Blog

  • ಇಂದಿನ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲೆ ಬಹಳ ಮುಖ್ಯ- ಎಸ್.ಸಿ.ರಾಮಚಂದ್ರ

    ಶಿವಮೊಗ್ಗ : ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ತುಂಬಾ ಪೂರಕ ಎಂದು ನಿವೃತ್ತ ಕಾರ್ಮಿಕ ಅಧಿಕಾರಿ ರೂ.ಣಿ.ಷ ಛಾರಟಿ/ಬಿಲ್ ಟ್ರಸ್ಟ್ ನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಅಭಿಮತ ವ್ಯಕ್ತಪಡಿಸಿದರು.

     

    ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಚಿಕ್ಕ ಮಕ್ಕಳ ಗ್ರಾಜುಯೇಷನ್ ಸೆರಮನಿ 2024-25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲೆ ಬಹಳ ಮುಖ್ಯ. ಚಿಕ್ಕ ಮಕ್ಕಳಿಗೆ ಈಗ ಗ್ರಾಜುಯೇಷನ್ ಡೇ ಅವರ ಜೀವನದಲ್ಲಿ ಸದಾ ಹಸಿರಾಗಿರುತ್ತದೆ ಎಂದು ನುಡಿದರು.

     

    ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಹಿಂದೆ ಪದವಿ ಪಡೆದಾಗ ಈ ರೀತಿ ಕೋರ್ಟ್ ಹಾಗೂ ಪೇಟ ಹಾಕಿ ಗೌರವಿಸಿದ್ದನ್ನು ಮರೆಯಲು ಆಗುವುದಿಲ್ಲ. ಇಂದಿನ ಮಕ್ಕಳಿಗೆ ಈ ರೀತಿ ಗ್ರಾಜುಯೇಷನ್ ಡೇ ಮಾಡುವುದರಿಂದ ಚಿಕ್ಕ ಮಕ್ಕಳ ಪೋಷಕರು ಮತ್ತು ಮಕ್ಕಳಿಗೆ ಆತ್ಮವಿಶ್ವಾಸ ಹಾಗೂ ಉತ್ಸಾಹ ಹೆಚ್ಚುತ್ತದೆ. ಇದರಿಂದ ಅವರ ಕಲಿಕಾ ಸಾಮರ್ಥ್ಯವು ಕೂಡ ಹೆಚ್ಚುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.

     

    ಇದೇ ಸಂದರ್ಭದಲ್ಲಿ ಟ್ರಸ್ಟಿನ ಕಾರ್ಯದರ್ಶಿ ನಾಗವೇಣಿ.ಎಸ್.ಆರ್ ಮಾತನಾಡಿ, ಇಂದು ಮಕ್ಕಳು ತುಂಬಾ ಬುದ್ಧಿವಂತರು ಮತ್ತು ಪರಿಣಿತರು ಇದ್ದಾರೆ. ಹಾಗಾಗಿ ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಓದಲು ಹುರಿದುಂಬಿಸಬೇಕು. ಆಗ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು.

    ಗ್ರಾಜುಯೇಷನ್ ಡೇ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸೂರ್ಯನಾರಾಯಣ, ಶಿಕ್ಷಕರು ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

     

  • ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ‌ ಪ್ರಥಮ‌ ಸ್ಥಾನ‌ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ಚೆಸ್ ಪ್ರತಿಭೆ ಎನ್.ಸನ್ವಿತ

    ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆಯ ಅಚೀವರ್ಸ್ ಚೆಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿ ಸನ್ವಿತ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

     

    ತಾಲೂಕಿನ ಸಾಸಲು ಹೋಬಳಿ ಪುಟ್ಟಲಿಂಗಯ್ಯನಪಾಳ್ಯ (ಲಿಂಗದವೀರನಹಳ್ಳಿ) ಗ್ರಾಮದ ವಾಣಿಜ್ಯತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ನರಸಿಂಹಮೂರ್ತಿ ಹಾಗೂ ದೊಡ್ಡಬಳ್ಳಾಪುರ ನಗರದ ಶಿಕ್ಷಣ ಸಂಯೋಜಕರಾದ ಜಯಶ್ರೀ ಕೆ.ಜೆ ದಂಪತಿಯ ಮಗಳಾದ ಸನ್ವಿತ ಎನ್ ಚೆಸ್ ಪಂದ್ಯಾವಳಿಯಲ್ಲಿ ಅಭೂತಪೂರ್ವ ಆಟವಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.

    ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ‌ ಪಡೆದ ಸನ್ವಿತಾ ಎನ್ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಗಣ್ಯರು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.

  • ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಏ.04 ಕೊನೆಯ ದಿನ

    ಬೆಂಗಳೂರು ಗ್ರಾಮಾಂತರ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

     

    ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

     

    ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

    ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.

    ತರಬೇತಿ ಪಡೆಯುವ ವೇಳೆ ರೂ.2000/- ಗಳು ಮಾಹೆಯಾನ ಸ್ಟೈಪೆಂಡ್ ನೀಡಲಾಗುವುದು.

    ತರಬೇತಿ ಹಾಜರಾಗುವವರಿಗೆ ವಸತಿ, ಊಟ ಹಾಗೂ ಸಮವಸ್ತ್ರ ನೀಡಲಾಗುವುದು.

    ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.

    IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

     

    ತರಬೇತಿಗಳು:

    1. Food and Beverage Service Steward) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು,SSLC ಅಥವಾ ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

     

    2. ಬಹು ತಿನಿಸು ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

     

    ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 04ರಂದು 5:30ರ ಒಳಗೆ ಕ ಕಚೇರಿಯ ಸಮಯದಲ್ಲಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ನಂ.09,ನೆಲಮಹಡಿ,ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

    ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

     

    ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

     

    ವೃತ್ತಿಯಲ್ಲಿ ನೇಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ಶಿವನ ಅಪಾರ ಭಕ್ತರಾಗಿದ್ದು, ರಾಮನಾಥ ಇವರ ಅಂಕಿತನಾಮ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  • ದಾಸಿಮಯ್ಯ ಅವರ ಬಗ್ಗೆ ಸಂಶೋಧನಾತ್ಮಕ ಪ್ರಬಂಧಗಳು ಹೊರಬರಬೇಕಿದೆ – ಡಿ.ಶ್ರೀಕಾಂತ

    ದೊಡ್ಡಬಳ್ಳಾಪುರ : ನಗರದ ಕುಚ್ಚಪ್ಪನ ಪೇಟೆಯಲ್ಲಿ ದೇವರ ದಾಸಿಮಯ್ಯ ಸೇವಾ ಸಮಿತಿ ವತಿಯಿಂದ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

     

    ದೇವರ ದಾಸಿಮಯ್ಯ ಅವರ ಬದುಕು ಹಾಗೂ ಸಾಹಿತ್ಯ ಕುರಿತು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ವಚನದಲ್ಲಿ ಬದುಕಿನ ಮೌಲ್ಯಗಳಿವೆ. ಸದಾ ಕಾಯಕದಲ್ಲಿಯೇ ನಿರತರಾಗಿದ್ದ ಅವರ ವಚನಗಳಲ್ಲಿ, ಕಾಯಕದ ಮಹತ್ವ ಅಡಗಿದ್ದು, ಅವರ ವಚನಗಳು ಹಲವಾರು ವಚನಕಾರರಿಗೆ ತತ್ವಜ್ಞಾನಿಗಳಿಗೆ ಸ್ಪೂರ್ತಿಯಾಗಿದೆ. ಈ ದಿಸೆಯಲ್ಲಿ ದಾಸಿಮಯ್ಯ ಅವರ ಬಗ್ಗೆ ಸಂಶೋಧನಾತ್ಮಕ ಪ್ರಬಂಧಗಳು ಹೊರಬರಬೇಕಿದೆ. ದಾಸಿಮಯ್ಯ ಅವರ ಜೀವನಗಾಥೆ ಹಾಗೂ ವಚನಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡುವ ಅಗತ್ಯವಿದೆ ಎಂದರು.

    ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಎಸ್.ವತ್ಸಲಾ, ಮಾಜಿ ಸದಸ್ಯ ಪಿ.ಸಿ.ಲಕ್ಷ್ಮೀನಾರಾಯಣ್, ಟಿ.ಎಂ.ಸಿ. ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ದೇವಾಂಗ ಮಂಡಲಿಯ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಯಕ್ಷಗಾನ ಕಲಾವಿದ ಕೆ.ಸಿ.ನಾರಾಯಣ್, ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆಯ ಸಿಇಓ ಪ್ರಿಯಾಂಕ, ದಾಸಿಮಯ್ಯ ಸೇವಾ ಸಮಿತಿಯ ಕೆ.ಎಸ್.ನರೇಂದ್ರ, ರಮೇಶ್, ಪಂಜಿನಿ ರಾಜು, ಕೆ.ಜಿ.ನಾಗೇಂದ್ರ, ವೆಂಕಟೇಶ್, ಪುನೀತ್, ದೇವಾಂಗ ಮಂಡಲಿ ಪದಾಕಾರಿಗಳು ಭಾಗವಹಿಸಿದ್ದರು.

  • ದೊಡ್ಡಬಳ್ಳಾಪುರ : ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿ ಆಚರಣೆ

    ತ್ರಿವಿದ ದಾಸೋಹಿಗಳು ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿಯ ಪ್ರಯುಕ್ತ ದೊಡ್ಡಬಳ್ಳಾಪುರ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ತಾಲ್ಲೂಕು ಕಛೇರಿ ಹತ್ತಿರ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

     

    ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ಪ್ರತಿನಿತ್ಯ ಸಾವಿರಾರು ಮಕ್ಕಳಿಗೆ ವಿದ್ಯಾದಾನ, ಲಕ್ಷಾಂತರ ಜನರಿಗೆ ಅನ್ನದಾನ ಮಾಡಿರುವ ಶ್ರೀಗಳ ಕಾರ್ಯ ನಮ್ಮೆಲ್ಲರಿಗೂ ಮಾರ್ಗದರ್ಶನ, ಕಾಯಕವೇ ಕೈಲಾಸ ಎಂಬ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಜೀವನವನ್ನೇ ಸಮಾಜಕ್ಕೆ ಸಂದೇಶವಾಗಿ ಕೊಟ್ಟಂತಹ ಮಹಾನ್ ಸಂತರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ, ಇಂದು ಅವರ 118ನೇ ಜಯಂತಿ ಆಚರಣೆ ಮಾಡುತ್ತಿದ್ದು, ಅವರನ್ನು ಸ್ಮರಿಸುವ ಸೌಭಾಗ್ಯ ನಮ್ಮದಾಗಿದೆ ಎಂದರು.

    ಪ್ರಸ್ತುತ ಯುವ ಸಮುದಾಯಕ್ಕೆ, ಮಕ್ಕಳಿಗೆ ಶ್ರೀಗಳ ಜೀವನ ಸಂದೇಶ ಹಾಗೂ ಸೇವಾ ಕಾರ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ರೂಪುಗೊಳ್ಳಲಿ ಎಂದು ಹಾರೈಸಿದರು.

     

     

    ಕಾರ್ಯಕ್ರಮದಲ್ಲಿ ಸೋಮರುದ್ರ ಶರ್ಮ, ಬಸವರಾಜು, ಮಲ್ಲಿಕಾರ್ಜುನ್, ಎಸ್ ಪ್ರಕಾಶ್, ಪುಟ್ಟಬಸವರಾಜು, ನಗರ ಸಭಾ ಅಧ್ಯಕ್ಷರು ಸುಮಿತ್ರ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಕುಮಾರ್, ನಗರ ಸಭಾ ಸದಸ್ಯರುಗಳು, ಅಖಿಲ ಭಾರತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸುಜಯ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ಗಗನ್, ಮಹಾ ಸಭಾ ಯುವಘಟಕ ಜಿಲ್ಲಾಧ್ಯಕ್ಷ ಲೋಕೇಶ್ ನಾಗಸಂದ್ರ, ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಲತಾ ಆರಾಧ್ಯ, ಮಹಿಳಾ ಘಟಕದ ಅಧ್ಯಕ್ಷರಾದ ಪ್ರೇಮಕುಮಾರಿ, ದರ್ಗಾಜೋಗಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ, ಸದಸ್ಯರಾದ ಜಯಶ್ರೀ, ತಾಲ್ಲೂಕಿನ ಶರಣ ಸಮಾಜ ಮುಖಂಡರು ಮತ್ತು ಸಮಸ್ತ ನಾಗರೀಕರು ಭಾಗವಹಿಸಿದ್ದರು.

  • ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

    ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಉನ್ನತ ಮಟ್ಟದ ಕಂಪೆನಿಗಳಲ್ಲಿ ಇಂಟರ್ನ್ ಶಿಪ್ ನೀಡುವ ಸಲುವಾಗಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ (Prime Minister’s Internship Scheme in Top Companies) ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ ಒಂದು ಕೋಟಿ ಯುವಕ/ಯುವತಿಯರಿಗೆ ಇಂಟರ್ನ್ ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಅವಕಾಶ ಕಲ್ಪಿಸಲಾಗಿದೆ.

     

    ಅಸಕ್ತಿ ಇರುವ ಅಭ್ಯರ್ಥಿಗಳು www.pmintership.mca.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 15 ರೊಳಗಾಗಿ ಅರ್ಹತೆ ಆಧಾರದ ಮೇಲೆ ಅರ್ಜಿ ಸಲ್ಲಿಸಬಹುದು.

     

    ಆಸಕ್ತಿ ಇರುವ ಯುವಕ/ಯುವತಿಯರ ವಯಸ್ಸು 21 ರಿಂದ 24 ಇರಬೇಕು. SSLC, PUC, ITI, B.A, B.Sc, BBA, B.com, BCA, B.Pharmacy ಇತ್ಯಾದಿ ವಿದ್ಯಾರ್ಹತೆ ಪೂರ್ಣಗೊಂಡಿರಬೇಕು.

     

    ಅರ್ಹತೆ

    1. ಕುಟುಂಬದ ವಾರ್ಷಿಕ ಆಧಾಯವು 2023-24ಕ್ಕೆ 8ಲಕ್ಷ ಮೀತಿಗೆ ಒಳಪಟ್ಟಿರಬೇಕು.

    2. ಕುಂಟುಂಬದ ಸದಸ್ಯರಲ್ಲಿ ಯಾವುದೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಲ್ಲದೇ ಸರ್ಕಾರಿ ಸ್ವಾಯಿತ್ಯ ಸಂಸ್ಥೆಗಳಲ್ಲಿ ಖಾಯಂ ನೌಕರರಾಗಿರಬಾರದು.

    3. ಇಂಟರ್ಶಿಪ್ ತರಬೇತಿಯು 12 ತಿಂಗಳಿಗೆ ಅವಧಿ ಇರುತ್ತದೆ.

    4. ತರಬೇತಿ ಸರಿಯಾಗಿ ಹಾಜರಾದ ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಮಾಸಿಕ 5000/- ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಸಂದಾಯಿಸಲಾಗುವುದು.

    5. ಇಂಟರ್ಶಿಪ್ಗೆ ಆಯ್ಕೆಯಾದ ಅಭ್ಯರ್ಥಿಗಳು ಕಂಪನಿ ಆಯೋಜಿಸಿದ ಸ್ಥಳದಲ್ಲಿ ಹೋಗಿ ತರಬೇತಿ ಪಡೆಯುವುದು.

    6. ಇಂಟರ್ಶಿಪ್ ಪೂರ್ಣಗೊಂಡ ನಂತರ ಅರ್ಹತೆ ಆಧಾರದ ಮೇಲೆ ರೂ.6000/- ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಸಂದಾಯಿಸಲಾಗುವುದು ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

    ಜಿಲ್ಲೆಯ ಆಸಕ್ತಿ ನಿರುದ್ಯೋಗಿ ಯುವಕ/ಯುವತಿಯರು ನೋಂದಾಯಿಸಿಕೊಂಡು ಇಂಟರ್ನ್ ಶಿಪ್ ಪ್ರಯೋಜನ ಪಡೆಯಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಹೊಸಕೋಟೆ:ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

     

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

     

    19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.

    ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಟಿ.ಎ.ಪಿ.ಸಿ.ಎಂ.ಎಸ್ ಆವರಣ, ಹೊಸಕೋಟೆ, ದೂರವಾಣಿ ಸಂಖ್ಯೆ 080-27931493 ಕ್ಕೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹೊಸಕೋಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಮಹಿಳೆಯರ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಕಾರ ಅಗತ್ಯ. ಶಿವಾನಿ ಕೋಣಂದೂರ್

    ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಬದುಕು ಹಸನವಾಗಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಂಘ ಸಂಸ್ಥೆಗಳ ನೆರವು ಅಗತ್ಯ ಎಂದು ಇಸ್ರೋ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಶಿವಾನಿ ಕೋಣಂದೂರ್ ಅಬಿಮತ ವ್ಯಕ್ತಪಡಿಸಿದರು.

     

    ಅವರು ನಗರದ ನವ್ಯಶ್ರೀ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು ಇಂದು ತಂತ್ರಜ್ಞಾನ ಮುಂದುವರಿದ ಹಾಗೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾದ ಅವಕಾಶಗಳಿವೆ ಮಹಿಳೆಯರು ಸರ್ಕಾರದಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಹಾಗೂ ಸ್ವಾವಲಂಬಿಗಳಾಗಿ ಬದುಕಿದಾಗ ಕುಟುಂಬ ಸುರಕ್ಷಿತವಾಗಿ ಸುಭಿಕ್ಷವಾಗಿ ಇರುತ್ತದೆ ಎಂದು ನುಡಿದರು.

     

    ಇಂದು ಶರಾವತಿ ಮಹಿಳಾ ಸಂಘ. ಮತ್ತು ದೈವಜ್ಞ ಮಹಿಳಾ ಸಂಘ. ಇನ್ನರ್ ವಿಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಯವರು ನಿಜಕ್ಕೂ ಮಾನವೀಯ ಸೇವೆಯನ್ನು ಮಾಡುತ್ತಿರುವುದು ತಂದಿದೆ ಎಂದು ನುಡಿದರು ಇಸ್ರೋ ಸಂಸ್ಥೆಯಲ್ಲಿ ಕರ್ನಾಟಕದ ಮಹಿಳೆಯರು ಕಾರ್ಯನಿರ್ವಹಿಸುತ್ತಿರುವುದು ತುಂಬಾ ಕಡಿಮೆ ಸಂಖ್ಯೆಯಲ್ಲಿ ಇದೆ ಆದ್ದರಿಂದ ನಮ್ಮ ರಾಜ್ಯದ ಮಹಿಳೆಯರು ಉತ್ತಮ ಕೌಶಲ್ಯಗಳನ್ನು ರೂಡಿಸಿಕೊಂಡು ಇಂತಹ ಸಂಸ್ಥೆಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಳ್ಳಬಹುದು ಎಂದು ನುಡಿದರು ನಾನು ಇದೇ ಜಿಲ್ಲೆಯಲ್ಲಿ ಹುಟ್ಟಿ ಬೆಳೆದುಇಸ್ರೋ ದಂತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದು ನುಡಿದರು

     

     

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನೋರ್ವ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ವಹಿಸಿ ಇಸ್ರೋ ಸಂಸ್ಥೆಯ. ಡೆಪ್ಯೂಟಿ ಡೈರೆಕ್ಟರ್ ಆದ ಶಿವಾನಿ ಕೋಣಂದೂರ್ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.

     

    ಇದೇ ಸಂದರ್ಭದಲ್ಲಿ ಮಾತನಾಡುತ್ತಾ ರಾತ್ರಿ ಹಗಲು ಗೊತ್ತಾಗುವುದೇ ಇಲ್ಲ ಬಿಡುವಿಲ್ಲದ ಕಾರ್ಯ ಚಟುವಟಿಕೆಗಳಲ್ಲಿ ಕುಟುಂಬದವರ ಸಹಕಾರವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದ ಅವರು ನಮ್ಮ ಇನ್ನರ್ ವೀಲ್ ಕ್ಲಬ್ ವತಿಯಿಂದ ಈಗಾಗಲೇ ಈ ವರ್ಷವಿಡಿ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಅಂಗವಿಕಲರಿಗೆ ಅಶಕ್ತರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ದಾನಿಗಳ ಸಹಾಯದಿಂದ ಸಾಕಷ್ಟು ನೆರವನ್ನ ನೀಡಿ ಪ್ರೋತ್ಸಾಹಿಸಿದ್ದೇವೆ ಎಂದು ನುಡಿದರು ಇದೇ ಸಂದರ್ಭದಲ್ಲಿ ಇನ್ನರ್ ವೀಲ್ ಜಿಲ್ಲೆ 318 ಜಿಲ್ಲಾ ವೈಸ್ ಚೇರ್ಮನ್ ಶಬರಿ ಕಡಿದಾಳ್ ಅವರು ಮಾತನಾಡುತ್ತ ಕೇವಲ ದಿನಾಚರಣೆಯನ್ನಾಗಿ ಆಚರಿಸದೆ ಮನುಕುಲದ ಸೇವೆಗಳ ಮುಖಾಂತರ ಆಚರಿಸುತ್ತಿರುವುದು ತುಂಬಾ ಅರ್ಥಪೂರ್ಣವಾಗಿದೆ ಎಂದು ನುಡಿದರು

     

    ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಮೂರು ಜನ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು.

    ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ದೈವಜ್ಞ ಮಹಿಳಾ ಸಂಘದ ಅಧ್ಯಕ್ಷರಾದ ಸೀಮಾ ಸದಾನಂದ. ಕಾರ್ಯದರ್ಶಿ ವಾಣಿ ಪ್ರವೀಣ್. ಇನ್ನರ್ ವೀಲ್ ಕಾರ್ಯದರ್ಶಿ, ಲತಾ ಸೋಮಶೇಖರ್ ,ಶರಾವತಿ ಮಹಿಳಾ ಸಂಘದ ಅಧ್ಯಕ್ಷರಾದ ಮಾಲಾ ರಾಮಪ್ಪ.. ನಮಿತಾ ಸೂರ್ಯನಾರಾಯಣ್. ವಿಜಯ ರಾಯ್ಕರ್. ರಾಜೇಶ್ವರಿ ಪ್ರತಾಪ್. ವೀಣಾ ಹರ್ಷ. ವೇದಾ ನಾಗರಾಜ್. ಮಧುರ ಮಹೇಶ್. ಆಶಾ ಶ್ರೀಕಾಂತ್. ಶ್ವೇತಾ ಆಶಿತ್. ಉಮಾ ವೆಂಕಟೇಶ್. ಇನ್ನರ್ ವೀಲ್ ಕ್ಲಬ್ಬಿನ ಮಾಜಿ ಅಧ್ಯಕ್ಷರುಗಳು ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು

  • ಶಿವಮೊಗ್ಗ ಜಿಲ್ಲೆಯ ನಾಲ್ವರು ಸ್ಕೌಟ್ ಆಯುಕ್ತರಿಗೆ ಇನ್ಸಿಗ್ನಿಯಾ ಪದಕ ಗೌರವ

    ಶಿವಮೊಗ್ಗ: ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರದಲ್ಲಿ ಶಿವಮೊಗ್ಗ ಜಿಲ್ಲೆಯ ನಾಲ್ವರು ಸ್ಕೌಟ್ ಆಯುಕ್ತರಿಗೆ ಇನ್ಸಿಗ್ನಿಯಾ ಪದಕ ಗೌರವ ನೀಡಿ ಸನ್ಮಾನಿಸಲಾಯಿತು.

     

    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರವು ಐದು ದಿನ ನಡೆಯಿತು.

     

    ದೊಡ್ಡಬಳ್ಳಾಪುರದ ಡಾ. ಅನಿಬೆಸೆಂಟ್ ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಶಿಬಿರದ ಆವರಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಶಿವಮೊಗ್ಗ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಸಹಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಮಲ್ಲಿಕಾರ್ಜುನ ಕಾನೂರು ಅವರು ರಾಜ್ಯಮಟ್ಟದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ಭಾಗವಹಿಸಿದ್ದರು.

     

     

    ರಾಜ್ಯ ಆಯುಕ್ತ ಸಿ.ಎಸ್.ರೆಡ್ಡಿ, ರಾಜ್ಯ ತರಬೇತಿ ಆಯುಕ್ತ ನಾಗೇಶ್ ಆರ್ ಶಿವಪೂರ್, ಗೋಪಾಲಕೃಷ್ಣ ಅಡಿಗ, ರಾಜ್ಯ ಗೈಡ್ಸ್ ತರಬೇತಿ ಆಯುಕ್ತೆ ಕೆ.ವಿ.ಶ್ಯಾಮಲಾ ಅವರು ಪ್ರಮಾಣ ಪತ್ರ, ಪದಕ ವಿತರಿಸಿ ಗೌರವಿಸಿದರು.

     

    ರಾಜ್ಯಮಟ್ಟದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಪದಕ ಪಡೆದ ಶಿವಮೊಗ್ಗ ನಾಲ್ವರಿಗೆ ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಆಯುಕ್ತರಾದ ಎಸ್.ಜಿ.ಆನಂದ್, ರವಿ.ಕೆ., ಚೂಡಾಮಣಿ ಪವಾರ್, ರಾಜೇಶ್ ಅವಲಕ್ಕಿ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ನ ಪದಾಧಿಕಾರಿಗಳು ಅಭಿನಂದಿಸಿದರು.