Blog

  • ವಿಷೇಶ ಪ್ರೋತ್ಸಾಹಧನಕ್ಕಾಗಿ ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ 2025ರ ಜನವರಿ 20 ರ ವರೆಗೂ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ – ಮುಖ್ಯಮಂತ್ರಿ ಸಿದ್ದರಾಮಯ್ಯ

    ಮಂಗಳೂರು, ಜನವರಿ 11: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಮಂಗಳೂರಿನಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

     

    ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂದರು.

     

    *ನಕ್ಸಲರು ಮುಖ್ಯವಾಹಿನಿಗೆ ಬರಬೇಕು*

     

    ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರು ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದರು.

  • ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಐತಿಹಾಸಿಕ ಭೇಟಿ : ಸ್ವಾತಂತ್ರ್ಯ ನಂತರ ಕಾರ್ಖಾನೆಗೆ ಭೇಟಿ ನೀಡಿದ ಮೊದಲ ಉಪ ರಾಷ್ಟ್ರಪತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ

    ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು.

     

    ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು.

     

    ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳು ಉಪ ರಾಷ್ಟ್ರಪತಿಗಳ ಜತೆಯಲ್ಲಿದ್ದರು.

     

    ಕಾರ್ಖಾನೆಗೆ ಭೇಟಿ ನೀಡಿದ ಉಪ ರಾಷ್ಟ್ರಪತಿಗಳನ್ನು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಬರಮಾಡಿಕೊಂಡರು.

     

    ವಿಕಸಿತ ಭಾರತ್ ಕನಸಿಗೆ ಬಿಹೆಚ್ ಇಎಲ್ ಕೊಡುಗೆ: HDK

     

    ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಾವು ಸಚಿವರಾಗಿರುವ ಬೃಹತ್ ಕೈಗಾರಿಕೆ ಸಚಿವಾಲಯದ ಅಧಿಕಾರ ವ್ಯಾಪ್ತಿಯಲ್ಲಿರುವ ಬಿಹೆಚ್ ಇಎಲ್ ಕಾರ್ಖಾನೆಯ ಬೆಂಗಳೂರು ಘಟಕಕ್ಕೆ ಭೇಟಿ ನೀಡಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಪರಿಕಲ್ಪನೆಯ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುತ್ತಿದ್ದೇವೆ. 2047ರ ಹೊತ್ತಿಗೆ ವಿಕಸಿತ ಭಾರತ ಕನಸನ್ನು ನನಸು ಮಾಡುವ ದಿಸೆಯಲ್ಲಿ ಉಪ ರಾಷ್ಟ್ರಪತಿಗಳ ಭೇಟಿ ನಮಗೆಲ್ಲ ಆನೆಬಲ ತಂದು ಕೊಟ್ಟಿದೆ ಎಂದರು.

     

    ವಿಕಸಿತ ಭಾರತ ಕನಸು ಸಾಕಾರಕ್ಕಾಗಿ ನಡೆಯುತ್ತಿರುವ ಪ್ರಯತ್ನಕ್ಕೆ ಬಿಹೆಚ್ ಇಎಲ್ ಬಹುದೊಡ್ಡ ಕೊಡುಗೆಯನ್ನು ನೀಡುತ್ತಿದೆ ಎಂದ ಸಚಿವರು; ಉಪ ರಾಷ್ಟ್ರಪತಿಗಳ ಭೇಟಿ ಈ ಕಾರ್ಖಾನೆಯ ಹೆಮ್ಮೆಯನ್ನು ಹೆಚ್ಚಿಸಿದೆ. ಅವರ ಭೇಟಿಯ ಸ್ಫೂರ್ತಿಯೊಂದಿಗೆ ನಾವು ಮತ್ತಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇವೆ ಎಂದು ಹೇಳಿದರು.

     

    ಭಾರತದ ಕೈಗಾರಿಕೆ ಕ್ಷೇತ್ರವು ಸ್ವಾವಲಂಬನೆ ಸಾಧಿಸುವಲ್ಲಿ ಬಿಎಚ್‌ಇಎಲ್‌ನ ನಿರ್ಣಾಯಕ ಪಾತ್ರ ವಹಿಸಿದೆ ಎಂದ ಅವರು; ಖಾಸಗಿ ವಲಯದ ಪ್ರಬಲ ಪೈಪೋಟಿ ನಡುವೆಯೂ ಕಂಪನಿಯು ಬಲಿಷ್ಠವಾಗಿ ನಿಂತಿದೆ ಮತ್ತು ವೇಗಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ, ಇದಕ್ಕೆ ಉದ್ಯೋಗಿಗಳ ನಿರಂತರ ಪರಿಶ್ರಮ ಕಾರಣ, ಅವರಿಗೆ ನನ್ನ ಧನ್ಯವಾದಗಳು ಎಂದು ಕೇಂದ್ರ ಸಚಿವರು ಹೇಳಿದರು.

     

    ಕಾರ್ಯಾದೇಶಗಳ ಮೊತ್ತದ ₹1.7 ಲಕ್ಷ ಕೋಟಿ ದಾಟಿದೆ

    ಕಳೆದ ಹಣಕಾಸು ವರ್ಷದಲ್ಲಿ ನಾವು ₹69,000 ಕೋಟಿ ಮೌಲ್ಯದ ಕಾರ್ಯಾದೇಶಗಳನ್ನು ಬಿಎಚ್‌ಇಎಲ್‌ ಪಡೆದುಕೊಂಡಿದೆ. ಈ ವರ್ಷ ನಮ್ಮ ಕಾರ್ಯಾದೇಶಗಳ ಮೊತ್ತದ ₹1.7 ಲಕ್ಷ ಕೋಟಿ ದಾಟಿದೆ. ಪ್ರಧಾನಮಂತ್ರಿಗಳ ದೂರದೃಷ್ಟಿಯ ನಾಯಕತ್ವ, ಆತ್ಮನಿರ್ಭರ, ವಿಕಸಿತ ಭಾರತ್ ಗುರಿಯನ್ನು ಸಾಧಿಸುವಲ್ಲಿ ಕಂಪನಿ ಬಹುದೊಡ್ಡ ಪಾತ್ರ ವಹಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ನಿಮ್ಮ ಭೇಟಿಯಿಂದ ನಮ್ಮ ಹುಮ್ಮಸ್ಸು ಹೆಚ್ಚಾಗಿದೆ ಎಂದು ಕುಮಾರಸ್ವಾಮಿ ಉಪ ರಾಷ್ಟಪತಿಗಳ ಸಮ್ಮುಖದಲ್ಲಿ ಹೇಳಿದರು.

     

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು,ಬಿಎಚ್‌ಇಎಲ್‌ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಶ್ಯಾಂ ಬಾಬು ಅವರು ಉಪಸ್ಥಿತರಿದ್ದರು.

     

     

  • ನುಡಿ ನಮನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರ ಸ್ವಾಮಿ ಮಾತು

    ದೊಡ್ಡಬಳ್ಳಾಪುರ : ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಲು ಅವಿರತ ಹೋರಾಟ ನೆಡೆಸಿದ ಅಪ್ಪಯ್ಯಣ್ಣ ನವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ, ಸಹಕಾರ ಹಾಗೂ ಪಂಚಾಯತಿ ರಾಜಕೀಯಕ್ಕೆ ಅವರ ಪ್ರಾಮಾಣಿಕ ಸೇವೆ ಸ್ಮರಣಿಯ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು

    ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಆಯೋಜಿಸಿದ ನುಡಿ ನಮನ ವೇದಿಕೆಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಅಪ್ಪಯ್ಯಣ್ಣ ಅವರ ಸಾವಿನ ವಿಷಯ ತಿಳಿದಾಗ ನಂಬಲು ಸಾಧ್ಯ ವಾಗಲಿಲ್ಲ,ಈ ಕುರಿತು ತಪ್ಪು ಮಾಹಿತಿ ಇರಬೇಕು ನೋಡಿ ಎಂದು ಹೇಳ್ಳಿದ್ದೇ ಕಾರಣ ಅವರ ಜೀವನ ಶೈಲಿ, ಅವರು ಉತ್ತಮ ಆರೋಗ್ಯ ಒಂದಿದ್ದ ವ್ಯಕ್ತಿಯಾಗಿದ್ದರು ಆದರೆ ಅವರ ಸಾವು ಅನಿರೀಕ್ಷಿತ ಎಂದರು.

    ಅವರ ನೆಡೆದು ಬಂದ ದಾರಿ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ ಈ ಪುಸ್ತಕ ಅವರನ್ನು ಕುರಿತು ಕಿರು ಮಾಹಿತಿ ನೀಡಲಿದೆ, ನಮ್ಮ ಅವರ ಒಡನಾಟ ಬಹಳ ಹತ್ತಿರವಾದದ್ದು , ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿದ ಅವರು ತಾಲ್ಲೂಕಿನ ನಾಯಕನಾಗಿ ಬೆಳೆದದ್ದು ಸುಲಭವಾಗಿರಲಿಲ್ಲ , ರಾಜ್ಯದಲ್ಲಿ ದೊಡ್ಡಬಳ್ಳಾಪುರ ಹಾಗೂ ಕನಕಪುರದಲ್ಲಿ ರಾಜಕೀಯ ಮಾಡುವುದು ಅಷ್ಟು ಸುಲಭವಲ್ಲ, ಸ್ಥಳೀಯ ಮಟ್ಟದ ಜೆಡಿಎಸ್ ಪಕ್ಷ ಸಂಘಟನೆ ಮಾಡುವಲ್ಲಿ ಅವರ ಕೊಡುಗೆ ಅಪಾರ, ತಳಮಟ್ಟದಿಂದ ಬೆಳೆದು ಬಂದ ನಾಯಕ ಎಂದರೇ ತಪ್ಪಾಗಲಾರದು ಎಂದರು.

    ರೈತರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಅವರದ್ದು ಸಹಕಾರಿ ಕ್ಷೇತ್ರದಲ್ಲಿ ರೈತ ಮಹಿಳೆಯರಿಗೆ ಆರ್ಥಿಕವಾಗಿ ಜೀವನ ಕಟ್ಟಿಕೊಳ್ಳಲು ಅನುಕೂಲವಾಯಿತು ಅವರ ಪ್ರಾಮಾಣಿಕ ಸೇವೆ ಅವರ ವ್ಯಕ್ತಿತ್ವ ಬಿಂಬಿಸುತ್ತದೆ ಎಂದರು.

    ಅವರ ಸಾವಿಗೆ ಬಾರದ ಹಿನ್ನಲೆ ಅಭಿಮಾನಿಗಳಿಗೆ ಕ್ಷಮೆ ಕೋರಿದ ಎಚ್ ಡಿ ಕೆ

    ದೆಹಲಿಯಲ್ಲಿ ಪೂರ್ವನಿಯೋಜಿತಾ ಕಾರ್ಯಕ್ರಮ ನಿರ್ಧಾರವಾಗಿದ್ದ ಕಾರಣ ನಾನು ಅವರ ಸಾವಿನ ಸಂದರ್ಭದಲ್ಲಿ ಬರಲು ಸಾಧ್ಯವಾಗಲಿಲ್ಲ, ಅದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೋರುತ್ತೇನೆ ಎಂದರು.

    ವೇದಿಕೆಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾಂದ ಸ್ವಾಮೀಜಿ ಸೇರಿದಂತೆ ಹಾಲಿ, ಮಾಜಿ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

     

  • ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ – ಆರ್ ವಿ ಮಹೇಶ್

    ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ವಕೀಲರು, ಮುಖಂಡರು ಆದ ಆರ್ ವಿ ಮಹೇಶ್ ರವರನ್ನು ರೋಜಿಪುರ ಯುವಕರು, ಸ್ಥಳೀಯ ಮುಖಂಡರು, ಕನ್ನಡ ಪರ ಹೋರಾಟಗಾರರು ಸನ್ಮಾನಿಸಿ ಗೌರವಿಸಿದರು.

     

    ನಗರದ ರೋಜಿಪುರ ವಾರ್ಡ್ ನ ಮಾರಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಸ್ಥಳೀಯ ಮುಖಂಡರು ಹಾಗೂ ವಕೀಲರಾದ ಆರ್ ವಿ ಮಹೇಶ್ ರವರಿಗೆ ಪುಷ್ಪಮಾಲೆ ಹಾಕುವ ಮೂಲಕ ಸನ್ಮಾನಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.

     

    ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರೇತರ ನಾಮನಿರ್ದೇಶಿತರಾಗಿ ನೂತನವಾಗಿ ಆಯ್ಕೆಯಾಗಿರುವ ಆರ್ ವಿ ಮಹೇಶ್ ಮಾತನಾಡಿ ಜಿಲ್ಲಾ ಉಸ್ತುವಾರಿಗಳಾದ ಕೆ ಎಚ್ ಮುನಿಯಪ್ಪ ಜೀ ಹಾಗೂ ತಾಲೂಕಿನ ಜನಪ್ರಿಯ ನಾಯಕರದ ಮಾಜಿ ಶಾಸಕ ವೆಂಕಟರಮಣಯ್ಯ ಅವರ ಮಾರ್ಗದರ್ಶನ ಹಾಗೂ ದೇವರ ಆಶೀರ್ವಾದ ಇಂದು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಪ್ರಾಧಿಕಾರದಲ್ಲಿ ಉತ್ತಮ ಸ್ಥಾನ ದೊರೆತಿದೆ .ಮತ್ತಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ದೇವಾಲಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುವುದು ಹಾಗೂ ನನಗೆ ಸಿಕ್ಕಿರುವ ಯಶಸ್ಸನ್ನು ರೋಜಿಪುರ ಗ್ರಾಮದ ಯುವಕರು, ಸ್ಥಳೀಯ ಮುಖಂಡರು, ಕನ್ನಡ ಪರ ಹೋರಾಟಗಾರರು ಸಂಭ್ರಮಿಸುತ್ತಿರುವ ಪರಿ ನೀಡಿರುವ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದರು.

     

     

    ರೋಜಿಪುರ ದಲಿತ ಸಮುದಾಯಕ್ಕೆ ನೂರು ಮನೆಗಳು ನಿರ್ಮಾಣ  

     

    ರೋಜಿಪುರ ಯುವಕರೊಂದಿಗೆ ಆರ್ ವಿ ಮಹೇಶ್ ಮಾತನಾಡುತ್ತಾ ರೋಜಿಪುರ ಕಾಲೋನಿಯು ಸ್ಲಂ ಬೋರ್ಡ್ ಅಡಿಯಲ್ಲಿ ನಮೂದಾಗಿದ್ದು ಸ್ಥಳೀಯ ದಲಿತ ಕುಟುಂಬಗಳಿಗೆ ಮನೆಗಳ ಅವಶ್ಯಕತೆ ಇದೆ , ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪಜಿ ಅವರ ಬಳಿ ಮನವಿ ಮಾಡಿದ್ದೇನೆ , ಸಚಿವರು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದು,ಸ್ಥಳೀಯ ವಾರ್ಡ್ ನ ಸದಸ್ಯರೊಂದಿಗೆ ಮಾತುಕತೆ ನಡೆಸಿ ಕಾಲೋನಿಯಲ್ಲಿ ನೂರು ಮನೆಗಳ ನಿರ್ಮಾಣಕ್ಕೆ ಅನುದಾನ ತರಲಾಗುವುದು ಎಂದರು.

    ಕರವೇ( ನಾರಾಯಣ ಗೌಡರ ಬಣ ) ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ ವಕೀಲ ವೃತ್ತಿಯಿಂದ ಜನಪ್ರಿಯತೆ ಗಳಿಸಿರುವ ಆರ್ ವಿ ಮಹೇಶ್ ರವರು ಇಂದು ತಾಲೂಕಿನ ಪ್ರಸಿದ್ಧ ದೇವಾಲಯಗಳು ಒಂದಾದ ಘಾಟಿ ಸುಬ್ರಹ್ಮಣ್ಯ ಪ್ರಾಧಿಕಾರದಲ್ಲಿ ಸ್ಥಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ, ಮುಂದೆ ಆರ್ ವಿ ಮಹೇಶ್ ಮತ್ತು ಕುಟುಂಬಸ್ಥರಿಂದ ಸಮಾಜಕ್ಕೆ ಮತ್ತಷ್ಟು ಉತ್ತಮ ಸೇವೆಗಳು ಲಭಿಸಲಿ ಎಂದು ಶುಭ ಹಾರೈಸಿದರು.

     

    ವಕೀಲರದ ಆರ್ ವಿ ಮನು ಮಾತನಾಡಿ ನಮ್ಮ ಕುಟುಂಬದ ಸದಸ್ಯರು ಘಾಟಿ ಸುಬ್ರಮಣ್ಯ ಪ್ರಾಧಿಕಾರದಲ್ಲಿ ಸ್ಥಾನ ಪಡೆದಿರುವುದು ಸಂತಸದ ವಿಷಯವಾಗಿದೆ , ದೇವಾಲಯದ ಅಭಿವೃದ್ಧಿ ಕುರಿತಂತೆ ನಮ್ಮ ಕುಟುಂಬದ ಸಹಕಾರ ಸದಾ ಇರುತ್ತದೆ , ಈ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ನಮ್ಮ ಕುಟುಂಬವು ಆಭಾರಿಯಾಗಿರುತ್ತದೆ , ಈ ಯಶಸ್ಸನ್ನು ಸಂಭ್ರಮಿಸುತ್ತಿರುವ ನಮ್ಮ ಹಿತೈಷಿಗಳಿಗೆ ಸ್ನೇಹಿತರಿಗೆ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ ಎಂದರು.

     

    ಈ ಸಂದರ್ಭದಲ್ಲಿ ರೋಜಿಪುರ ವಾರ್ಡ್ ನ ಮುಖಂಡರು, ಕಾಲೋನಿಯ ಯುವ ಸಮುದಾಯ, ಆರ್ ವಿ ಮಹೇಶ್ ಅಭಿಮಾನಿಗಳು ಉಪಸ್ಥಿತರಿದ್ದರು.

     

  • ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನಕ್ಕೆ ವೇದಿಕೆ ಸಜ್ಜು

    ದೊಡ್ಡಬಳ್ಳಾಪುರ : ಜನವರಿ 11ರ ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಜೆಡಿಎಸ್ ಹಿರಿಯ ಮುಖಂಡ ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ, ನುಡಿ ನಮನ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಹಳ್ಳಿ ರೈತ ಅಂಬರೀಷ್ ಮನವಿ ಮಾಡಿದ್ದಾರೆ.

     

    ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ನಿರಂತರ ಜನಸೇವೆ ಸಲ್ಲಿಸಿದ್ದಾರೆ, ಅಲ್ಲದೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಲು ಅವಿರತ ಹೋರಾಟ ನೆಡೆಸಿದ ಅವರ ಅಗಲಿಕೆ ಜೆಡಿಎಸ್‌ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ ಎಂದರು.

     

    ಅವರ ಸೇವೆ ಹಾಗೂ ಒಡನಾಟದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಇದೇ ತಿಂಗಳ ಜನವರಿ 11ರ ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ನುಡಿ ನಮನ ವೇದಿಕೆ ಸಿದ್ದವಾಗಿದೆ, ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆಚ್ಚಿನ ನಾಯಕ ಹೆಚ್ ಅಪ್ಪಯ್ಯಣ್ಣ ಅವರಿಗೆ ನುಡಿ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

     

    ವೇದಿಕೆಯ ಪ್ರಧಾನ ಕಾರ್ಯದರ್ಶಿ ಟಿ ಎಸ್ ಉದಯ ಆರಾಧ್ಯ ಮಾತನಾಡಿ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾಂದ ಸ್ವಾಮೀಜಿ ಸೇರಿದಂತೆ ಹಾಲಿ, ಮಾಜಿ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

     

  • ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ : ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾಗಿ

    ದೊಡ್ಡಬಳ್ಳಾಪುರ : ಜೆಡಿಎಸ್ ಹಿರಿಯ ಮುಖಂಡ ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವು ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಇದೇ ತಿಂಗಳ 11ರಂದು ನಡೆಯಲಿದ್ದು ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವೀಗೊಳಿಸುವಂತೆ ಜೆಡಿಎಸ್ ಮುಖಂಡ ಎಂ. ಶ್ರೀನಿವಾಸ್ ಗೌಡ ಮನವಿ ಮಾಡಿದ್ದಾರೆ.

    ಈ ಕುರಿತು ಮಾಹಿತಿ ನೀಡಿದ ಅವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್‌ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು,ಅವರ ಅಗಲಿಕೆ ಜೆಡಿಎಸ್‌ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ ಎಂದರು

     

     

    ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿಯವರಿಗೆ ಅದ್ದೂರಿ ಸ್ವಾಗತ

    ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್. ಡಿ. ಕುಮಾರ ಸ್ವಾಮಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಮತ್ತು ತಾಲ್ಲೂಕು ಜೆಡಿಎಸ್ ವತಿಯಿಂದ ಅದ್ದೂರಿ ಸ್ವಾಗತ ಕೋರಲುಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಅರಳುಮಲ್ಲಿಗೆ ಶ್ರೀನಿವಾಸ್ ಗೌಡ ತಿಳಿಸಿದರು.

     

    ಅವರ ಸೇವಾ ಕಾರ್ಯವನ್ನು ಸ್ಮರಿಸುವ ನಿಟ್ಟಿನಲ್ಲಿ ಇದೆ ತಿಂಗಳ ಜನವರಿ 11ರ ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

     

    ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾಂದ ಸ್ವಾಮೀಜಿ ಸೇರಿದಂತೆ ಹಾಲಿ, ಮಾಜಿ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

     

    ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು,ಹಿತೈಷಿಗಳು, ಅಭಿಮಾನಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ನಗರ ಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್, ಜೆಡಿಎಸ್ ಮುಖಂಡ ಅರಳು ಮಲ್ಲಿಗೆ ಶ್ರೀನಿವಾಸ್, ಮನವಿ ಮಾಡಿದ್ದಾರೆ.

  • ಡಿ ಐ ಪಿ ಆರ್ ಹೊಸ ತಂತ್ರಜ್ಞಾನ : ನಿಮ್ಮ ಪಂಚಾಯತಿ ಸಂಬಂಧಿತ ಮಾಹಿತಿ ಈಗ ವಾಟ್ಸ್ಆಪ್ ನಲ್ಲಿ ಲಭ್ಯ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್‌ ಮೂಲಕ ಅವಕಾಶ ಕಲ್ಪಿಸಲಾಗಿದೆ.

     

    ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು “ಪಂಚಮಿತ್ರ” ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

     

    ವಾಟ್ಸ್ ಆಪ್ ನಲ್ಲಿ hi ಎಂದು ಸಂದೇಶ ಕಳುಹಿಸಿದರೆ ಸಾಕು ನಿಮ್ಮ ಚಾಟ್ ಆರಂಭವಾಗುತ್ತಿದೆ, ನಂತರ ಹಂತ ಹಂತವಾಗಿ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ನಮೂದಿಸುವ ಮೂಲಕ ಮಾಹಿತಿ, ಕುಂದು ಕೊರತೆ, ಹಾಗೂ ಸೇವೆಗಳನ್ನು ಪಡೆಯಬಹುದಾಗಿದೆ.

     

     

     

     

     

  • 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಖ್ಯಾತ ನಟ ಕಿಶೋರ್ ನೇಮಕ

    ಬೆಂಗಳೂರು : “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು,

     

    ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ನೇಮಕವಾಗಿದ್ದರೆ.

     

    “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಸಾಲುಗಳಿಗೆ ಬದ್ಧವಾಗಿರುವ ನಟ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

     

     

     

  • ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರ ಆಯ್ಕೆ : ದೇವಾಲಯಕ್ಕೆ ಭೇಟಿಕೋಟ್ಟು ಅಧಿಕಾರ ಸ್ವೀಕರಿಸಿದ ನೂತನ ಸದಸ್ಯರು

    ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಇಂದು (ಡಿ. 09) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಭೇಟಿಕೊಟ್ಟು ಅಧಿಕಾರ ಸ್ವೀಕರಿಸಿದರು.

    ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಕೆಳಕಂಡ 05 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ .ಎನ್.ರಂಗಪ್ಪ ಬಿನ್ ನಾರಾಯಣಸ್ವಾಮಪ್ಪ, ರವಿ ಕೆ.ಎಸ್ ಬಿನ್ ಸೀತಾರಾಮ ರಾವ್,ಲಕ್ಷ ನಾಯಕ ಬಿನ್ ಕಡಿಮೆ ನಾಯಕ,ಮಹೇಶ್ ಕುಮಾರ್, ಆರ್.ವಿ ಬಿನ್ ವೆಂಕಟೇಶ ಆ‌ರ್.ವಿ, ಹೇಮಲತ ಎಂ ಕೋಂ ರಮೇಶ್ ಎಂ.ಎಲ್. ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನಗೊಳಿಸಿ ಆದೇಶಿಸಿದೆ.

    ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಆರ್ ವಿ ಮಹೇಶ್ ಮಾತನಾಡಿ ದೇವಾಲಯದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಲಾಗಿದೆ, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸದಸ್ಯರ ಸಹಕಾರ ಹಿರಿಯರ ಮಾರ್ಗದರ್ಶನದೊಂದಿಗೆ ನಿರ್ವಹಿಸಲಾಗುವುದು ಎಂದರು. ನೂತನ ಸದಸ್ಯರಿಗೆ ಶುಭ ಕೋರಿದರು.

     

    ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸದಸ್ಯರು 5 ಮಂದಿ ಘಾಟಿ ಸನ್ನಿಧಾನದಲ್ಲಿ ಪದಗ್ರಹಣ ನಡೆಸಿದರು, ನೂತನ ಸದಸ್ಯರಿಗೆ ಮುಖಂಡರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.

    ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲ ನಾಯಕ್, ವಕೀಲರಾದ ಆರ್.ವಿ.ಮನುಕುಮಾರ್, ವಕೀಲರಾದ ಆರ್ ವಿ ಶಿವಕುಮಾರ್ ಇದ್ದರು.