಟ್‌ನ ಸೀನಿಯರ್ ವೈಸ್ ಪ್ರೆಸಿಡೆಂಟ್ ಬಾಲಸುಬ್ರಮಣ್ಯನ್ ಎಂ.ಎನ್, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಜಗನ್ನಾಥ್, ವಿಶ್ವನಾಥಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವೆಂಕಟಮ್ಮ ಸೇರಿದಂತೆ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

     

  • ಪ್ರಜಾ ವಿಮೋಚನಾ ಚಳವಳಿ-ಸಮತಾವಾದ(PVC-S) ನ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಬಳಸುವ ಮುನ್ನ ಎಚ್ಚರ – ಸಿ.ಭವಾನಿ ಪ್ರಸಾದ್

    ದೊಡ್ಡಬಳ್ಳಾಪುರ ( ವಿಜಯಮಿತ್ರ ಸುದ್ದಿ ): ಸಂಘಟನೆಯಲ್ಲಿ ಈ ಹಿಂದೆ ಇದ್ದ ಹಲವು ಸದಸ್ಯರುಗಳನ್ನು ಉಚ್ಛಟಿಸಿ ಹುದ್ದೆಯಿಂದ ತೆರೆವುಗೊಳಿಸಲಾಗಿದೆ ಇನ್ನುಮುಂದೆ ಉಚ್ಚಾಟಿತ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಸಂಘಟನೆಯ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಈ ಸಂಘಟನೆಯ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದೆಂದು ಪ್ರಜಾ ವಿಮೋಚನಾ ಚಳವಳಿ-ಸಮತಾವಾದ(PVC-S) ನ ರಾಜ್ಯಾಧ್ಯಕ್ಷರಾದ ಸಿ.ಭವಾನಿ ಪ್ರಸಾದ್ ತಿಳಿಸಿದರು

    ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ 1 ರಿಂದ 7 ಸದಸ್ಯರಾದ ಯಡವನಹಳ್ಳಿ ಕೃಷ್ಣಪ್ಪ,ಪಿ.ಎಂ. ಮಲ್ಲಿಕಾರ್ಜುನಸ್ವಾಮಿ, ಮದ್ದೂರಪ್ಪು ,ವೆಂಕಟೇಶ್ , ಚಿನ್ನಪ್ಪ , ಜೆ.ದೇವರಾಜು, ಶ್ರಿನಿವಾಸ್ ಇವರುಗಳಿಗೆ ಈ ಪ್ರಜಾ ವಿಮೋಚನಾಚಳುವಳಿ -ಸಮತಾವಾದ(ಪಿ.ವಿ.ಸಿ.ಎಸ್)ನ ಸಂಘಟನೆಯಿಂದ ಉಚ್ಚಟನೆ ಮಾಡಲಾಗಿದ್ದು ಈ ಉಚ್ಚಾಟಿತ ವ್ಯಕ್ತಿಗಳು ಹಾಗೂ ಇನ್ನಿತರೇ ಯಾರೇ ವ್ಯಕ್ತಿಗಳಾದರೂ ಯಾವುದೇ ಕಾರಣಕ್ಕೂ ಸಂಘಟನೆಯ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಈ ಸಂಘಟನೆಯ ಹೆಸರಿನಲ್ಲಿ ಬಳಸಬಾರದು ಹಾಗೂ ಕಾರ್ಯಕ್ರಮಗಳನ್ನು ಭಮ್ಮಿಕೊಳ್ಳಬಾರದೆಂದು ಒಂದು ವೇಳೆ ಕಾರ್ಯಕ್ರಮಗಳನ್ನು ಮಾಡಿದರೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

    ರಾಜ್ಯ ಕಾರ್ಯಾಧ್ಯಕ್ಷ ದಾಸರಬೀದಿ ಮುರಳಿ ಮಾತನಾಡಿ ಸ್ಥಳೀಯವಾಗಿ ನಮ್ಮ ಸಂಘಟನೆ ವತಿಯಿಂದ ಇಬ್ಬರು ರಾಜ್ಯ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿದ್ದೇವೆ. ಇನ್ನು ಮುಂದೆ ಗ್ರಾಮ, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಶಾಖೆಗಳನ್ನು ಸದರಿ ಕಾರ್ಯದರ್ಶಿಗಳು ಸ್ಥಾಪಿಸಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಿದ್ದಾರೆ ಎಂದರು.

    ಸುದ್ದಿಗೋಷ್ಠಿಯಲ್ಲಿ ರಾಜ್ಯ ಗೌರವಅಧ್ಯಕ್ಷರಾದ ಕೆ ಎಸ್ ಸ್ವಾಮಿ, ರಾಜ್ಯಾಧ್ಯಕ್ಷರಾದ ಸಿ.ಭವಾನಿ ಪ್ರಸಾದ್,ರಾಜ್ಯ ಕಾರ್ಯಾಧ್ಯಕ್ಷ ದಾಸರಬೀದಿ ಮುರಳಿ, ರಾಜ್ಯ ಉಪಾಧ್ಯಕ್ಷ ಕುದುರೆಗೆರೆ ತಿಮ್ಮರಾಜು, ರಾಜ್ಯ ಪ್ರಧಾನಕಾರ್ಯದರ್ಶಿ ಚನ್ನಕೇಶವ, ಕಾರ್ಯದರ್ಶಿ ಮುನಿಕೃಷ್ಣ, ಖಜಾಂಚಿ ಜಗದೀಶ್, ಸಂಘಟನಾ ಕಾರ್ಯದರ್ಶಿ ಪಿ ಸುರೇಂದ್ರ, ನಾಗರಾಜ್, ಮೋಹನ್ ಕುಮಾರ್, ಶ್ರೀನಿವಾಸ್, ನಾಗವೇಣಿ, ಮುನಿರತ್ನಮ್ಮ ಸೇರಿದಂತೆ ಹಲವರು ಹಾಜರಿದ್ದರು.

     

     

  • ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾ*ವು

    ವಿದುರಾಶ್ವತ್ಥ ರೈಲು ನಿಲ್ದಾಣದ ಬಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಹೆಂಗಸು ಸುಮಾರು 45 ವರ್ಷದವಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

     

    ಯಶವಂತಪುರ ರೈಲ್ವೆ ಪೋಲಿಸ್ ಠಾಣೆ UDR.ನಂ. 113/2025 ಕಲಂ 194 BNSS ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

     

    ಚಹರೆ-165 ಸೆಂ.ಮೀ ಎತ್ತರ, ಎಣ್ಣೆಗೆಂಪು ಮೈ ಬಣ್ಣ ಇದ್ದು , ದುಂಡುಮುಖ ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.

     

    ಬಟ್ಟೆಗಳು – ಕೆಂಪು ಬಣ್ಣದ ಸೀರೆ ,ಕಪ್ಪು ಬಣ್ಣದ ಜಾಕೆಟ್ ಇದ್ದು , ವಾರಸುದಾರರು ಯಾರಾದರು ಕಂಡು ಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9108630967, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಿದೆ.

  • ದೊಡ್ಡಬಳ್ಳಾಪುರದಲ್ಲಿ ಜುಲೈ 13ರಂದು ನೆಡೆಯಲಿದೆ ರಾಜ್ಯ ಮಟ್ಟದ ಗಾಳಿಪಟ ಉತ್ಸವ

    ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಜೂಲೈ 13ರಂದು ನಗರದ ಭುವನೇಶ್ವರಿನಗರದಲ್ಲಿರುವ ಮುನಿನಂಜಪ್ಪನವರ ಜಮೀನಿನಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ತಿಳಿಸಿದರು.

     

    ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ತಾಲ್ಲೂಕಿನ ಅತ್ಯಂತ ಪ್ರಾಚೀನ ಹಾಗೂ ಜನಪ್ರಿಯ ಕಲೆಯಾದ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಕಲೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ನಮ್ಮ ಸಂಘವು ಕಳೆದ 18 ವರ್ಷಗಳಿಂದ ಗಾಳಿಪಟ ಉತ್ಸವ ಹಾಗೂ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬಂದಿದೆ.

    ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗಾಗಿ ಯುನೆಸ್ಕೋ ಮಾನ್ಯತೆ ಪಡೆದಿರುವ ಕರ್ನಾಟಕ ಜಾನಪದ ಪರಿಷತ್ತು ನಮ್ಮೊಂದಿಗೆ ಮೂರನೇ ಬಾರಿ ಈ ಗಾಳಿಪಟ ಉತ್ಸವಕ್ಕೆ ಕೈಜೋಡಿಸಿದೆ ಎಂದರು.

     

    ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘ ಮತ್ತು ಕರ್ನಾಟಕ ಜಾನಪದ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆಸಲಾಗುತ್ತಿರುವ ಈ ರಾಜ್ಯ ಮಟ್ಟದ ಗಾಳಿಪಟ ಉತ್ಸವದಲ್ಲಿ ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಅಂತರರಾಷ್ಟ್ರೀಯ ಗಾಳಿಪಟ ಪಟುಗಳ ಜೊತೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಂದ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಗಾಳಿಪಟ ಉತ್ಸವಗಳಲ್ಲಿ ಭಾಗವಹಿಸಿರುವ ಬೆಳಗಾವಿಯ ಹೈಫೈಯರ್ಸ್ ತಂಡದ ಸಂದೇಶ್ ಕಡ್ಡಿ ಸೇರಿದಂತೆ ಮಂಡ್ಯದ ಗಾಳಿಪಟ ಕಲಾವಿದರೂ ಭಾಗವಹಿಸಿ ತಮ್ಮ ಗಾಳಿಪಟ ಕಲೆಯ ಕೈಚಳಕವನ್ನು ಪ್ರದರ್ಶಿಸಲಿದ್ದಾರೆ ಎಂದರು.

     

    ಈ ಉತ್ಸವವನ್ನು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜ್ ರವರು ಉದ್ಘಾಟಿಸಲಿದ್ದು ಮುಖ್ಯ ವೇದಿಕೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್‌, ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಅಧ್ಯಕ್ಷರಾದ ಶ್ರೀ ಎಲ್.ಎನ್. ಶ್ರೀನಾಥ್ ರವರು ಉಪಸ್ಥಿತರಾಗಿರುತ್ತಾರೆ ಎಂದು ತಿಳಿದರು.

    ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ದೊಡ್ಡಬಳ್ಳಾಪುರದಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಐದು ಜನ ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಗುತ್ತದೆ ಅಲ್ಲದೇ ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ದ ಉದ್ಘಾಟನೆಯನ್ನು ಸಹ ಮಾಡಲಾಗುವುದು ಹಾಗೂ ಮಕ್ಕಳಿಗಾಗಿ ಉಚಿತ ಗಾಳಿಪಟ ತಯಾರಿಕಾ ಕಾರ್ಯಾಗಾರವನ್ನು ಸಹ ಆಯೋಜನೆ ಮಾಡಲಾಗಿದೆ ಎಂದರು.

     

    ಈ ರಾಜ್ಯ ಮಟ್ಟದ ಗಾಳಿಪಟ ಉತ್ಸವಕ್ಕೆ ತಾವೆಲ್ಲರೂ ಆಗಮಿಸಿ ಗಾಳಿಪಟ ಉತ್ಸವವನ್ನು ಯಶಸ್ವಿಗೋಳಿಸಬೇಕಾಗಿ ತಾಲ್ಲೂಕಿನ ಜನತೆಯಲ್ಲಿ ಮನವಿ ಮಾಡಿದರು ಈ ವೇಳೆ ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

  • ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಕುರಿತು ಸಂಪೂರ್ಣ ಮಾಹಿತಿ….

    ನಾಳೆ ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಒಳಗೊಂಡತೆ ಕೇಂದ್ರದ ಹಲವು ಪ್ರಭಾವಿ ಮಂತ್ರಿಗಳು ತಾಲ್ಲೂಕಿಗೆ ಬರಲಿದ್ದಾರೆ ಏಕೆ ಅಂತೀರಾ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

     

     

    ಹೌದು ಜುಲೈ 10 ರಂದು ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

     

    ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕುಮಾರಿ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಕೆ ಎಚ್‌ ಮುನಿಯಪ್ಪ ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

     

  • ನಿರ್ಮಾಪಕ ಪುಟ್ಟರಾಜುರೆಡ್ಡಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಮಾನ್ ಸ್ಟರ್ (MONSTER ) ಚಿತ್ರ ತಂಡ

    ದೊಡ್ಡಬಳ್ಳಾಪುರ : ಮಾನ್ ಸ್ಟರ್ (MONSTER) ಚಲನಚಿತ್ರದ ನಿರ್ಮಾಪಕರು ಹಾಗೂ ಸಮಾಜಸೇವಕರಾದ ಪುಟ್ಟರಾಜುರೆಡ್ಡಿ ರವರ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ಆಚರಿಸಲಾಯಿತು.

     

    ನೂರಾರು ಗಣ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಶ್ರೀಯುತರಿಗೆ ಶುಭ ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಉತ್ತಮ ಸಂದೇಶಉಳ್ಳ, ಪ್ರಸ್ತುತ ವಾಸ್ತವಿಕ ಸ್ಥಿತಿಯನ್ನು ಮಕ್ಕಳ ಮನಸ್ಸಿನ ಗೊಂದಲವನ್ನು ಅವರ ಮೇಲೆ ಮಾದಕವಸ್ತುಗಳು ಭೀರುವ ಪ್ರಭಾವ ಅದರಿಂದ ಉಂಟಾಗುವ ತೊಂದರೆಗಳ ಸುತ್ತ ಈ ಮಾನ್ ಸ್ಟರ್ ಕಥೆ ನೆಡೆಯಲ್ಲಿದ್ದು, ಸಮಾಜದ ನೈಜತೆಯನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದೇವೆ ಎಂದರು.

    ಈ ಸಿನಿಮಾದಲ್ಲಿ ನಟ ಧರ್ಮ ಕೀರ್ತಿರಾಜ್, ತ್ರಿಲರ್ ಮಂಜು, ತುಕಾಲಿ ಸಂತೋಷ್, ನವಾಜ್ ಸೇರಿದಂತೆ ನಲವತ್ತಕ್ಕೂ ಅಧಿಕ ಅದ್ದೂರಿ ಕಲಾವಿದರ ತಂಡ ನಟಿಸಿದೆ ಅಲ್ಲದೇ ನಮ್ಮ ತಾಲ್ಲೂಕಿನ ಪ್ರತಿಭೆಗಳಾದ ಕಾಂತ್ ರಾಜ್ , ಅಂಜಿ,ಸೇರಿದಂತೆ ಹಲವು ಪ್ರತಿಭಾನ್ವಿತ ಕಲಾವಿದರು ಈ ಚಲನಚಿತ್ರದಲ್ಲಿ ನಟನೆ ಮಾಡಿದ್ದಾರೆ ಎಂದರು.

    ಇನ್ನೂ ಕೆಲವೇ ದಿನಗಳಲ್ಲಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮ ಮಾಡುವ ಮೂಲಕ ಮಾನ್ ಸ್ಟರ್ (MONSTER ) ಚಿತ್ರದ ಪ್ರಿ ರಿಲೀಸ್ ಇವೆಂಟ್ ಮಾಡಲಾಗುವುದು, ಕಾರ್ಯಕ್ರಮ ನೆಡೆಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದರು.

  • ಫೋಟೋ ಮತ್ತು ವಿಡಿಯೋ ಕಾರ್ಯಗಾರದ ತರಬೇತಿಗೆ ಚಾಲನೆ

    ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ ದಿನಾಂಕ 05.07.2025 ಹಾಗೂ 06.07.2025 ರಂದು ಫೋಟೋ ಮತ್ತು ವಿಡಿಯೋ ಕಾರ್ಯಗಾರದ ತರಬೇತಿಗೆ ಚಾಲನೆ ನೀಡಲಾಯಿತು.

    ಎಸ್ ಆರ್ ಎಸ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಫೋಟೋ ಮತ್ತು ವಿಡಿಯೋ ಕಾರ್ಯಗಾರದ ಕಾರ್ಯಕ್ರಮವನ್ನು ದೀಪ ಬೆಳಗಿ ಚಾಲನೆ ನೀಡಲಾಯಿತು

    ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್. ಸಂಘದ ಅಧ್ಯಕ್ಷರಾದ ಎಚ್.ಆರ್. ಮೋಹನ್ ಪ್ರಧಾನ ಕಾರ್ಯದರ್ಶಿಯಾದ ಸುರೇಶ್, ಖಜಾಂಚಿ ರಾಜು,ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು