Blog

  • ಹಿರಿಯರ ಆರೈಕೆ ನಮ್ಮ ಜೀವನದ ಒಂದು ಪುಣ್ಯದ ಕೆಲಸ; ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.

    ದೊಡ್ಡಬಳ್ಳಾಪುರ;ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್. ಮುನಿಯಪ್ಪ ಉದ್ಘಾಟಿಸಿದರು

    ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡ ತಮ್ಮ ಜೀವನವನ್ನು ದನ್ಯವಾಗಿಸಬೇಕು ಈ ಕಾಲದಲ್ಲಿ ತಂದೆ ತಾಯಿಯವರನ್ನು ಕಡೆಗಣಿಸಿ ಅವರನ್ನು ವೃದ್ದಾಶ್ರಮಕ್ಕೆ ಸೇರಿಸುತ್ತಾರೆ ಈ ಪ್ರವೃತ್ತಿಯನ್ನು ಕಡಿಮೆ ಮಾಡಿಸಬೇಕು ನಾವು ನಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿದಾಗ ನಮ್ಮ ಜೀವನ ಅಸನಾಗುತ್ತದೆ ನೈಟಿಂಗೇಲ್ಸ್ ನ ವತಿಯಿಂದ ಹಿರಿಯರ ಆರೈಕೆಗಾಗಿ ಹಿರಿಯರ ಮರೆವನ್ನು ಕಡಿಮೆಗೊಳಿಸುವ ಸಲುವಾಗಿ ಸ್ಮೃತಿ ಗ್ರಾಮವನ್ನು ಆಯೋಜಿಸಿ ಅವರ ಆರೈಕೆ ಮಾಡುವ ಕಾರ್ಯ ಸಂತಸಕಾರವಾಗಿದೆ ಎಂದರು.

     

    ಈ ದಿನಗಳಲ್ಲಿ ಆಸ್ಪತ್ರೆ ,ಕಾಲೇಜು,ಕಟ್ಟುವುದು ಸಾಮಾನ್ಯವಾಗಿದೆ ಅದರಲ್ಲಿ ಹಿರಿಯರ ಆರೈಕೆಯಲ್ಲಿ ನೈಟಿಂಗೇಲ್ಸ್ ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ ಇವರಿಗೆ ನಮ್ಮ ಸರ್ಕಾರದ ವತಿಯಿಂದ ಯಾವುದೇ ರೀತಿಯ ಸಹಕಾರ ಸಹಾಯ ಬೇಕಿದಲ್ಲಿ ಸಹಕರಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಟ್ರಸ್ಟ್ ನ ರಾಧಾ ಎಸ್.ಮೂರ್ತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ,ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸದಸ್ಯರಾದ ಮಹೇಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಂಗರತ್ನಮ್ಮ ,ಮುಖಂಡರಾದ ರವಿಸಿದ್ದಪ್ಪ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಉಪಸ್ಥಿತರಿದ್ದರು.

  • ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ದೊಡ್ಡಬಳ್ಳಾಪುರ ತಾಲೂಕು ಗ್ರಾಮಂತರ ಅಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಗೌಡ, ಉಪಾಧ್ಯಕ್ಷರಾಗಿ ರಾಜೇಶ್. ಎನ್,ಶ್ರವಣೂರು ನೇಮಕ

    ದೊಡ್ಡಬಳ್ಳಾಪುರ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು, ತಾಲ್ಲೂಕು ಮಟ್ಟದ ಯೂಥ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಕೇಶ್ ಗೌಡ, ಉಪಾಧ್ಯಕ್ಷರಾಗಿ  ರಾಜೇಶ್. ಎನ್,ಶ್ರವಣೂರು ರವರನ್ನು  ನೂತನ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

    ಈ ಕುರಿತು ದೊಡ್ಡಬಳ್ಳಾಪುರ ತಾಲೂಕು ಗ್ರಾಮಂತರ ಅಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಗೌಡ ಮಾತನಾಡಿ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಿಂದ  ಸದಾ ನಿಷ್ಠೆಯಿಂದ ಸೇವೆ ಸಲ್ಲಿತ್ತಾ ಬಂದಿದ್ದೇನೆ,ಸಾಮಾನ್ಯ ಕಾರ್ಯಕರ್ತರನ್ನು ಪದಾಧಿಕಾರಿಗಳನ್ನಾಗಿ ಮಾಡುವ  ಶಕ್ತಿ ಕೇವಲ ಕಾಂಗ್ರೆಸ್ ಪಕ್ಷಕ್ಕಿದೆ , ಈ ಅವಕಾಶ ನೀಡಿರುವ  ನನ್ನೆಲ್ಲಾ ಮತದಾರ ಬಂಧುಗಳಿಗೆ ,  ಪಕ್ಷದ ಹಿರಿಯ ಮುಖಂಡರಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದಿದ್ದಾರೆ .ಈ  ಚುನಾವಣೆಯಲ್ಲಿ ಸ್ಥಳೀಯ ಯುವ ಸಮುದಾಯದ ಪ್ರೀತಿ ವಿಶ್ವಾಸ ಅಭಿಮಾನದಿಂದ ಜಯಸಾಧಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

    ಉಪಾಧ್ಯಕ್ಷರಾಗಿ  ಶ್ರವಣೂರು ಎನ್.ರಾಜೇಶ್ ಮಾತನಾಡಿ  ನನ್ನನ್ನು ನಂಬಿ ತಮ್ಮ ಮತಗಳನ್ನು ನೀಡುವ ಮೂಲಕ ಗೆಲ್ಲಿಸಿರುವ ಎಲ್ಲ ನನ್ನ ಸಹೋದರರಿಗೆ ತುಂಬಿ ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ,  ಎಂದಿದ್ದಾರೆ .

    ನೂತನ ತಾಲ್ಲೂಕು ಯುವ ಕಾಂಗ್ರೆಸ್ ಘಟಕಕ್ಕೆ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ರಾಕೇಶ್ ಗೌಡ ಹಾಗೂ ಶ್ರವಣೂರು ಎನ್.ರಾಜೇಶ್  ಅವರನ್ನು ತಾಲ್ಲೂಕಿನ ಹಿರಿಯ ಮುಖಂಡರು ಪಕ್ಷದ ನಾಯಕರು,ಗಣ್ಯರು, ಹಿತೈಷಿಗಳು, ಸ್ನೇಹಿತರು ಅಭಿನಂದಿಸಿದ್ದಾರೆ.

  • ಈ ಬಾರಿಯ ಹುಟ್ಟುಹಬ್ಬಕ್ಕೆ ಸಿಗಲು ಸಾಧ್ಯವಾಗುವುದಿಲ್ಲ : ಅಭಿಮಾನಿಗಳಿಗೆ ಕ್ಷಮೆ ಕೋರಿದ ಡಿ ಬಾಸ್

    ಅನಾರೋಗ್ಯದ ಕಾರಣ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲವೆಂದು, ತಮ್ಮನ್ನು ನೋಡಲು ಬರುವ ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ

     

    ಹೌದು ಪ್ರತಿ ವರ್ಷ ಫೆಬ್ರವರಿ 16ರಂದು ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಹುಟ್ಟುಹಬ್ಬಕ್ಕೆ ಶುಭಕೋರಿ ಸಂಭ್ರಮಿಸುತ್ತಿದ್ದರು , ಈ ಸಂದರ್ಭದಲ್ಲಿ ದರ್ಶನ್ ಸ್ವತಃ ತಾವೇ ಅಭಿಮಾನಿಗಳಿಗೆ ಕೈಕುಲುಕುವ ಮೂಲಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದರು, ಆದರೆ ಈ ಬಾರಿ ಬೆನ್ನು ಮೂಳೆ ಸಂಬಂಧಿತ ಆರೋಗ್ಯ ಸಮಸ್ಯೆ ಇರುವ ಕಾರಣ ತಮ್ಮ ನೆಚ್ಚಿನ ಸೆಲೆಬ್ರಿಟಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ನಟ ದರ್ಶನ್ ತಿಳಿಸಿದ್ದಾರೆ.

     

    ಅನಾರೋಗ್ಯದ ಕಾರಣ ತುಂಬಾ ಹೊತ್ತು ನಿಲ್ಲಲು ಸಾಧ್ಯವಾಗುವುದಿಲ್ಲ, ತಮ್ಮನ್ನು ನೋಡಲು ಬರುವ ಅಭಿಮಾನಿಗಳಿಗೆ ನಿರಾಸೆ ಉಂಟುಮಾಡಲು ಇಷ್ಟವಿಲ್ಲದ ಕಾರಣ ಈ ಬಾರಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡುತ್ತಿಲ್ಲವೆಂದು ತಿಳಿಸಿದ್ದಾರೆ.

     

    ನಟ ದನ್ವೀರ್, ರಚಿತಾ,ರಕ್ಷಿತಾ ವಿಶೇಷ ಧನ್ಯವಾದ ಅರ್ಪಿಸಿದ ದರ್ಶನ್ 

    ನನ್ನ ಕಷ್ಟ ಸಮಯದಲ್ಲಿ ಸದಾ ನನ್ನೊಂದಿಗೆ ಬೆನ್ನೆಲುಬಾಗಿ ಬೆಂಬಲವಾಗಿ ನಿಂತು ಸಹಕರಿಸಿದ ನಟ ಧನ್ವೀರ್, ನಟಿ ರಚಿತಾ ರಾಮ್, ನಟಿ ಹಾಗೂ ನಿರ್ಮಾಪಕಿ ರಕ್ಷಿತಾ ಅವರಿಗೆ ವಿಶೇಷ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

    ಯಾವುದೇ ಊಹಾಪೋಗಳಿಗೆ ಕಿವಿಗೊಡಬೇಡಿ ನಿರ್ಮಾಪಕ ಸೂರಪ್ಪ ಬಾಬು ರವರಿಗೆ ಹಣ ಹಿಂದಿರುಗಿಸಿರುವುದು ಸತ್ಯ , ಅವರಿಗೆ ಅನೇಕ ಕಮಿಟ್ಮೆಂಟ್ ಇದ್ದ ಕಾರಣ ನಮ್ಮಿಂದ ತೊಂದರೆಯಾಗಬಾರದೆಂದು ಹಣ ಹಿಂದಿರುಗಿಸಿದ್ದೇನೆ , ಮುಂದೆ ಉತ್ತಮ ಕಥೆ ಸಿಕ್ಕಾಗ ಮತ್ತೆ ಸಿನಿಮಾ ಮಾಡುತ್ತೇವೆ. ನಿರ್ದೇಶಕ ಪ್ರೇಮ್ ರವರೊಟ್ಟಿಗೆ ಖಂಡಿತವಾಗಿಯೂ ಸಿನಿಮಾ ಮಾಡಲಾಗುವುದು, ನೆಚ್ಚಿನ ಸೆಲೆಬ್ರಿಟಿಗಳು ನನ್ನ ಕಷ್ಟಕಾಲದಲ್ಲಿ ನನಗೆ ಸಾಕಷ್ಟು ಬೆಂಬಲ ನೀಡಿದ್ದು , ಅವರಿಗೆ ಸದಾ ಆಭಾರಿಯಾಗಿದ್ದೇನೆ , ಆದಷ್ಟು ಬೇಗ ಎಲ್ಲರೂ ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.

    ಕನ್ನಡ ಭಾಷೆ ಬಿಟ್ಟು ಅನ್ಯ ಭಾಷೆಗೆ ಹೋಗುವುದಿಲ್ಲ 

    ಹೌದು ನಟ ದರ್ಶನ್ ಅನ್ಯ ಭಾಷೆಗಳಲ್ಲಿ ನಟಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ನಟ ದರ್ಶನ್ ತೆರೆ ಎಳೆದಿದ್ದಾರೆ, ನಾನು ಯಾವುದೇ ಅನ್ಯ ಭಾಷೆಗೆ ಹೋಗುವುದಿಲ್ಲ ಕರ್ನಾಟಕ, ಕನ್ನಡ ಭಾಷೆ ನನಗೆ ಸಾಕಷ್ಟು ನೀಡಿದೆ ಎಂದಿದ್ದಾರೆ , ಕಾವೇರಿ ನದಿಯ ಉದಾರಣೆ ನೀಡುತ್ತಾ ಕಾವೇರಿ ಹುಟ್ಟಿರುವ ಕೊಡಗಿನಲ್ಲಿ ನಾನು ಹುಟ್ಟಿದ್ದೇನೆ ಹೇಗೆ ಕಾವೇರಿ ಎಲ್ಲಾ ಅನ್ಯ ರಾಜ್ಯಗಳಲ್ಲಿ ಹರಿಯುತ್ತದೆಯೋ ಹಾಗೆ ನನ್ನ ಸಿನಿಮಾ ಡಬ್ ಆಗಿ ಹೋಗುತ್ತದೆ ಆದರೆ ನಾನು ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆಯಲ್ಲಿ ನಟಿಸುವುದಿಲ್ಲ ಎಂದಿದ್ದಾರೆ.

  • ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬಿಂದು ಗೌಡ ನೇಮಕ

    ಕರ್ನಾಟಕ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ, ಚುನಾವಣೆಯಲ್ಲಿ 16436 ಮತಗಳನ್ನು ಪಡೆಯುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಬಿಂದು ಗೌಡ ವಿಜಯಿಶಾಲಿಯಾಗಿದ್ದು, ನೂತನ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

     

    ಈ ಕುರಿತು ಮಾತನಾಡಿರುವ ಅವರು ಹಿರಿಯ ನಾಯಕರ ಮಾರ್ಗದರ್ಶನದಿಂದ ಪಕ್ಷದಲ್ಲಿ ಸದಾ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ, ಈ ಚುನಾವಣೆ ವಿಶೇಷವಾಗಿದ್ದು ನನ್ನಂತೆ ಸಮಾನ ಮನಸ್ಥಿತಿಯುಳ್ಳ ಪ್ರತಿಯೊಬ್ಬ ಯುವಕರು/ ಯುವತಿಯರು ನನಗೆ ಮತ ನೀಡಿದ್ದು, ಈ ಚುನಾವಣೆ ವಿಚಾರವಾಗಿ ನಾನು ಒಂದು ರುಪಾಯಿ ಖರ್ಚು ಮಾಡದೇ ಯಾವುದೇ ಆಮಿಷಗಳನ್ನು ಒಡ್ಡದೇ ಚುನಾವಣೆಯಲ್ಲಿ ಪ್ರೀತಿ ವಿಶ್ವಾಸ ಅಭಿಮಾನದಿಂದ ಜಯಸಾಧಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

     

    ಈ ಬಾರಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಡಿಮೆ ಪೈಪೋಟಿ ಇರ್ಲಿಲ್ಲ ಈ ಹಿಂದೆ ಹೇಳಿದ ಹಾಗೆ ದೊಡ್ಡವರ ಮಕ್ಕಳ ಸಾಲು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇದ್ದದ್ದು ಗಮನಾರ್ಹ ಈ ಒಂದಷ್ಟು ಬಲಿಷ್ಟರ ಹಣವಂತರ ಅಧಿಕಾರವಂತರ ನಡುವೆ ಗೆದ್ದಿರುವುದು ಖುಷಿ ತಂದಿದೆ, ಪಕ್ಷದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲು ಶಕ್ತಿ ನೀಡಿದೆ ಎಂದು ತಿಳಿಸಿದ್ದಾರೆ.

    ನನ್ನನ್ನು ನಂಬಿ ತಮ್ಮ ಮತಗಳನ್ನು ನೀಡುವ ಮೂಲಕ ಗೆಲ್ಲಿಸಿರುವ ಎಲ್ಲ ನನ್ನ ಸಹೋದರರಿಗೆ ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ .

     

    ನೂತನ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಿಂದು ಗೌಡ ಅವರನ್ನು ಹಿರಿಯ ನಾಯಕರು,ಗಣ್ಯರು, ಅಭಿನಂದಿಸಿದ್ದಾರೆ.

  • ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ತಪ್ಪಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ

    ದೊಡ್ಡಬಳ್ಳಾಪುರ : ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ನಗರಸಭೆಯ ಪೌರಾಯುಕ್ತರಿಗೆ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ದೂರು ಸಲ್ಲಿಸಲಾಯಿತು.

     

    ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಮುರಳಿ ಮೋಹನ ಮಾತನಾಡಿ ದೊಡ್ಡಬಳ್ಳಾಪುರ ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತವಾಗಿ ನೇಮಕಾತಿಯಿಲ್ಲದ ವ್ಯಕ್ತಿಗಳ ಕೈಯಲ್ಲಿ ನಗರಸಭಾ ಸಿಬ್ಬಂದಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹ ವ್ಯಕ್ತಿಗಳಿಂದ ನಗರಸಭೆಯ ದಾಖಲೆಗಳು ಹೊರಗಿನ ಕೆಲವು ಆಯ್ದ ವ್ಯಕ್ತಿಗಳಿಗೆ ರವಾನೆಯಾಗುತ್ತಿದೆ ಇದಲ್ಲದೆ ಅನಧಿಕೃತ ನೌಕರರೆನಿಸಿಕೊಂಡವರು ಅಧಿಕಾರಿಗಳ ಏಜೆಂಟರಾಗಿ ಸಾರ್ವಜನಿಕ ಕೆಲಸಕ್ಕೆ ಲಂಚ ಪಡೆದು ನಗರಸಭಾ ಅಧಿಕಾರಿ/ ಸಿಬ್ಬಂದಿಗಳಿಗೆ ತಲುಪಿಸುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.

     

    ನಗರಸಭೆಯಲ್ಲಿ ದಿನ ಬೆಳಗಾಯಿತೆಂದರೆ ಖಾತೆ ಮಾಡಿಸಲು ಮಧ್ಯವರ್ತಿಗಳು ತುಂಬಿರುತ್ತಾರೆ ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು ಇದರ ಬಗ್ಗೆ ಇಲಾಖಾ ಅಧಿಕಾರಿಗಳು ಕಾಣದಂತೆ ಮೌನ ವಹಿಸಿದ್ದಾರೆ ಆದ್ದರಿಂದ ಪೌರಾಯುಕ್ತರು ಅನಧಿಕೃತ ನೌಕರರನ್ನು ತೆರವು ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ತುರ್ತುಕ್ರಮ ಕೈಗೊಳ್ಳ ಬೇಕೆಂದು ಮನವಿ ಮಾಡಿದ್ದೇವೆ ಎಂದರು

     

    ಈ ಕುರಿತು ಪೌರಾಯುಕ್ತರು ಸೂಕ್ತ ಕ್ರಮ ಕೈಗೊಳ್ಳದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ನಗರಸಭಾ ಕಛೇರಿ ಮುಂದೆ ಧರಣಿ ಮಾಡಲಾಗುವುದೆಂದು ತಿಳಿಸಿದರು.

     

    ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ ಮಂಜುನಾಥ,ರಾಜ್ಯ ಸಂಚಾಲಕ ಬಿ ನಟರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಯುವ ಕಾಂಗ್ರೆಸ್ ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ : ಗಣ್ಯರಿಂದ ಶುಭ ಹಾರೈಕೆ

    ರಾಜ್ಯ ಯುವ ಕಾಂಗ್ರೆಸ್ ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ಹಿರೇಮುದ್ದೇನಹಳ್ಳಿಯ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ

     

    ಎಐಸಿಸಿ ಚುನಾವಣಾ ಸಮಿತಿ ಯುವ ಕಾಂಗ್ರೆಸ್ ನ ಎಲ್ಲ ಹಂತದ ಘಟಕಗಳಿಗೆ ನೋಂದಣಿ ಮಾಡಿಕೊಂಡಿತ್ತು, ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ ಮತದಾನ ನಡೆದಿತ್ತು, ಅತಿ ಹೆಚ್ಚು ನೋಂದಣಿ ಮಾಡಿಸಿದ ಅಭ್ಯರ್ಥಿ ವಿಚೇತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನರಸಿಂಹಮೂರ್ತಿ 960 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.

     

    ನೂತನ ಅಧ್ಯಕ್ಷರಾದ ನರಸಿಂಹಮೂರ್ತಿಯವರಿಗೆ ಹಳ್ಳಿರೈತ ಅಂಬರೀಶ್ ಅಭಿನಂದನೆ ಸಲ್ಲಿಸಿದ್ದಾರೆ, ಇದೇ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನರಸಿಂಹಮೂರ್ತಿಯರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಹಿಂದುಳಿದ ಸಮುದಾಯಕ್ಕೆ ಸಿಕ್ಕ ಗೌರವ ಎಂದರು

     

    ನೂತನ ಅಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಶುಭಹಾರೈಸಿದ್ದಾರೆ.

  • ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಕಾಗದ ಪತ್ರಗಳ ಪರಿಶೀಲನೆ

    ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ

     

     

    ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ, ಕಳೆದ ಎರಡು ವರ್ಷದ ಹಿಂದೆ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಮತ್ತು ಎರಡು ತಿಂಗಳ ಹಿಂದೆಯೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು

     

     

    ಕೈಗಾರಿಕಾ ಪ್ರದೇಶವನ್ನ ಒಳಗೊಂಡಿರುವ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ, ಕೆಲವು ಕಾರ್ಖಾನೆಗಳು ಯಾವುದೇ ಅನುಮತಿ ಇಲ್ಲದೆ ಕೆಲಸ ಮಾಡುತ್ತಿವೆ, ಹಾಗೆಯೇ ಅನುಮತಿ ಇಲ್ಲದೆ ಪಿಜಿಗಳನ್ನು ನಡೆಸಲಾಗುತ್ತಿದೆ, ಈ ಬಗ್ಗೆ ಸಾರ್ವಜನಿಕ ದೂರುಗಳ ಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿ ಮೇಲೆ ದಾಳಿ ನಡೆಸಿ ಕಾಗದ ಪತ್ರಗಳ ಪರಿಶೀಲನೆ ನೆಡೆಸಿದ್ದಾರೆ ಎಂದು ತಿಳಿದು ಬಂದಿದೆ.

     

     

  • ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜರುಗಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

     

    ಸ್ವಯಂ ಸೇವಾ ಸಂಘ ಸಂಸ್ಥೆಯು ನೊಂದಾಯಿತ ಸಂಸ್ಥೆಯಾಗಿದ್ದು ನೊಂದಣಿ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು ಹಾಗೇ ಪ್ರತೀ ವರ್ಷ ಆಡಿಟ್ ಮಾಡಿಸಿರಬೇಕು,ಜೊತೆಗೆ 3 ವರ್ಷದ ಲೆಕ್ಕ ಪರಿಶೋಧನಾ ವರದಿ ದೃಡೀಕರಣ ಪತ್ರ ಸಲ್ಲಿಸಬೇಕು, ಮುಖ್ಯವಾಗಿ ಈ ಸಂಸ್ಥೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರುವ ದಾಖಲೆಯನ್ನು ಇಲಾಖೆಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವುದಕ್ಕೆ ಫೆಬ್ರವರಿ 14 ಕೊನೆಯ ದಿನಾಂಕವಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ನಂ 217, 2ನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ , ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ -562110, ಸಹಾಯಕ ನಿರ್ದೇಶಕರ ಕಛೇರಿ, ದೇವನಹಳ್ಳಿ ತಾಲ್ಲೂಕು ದೂ ಸ : 27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ ಸಂ :27623681. ಹೊಸಕೋಟೆ ತಾಲ್ಲೂಕು ದೂ ಸಂ: 27931528. ನೆಲಮಂಗಲ ತಾಲ್ಲೂಕು ದೂ ಸಂ: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

    ಬೆಂಗಳೂರು ಗ್ರಾಮಾಂತರ : ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.

     

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     

    ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

     

    ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

     

    ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

     

    ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲಭೂತ ಸೌಕರ್ಯ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

     

    ಸಭೆಯಲ್ಲಿ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ರೈತರಿಗಾಗಿ ಅಟಲ್ ಭೂ ಜಲ ಯೋಜನೆ ತರಬೇತಿ ಕಾರ್ಯಾಗಾರ

    ಬೆಂ.ಗ್ರಾ.ಜಿಲ್ಲೆ, ಫೆ. 07:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

     

    ತರಬೇತಿಯಲ್ಲಿ ದೇವನಹಳ್ಳಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಸುಶೀಲಮ್ಮ ಅವರು ಆಟಲ್ ಭೂಜಲ್ ಯೋಜನೆಯಡಿ (ABY) ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲ ಭದ್ರತಾ ಯೋಜನೆ ಸಿದ್ದಪಡಿಸುವುದು, ನೀರಿನ ಬಳಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

     

    ತರಬೇತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಕರ್ನಾಟಕದ 14 ಜಿಲ್ಲೆಗಳ, 41 ತಾಲ್ಲೂಕುಗಳಲ್ಲಿ ಬರುವಂತಹ 1199 ಗ್ರಾಮ ಪಂಚಾಯತಿಗಳಲ್ಲಿ ಅಟಲ್ ಭೂಜಲ ಯೋಜನೆ ಅನುಷಾನಗೊಳ್ಳುತ್ತಿದ್ದು, ಅಂತರ್ಜಲದ ಅತಿಬಳಕೆಯನ್ನು ಕಡಿಮೆ ಮಾಡುವುದು. ಅಂತರ್ಜಲದ ಸುಸ್ಥಿರ ನಿರ್ವಹಣೆ, ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲಭದ್ರತಾಯೋಜನೆ ಸಿದ್ದಪಡಿಸುವುದು ನೀರಿನ ಬಳಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

     

    ಕಾರ್ಯಕ್ರಮದಲ್ಲಿ ಅಟಲ್ ಭೂಜಲ್ ಯೋಜನೆಯ ಹಿರಿಯ ಭೂವಿಜ್ಞಾನಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಡಲ್ ಅಧಿಕಾರಿ ಶ್ರೀಮತಿ ಪಲ್ಲವಿ, ತಾಂತ್ರಿಕ ಸಹಾಯಕರಾದ ನಿಷಿತ, ಕೃಷಿ ತಜ್ಞೆ ದೀಪ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಲಾಖೆ ಅಂತರಜಲ ತಜ್ಞರಾದ ಮೋಹನ್, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಜೈರಾಮ್, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆರ್.ಕೆ. ಶಾಲಾದ, ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಸುಮಂಗಲ, ಕೃಷಿ ಅಧಿಕಾರಿ ಸತ್ಯನಾರಾಯಣ ಸೇರಿದಂತೆ ದೇವನಹಳ್ಳಿ ತಾಲ್ಲೂಕಿನ ಸಿಬ್ಬಂದಿಗಳು ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮದ ರೈತರು ಉಪಸ್ಥಿತರಿದ್ದರು.