Blog

  • ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

    ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

     

    ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ.

     

    ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ.

     

    ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ.

    ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ‌ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ.

     

    ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ, ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.

     

    ನಕ್ಸಲಿಸಂ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ.

    ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

  • ಶಾಸಕ ಧೀರಜ್ ಮುನಿರಾಜು ಅವರಿಗೆ ಹುಟ್ಟುಹಬ್ಬ ಶುಭಾಶಯ ಕೋರಿದ ಕರವೇ ಕುಟುಂಬ

    ದೊಡ್ಡಬಳ್ಳಾಪುರ : ತಾಲೂಕಿನ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ರಾಜ್ಯ ಬಿಜೆಪಿ ಯುವ ಘಟಕ ಅಧ್ಯಕ್ಷರಾದ ಧೀರಜ್ ಮುನಿರಾಜುರವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣ ಗೌಡರ ಬಣ )ಯ ಪುರುಷೋತ್ತಮ್ ಗೌಡ ನೇತೃತ್ವದ ತಂಡ ಸನ್ಮಾನಿಸಿ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು.

    ಶಾಸಕರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಕೆ ಕತ್ತರಿಸುವ ಮೂಲಕ ಸನ್ಮಾನಿತರನ್ನು ಗೌರವಿಸಲಾಯಿತು .

     

    ಬೆಂಗಳೂರು ಗ್ರಾಮಾಂತರ ಕರವೇ ಘಟಕದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ ತಾಲೂಕಿಗೆ ಯುವ ನಾಯಕ ದೊರೆತಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯ , ಸದಾ ನಾಡು ನುಡಿ ವಿಚಾರವಾಗಿ ನಮ್ಮೊಂದಿಗೆ ಕೈಜೋಡಿಸುವ ಮೂಲಕ ತಾಲೂಕಿನಲ್ಲಿ ಕನ್ನಡ ಬಳಕೆಗೆ ಅತಿ ಹೆಚ್ಚು ಒತ್ತು ನೀಡುತ್ತಿದ್ದು, ನಿರಂತರ ಸೇವಾ ಕಾರ್ಯಗಳ ಮೂಲಕ ತಾಲೂಕಿನ ಜನರಗೆ ಕೇವಲ ಶಾಸಕರಾಗಿ ಉಳಿಯದೆ ಪ್ರಧಾನ ಸೇವಕರಾಗಿ, ಬೆಂಬಲವಾಗಿ ಶ್ರಮಿಸುತ್ತಿರುವ ಧೀರಜ್ ಮುನಿರಾಜುರವರಿಗೆ ಮತ್ತಷ್ಟು ರಾಜಕೀಯವಾಗಿ ಬೆಳವಣಿಗೆ ದೊರೆಯಲಿ , ಶುಭವಾಗಲಿ ಎಂದು ಹಾರೈಸಿದರು .

    ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ( ನಾರಾಯಣ ಗೌಡರ ಬಣ )ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಸದಸ್ಯರು, ಕರವೇ ಹಿತೈಷಿಗಳು ಉಪಸ್ಥಿತರಿದ್ದರು.

  • ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ : ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿದ ತಂಡ

    ಹೊಸಕೋಟೆ ತಾಲ್ಲೂಕಿನ ಬೈಲನರಸಪುರ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕೂಸಿನ ಮನೆ’ ಕಾರ್ಯಕ್ರಮದ ಪರಿಣಾಮಗಳ ಕುರಿತು ಅಧ್ಯಯನ ಮಾಡಲು ಯುನಿಸೆಫ್ ಸಂಸ್ಥೆಯ ರಿನಿ ಕುರಿನ್ ಮುಖ್ಯಸ್ಥರು ಮತ್ತು ಪರಿಣಿತರ ತಂಡ ಭೇಟಿ ನೀಡಿದರು.

     

    ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳಿಗಾಗಿ ವಿಶೇಷವಾಗಿ ಗ್ರಾಮ ಪಂಚಾಯತಿಗೆ ಒಂದರಂತೆ ತೆರೆದಿರುವ ಕೂಸಿನ ಮನೆಯು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರಿಂದ ಮಕ್ಕಳಿಗೆ ಸಿಗುತ್ತಿರುವ ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿತು.

     

    ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಾರಾಯಣ ಸ್ವಾಮಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಅನಿತಾ ಲಕ್ಷ್ಮಿ, ಆರೋಗ್ಯ ಇಲಾಖೆ ಅಧಿಕಾರಿಗಳು ಕೂಸಿನ ಮನೆ ಬಗ್ಗೆ ಮಾಹಿತಿ ನೀಡಿದರು.

     

    ಯುನಿಸೆಫ್ ತಂಡದ ಕೂಸಿನ ಮನೆ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮಕ್ಕಳ ಪೋಷಕರು, ಗ್ರಾಮ ಪಂಚಾಯತಿ ಮಟ್ಟದ ಕೂಸಿನ ಮನೆ ಮೇಲ್ವಿಚಾರಣಾ ಸಮಿತಿ, ಕೂಸಿನ ಮನೆ ಕೇರ್ ಟೇಕರ್ ಗಳು, ಗ್ರಾಮ ಪಂಚಾಯತಿ ಮತ್ತು ನರೇಗಾ ಅಧಿಕಾರಿ ಮತ್ತು ಸಿಬ್ಬಂದಿಗಳು,ಕೂಸಿನ ಮನೆ ಸೌಲಭ್ಯ ಪಡೆಯುತ್ತಿರುವ ಮಕ್ಕಳ ಪೋಷಕರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.

  • ನಗರ ಭಾಗದಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ CL7 ಬಾರ್ ಅಂಡ್ ರೆಸ್ಟೋರೆಂಟ್ ಗಳು – ಯು ಮುನಿರಾಜು

    ದೊಡ್ಡಬಳ್ಳಾಪುರ : ಕೆ.ಸಿ.ಪಿ.ಸರ್ಕಲ್ CL7 ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಗಾಗಿ ನೀಡಿರುವ ಅರ್ಜಿಯನ್ನು ಪರಿಶೀಲಿಸಿ, ಅನುಮತಿ ಕೊಡಬಾರದೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿ ತಾಲ್ಲೂಕಿನ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.

     

    ಈ ಕುರಿತು ಮಾತನಾಡಿದ ಅವರುದೊಡ್ಡಬಳ್ಳಾಪುರ ತಾಲ್ಲೂಕು, ಕೆ.ಸಿ.ಪಿ.ಸರ್ಕಲ್’ ಹತ್ತಿರವಿರುವ, ವಾರ್ಡ್ ನಂ.11ರ ಆರ್.ಡಿ.ಕಂಫರ್ಟ್ ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ ಗಾಗಿ ಅನುಮತಿ ನೀಡುವಂತೆ ಕೋರಿ ಅಬಕಾರಿ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಿರುವುದು ತಿಳಿದುಬಂದಿದ್ದು, ಸದರಿ ಕಟ್ಟಡದ ಮೇಲೆ ಮೊಬೈಲ್ ಟವರ್ ಇದ್ದು. ಪಾರ್ಕಿಂಗ್ ಇಲ್ಲದ ಜಾಗವಾಗಿದ್ದು,ನಿಯಮಗಳನ್ನು ಅನುಸರಿಸದೇ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಆರೋಪಿಸಿದರು.

     

    ಕೆ.ಸಿ.ಪಿ ಸರ್ಕಲ್ ನಲ್ಲಿ ಬಸ್‌ಗಳು ನಿಲ್ಲಿಸುತ್ತವೆ. ಅಲ್ಲಿಂದ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಶಾಲಾ ಮಕ್ಕಳು ಓಡಾಡುವ ರಸ್ತೆಯಾಗಿದೆ. ಹತ್ತಿರದಲ್ಲಿರುವ ಕೊಂಗಾಡಿಯಪ್ಪ ಪ್ರೌಢಶಾಲೆ, ಕಾಲೇಜು ಮತ್ತು ಎಂ.ಎಸ್.ವಿ ಪಬ್ಲಿಕ್ ಸ್ಕೂಲ್ ಇದೆ. ದೇವಾಲಯಗಳಿವೆ. ಇದೆಲ್ಲವನ್ನು ಹೆಚ್ಚಿನದಾಗಿ ಪಕ್ಕದಲ್ಲೆ ಸಾನ್ವಿ ಕ್ಯಾಥಿಂಗ್ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಇದ್ದು, ಅಲ್ಲಿ ತುಂಬ ಜನ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಕಡು ಬಡವರು. ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ.ಈಗಾಗಲೇ ಕೆ.ಸಿ.ಪಿ. ಸರ್ಕಲ್‌ನಲ್ಲಿ ಹೆಚ್ಚು ಅಪಘಾತಗಳಾಗಿ ಸಾವನ್ನಪ್ಪಿದ್ದಾರೆ. ಮತ್ತೆ CL7 ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಿದರೆ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದರು.

     

    ಹಾಗಾಗಿ ಅಧಿಕಾರಿಗಳ ತಂಡ ಖುದ್ದಾಗಿ ಸ್ಥಳಕ್ಕೆ ಬೇಟಿ ನೀಡಿ, ಸ್ಥಳ ಪರಿಶೀಲಿಸಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಯಾವುದೇ ಅನುಮತಿ ನೀಡದೆ ಅರ್ಜಿಯನ್ನು ವಜಗೊಳಿಸಬೇಕೆಂದು ಮನವಿ ಮಾಡಿದರು.

     

    ಈ ಸಂದರ್ಭದಲ್ಲಿ ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ರಾಜ್ಯಸಮಿತಿ ಸದಸ್ಯರು ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

     

     

     

  • ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ

    ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

     

    ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

     

    ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದರು.

     

    ದೇವೇಗೌಡರು ಪ್ರಧಾನಿಯಾಗಿದ್ದಾಗ ಕೆ.ಆರ್.ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಅಶ್ವಿನಿ ವೈಷ್ಣವ ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

     

    ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.ಇದಲ್ಲದೆ; ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೇಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರ ಜತೆ ಚರ್ಚಿಸಿದರು.

     

    ರಾಮನಗರ – ಚನ್ನಪಟ್ಟಣ ನಡುವೆ ರೇಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೇಲ್ವೆ ಮೇಲು ಸೇತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆಯೂ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೇಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

     

    ಬೆಂಗಳೂರು – ಮಂಗಳೂರು ನಡುವಿನ ರೇಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೇಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೇಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ ಅವರು ಸಚಿವರಿಗೆ ತಿಳಿಸಿದರು.

     

    ರೇಲ್ವೆ ಸಚಿವರಿಗೆ ಹೆಚ್ ಡಿ ಮಾಡಿದ ಮನವಿಗಳು:

    *ಚನ್ನಪಟ್ಟಣ – ಬೆಂಗಳೂರು – ಮೈಸೂರು ವಿಭಾಗದಲ್ಲಿ ಪ್ರಮುಖವಾದ ಎಲ್ಲಾ ರೇಲುಗಳ ನಿಲುಗಡೆ.

    *ಹಾಸನ, ಮಂಗಳೂರು ಒಳಗೊಂಡ ಮುಂಬಯಿ – ಬೆಂಗಳೂರು – ಮುಂಬಯಿ ಮಾರ್ಗದಲ್ಲಿ ಹೊಸ ರೈಲಿಗೆ ಮಂಜೂರು.

    *ಮದ್ದೂರು ಮತ್ತು ಮಂಡ್ಯದಲ್ಲಿ ಬೆಂಗಳೂರು – ಮಂಗಳೂರು – ಮುರುಡೇಶ್ವರ ನಡುವೆ ಸಂಚರಿಸುವ 16585 ರೇಲಿನ ನಿಲುಗಡೆ.

    *ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೇಲ್ವೆ ಮಾರ್ಗಗಳ ಮಂಜೂರಾತಿ.

    *ಹೆಜ್ಜಾಲ- ಕನಕಪುರ – ಮಳವಳ್ಳಿ – ಕೊಳ್ಳೇಗಾಲ – ಯಳಂದೂರು – ಚಾಮರಾಜನಗರ ರೈಲು ಮಾರ್ಗಕ್ಕೆ ಶೀಘ್ರ ಅನುಮತಿ.

     

    ರಾಜ್ಯಕ್ಕೆ ಸಂಬಂಧಪಟ್ಟ ಇಷ್ಟೂ ಮನವಿಗಳಿಗೆ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ರೇಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುವುದು ಹಾಗೂ ಹೊಸ ಯೋಜನೆಗಳ ಬಗ್ಗೆಯೂ ಅಗತ್ಯ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಇಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

     

     

     

  • ನಗರದ ಆಕ್ಸಿಡೆಂಟ್ ಝೋನ್ ಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಕಾರ್ಯಪಾಲಕ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ

    ದೊಡ್ಡಬಳ್ಳಾಪುರ : ನಗರದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಕಾರ್ಯಪಾಲಕ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ ಸಂಚಾರ ಸೂಚನಾ ಫಲಗಳನ್ನು ಅಳವಡಿಸಲು ನಿರ್ಧರಿಸಿದ್ದು.

    Ad

    ನಗರದಲ್ಲಿ ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು, ಮನಸೋಇಚ್ಛೆ ತಮಗೆ ಇಷ್ಟ ಬಂದ ಕಡೆ ವಾಹನ ತಿರುಗಿಸುವುದು, ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವುದು, ಸೀಟ್ ಬೆಲ್ಟ್ ಇಲ್ಲದೇ ಕಾರು ಚಲಾಯಿಸುವುದು, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಓಡಿಸುವುದು, ಡಿಎಲ್, ಎಲ್ ಎಲ್ ಇಲ್ಲದೇ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಓಡಿಸುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದರೆ ಕಡ್ಡಾಯವಾಗಿ ದಂಡ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

  • ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು : ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು.

     

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

    ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಯವರೆಗೆ ಕಾಣುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗೆಳಲ್ಲಿ ಮಾತು ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

     

    ◆ ಜಿಲ್ಲೆಯಲ್ಲಿ 9.05 ಲಕ್ಷ ಮತದಾರರು:-

     

    ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 9,05,724 ಮತದಾರರು ಇದ್ದಾರೆ. ಇದರಲ್ಲಿ 4,46,918 ಪುರುಷ ಮತದಾರರು ಮತ್ತು 4,58,659 ಮಹಿಳಾ ಮತದಾರರು ಹಾಗೂ 147 ಇತರೆ ಮತದಾರರು ಇದ್ದಾರೆ.

     

    ಒಟ್ಟು ಮತದಾರರ ಪೈಕಿ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕರು, 13,431 ವಿಶೇಷ ಚೇತನ ಮತದಾರರು ಹಾಗೂ 121 ಸೇವಾ ಮತದಾರರು ಇದ್ದಾರೆ ಎಂದರು.

     

    ◆ ಮಹಿಳಾ ಮತದಾರರು ಹೆಚ್ಚು:-

     

    ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,21,297 ಮತದಾರರಿದ್ದು, ಅದರಲ್ಲಿ 1,12,171 ಮಹಿಳಾ ಮತದಾರರು ಹಾಗೂ 1,09,125 ಪುರುಷ ಮತದಾರರಿದ್ದಾರೆ. ಹೊಸಕೋಟೆಯಲ್ಲಿ ಒಟ್ಟು 2,40,998 ಮತದಾರರಿದ್ದು, ಅದರಲ್ಲಿ 1,21,543 ಮಹಿಳೆ ಹಾಗೂ 1,19,434 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,18,343 ಮತದಾರರಿದ್ದು, 1,10,457 ಮಹಿಳಾ ಹಾಗೂ 1,07,869 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,25,086 ಮತದಾರರ ಪೈಕಿ 1,14,488 ಮಹಿಳೆ ಹಾಗೂ 1,10,490 ಪುರುಷ ಮತದಾರರಿದ್ದಾರೆ.

     

    ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ 1027 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1028, ಹೊಸಕೋಟೆಯಲ್ಲಿ 1018, ದೇವನಹಳ್ಳಿ 1024 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1037 ಲಿಂಗಾನುಪಾತ ಕಂಡುಬಂದಿದೆ.

     

    ◆ 1141 ಮತಗಟ್ಟೆಗಳು:-

     

    ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು1141 ಮತಗಟ್ಟೆಗಳಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 294, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276, ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 278 ಮತಗಟ್ಟೆಗಳಿದೆ.

     

    ◆ 13,431ವಿಶೇಷಚೇತನ ಮತದಾರರು:-

     

    ಹೊಸಕೋಟೆ 3646, ದೇವನಹಳ್ಳಿ 3767 ಹಾಗೂ ದೊಡ್ಡಬಳ್ಳಾಪುರ 3399 ಹಾಗೂ ನೆಲಮಂಗಲದಲ್ಲಿ 2619 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. ಜತೆಗೆ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕ ಮತದಾರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

     

    ◆ 14,817 ಯುವ ಮತದಾರರು:-

     

    ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಮತದಾರರ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 14,817 ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4173, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3808, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3886, ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2950 ಯುವ ಮತದಾರರಿದ್ದಾರೆ.

     

    ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿರುತ್ತದೆ. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಪ್ರಕ್ರಿಯೆಯು ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಕೂಡ ಮುಖ್ಯವಾಗಿದ್ದು ಸಹಕಾರ ಹಾಗೂ ಸಹಭಾಗಿತ್ವ ಇರಲಿ ಎಂದು ರಾಜಕೀಯ ಪಕ್ಷಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಕೋರಿದರು.

    Ad

    ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ(ಪ್ರಬಾರ) ಹೇಮಾವತಿ ಜೆ, ಚುನಾವಣಾ ಶಿರಸ್ತೇದಾರ್ ಪ್ರಸಾದ್, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

  • ಇಂದಿನಿಂದ “ಕಬ್ಬಡಿ ಹಬ್ಬ”ಕ್ಕೆ ಚಾಲನೆ : ಅಂಜನಾದ್ರಿ ಕಪ್ -2025 ಗಾಗಿ ರಾಜ್ಯದ 26 ಜಿಲ್ಲೆ ಕ್ರೀಡಾಪಟುಗಳ ನಡುವೆ ನಡೆಯಲಿದೆ ರೋಚಕ ಪಂದ್ಯಾವಳಿ

    ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್-2025 ( ಅಂಜನಾದ್ರಿ ಕಪ್ -2025) ಕಾರ್ಯಕ್ರಮವನ್ನುಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್. ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಮಧುರೆ ಗ್ರಾಮ ಪಂಚಾಯಿತಿ ಸದಸ್ಯ ಕಾರ್ಯಕ್ರಮದ ಆಯೋಜನ ಆ‌ರ್.ಆನಂದ ಮೂರ್ತಿ ತಿಳಿಸಿದರು.

     

    ನಗರದ ಖಾಸ್ ಬಾಗ್ ಸಮೀಪದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಯಕ್ರಮದ ಪೂರ್ವ ಸಿದ್ಧತೆಯಲ್ಲಿ ಭಾಗವಹಿಸಿದ್ದವರು ಮಾಧ್ಯಮಗಳಿಗೆ ಮಾತನಾಡಿದರು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್,ಧೀರಜ್ ಮುನಿರಾಜ್ ಬ್ರಿಗೇಡ್ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದ ಉದ್ಘಾಟನೆಯು ಇಂದು( ಜ. 06)  ನಡೆಯಲಿದ್ದು ವೇದಿಕೆಯನ್ನು ರಾಜ್ಯದ ಹಲವು ಗಣ್ಯರು ಹಂಚಿಕೊಳ್ಳುತ್ತಿದ್ದಾರೆ ಎಂದರು .

     

     

    ಈ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯು ನಿರಂತರ ಮೂರು ದಿನಗಳು ನಡೆಯಲಿದ್ದು , ಪಂದ್ಯಾವಳಿಯಲ್ಲಿ ರಾಜ್ಯದ 26 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದರು .

    ಪಂದ್ಯಾವಳಿಗಳಿಗೆ ಆಗಮಿಸುವ ಕ್ರೀಡಾಪಟುಗಳಿಗೆ ವಸತಿ ಊಟ ಸೇರಿದಂತೆ ಉತ್ತಮ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

    ರಾಷ್ಟ್ರಮಟ್ಟಕ್ಕೆ ನೇರ ಆಯ್ಕೆ  

     

    ಈ ಪಂದ್ಯಾವಳಿಯ ಮತ್ತೊಂದು ವಿಶೇಷವೇನೆಂದರೆ ಈ ಪಂದ್ಯಾವಳಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕ್ರೀಡಾಪಟುವನ್ನು ನುರಿತ ಕ್ರೀಡಾ ತರಬೇತಿದಾರರು ನೇರವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಿದ್ದು , ಉತ್ತಮ ಪ್ರತಿಭೆವುಳ್ಳ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ತಮ್ಮ ಜಿಲ್ಲೆಯ ಹೆಸರನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶ ಎಂದು ಆಯೋಜಕರು ತಿಳಿಸಿದ್ದಾರೆ.

     

    ಬಹುಮಾನಗಳ ವಿವರ 

     

    ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 1,00,111 ರೂಪಾಯಿಗಳ ನಗದು ಬಹುಮಾನ

    ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 77,777. ತೃತೀಯ ಸ್ಥಾನ ಪಡೆದ ತಂಡಕ್ಕೆ 33,333 ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ .

     

     

    ಈ ಸಂದರ್ಭದಲ್ಲಿ ಕರ್ನಾಟಕ ಕಬಡ್ಡಿ ಅಸೋಸಿಯೇಷನ್ ಮಾಜಿ ಕಾರ್ಯದರ್ಶಿ ಮುನಿರಾಜು, ತಾಲ್ಲೂಕು ರೈತ ಮೂರ್ಚಾ ಅಧ್ಯಕ್ಷ ಆನಂದ್ ಮೂರ್ತಿ, ಡಿಪಿಎ ಮಾಜಿ ನಿರ್ದೇಶಕ ಎನ್.ಕೆ ರಮೇಶ್, ಹಿರಿಯ ಕಬಡ್ಡಿ ಆಟಗಾರ ಮನ್ಸೂರ್ ಪಾಷ, ಅಂತಾರಾಷ್ಟ್ರೀಯ ರೆಫರಿ ಶಮನಗೌಡ, ಖಜಾಂಚಿ ಆರ್. ಶೇಖರ್, ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಶ್ರೀನಾಥ, ಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ನಾಗರಾಜು, ನಗರಸಭಾ ಸದಸ್ಯ ವೆಂಕಟೇಶ್, ಮುಖಂಡರಾದ ಹಾಡೋನಹಳ್ಳಿ ನಾಗರಾಜು, ವಾಸು, ಸುನಿಲ್,ಮತ್ತಿತ್ತರರು ಉಪಸ್ಥಿತರಿದ್ದರು.

  • PTCL ಕಾಯ್ದೆ ಸಮಸ್ಯೆ ಕುರಿತು ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡಲಿದ್ದೇವೆ – ಆನೇಕಲ್ ಕೃಷ್ಣಪ್ಪ

    ರಾಜ್ಯ ಸರ್ಕಾರ PTCL ಕಾಯ್ದೆದ 2023ರಲ್ಲಿ ತಿದ್ದುಪಡಿ ಮಾಡಿದ್ದರು ಸಹ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಮಾನ್ಯ ಮಖ್ಯಮಂತ್ರಿಗಳು ಗಂಭಿರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಸರ್ವೋಚ್ಚ ನ್ಯಾಯಲಯದಲ್ಲಿ ತಡೆಯಾಜ್ಞೆ ಮತ್ತು ಆದೇಶ ಅಗುತ್ತಿರುವ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಜನವರಿ 6 ರಿಂದ ನಿರಂತರ ಪ್ರತಿಭಟನೆ ಮಾಡಲಾಗುವುದು ಎಂದು ಪ್ರಜಾ ವಿಮೋಚನಾ ಚಳುವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು PTCL ಕಾಯ್ದೆಯು ತುಳಿತಕ್ಕೊಳಗಾದ ಜನಾಂಗದ ಅಭಿವೃದ್ಧಿ ಮತ್ತು ಉದ್ದಾರಕ್ಕಾಗಿ ಸರ್ಕಾರ 1978-79ರಲ್ಲಿ ಕಾಯ್ದೆ ಜಾರಿಗೆ ತಂದ ನಂತರ SC/ST ಜನರಿಗೆ ಮಾಂಜೂರಾದ ಜಮಿನುಗಳನ್ನು ಪರಬಾರೆ ಮಾಡಲು ಸರ್ಕಾರದ ಪೂರ್ವನುಮತಿ ಕಡ್ಡಾಯ ಎಂಬ ಷರತ್ತು ಇತ್ತು. ಕಾಯ್ದೆ ಉಲ್ಲಂಘಿಸಿ ಭೂಮಿ ಪರಬಾರೆ ಆಗಿದ್ದಲ್ಲಿ ಮರು ಮಂಜೂರಾತಿ ಕೋರಿ ಮಂಜೂರುದಾರರು ACರವರಿಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇರಲಿಲ್ಲ ಆದರೆ ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ಪ್ರಕರಣ ಸಂಬಂಧಿಸಿದಂತೆ ದಿ: 26-10-2017ರಲ್ಲಿ ಸರ್ವೋಚ್ಚ ನ್ಯಾಯಲಯ “ಸಮುಚಿತ ಸಮಯದೊಳಗೆ” ಅರ್ಜಿ ಸಲ್ಲಿಸಬೇಕೆಂದು ಆದೇಶ ಮಾಡಿದ್ದು ನಿರ್ದಿಷ್ಟವಾಗಿ ಇಂತಿಷ್ಟು ವರ್ಷಗಳು ಎಂದು ಹೇಳದಿದ್ದರು. ಈ ಆದೇಶದ ನಂತರ AC, DC ಉಚ್ಚನ್ಯಾಯಗಳಲ್ಲಿ ದಾಖಲಿಸಿದ್ದ ಸಾವಿರಾರು ಪ್ರಕರಣಗಳು ಕಾಯ್ದೆ ವಿರುದ್ದವಾಗಿ ಆದೇಶಗಳಾಗಿರುವುದನ್ನು ಖಂಡಿಸಿ ಕಾಲಮಿತಿ ರದ್ದುಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ 2022ರಲ್ಲಿ ರಾಜ್ಯಾದ್ಯಾಂತ ದಲಿತ ಚಳವಳಿಗಾರರು ಹೋರಟಗಳನ್ನು ನಡೆಸಲಾಗಿತ್ತು.

    ನಂತರ ಕ್ರಾಂಗೆಸ್ ಪಕ್ಷದ ಸರ್ಕಾರ ರಚನೆಯಾಗಿ ಮಾನ್ಯ ಸಿದ್ದಾರಾಮಯ್ಯನವರು ಮುಖ್ಯಮಂತ್ರಿಗಳಾದ ನಂತರ ಕಾಲಮಿತಿ ಇಲ್ಲವೆಂದು PTCL ಕಾಯ್ದೆಗೆ ತಿದ್ದುಪಡಿಯನ್ನು ಮೊದಲ ಸಂಪುಟದ ಸಭೆಯಲ್ಲಿ ಮಂಡಿಸಿ ದಿನಾಂಕ : 27-07-2023ರಲ್ಲಿ ಜಾರಿಗೊಳಿಸಿದರು ಇದರಿಂದ ರಾಜ್ಯದ ಲಕ್ಷಾಂತರ SC/ST ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆಯ ಮಾರ್ಗ ಕಲ್ಪಿಸಿದ್ದು ಸ್ವಾಗತಾರ್ಹ ವಿಷಯವೇ ಆಗಿತ್ತು.

     

     

    ರಾಜ್ಯ ಸರ್ಕಾರ PTCL ಕಾಯ್ದೆಗೆ ಕಾಲಮಿತಿ ಇಲ್ಲ ಎಂದು ತಿನ್ನುಪಡಿ ತಂದಿರುವುದನ್ನು ಮಾನ್ಯ ಉಚ್ಚನ್ಯಾಯಲವು ಪರಿಗಣಿಸದೆ ಕಾಯ್ದೆ ವಿರುದ್ಧವಾಗಿ 2024ರ ನವೆಂಬರ್ ತಿಂಗಳಿನಲ್ಲಿ ಸುಮಾರು 50ಕ್ಕೂ ಹೆಚ್ಚು ಆದೇಶಗಳನ್ನು ಮಾಡಿದ್ದು, ಪ್ರತಿದಿನ ಹತ್ತಾರು ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ತಿರ್ಪಿನ ಆದೇಶ ಉಲ್ಲೇಖಿಸಿ ವಜಾ ಮಾಡಲಾಗುತ್ತಿದೆ ಎಂದರು.

     

     

    ಉಚ್ಚನ್ಯಾಯಲಯವು ಕಾಯ್ದೆಯನ್ನು ಪರಿಗಣಿಸದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಸರ್ಕಾರ ಉನ್ನತ ಮಟ್ಟದ ಹಿರಿಯ ವಕೀಲರ ತಂಡ ರಚಿಸಿ ಉಚ್ಚನ್ಯಾಯಲಯ ಮಾಡಿರುವ ಎಲ್ಲಾ ಆದೇಶಗಳಿಗೆ ಸರ್ವೋಚ್ಚ ನ್ಯಾಯಲಯದಲ್ಲಿ ತಡೆಯಾಜ್ಞೆ ಮಾಡಿಸಿ ಕಾಯ್ದೆಯ ಪರವಾಗಿ ಆದೇಶ ಆಗುವ ಬಗ್ಗೆ ಶೀಘ್ರವಾಗಿ ಮಾನ್ಯ ಮುಖ್ಯ ಮಂತ್ರಿಗಳು, ಕಂದಾಯ ಸಚಿವರು ಹಾಗೂ ಸಮಾಜಿ ಕಲ್ಯಾಣ ಸಚಿವರು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

    ರಾಜ್ಯ ಪ್ರ ಕಾರ್ಯದರ್ಶಿ ಆದೂರು ದೇವರಾಜ್, ಎಸ್.ಕೆ.ಮಾದೇಶ್, ತಾಲ್ಲೂಕು ಅಧ್ಯಕ್ಷರು ಶಿವು, ಜಿಲ್ಲಾ ಅಧ್ಯಕ್ಷ ರಾಘವೇಂದ್ರ, ಜಿ.ಪುಟ್ಟರಾಜು ತಾಲೂಕು ಪ್ರಧಾನ ಕಾರ್ಯದರ್ಶಿ,ತೂಬಗೆರೆ ಹೋಬಳಿ ಅಧ್ಯಕ್ಷ ಅಶೋಕ್ ಕುಮಾರ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ಕಿಶೋರ್, ಎಮ್ ರಾಜು ನಗರ ಅಧ್ಯಕ್ಷರು. ಕಸಬಾ ಅಧ್ಯಕ್ಷರು ವಿಜಯಕುಮಾರ್, ಮುಖಂಡ ಮಂಜುನಾಥ್  ಸೇರಿದಂತೆ ಪ್ರಜಾವಿಮೋಚನಾ ಚಳುವಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

  • ನಾಡಿನ ಖ್ಯಾತ ಸಾಹಿತಿ ಡಾ.ನಾ.ಡಿಸೋಜ ಅವರ ನಿಧನಕ್ಕೆ ಡಾ.ಹುಲಿಕಲ್ ನಟರಾಜ್ ಸಂತಾಪ

    ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ (Na D’Souza) ಅವರು ಇಂದು ಸಂಜೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

     

     

    ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಣ್ಯರ ಅಗಲಿಕೆಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಸಂತಾಪ ಸೂಚಿಸಿದ್ದಾರೆ.

     

    ಈ ಕುರಿತು ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿದ್ದಾಗ 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಾರಾಗಬೇಕೆಂದು ರಾಜ್ಯಮಟ್ಟದ ಸಭೆಯಲ್ಲಿ ಚರ್ಚೆ ಬಂದಾಗ ಒಬ್ಬ ಅಲ್ಪಸಂಖ್ಯಾತರಾದ ಸಾಹಿತ್ಯ ದಿಗ್ಗಜರಾದ ಶಾಂತಿ ಪ್ರಿಯರಾದ ಯಾವುದೇ ಕಾಟ್ರವರ್ಸಿ ಇಲ್ಲದ ವ್ಯಕ್ತಿತ್ವವನ್ನು ಹೊಂದಿದ ಡಿಸೋಜಾ ರವರನ್ನು ಆಯ್ಕೆ ಮಾಡಬಹುದೆಂದು ಒಮ್ಮತದಿಂದ ಪ್ರಥಮ ಧ್ವನಿಯೆತ್ತಿದ್ದು ನಾನು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ನಂತರ ಅದೇ ಡಿಸೋಜರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮ್ಮೇಳನದ ಉದ್ಘಾಟನೆ ಮಾಡಲು ಕರೆಸಿದ್ದು ನಮ್ಮ ಹೆಮ್ಮೆಯ ಹೆಗ್ಗಳಿಕೆಯಾಗಿದೆ. ಡಿಸೋಜರವರ ಮನೆಗೆ ಯಾವುದೇ ಕ್ಷಣದಲ್ಲಿ ನಾನು ಸಾಗರಕ್ಕೆ ಬಂದಾಗ ಪ್ರಥಮವಾಗಿ ಹೋಗುತ್ತಿದ್ದೆವು ಡಿಸೋಜಾ ರವರ ಜೊತೆಯಲ್ಲಿ ಒಂದಿಷ್ಟು ಪ್ರಚಲಿತ ವಿದ್ಯಮಾನಗಳನ್ನು ಚರ್ಚಿಸಲು ಅಂತಹ ಡಿಸೋಜರವರು ಇನ್ನಿಲ್ಲ ಎಂಬ ಸಂಗತಿ ಕೇಳಿ ಬಹಳ ದುಃಖವಾಯಿತು.

     

    ನಮ್ಮೊಂದಿಗೆ ದೇಹವಿಲ್ಲದಿರಬಹುದು ಅವರ ಸಾಹಿತ್ಯ ಕ್ಷೇತ್ರದ ಪರಿಕರಗಳು ಸಾಹಿತ್ಯದ ಅವಲೋಕನಗಳು ನಮ್ಮೊಂದಿಗೆ ಅವರ ಒಳ್ಳೆಯ ಗುಣಗಳು ನಮ್ಮೊಂದಿಗೆ ಇರಲಿ ಡಿಸೋಜಾ ಇನ್ನಿಲ್ಲ ಎನ್ನುವ ಬದಲು ಡಿಸೋಜಾ ನಮ್ಮೊಂದಿಗಿದ್ದಾರೆ ಎನ್ನುವುದೇ ಪಾಸಿಟಿವ್ ಆಗಿರುತ್ತೆ ಎಂದು ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.