Blog

  • 6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಮೌಲಾನ ಆಜಾದ್ ಮಾದರಿ (MAMS) ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

     

    ಅರ್ಜಿ ಸಲ್ಲಿಸುವವರು ಮೇ 10 ರೊಳಗೆ https://sevasindhuservices.karnataka.gov.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

     

    ಮೌಲಾನ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ನೆಲಮಂಗಲ,ಶಾಲೆಯಲ್ಲಿ 6 ಸೀಟುಗಳು ಮತ್ತು ಮೌಲಾನ ಆಜಾದ್ ಮಾದರಿ ಶಾಲೆ, ಹೊಸಕೋಟೆ ಟೌನ್ ಶಾಲೆಯಲ್ಲಿ 6 ಸೀಟುಗಳು ಲಭ್ಯವಿರುತ್ತದೆ.

     

    ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶೇ.75ರಷ್ಟು ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಮೀಸಲಾತಿ ನೀಡಲಾಗಿದೆ.

     

    ಮಾಹಿತಿಗಾಗಿ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸುವುದು. ಪ್ರಿಯಾ ದರ್ಶಿನಿ ಮುಖ್ಯೋಪಾಧ್ಯಾಯರು ವಿಜಯಪುರ, ದೂ.ಸಂ 9066296080. ನಾಗೇಶ್ ಮುಖ್ಯೋಪಾಧ್ಯಾಯರು ಮುತ್ತೂರು, ದೂ.ಸಂ 9743239154. ಚಿಕ್ಕತಾಯ್ಯಮ್ಮ ಮುಖ್ಯೋಪಾಧ್ಯಾಯರು ಇಸ್ಲಾಂಪುರ, ದೂ.ಸಂ 9663189408. ನಾಗೇಶ್ ಮುಖ್ಯೋಪಾಧ್ಯಾಯರು ಮುತ್ತೂರು, ದೂ.ಸಂ 9743239154.

    ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ- 080-27682882, 080- 27931899, 9845622337. 7676905779, 9986874875, 8660197516. ಹಾಗೂ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಏ.21 ರಿಂದ ಜೂ.04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ : ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

    ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ ಜಿಲ್ಲೆಯಾದ್ಯಂತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮತ್ತು ಚರ್ಮ ಗಂಟು ರೋಗದ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ.ರೈತರು ತಮ್ಮ ಜಾನುವಾರುಗಳಿಗೆ ರೋಗ ಬರದಂತೆ ತಡೆಯಲು ತಪ್ಪದೇ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

     

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ 7ನೇ ಸುತ್ತಿನ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದ ಅವರು ಕಾಲುಬಾಯಿ ಜ್ವರವು ವೈರಾಣುವಿನಿಂದ ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದೆ. ಈ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಅತಿ ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ನೇರ ಸಂಪರ್ಕ ಹಾಗೂ ಗಾಳಿಯ ಮೂಲಕ ಹರಡುತ್ತದೆ. ಚರ್ಮಗಂಟು ರಾಗವು ವೈರಾಣುವಿನಿಂದ ಬರುವಂತಹ ರೋಗ. ಹಾಗಾಗಿ ಈ ರೋಗಗಳನ್ನು ನಿಯಂತ್ರಿಸಲು ಜಾನುವಾರುಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆಯನ್ನು ಹಾಕಿಸಬೇಕು ಎಂದರು.

     

    ಲಸಿಕೆ ಹಾಕುವವರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ತಪ್ಪದೇ ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವ ಮೂಲಕ ಆರ್ಥಿಕ ನಷ್ಟವನ್ನು ತಡೆಯಬಹುದು ಎಂದು ರೈತರಿಗೆ ಸಲಹೆ ನೀಡಿದರು.

     

    ಜಾನುವಾರಗಳಿಗೆ ಅರೋಗ್ಯದ ಸಮಸ್ಯೆ ಕಂಡುಬಂದಲ್ಲಿ ‘1962’ ಪಶು ಸಹಾಯವಾಣಿಗೆ ಕರೆಮಾಡಿ, ತಮ್ಮ ವಿಳಾಸ, ಜಾನುವಾರು ಆರೋಗ್ಯ ಸಮಸ್ಯೆ, ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ನೀಡಿ, ನೊಂದಾಯಿಸಿದ ನಂತರ ಹತ್ತಿರದ ಸಂಚಾರಿ ತುರ್ತು ಪಶು ಚಿಕಿತ್ಸಾಲಯದ ಆಂಬುಲೆನ್ಸ್ ಸೇವೆಯನ್ನು ಪಡೆಯಬಹುದು ಎಂದರು.

     

    ಪಶುಪಾಲಾನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕು ಪಶು ವೈದ್ಯಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

  • ದೊಡ್ಡಬಳ್ಳಾಪುರ : ನಗರದ  5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ)  ಪ್ರಾರಂಭ

    ದೊಡ್ಡಬಳ್ಳಾಪುರ : ನಗರ ಭಾಗದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ)  ಪ್ರಾರಂಭಗೊಂಡಿದ್ದು ಮೊದಲ ದಿನವಾದ ಇಂದು 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪತ್ರಿಕೆಯನ್ನು ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ.

     

    ನಗರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು,  ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ   ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ,ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಮತ್ತು   ಶ್ರೀ ವಾಣಿ ಪದವಿ ಪೂರ್ವ ಕಾಲೇಜುಗಳಲ್ಲಿ  ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ   ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸುವ ದೃಶ್ಯ ಕಂಡು ಬಂತು.

     

    ಮೊದಲ ದಿನ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪತ್ರಿಕೆಯನ್ನು ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಸಿಇಟಿ ಪರೀಕ್ಷಾ ಕೇಂದ್ರದ  ಸುತ್ತ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ. 5 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಸೇರಿದಂತೆ  ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ  ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ  ಮಾಡಿದ್ದಾರೆ.

     

    ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಕಡಿವಾಣಕ್ಕಾಗಿ ಕ್ಯೂ ಆರ್ ಸ್ಕ್ಯಾನ್ (QR Scan) ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರಿಶೀಲಿಸಿ ಕ್ಯೂಅರ್ ಸ್ಕ್ಯಾನ್ ಮಾಡುತ್ತಿದ್ದ ದೃಶ್ಯ ಕಂಡು ಬಂತು. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೆ ಪೊಲೀಸ್ ಮತ್ತು ಪರೀಕ್ಷಾ ಸಿಬ್ಬಂದಿ ಯವರು ಕಟ್ಟುನಿಟ್ಟಾಗಿ ಸಮವಸ್ತ್ರ ಪಾಲನೆ, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ ತಪಾಸಣೆ ಮಾಡುತ್ತಿದ್ದರು.

     

    ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ  ಸಿಇಟಿ ಪರೀಕ್ಷೆಯ  5 ಪರೀಕ್ಷಾ ಕೇಂದ್ರಗಳಲ್ಲಿ   ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ.  ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ‌ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688,     ಮಾದಗೊಂಡನಹಳ್ಳಿ  ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  432,    ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  360,  ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270,  ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271  ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ  ಬರೆಯಲು ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದರು.

  • ಸರಕು ನಿರ್ವಹಣೆಯನ್ನು ಸುಗಮಗೊಳಿಸಲು “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ” ಜಾರಿಗೊಳಿಸಿದ ಬೆಂಗಳೂರು ವಿಮಾನ ನಿಲ್ದಾಣ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋ ಟರ್ಮಿನಲ್‌ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್ ಮೊಬಿಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ”ಯನ್ನು ಜಾರಿಗೊಳಿಸಿದೆ.

     

    ಸರಕು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ವಿಮಾನ ನಿಲ್ದಾಣದಲ್ಲಿ ಟ್ರಕ್ ಚಲನೆಯ ಏರಿಕೆ ಅನಿವಾರ್ಯವಾಗಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಶೆಲ್ ಚಲನಶೀಲತೆಯೊಂದಿಗೆ ಬೆಂಗಳೂರು ಕಾರ್ಗೋ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಟ್ರಕ್ ನಿರ್ವಹಣಾ ಸೌಲಭ್ಯವನ್ನು (ಎಟಿಎಂಎಫ್) ಅಭಿವೃದ್ಧಿಪಡಿಸಿದೆ.

     

    ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಈ ಸೌಲಭ್ಯವು ತಡೆರಹಿತ ಸರಕು ಸಾಗಣೆ ಮಾಡಲಾಗುತ್ತಿದೆ, ದಟ್ಟಣೆಯನ್ನು ಕಡಿಮೆ ಮಾಡುವ ಜೊತೆಗೆ, ದಕ್ಷತೆಯನ್ನು ಹೆಚ್ಚಿಸುತ್ತದೆ, ಭಾರತದ ಪ್ರಧಾನ ಸರಕು ಕೇಂದ್ರವಾಗಿ ಬೆಂಗಳೂರು ವಿಮಾನ ನಿಲ್ದಾಣದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ.

     

    ಪ್ರತಿದಿನ ಸುಮಾರು 1,600 ಟ್ರಕ್‌ಗಳನ್ನು ನಿರ್ವಹಿಸುತ್ತಿರುವ ಬೆಂಗಳೂರು ಕಾರ್ಗೋ ದಟ್ಟಣೆ, ವಿಳಂಬ ಮತ್ತು ಸೀಮಿತ ಚಾಲಕ ಸೌಲಭ್ಯಗಳಂತಹ ಪ್ರಮುಖ ಅಸಮರ್ಥತೆಗಳನ್ನು ಎದುರಿಸುವಂತಾಗಿತ್ತು. ಇದೀಗ 250 ಕ್ಕೂ ಹೆಚ್ಚು ಪಾರ್ಕಿಂಗ್ ಕೊಲ್ಲಿಗಳೊಂದಿಗೆ, ಎಟಿಎಂಎಫ್ ಡಿಜಿಟಲ್ ಸಂಸ್ಕರಣೆ, ಸ್ವಯಂಚಾಲಿತ ಅನುಮೋದನೆಗಳು ಮತ್ತು ತಡೆರಹಿತ ಸರಕು ಚಲನೆಯ ಮೂಲಕ ಕಾರ್ಯಾಚರಣೆಯನ್ನು ಉತ್ತಮಗೊಳಿಸುತ್ತದೆ.

     

    ತಂತ್ರಜ್ಞಾನ-ಚಾಲಿತ ದಕ್ಷತೆ

    ಸುಧಾರಿತ ಡಿಜಿಟಲ್ ಪರಿಹಾರಗಳನ್ನು ನಿಯಂತ್ರಿಸುವ ಮೂಲಕ, ಎಟಿಎಂಎಫ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟ್ರಕ್ ಆಂದೋಲನವನ್ನು ಪರಿವರ್ತಿಸಿದೆ:

    • ಸ್ವಯಂಚಾಲಿತ, ಸಾಮಾನ್ಯ ಪೂರ್ವ-ಪರಿಶೀಲನೆ ಐಎನ್‌ಎಸ್, ಪೇಪರ್‌ಲೆಸ್ ಎಂಟ್ರಿ ಮತ್ತು ಡಿಜಿಟಲೈಸ್ಡ್ ಪಿಕ್-ಅಪ್‌ಗಳು ಮತ್ತು ನಿರ್ಗಮನ ಪ್ರಕ್ರಿಯೆಗಳು ಟ್ರಕ್ ಕ್ಲಿಯರೆನ್ಸ್ ಅನ್ನು ವೇಗಗೊಳಿಸುತ್ತವೆ

    • ಚೆಕ್-ಇನ್‌ಗಳಿಗಾಗಿ ಹ್ಯಾಂಡ್‌ಹೆಲ್ಡ್ ಸಾಧನಗಳು ಟ್ರಕ್ ಟರ್ನ್‌ರೌಂಡ್ ಸಮಯವನ್ನು ನಾಲ್ಕು ಗಂಟೆಗಳಿಂದ ಕೇವಲ ಒಂದು ಗಂಟೆಯವರೆಗೆ ಕಡಿತಗೊಳಿಸಿವೆ, 78% ಟ್ರಕ್‌ಗಳು ಸರಕು ಟರ್ಮಿನಲ್‌ಗಳನ್ನು ಪ್ರವೇಶಿಸುವ ಮೊದಲು 20 ನಿಮಿಷಗಳಿಗಿಂತ ಕಡಿಮೆ ಕಾಯುತ್ತಿವೆ

    • 24/7 ಸಿಸಿಟಿವಿ ಮಾನಿಟರಿಂಗ್ ಸುರಕ್ಷತೆ ಮತ್ತು ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಹೆಚ್ಚಿಸುತ್ತದೆ

    • ಅಪ್ಲಿಕೇಶನ್ ಆಧಾರಿತ ಅನುಮೋದನೆ ಕಾರ್ಯವಿಧಾನಗಳು ವೇಗವಾಗಿ, ಡಿಜಿಟಲೀಕರಣಗೊಂಡ ಟ್ರಕ್ ಕ್ಲಿಯರೆನ್ಸ್ ಅನ್ನು ಸಕ್ರಿಯಗೊಳಿಸುತ್ತವೆ, ಲಾಜಿಸ್ಟಿಕ್ಸ್ ದಕ್ಷತೆಯನ್ನು ಉತ್ತಮಗೊಳಿಸುತ್ತವೆ

    ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, “ಬೆಂಗಳೂರು ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಲ್ಲಿ ಬೇಡಿಕೆ ಹೆಚ್ಚಾದಂತೆ ಸರಕುಗಳ ನಿರ್ವಹಣೆ ಸವಾಲಾಗಿತ್ತು. ಇದೀಗ ಶೆಲ್ ಮೊಬಿಲಿಟಿ ಇಂಡಿಯಾದೊಂದಿಗೆ ಬೆಂಗಳೂರು ವಿಮಾನ ನಿಲ್ದಾಣವು “ಟ್ರಕ್ ನಿರ್ವಹಣಾ ಸೌಲಭ್ಯ”ವನ್ನು ಅಳವಡಿಸಿಕೊಂಡ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ. ಈ ನೂತನ ವ್ಯವಸ್ಥೆಯ ಮೂಲಕ ಟ್ರಕ್ ನಿರ್ವಹಣಾ ಸೌಲಭ್ಯ ಮತ್ತು ಸರಕು ಟರ್ಮಿನಲ್‌ಗಳಲ್ಲಿ ಸಂಪೂರ್ಣ ಸ್ವಯಂಚಾಲಿತ ಹಾಗೂ ಕಾಗದರಹಿತ ಟ್ರಕ್ ಪ್ರವೇಶ ಮತ್ತು ನಿರ್ಗಮನ ಪ್ರಕ್ರಿಯೆ ನಡೆಯಲಿದೆ. ಇದು ಸರಕು ಸಾಗಣೆಯಲ್ಲಿ ವೇಗಗತಿ ಹೊಂದಲಿದ್ದು, ಯಾವುದೇ ದಟ್ಟಣೆಗೆ ಕಾರಣವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

  • ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

     

    ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದರು.

     

    ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು.

     

    ಬಜೆಟ್ ನ ಗಾತ್ರ 38 ಸಾವಿರ ಕೋಟಿ ಹೆಚ್ಚಳ- ಇದು ಆರ್ಥಿಕ ದಿವಾಳಿತನವೇ?

     

    ಗ್ಯರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿರುವ ಬಗ್ಗೆ ಉತ್ತರ ನೀಡುತ್ತಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

     

    ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ

    ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು.

     

    ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ

    ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

     

    ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ

    ಬಿಜೆಪಿಯವರು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

     

  • ಸಮಾನತೆ ಸಂದೇಶ ಸಾರಿದ ಮಹಾನ್ ನಾಯಕ ಡಾ. ಬಿ.ಆರ್.ಅಂಬೇಡ್ಕರ್

    ಶಿವಮೊಗ್ಗ: ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಂತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ ಎಂದು ಭಾರತ ಸ್ಕೌಟ್ ಅಂಡ್ ಗೈಡ್ಸ್ ನ ಜಿಲ್ಲಾ ಸ್ಕೌಟ್ ಆಯುಕ್ತರಾದ ಎಸ್ ಜಿ ಆನಂದ್ ಮಾತನಾಡಿದರು

     

    ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್135ನೇ ಜಯಂತಿ ಅಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಸಂವಿಧಾನ ವ್ಯವಸ್ಥೆಯಿಂದ ಎಲ್ಲರಿಗೂ ಅವಕಾಶ ಸಿಗುತ್ತಿದ್ದು, ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು. ಅವರ ಕೃತಿಗಳನ್ನು ಯುವಜನತೆ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

     

     

    ಅಂಬೇಡ್ಕರ್ ಅವರು ಶೋಷಿತ ವರ್ಗದ ಧ್ವನಿಯಾಗಿದ್ದರು. ಲಂಡನ್‌ನಲ್ಲಿ ಅಧ್ಯಯನ ನಡೆಸಿದ ಅವರು ನಂತರ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು. ಸಮಸಮಾಜದ ಕನಸು ಕಂಡಂತಹ ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದರು ಎಂದು ಹೇಳಿದರು.

     

     

    ಸ್ಕೌಟ್ ಕೇಂದ್ರ ಸಾನಿಕ ಆಯುಕ್ತರಾದ ಜಿ ವಿಜಯ ಕುಮಾರ್ ಅವರು ಮಾತನಾಡುತ್ತಾ. ಎಲ್ಲಾ ದೇಶದ ಸಂವಿದಾನ ಕ್ಕಿಂತ ನಮ್ಮ ದೇಶದ ಸಂವಿಧಾನ ತುಂಬಾ ವಿಶೇಷವಾದದ್ದು ಅಂಬೇಡ್ಕರ್ ಅವರ ತತ್ವ ಆದರ್ಶ ಗುಣಗಳು ಹಾಗೂ ಆಡಳಿತಾತ್ಮಕ ಧೋರಣೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಕೇಂದ್ರ ಸ್ಥಾನಿಕ ಆಯುಕ್ತರಾದ ಮಲ್ಲಿಕಾರ್ಜುನ್ ಕಾನೂರು, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರಯ್ಯ. ಎನ್ ಆರ್ ಚಂದ್ರಶೇಖರ್.. ರುದ್ರಪ್ಪ ಚೀಲೂರು ಎಂಎಲ್ ಶಾಂತಮ್ಮ. ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಗರಾಭಿವೃದ್ಧಿ ಮಂಡಳಿ, ಬೆಂಗಳೂರು ಡಾಕ್ಟರ್ ನಾಗೇಂದ್ರ ಹೊನ್ನಾಳಿ . ಚಂದ್ರಶೇಖರ್ ಗೋಣಿಗೆರೆ.. ಚಂದ್ರಶೇಖರ್ ಶಾಸ್ತ್ರಿಜಿಲ್ಲಾ ಸಂಸ್ಥೆಯ ಕೇಂದ್ರ ಕಚೇರಿಯ ಸಿಬ್ಬಂದಿಗಳು. ವಿವಿಧ ಶಾಲೆಯ ಸ್ಕೌಟ್ ಕ್ಲಬ್ ಗೈಡ್ ಬುಲ್ ಬುಲ್. ರೋವರ್ಸ್ ರೆಂಜರ್ಸ್ ಹಾಜರಿದ್ದರು.

  • ಡಾ. ಬಿ ಆರ್ ಅಂಬೇಡ್ಕರ್ ಜಯಂತಿ : ಆಹಾರ ವಿತರಣೆ ಮಾಡುವ ಮೂಲಕ ವಿಶೇಷ ದಿನದ ಆಚರಣೆ

    ದೊಡ್ಡಬಳ್ಳಾಪುರ : 134 ನೇ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶಾಲಾ ಮಕ್ಕಳೊಂದಿಗೆ ವಿಶೇಷವಾಗಿ ನಿರಂತರ ಅನ್ನದಾಸೋಹ ಸಮಿತಿ ಆಚರಿಸಿತು.

     

    ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ಮಕ್ಕಳಿಗೆ ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಬಾಬಾ ಸಾಹೇಬರ ಜನ್ಮದಿನವನ್ನು ಆಚರಿಸಲಾಯಿತು .

     

    ಕೆ.ಸತೀಶ್ ಕುಮಾರ್ ಇವರ ಜ್ಞಾಪಕಾರ್ಥವಾಗಿ 1846 ನೇ ದಿನದ ಅನ್ನದಾಸೋಹ ದಾನಿಗಳಾಗಿ ವಿಜಯ ಕೃಷ್ಣ ಹಾಗೂ ಕಲಾವತಿ ಕುಟುಂಬದವರು ಸಹಾಯ ಹಸ್ತ ನೀಡಿದ್ದು, ವಯೋವೃದ್ದರಿಗೆ ಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ವಿಶೇಷ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

     

    ಈ ಸಂದರ್ಭದಲ್ಲಿ ನಿರಂತರ ಅನ್ನದಾಸೋಹ ಸಮಿತಿಯ ಆಯೋಜಕ ಮಲ್ಲೇಶ್ ಮಾತನಾಡಿ ಡಾ. ಬಿಆರ್ ಅಂಬೇಡ್ಕರ್ ಅವರು ಭಾರತ ದೇಶದಲ್ಲಿ ಬಡವರ, ದಲಿತರ, ಶೋಷಿತರ ಧ್ವನಿಯಾಗಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ , ಅವರು ಸರ್ವ ಸಮುದಾಯಗಳಿಗೂ ಸಲ್ಲುವಂತಹ ವಿಶ್ವಮಾನವ ಅವರ ಸ್ಮರಣೆಯಲ್ಲಿ ಈ ದಿನವನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದರು.

     

    ಈ ಸಂದರ್ಭದಲ್ಲಿ ನಿರಂತರ ಅನ್ನದಾಸೋಹ ಸಮಿತಿಯ ಯೋಗ ಕೃಷ್ಣಪ್ಪ, ಹರೀಪ್ರಸಾದ್, ನವೀನ್, ದರ್ಶನ್ ಸೇರಿದಂತೆ ಹಲವರು ಹಾಜರಿದ್ದರು.

  • ಸಾರ್ವಜನಿಕರಿಗೆ ಪಕ್ಷಪಾತವಿಲ್ಲದೆ ಭ್ರಷ್ಟಾಚಾರ ಮುಕ್ತ ಸೇವೆ ಸಲ್ಲಿಸುವ ಮೂಲಕ ಬಾಬಾ ಸಾಹೇಬರಿಗೆ ನಮನ ಸಲ್ಲಿಸಿ – ಅನಂತರಾಜಗೋಪಾಲ

    ತೂಬಗೆರೆ : ಡಾ. ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಅಡಿಯಲ್ಲಿ ಅಧಿಕಾರ ಪಡೆದಿರುವ ನಾಯಕರು,ಅಧಿಕಾರಿಗಳು ಯಾವುದೇ ಪಕ್ಷಪಾತವಿಲ್ಲದೆ ಸಾರ್ವಜನಿಕರಿಗೆ ಸೇವೆ ಸಲ್ಲಿಸಿದಲ್ಲಿ ಬಾಬಾ ಸಾಹೇಬರಿಗೆ ನಮನ ಸಲ್ಲಿಸಿದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆದಂತ ಅನಂತರಾಜು ಗೋಪಾಲ ತಿಳಿಸಿದರು .

    ಕೆಪಿಸಿಸಿ ಸದಸ್ಯರಾದ ಎಸ್ ಆರ್ ಮುನಿರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್,ರವಿ ಸಿದ್ದಪ್ಪ,ಆರ್ ಪ್ರತಾಪ್, ಕಿಟ್ಟಿ ಕೃಷ್ಣಪ್ಪ, ಹೊಸಹಳ್ಳಿ ಗಂಗಾಧರ್, ಕರ್ನಾಟಕ ರಾಜ್ಯ ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆದಂತ ಅನಂತರಾಜು ಗೋಪಾಲ ಸೇರಿದಂತೆ ಹಲವು ಗಣ್ಯರು ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಡಾ. ಬಿ ಆರ್ ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ತಾಲೂಕಿನ ತೂಬಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 134ನೇ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಪ್ರಸ್ತುತ ರಾಜಕೀಯ ಕೇವಲ ವೋಟ್ ಬ್ಯಾಂಕ್ಗೆ ಸೀಮಿತವಾಗದೆ ಅರ್ಹ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ಮುಕ್ತವಾಗಿ ಯಾವುದೇ ಭ್ರಷ್ಟಾಚಾರವಿಲ್ಲದೆ ತಲುಪಿಸುವ ಕಾರ್ಯವಾಗಬೇಕಿದೆ, ಬಾಬಾ ಸಾಹೇಬರ ಆದರ್ಶಗಳನ್ನು ಕೇವಲ ಮಾತಿನಲ್ಲಿ ಇಟ್ಟುಕೊಳ್ಳದೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಸೇವೆ ಸಲ್ಲಿಸಿದಲ್ಲಿ ಉತ್ತಮ ಸಮಾಜದ ನಿರ್ಮಾಣ ಖಂಡಿತ, ಬಾಬಾ ಸಾಹೇಬರ ಕನಸನ್ನು ನನಸು ಮಾಡಲು ಭ್ರಷ್ಟಾಚಾರ ರಹಿತ ಸೇವೆ ಅವಶ್ಯಕತೆ ಎಂದರು.

     

    ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ತಾವು ಅನುಭವಿಸಿದ ಕಷ್ಟವನ್ನು ಇತರರು ಅನುಭವಿಸಬಾರದೆಂದು ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ , ಪ್ರಸ್ತುತ ಪರಿಸ್ಥಿತಿಯಲ್ಲಿ ಸಂವಿಧಾನದ ಅಳಿವು ಉಳಿವಿಗೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗುತ್ತಿದೆ, ಈ ವಾತಾವರಣ ಬದಲಾಗಬೇಕು ದೇಶದ ಪ್ರತಿ ಪ್ರಜೆಯೂ ಬಾಬಾ ಸಾಹೇಬರು ಕಂಡ ಕನಸಂತೆ ಜೀವಿಸುವಂತಾಗಬೇಕು , ರಾಜಕೀಯ ಕೇವಲ ಮತಗಳ ಆಧಾರದ ಮೇಲೆ ನಡೆಯದೆ ಅಂಬೇಡ್ಕರರ ಆಶಾಭಾವನೆ ಅರಿತು ಚುನಾವಣೆ ನಡೆಯಬೇಕಿದೆ ಎಂದರು.

    ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಅನ್ನದಾಸೋಹ ಏರ್ಪಡಿಸುವ ಮೂಲಕ ಸಿಹಿಹಂಚುವ ಮೂಲಕ ಸಂಭ್ರಮಿಸಲಾಯಿತು.

     

    ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ಎಸ್ ಆರ್ ಮುನಿರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್,ರವಿ ಸಿದ್ದಪ್ಪ,ಆರ್ ಪ್ರತಾಪ್, ಕಿಟ್ಟಿ ಕೃಷ್ಣಪ್ಪ, ಹೊಸಹಳ್ಳಿ ಗಂಗಾಧರ್,ಯುವನಾಯಕ ಸುನಿಲ್ ನಾರಾಯಣ್,ತೂಬಗೆರೆ ಯೂಥ್ ಕಾಂಗ್ರೆಸ್ ಅಧ್ಯಕ್ಷರಾದ ನರಸಿಂಹಮೂರ್ತಿ, ದಲಿತ ಮುಖಂಡರುಗಳಾದ ನಾಗರಾಜು,ರಾಮಕೃಷ್ಣ, ಮುನಿರಾಜು,ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು

  • ಶ್ರೀರಾಮ ಶೋಭಯಾತ್ರೆ : ಬೃಹತ್ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಯುವ ಸಮುದಾಯ : ಮುಗಿಲು ಮುಟ್ಟಿದ ಜೈ ಶ್ರೀರಾಮ್ ಘೋಷಣೆ

    ದೊಡ್ಡಬಳ್ಳಾಪುರ : ವಿಶ್ವಹಿಂದೂ ಪರಿಷತ್‌, ಬಜರಂಗದಳದ ವತಿಯಿಂದ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು,ಇಂದು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ,ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕ‌ರ್ ಪ್ರತಿಮೆಗಳ ಮೆರವಣಿಗೆ ಆಕರ್ಷಣೀಯವಾಗಿತ್ತು .

     

    ಬೃಹತ್ ಶೋಭ ಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದು, ವಿವಿಧ ಪ್ರಕಾರಗಳ ಕಲೆ ಮತ್ತು ನೃತ್ಯದ ಮೂಲಕ ಮನೋರಂಜನೆ ನೀಡಿದವು

     

    ಶ್ರೀರಾಮ ಹಾಗೂ ವಾರಾಹಿ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಹಿಂದೂಗಳು ಸಂಭ್ರಮಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ಸಾಗಿದ್ದು ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಮೆರವಣಿಗೆ ವೀಕ್ಷಣೆ ಮಾಡಿದರು.

     

     

    ಶೋಭಾ ಯಾತ್ರೆಯಲ್ಲಿ ಸಾವಿರಾರು ಹಿಂದೂಗಳು ಶ್ರೀರಾಮನ ಘೋಷಣೆಯೊಂದಿಗೆ ಡಿ ಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು, ನಂತರ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣ ವಿಶೇಷವಾಗಿದ್ದು ಸಂಜೆ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿದ್ದವು .

     

    ಶೋಭಾಯಾತ್ರೆ ಸಂದರ್ಭದಲ್ಲಿ ಯಾವುದೇ ಗಲಾಟೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್ಪಿ ರವಿ, ನಗರ ಪೊಲೀಸ್ ಠಾಣೆ ಇನ್ಸೆಕ್ಟ‌ರ್ ಅಮರೇಶಗೌಡ, ಗ್ರಾಮಾಂತರ ಪೊಲೀಸ್‌ ಠಾಣೆಯ ಸಾಧಿಕ್ ಪಾಷಾ, ಮಹಿಳಾ ಪೊಲೀಸ್ ಠಾಣೆಯ ಎಂ.ಬಿ.ನವೀನ್ ಕುಮಾ‌ರ್, ಹೊಸಹಳ್ಳಿ ಪೊಲೀಸ್ ಠಾಣೆ ರಾವ್ ಗಣೇಶ್‌ ಜನಾರ್ಧನ್ ಸೇರಿದಂತೆ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

     

     

     

     

  • ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು- ಡಿಸಿಎಂ ಡಿ.ಕೆ.ಶಿವಕುಮಾರ್

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ  ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಜೊತೆಗೆ ಸಾಥ್ ನೀಡಿದರು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ, ಸಾಕಷ್ಟು ಭಕ್ತರು ಇಲ್ಲಿಗೆ ಪ್ರತಿ ದಿನ ಆಗಮಿಸುತ್ತಾರೆ. ಈಗಾಗಲೇ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕರಾದ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಶ್ರೀ ಕ್ಷೇತ್ರ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು  ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.