Blog

  • ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ ಪುರಸ್ಕೃತ ರಂಗದಾಮಯ್ಯಗೆ ಕೊಡಿಗೆಹಳ್ಳಿ ಗ್ರಾಮ ಪಂಚಾಯತಿ ಮುಖಂಡರು ಮತ್ತು ಸಾರ್ವಜನಿಕರಿಂದ ಅಭಿನಂದನೆ

    ದೊಡ್ಡಬಳ್ಳಾಪುರ : ಪ್ರಜಾಹಿತ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದ ಎಸ್.ಡಿ ರಂಗಸ್ವಾಮಿಯರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

     

    ಇತ್ತಿಚೇಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು.

     

    ಪ್ರಶಸ್ತಿ ಪುರಸ್ಕೃತ ಎಸ್.ಡಿ ರಂಗದಾಮಯ್ಯ ಅವರನ್ನ ಕೊಡಿಗೆಹಳ್ಳಿ ಗ್ರಾಮ ಪಂಚಾಯತಿ ಮುಖಂಡರು, ಸಾರ್ವಜನಿಕರು ಅಭಿನಂದಿಸಿದರು.

     

    ಈ ವೇಳೆ ಮಾತನಾಡಿದ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಹಸನಘಟ್ಟರವಿ ಮಾತನಾಡಿ ರಂಗದಾಮಯ್ಯ ಅವರು ಸರ್ಕಾರಿ ಸೇವೆಯಲ್ಲಿದ್ದುಕೊಂಡೆ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ, ಇವರ ರಂಗಭೂಮಿಯಲ್ಲಿನ ಸೇವೆಯನ್ನ ಗುರುತಿಸಿ ಇಲಾಖೆ ಅಭಿನಂದಿಸಿರುವುದು ಸ್ವಾಗತಾರ್ಹ ಎಂದರು.

     

    ಪ್ರಶಸ್ತಿ ಪುರಸ್ಕೃತ ಎಸ್.ಡಿ ರಂಗದಾಮಯ್ಯ ಮಾತನಾಡಿ ೧೯೮೩ ರಲ್ಲಿ ಕಲಾರಂಗದ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಭೀಮ, ದುರ್ಯೋಧನ, ಮಂತ್ರಿ, ಕುಂಬಕರ್ಣ ಹೀಗೆ ಹಲವು ಪಾತ್ರಗಳನ್ನ ಮಾಡಿದ್ದೇನೆ. ಕರ್ತವ್ಯದ ಒತ್ತಡದ ಮಧ್ಯೆ ಬಿಡುವಿನ ಸಮಯದಲ್ಲಿ ಕಲಾಸೇವೆ ಮಾಡುತ್ತಿದ್ದೇನೆ. ನಮ್ಮ ಕುಟುಂಬದ ತಾತ, ಮುತ್ತಾತ ಕಾಲದಿಂದಲೂ ನಾನು ರಂಗಭೂಮಿಯಲ್ಲಿದ್ದೇನೆ. ಅಭಿನಂದಿಸಿದ ಎಲ್ಲಾ ಮುಖಂಡರಿಗೆ ಕೃತಜ್ಞತೆ ಎಂದರು.

     

     

    ಈ ಸಂದರ್ಭದಲ್ಲಿ ಮಾಜಿ ತಾ.ಪಂ ಸದಸ್ಯ ಹಸನಘಟ್ಟರವಿ, ಕೊಡಿಗೆಹಳ್ಳಿ ಅಧ್ಯಕ್ಷರಾದ ಆಶಾರಾಣಿನಾಗರಾಜು, ಗ್ರಾ.ಪಂ ಸದಸ್ಯರಾದ ಪ್ರೇಮ್ ದಾಸ, ಪಿ.ಆರ್ ವಿಜಯಕುಮಾರ್, ಯಾಕೂಬ್, ವಾಹೀದ್, ಮುನಿರಾಜು, ಆನಂದ್, ಸಿದ್ದಪ್ಪ, ಗೌರಿಶ್ ಮತ್ತಿತ್ತರರು ಇದ್ದರು.

  • ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    ಬೆಂ.ಗ್ರಾ.ಜಿಲ್ಲೆ, ಡಿ. 20: ಡಾ.ಬಿ.ಆ‌ರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)

    ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್‌ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

     

    ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

     

    ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

     

    ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಶ್ರೀ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ : ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ವಿತರಣೆ ಕಾರ್ಯಕ್ರಮದ ಉದ್ಘಾಟನೆಗೆ ಕ್ಷಣಗಣನೆ

    ದೊಡ್ಡಬಳ್ಳಾಪುರ: ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಚಾರಕ್ಕಾಗಿ ಸಮರ್ಪಿತವಾಗಿರುವ ಕ್ರಿಯಾಶೀಲ ಸಂಘಟನೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ, ವತಿಯಿಂದ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಭಾಗವಾಗಿ “ಉಚಿತ ಜಾನುವಾರು ಮೇವು ಮತ್ತು ನೀರು ವಿತರಣೆ” ಎಂಬ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

    ಈ ಕಾರ್ಯಕ್ರಮವು ಡಿಸೆಂಬರ್ 21, 2024 ರ ಶನಿವಾರ ರಂದು ಉದ್ಘಾಟನೆಗೊಳ್ಳಲಿದೆ.

     

    ಈ ಕಾರ್ಯಕ್ರಮವು ಮೂಲಕ ಜಾತ್ರೆಯಲ್ಲಿ ಪಾಲ್ಗೊಳ್ಳುವ ಜಾನುವಾರಗಳಿಗೆ ಅಗತ್ಯ ಉಚಿತವಾಗಿ ಮೇವು ಮತ್ತು ನೀರು ನೀಡುವ ಮೂಲಕ ರೈತ ಸಮುದಾಯವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ, ದನಗಳ ಜಾತ್ರೆಯಲ್ಲಿ ಪಾಲ್ಗೊಂಡಿರುವ ವಿವಿಧ ಜಿಲ್ಲೆಗಳ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೀವೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

     

    ಹೆಚ್ಚಿನ ಮಾಹಿತಿಗಾಗಿ ಅಥವಾ ಸ್ಪಷ್ಟೀಕರಣದ ಅಗತ್ಯವಿದ್ದರೆ ದಯವಿಟ್ಟು ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ರವರನ್ನು [ಮೊ .7259429132] ಸಂಪರ್ಕಿಸಲು ಕೋರಿದೆ.

  • ಕೊನಘಟ್ಟ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ಜ್ಯೋತಿರಮೇಶ್ ಹಾಗೂ ಉಪಾಧ್ಯಕ್ಷರಾಗಿ ಸುಮಂಗಳ ವೆಂಕಟೇಶ್ ಆಯ್ಕೆ

    ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ ಗ್ರಾಮಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನೆಡೆದಿದ್ದು ಅಧ್ಯಕ್ಷರಾಗಿ ಕಾಂಗ್ರೇಸ್ ಪಕ್ಷದ ಬೆಂಬಲಿತ ಸದಸ್ಯರಾದ ಕೊನಘಟ್ಟ ಜ್ಯೋತಿ ರಮೇಶ್ ಉಪಾಧ್ಯಕ್ಷರಾಗಿ ಹಮಾಮ್ ಗ್ರಾಮದ ಕಾಂಗ್ರೆಸ್ ಪಕ್ಷದ ಬೆಂಬಲಿತ ಸುಮಂಗಳ ವೆಂಕಟೇಶ್ ಅವಿರೋಧ ಆಯ್ಕೆಯಾಗಿದ್ದಾರೆ.

     

    ಕೊನಘಟ್ಟ ಗ್ರಾಮಕ್ಕೆ ಸದಸ್ಯರೊಬ್ಬರಿಗೆ 25 ವರ್ಷಗಳ ನಂತರ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ದೊರಕಿದ ಕಾರಣ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

     

    ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ಆಯ್ಕೆ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾ ಕಾಂಗ್ರೆಸ್ ಪಕ್ಷದ ವರಿಷ್ಟರಿಗೆ ಹಾಗೂ ತಮ್ಮ ಗೆಲುವಿಗೆ ಕಾರಣಕರ್ತರಾದ ಗ್ರಾಮಪಂಚಾಯಿತಿಯ ಎಲ್ಲಾ ಸದಸ್ಯರಿಗೂ ಹಾಗೂ ನಾಗರೀಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸರ್ವ ಸದಸ್ಯರ ಸಲಹೆ ಹಾಗೂ ಸೂಚನೆ ಪಡೆದು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ರೂಪಿಸುವ ಮೂಲಕ ಕೋನಘಟ್ಟ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಲು‌ ಶ್ರಮಿಸುವುದಾಗಿ ಹೇಳಿದ್ದಾರೆ.

     

    ಸಂದರ್ಭದಲ್ಲಿ ಗ್ರಾಮಪಂಚಾಯತಿ ಸದಸ್ಯರಾದ ಮಂಜುನಾಥ್. ಬಾಲರಾಜ್, ಆರಾಧ್ಯ ಮತ್ತು ನಾಗೇಶ್ ಟಿ ರಾಮಾಂಜಿನಪ್ಪ, ಗೋವಿಂದಸಾಮಿ, ನಂಜಮರಿಯಪ್ಪ, ಲಿಂಗನಹಳ್ಳಿ ಎಂ ಪಿ ಸಿ ಎಸ್ ಅಧ್ಯಕ್ಷ K.M ಮಂಜುನಾಥ್ ರಾಜ್ಯದ ವಹ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕರು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

  • ಉತ್ತಮ ಆಡಳಿತ ಸಪ್ತಾಹ-2024: ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    ಬೆಂ.ಗ್ರಾ.ಜಿಲ್ಲೆ, ಡಿ.19 : ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು.

     

    ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉತ್ತಮ ಆಡಳಿತ ಸಪ್ತಾಹ-2024 ಅನುಷ್ಠಾನಗೊಳಿಸಲು ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.

     

    ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಇದ್ದು ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವ ಮೂಲಕ ಉತ್ತಮ ಆಡಳಿತ ಸೇವೆ ಒದಗಿಸಿ ಎಂದರು.

     

    ಸಭೆಯಲ್ಲಿ ಜಿ.ಪಂ ಸಿ.ಇ.ಒ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಉತ್ತಮ ಆಡಳಿತ ಸಪ್ತಾಹ-2024 : ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

    ಬೆಂ.ಗ್ರಾ.ಜಿಲ್ಲೆ, ಡಿ.19: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.

     

    ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.

     

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.

     

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.

     

    ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.

  • ಪ್ರವಾಸೋದ್ಯಮ ಇಲಾಖೆಯ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಪ.ಜಾ ಹಾಗೂ ಪ.ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಬೆಂ.ಗ್ರಾ.ಜಿಲ್ಲೆ, ಡಿ.18 : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

     

    ತರಬೇತಿ ಕಾರ್ಯಕ್ರಮಗಳು: ಫುಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ (10ನೇ ತರಗತಿ ವಿದ್ಯಾರ್ಹತೆ), ರೂಮ್ ಅಟೇಂಡೆಟ್ (5ನೇ ತರಗತಿ ವಿದ್ಯಾರ್ಹತೆ), ಫ್ರಂಟ್ ಆಫೀಸ್ ಅಸೋಸಿಯೇಟ್ (12ನೇ ತರಗತಿ ವಿದ್ಯಾರ್ಹತೆ), ಮಲ್ಟಿ ಕ್ಯೂಸಿನ್ ಕುಕ್ (8ನೇ ತರಗತಿ ವಿದ್ಯಾರ್ಹತೆ) ತರಬೇತಿಗಾಗಿ 20 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

     

    ಆಸಕ್ತರು ಡಿಸೆಂಬರ್ 28 ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ: 09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 08022040633 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಸರ್ಕಾರಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅವಕಾಶ

    ಬೆಂ.ಗ್ರಾ.ಜಿಲ್ಲೆ, ಡಿ.18 : ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು “ಝೇಂಕಾರ”(ಕನ್ನಡದಲ್ಲಿ) ಮತ್ತು Jhenkara (Englisḩ) ಟ್ಯಾಗ್ಲೈನ್ (ಜೀವನೋಲ್ಲಾಸಕ್ಕೆ ಜೇನು-ಕನ್ನಡ), (Honey that keeps you Buzzin- English) ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ನ ಮಾಲೀಕತ್ವವನ್ನು ಹೊಂದಿದೆ.

     

    ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೇವನಹಳ್ಳಿ-9448825101, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ವಿವಿಧ ಸಂಘಟನೆಗಳಿಂದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಬೆಂ.ಗ್ರಾ.ಜಿಲ್ಲೆ, ಡಿ.18( ವಿಜಯಮಿತ್ರ) : ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.

     

    *ಸಂಘಟನೆಗಳ ಪ್ರಮುಖ ಬೇಡಿಕೆಗಳು*

     

    – ಭ್ರಷ್ಟಾಚಾರ ರಹಿತ ಆಡಳಿತ

    – ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು

    – ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು

    – ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ

    – ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು

    – ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ

    – ಸಾಗುವಳಿ ಚೀಟಿ ವಿತರಣೆ

    – ಸರ್ಕಾರಿ ಜಾಗಗಳ ಒತ್ತುವರಿ ತೆರವು

    – ನಿವೇಶನ, ವಸತಿ ಹಂಚಿಕೆ

    – ಬಗರ್ ಹುಕುಂ ಜಮೀನು ವಿವಾದ

    – ಕಡತಗಳ ಶೀಘ್ರ ವಿಲೇವಾರಿ

    – ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ

    – ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು

    – ಪೌತಿ ಖಾತೆ, ಪೋಡಿ ಇತ್ಯರ್ಥ

     

    ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.

     

    ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.

     

    ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು.‌ ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

     

    ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

  • ಮಾಜಿ ಶಾಸಕರಾದ ಜೆ. ನರಸಿಂಹಸ್ವಾಮಿಯವರಿಗೆ ನುಡಿನಮನ : ಹಳೆಯ ಒಡನಾಟ ನೆನೆದು ಭಾವುಕರಾದ ಮುಖಂಡರು

    ದೊಡ್ಡಬಳ್ಳಾಪುರ : ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿಯವರು ನಿಧನರಾಗಿದ್ದು, ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳು, ದಲಿತ,ರೈತ, ಕಾರ್ಮಿಕ, ನೇಕಾರ ಹಾಗೂ ಪ್ರಗತಿಪರ ಸಂಘಟನೆಗಳಿಂದ ನುಡಿನಮನ ಕಾರ್ಯಕ್ರಮವನ್ನು ನಗರದ ಕನ್ನಡ ಜಾಗೃತ ಭವನದಲ್ಲಿ ಅಯೋಜನೆ ಮಾಡಲಾಗಿತು.

     

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಚಾರಣೆಯ ಮೂಲಕ ಅವರ ಸಾವಿಗೆ ಸಂತಾಪ ಸೂಚಿಸಲಾಗಿತು.

     

     

    ಕನ್ನಡಪರ ಹೋರಾಟಗಾರರಾದ ರಾಜಘಟ್ಟ ರವಿ ಮಾತನಾಡಿ, ಜೆ.ನರಸಿಂಹಸ್ವಾಮಿ ತಮ್ಮ ಶಾಸಕರ ಅವಧಿಯಲ್ಲಿ ಯಾರ ಮನಸ್ಸಿಗೂ ನೋವು ತಂದವರಲ್ಲ, ಅಧಿಕಾರಿಗಳು, ಹೋರಾಟಗಾರರ ಜೊತೆ ಮಧುರ ಬಾಂಧವ್ಯವನ್ನು ಹೊಂದಿದ್ದರು, ಆದರೆ ಅವರಿಂದ ಹೆಸರು ಮಾಡಿದವರೇ ಅವರ ಹೆಸರು ಹಾಳು ಮಾಡಿದರು, ಅವರ ಅಂತಿಮ ದಿನಗಳನ್ನು ನೋಡಿದ್ದಾಗ ನನ್ನ ಕಣ್ಣಲ್ಲೇ ನೀರು ಬಂದಿದ್ದು, ಸದಾ ಬಡವರ ಪರವಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

     

    ಕನ್ನಡಪರ ಹೋರಾಟಗಾರರಾದ ಡಿ.ಪಿ. ಆಂಜನೇಯ ಮಾತನಾಡಿ, ನರಸಿಂಹಸ್ವಾಮಿಯವರು ಅಪರೇಷನ್ ಕಮಲಕ್ಕೆ ಒಳಗಾದ ಸಮಯದಲ್ಲಿ ಯಡಿಯೂರಪ್ಪನವರ ಮುಂದೆ ದೊಡ್ಡಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಪರ್ಕ ನೀಡುವಂತೆ ಮನವಿ ಮಾಡಿದರು, ವಿವಿಧ ಸಂಘಟನೆಗಳು ಅವರ ಬೆಂಗಳೂರಿನ ನಿವಾಸಿ ತೆರಳಿ ನರಸಿಂಹಸ್ವಾಮಿಯವರಿಗೆ ಮನವಿ ಮಾಡಲಾಗಿತು, ಅವರು ನೇರವಾಗಿ ನಮ್ಮನ್ನು ಅಂದಿನ ಸಾರಿಗೆ ಸಚಿವರಾಗಿದ್ದ ಆರ್, ಆಶೋಕ್ ಮುಂದೆ ದೊಡ್ಡಬಳ್ಳಾಪುರ ನಗರಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ನೀಡುವಂತೆ ಮನವಿ ಮಾಡಿದರು, ಆರ್, ಅಶೋಕ್ ಮುಂದೆ ನಿಂತುಕೊಂಡೆ ಅವರು ಮನವಿ ಮಾಡಿದರು, ನರಸಿಂಹಸ್ವಾಮಿಯವರು ಪಟ್ಟು ಹಿಡಿದ ಕಾರಣಕ್ಕೆ ಇವತ್ತು ದೊಡ್ಡಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ಸಿಕ್ಕಿದೆ ಎಂದರು.

     

     

    ಕಾರ್ಯಕ್ರಮದಲ್ಲಿ ಕನ್ನಡಪರ ಹೋರಾಟಗಾರರಾದ ಸಂಜೀವ್ ನಾಯಕ್, ಪುರುಷೋತ್ತಮ್ ಗೌಡ, ಕಲಾವಿದರಾದ ಮಲ್ಲೇಶ್,ಹನುಮಣ್ಣ,ರವಿಕಿರಣ್, ಸತೀಶ್,  ಗುರುರಾಜಪ್ಪ,ತೂಬಗೆರೆ ಷರೀಫ್, ಚಂದ್ರ ಶೇಖರ್ , ಸೇರಿದಂತೆ  ಹಲವರು ಮುಖಂಡರು ಹಾಜರಿದ್ದರು.